Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ತಾಳಗುಪ್ಪದಲ್ಲಿ ಅನಧಿಕೃತವಾಗಿ ಬಾಡಿಗೆ ಹೊಡೆಯುತ್ತಿರುವ ಆಟೋ, ವೈಟ್ ಬೋರ್ಡ್ ಕಾರುಗಳಿಗೆ ಕಡಿವಾಣಕ್ಕೆ ಆಗ್ರಹ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಆಟೋ ಚಾಲಕರು, ವೈಟ್ ಬೋರ್ಡ್ ಕಾರುಗಳ ಮಾಲೀಕರು ಅನಧಿಕೃತವಾಗಿ ಬಾಡಿಗೆಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಬೇಕು. ಟ್ಯಾಕ್ಸಿ ಮಾಲೀಕರು, ಚಾಲಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಮಲೆನಾಡು ಕಾರು ಚಾಲಕರ ಮತ್ತು ಮಾಲೀಕರ ಸಂಘ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ, ಸಾರಿಗೆ ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು. ಅಲ್ಲದೇ ಸಾಗರ ಉಪ ವಿಭಾಗಿಯ ಅಧಿಕಾರಿಗಳಿಗೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗೆ, ಡಿವೈಎಸ್ಪಿಗೆ ಕೂಡ ಸಂಘದ ಅಧ್ಯಕ್ಷರು, ಸದಸ್ಯರು ಜೊತೆಗೆ ಗೂಡಿ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿದರು. ಈ ಬಳಿಕ ಪ್ರೆಸ್ ಕ್ಲಬ್ ಅಸೋಸಿಯೇಷನ್ಸ್ ಆಫ್ ಸಾಗರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಲೆನಾಡು ಕಾರು ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಪ್ರಾನ್ಸಿಸ್ ಅವರು, ತಾಳಗುಪ್ಪ ವ್ಯಾಪ್ತಿಯ ನಿಲ್ದಾಣದಲ್ಲಿ ಅವರ ಪರಿಮಿತಿ ಮೀರಿ ಆಟೋ ಚಾಲಕರು, ವೈಟ್ ಬೋರ್ಡ್ ಕಾರು ಚಾಲಕರು ಬಾಡಿಗೆ ಮಾಡುತ್ತಿದ್ದಾರೆ. ಇದರಿಂದ ಹಳತಿ ಬೋರ್ಡ್ ಟ್ಯಾಕ್ಸಿ ಚಾಲಕರು, ಮಾಲೀಕರಿಗೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಜುಲೈ.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದು ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ತದನಂತರ, ಮೇಲೆ ಓದಲಾದ (20ರ ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2021 ರವರೆಗೆ ವಿಸ್ತರಿಸಲಾಗಿತ್ತು, ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ವರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಅಂತ ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು…
ನವದೆಹಲಿ: ಎಸ್ ಎಸ್ ಎಲ್ ಸಿ ಪಾಸ್ ಆದವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ವೆ ಇಲಾಖೆಯಿಂದ 2000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ( Railway Recruitment 2024 ) ಕೋಶವು ವಿವಿಧ ಟ್ರೇಡ್ಗಳಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಅಧಿಕೃತ ವೆಬ್ ಪೋರ್ಟಾ, rrccr.com ನಲ್ಲಿ ಪ್ರಾರಂಭಿಸಲಾಗಿದೆ. ಆಸಕ್ತರು ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯ ಪ್ರಕಾರ, ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ವಿವಿಧ ಟ್ರೇಡ್ಗಳಲ್ಲಿ ಒಟ್ಟು 2,424 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗಗಳನ್ನು ಬಯಸುವ 10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶವಾಗಿದೆ. ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಸಂಪೂರ್ಣ ಅಧಿಸೂಚನೆಯನ್ನು ಓದಲು ಸೂಚಿಸಲಾಗಿದೆ. ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಶುಲ್ಕ ಮತ್ತು ಇತರ ವಿವರಗಳನ್ನು…
ಬೆಂಗಳೂರು: ರಾಜ್ಯದ ಹಿರಿಯ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಂತ ಖ್ಯಾತ ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನ ರಾದರು. ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಯಲ್ಲಿ ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು. ಪತ್ರಕರ್ತ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು. https://kannadanewsnow.com/kannada/man-killed-behind-freedom-park-in-heart-of-bengaluru/ https://kannadanewsnow.com/kannada/organ-donors-to-be-honoured-with-certificates-of-appreciation-on-independence-day-republic-day/
ಬೆಂಗಳೂರು: ನಗರದ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದ ಕಸ ವಿಲೇವಾರಿ ಘಟಕದ ಬಳಿಯಲ್ಲೇ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದಲ್ಲಿ ಗಾಂಧಿನಗರಕ್ಕೆ ಹತ್ತಿರವಾಗಿರುವಂತ ಮುಖ್ಯ ರಸ್ತೆಯಲ್ಲಿ ಕಸವಿಲೇವಾರಿ ಘಟಕವಿದೆ. ಅಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಮರ್ಡರ್ ಮಾಡಿರುವುದಾಗಿ ತಿಳಿದು ಬಂದಿದೆ. ವಿಕ್ಕಿ ಎಂಬಾತನನ್ನು ಫ್ರೀಡಂ ಪಾರ್ಕ್ ಹಿಂಭಾಗದಲ್ಲಿನ ಕಸ ವಿಲೇವಾರಿ ಘಟಕದ ಬಳಿಯಲ್ಲಿ ಹಲ್ಲೆ ಮಾಡಿ ಹತ್ಯೆಗೈದಿರುವಂತ ದುಷ್ಕರ್ಮಿಗಳು, ಅಲ್ಲಿಂದ ಪರಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಉಪ್ಪಾರಪೇಟೆ ಠಾಣೆಯ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ವಿಕ್ಕಿ ಎಂಬಾತನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. https://kannadanewsnow.com/kannada/good-news-for-bpl-card-applicants-1-73-lakh-ration-cards-to-be-issued-soon/ https://kannadanewsnow.com/kannada/organ-donors-to-be-honoured-with-certificates-of-appreciation-on-independence-day-republic-day/
ಲಕ್ಷ್ಮೀದೇವಿ ಚಂಚಲ ಎಂದು ನಾವು ನೀವು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಯಾಕೆಂದರೆ ಲಕ್ಷ್ಮಿದೇವಿ ಯಾವತ್ತೂ ಕೂಡ ಒಂದೇ ಕಡೆ ಇರುವುದಕ್ಕೆ ಇಷ್ಟಪಡುವುದಿಲ್ಲ. ಲಕ್ಷ್ಮೀದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೆ, ಕೆಲಸಕಾರ್ಯಗಳಲ್ಲಿ ನಿಯತ್ತಿನಿಂದ ಯಾರು ಇರುತ್ತಾರೆ ಅವರ ಮನೆಯಲ್ಲಿ ಸದಾಕಾಲ ನೆಲೆಸುತ್ತಾಳೆ ಲಕ್ಷ್ಮಿ ಎಂದು ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಲಕ್ಷ್ಮೀದೇವಿ ಒಲಿಯುವ…
ಬೆಂಗಳೂರು: ರಾಜ್ಯದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಯಾವಾಗ ನೀಡುತ್ತಾರೆ ಅಂತ ಕಾಯುತ್ತಿದ್ದಾರೆ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಿಂದಿನ ಸರ್ಕಾರ ಚುನಾವಣೆಗೆ ಮೊದಲು 2.95 ಲಕ್ಷ ಕಾರ್ಡ್ ಗಳನ್ನು ವಿತರಿಸುವುದು ಬಾಕಿ ಇತ್ತು. ಇವುಗಳನ್ನು ಪರಿಶೀಲಿಸಿ ಸುಮಾರು 2 ಲಕ್ಷ 65 ಸಾವಿರ ಕಾರ್ಡ್ ಗಳನ್ನು ಅರ್ಹತೆಯನ್ನು ಪಡೆದಿದ್ದಾವೆ. ಬಿಪಿಎಲ್ ಒಳಗಡೆ ಬರುತ್ತಾವೆ. 56,930 ಕಾರ್ಡ್ ಬಿಪಿಎಲ್ ಕಾರ್ಡ್ ಕೆಳಗಡೆ ಬರುವುದಿಲ್ಲ. 2 ಲಕ್ಷದ 36 ಸಾವಿರ 152 ಕಾರ್ಡ್ ನಲ್ಲಿ 62 ಸಾವಿರ ಕಾರ್ಡ್ ಗಳನ್ನು ಈಗಾಗಲೇ ಪಟ್ಟಿಗೆ ತಂದು ಪಡಿತರ ಹೆಸರಿನ ಪಟ್ಟಿಯಲ್ಲಿ ದವಸ ಧಾನ್ಯಗಳನ್ನು ಕೊಡುವ ವ್ಯವಸ್ಥೆಯಾಗಿದೆ. ರಾಜ್ಯದಲ್ಲಿ 1.73 ಲಕ್ಷ ಕಾರ್ಡ್ ಗಳನ್ನು ವಿತರಣೆ ಮಾಡುವುದು ಬಾಕಿ ಇದೆ. ಅವುಗಳನ್ನು ವಿತರಣೆ…
ಬೆಂಗಳೂರು : “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ? ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ತಿರುಗೇಟು ನೀಡಿದರು. ವಿಧಾನ ಪರಿಷತ್ ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ…
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. 7500 ಪ್ರಾಥಮಿಕ, 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ವಿಧಾನಪರಿಷತ್ತಿನಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. 12000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಶಿಕ್ಷಕರ ವರ್ಗಾವಣೆ ಮಾಡಿದ ನಂತ್ರ, ಶಿಕ್ಷಕರ ಕೊರತೆ ಎದುರಾಗಿದೆ. ನಾವು ಅತೀ ಹೆಚ್ಚು ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಕರನ್ನು ಕೊಟ್ಟಿದ್ದೇವೆ. 10000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 6500 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ ಎಂದರು. 52000 ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಯಾದಗಿರಿ, ರಾಯಚೂರು, ಗುಲ್ಪರ್ಗ ಜಿಲ್ಲೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ಸೇರಿದಂತೆ ಒಟ್ಟು 10,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು…
ಶಿವಮೊಗ್ಗ: ಜುಲೈ.13ರಂದು ರಾಜ್ಯಾಧ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಅದರಂತೆ ಶಿವಮೊಗ್ಗದಲ್ಲೂ ನಡೆದಂತ ಲೋಕ್ ಅದಾಲತ್ ನಲ್ಲಿ 12,548 ಪ್ರಕರಣಗಳಲ್ಲಿ ಸಂಧಾನ ಪ್ರಕ್ರಿಯೆ ನಡೆದ್ರೇ, 6 ದಂಪತಿಗಳು ಡೈವೋರ್ಸ್ ಅರ್ಜಿಯನ್ನು ಹಿಂಪಡೆದು ಮತ್ತೆ ಹೊಂದಾಗಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 13.07.2024 ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 12,548 ಪ್ರಕರಣಗಳನ್ನು ಹಾಗೂ 1,15,002 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಒಟ್ಟು 1,27,550 ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು. ಅವುಗಳ ಪೈಕಿ 06 ದಂಪತಿಗಳು ತಮ್ಮ ಪ್ರಕರಣವನ್ನು ಹಿಂಪಡೆದು ಒಟ್ಟಾಗಿ ಜೀವನ ನಡೆಸುವಂತೆ ರಾಜಿ ಮಾಡಿಕೊಂಡಿದ್ದು ವಿಶೇಷವಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಹತ್ತು ವರ್ಷಕ್ಕಿಂತ ಹಳೆಯದಾದ 07 ಪ್ರಕರಣಗಳು, ಎಂಟು ವರ್ಷಕ್ಕಿಂತ ಹಳೆಯದಾದ 08 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಅಂತ ತಿಳಿಸಿದೆ. ಈ ಪ್ರಕರಣಗಳನ್ನು…