Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವಾಗ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇಸ್ರೋದ ಹೊಸ ಉಡಾವಣಾ ಸಂಕೀರ್ಣದ ಜಾಹೀರಾತಿನ ಸುತ್ತ ನಡೆಯುತ್ತಿರುವ ವಿವಾದವನ್ನು ಎತ್ತಿ ತೋರಿಸುವ ಮೂಲಕ ಮ್ಯಾಂಡರಿನ್ ಭಾಷೆಯಲ್ಲಿ ಜನ್ಮದಿನದ ಶುಭಾಶಯಗಳನ್ನು ರಾಜ್ಯ ಬಿಜೆಪಿ ತಿಳಿಸಿದೆ. https://twitter.com/BJP4India/status/1762888078992269716 ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಜನ್ಮದಿನದಂದು ಸೂಕ್ಷ್ಮವಾಗಿ ಟೀಕಿಸಿದೆ. ಟ್ವೀಟ್ನಲ್ಲಿ, ತಮಿಳುನಾಡು ಬಿಜೆಪಿ ಸ್ಟಾಲಿನ್ಗೆ ಮ್ಯಾಂಡರಿನ್ ಭಾಷೆಯಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ವ್ಯಕ್ತಪಡಿಸಿದೆ. ಈ ಕ್ರಮವು ಇಸ್ರೋದ ಹೊಸ ಉಡಾವಣಾ ಸಂಕೀರ್ಣಕ್ಕೆ ಸಂಬಂಧಿಸಿದ ಜಾಹೀರಾತಿನ ಸುತ್ತಲಿನ ವಿವಾದಕ್ಕೆ ಕಾರಣವಾಗಿದೆ. https://twitter.com/BJP4TamilNadu/status/1763434298403872881 ಈ ಜಾಹೀರಾತಿನಲ್ಲಿ ‘ಚೀನೀ ಧ್ವಜ’ದ ಪ್ರಮುಖ ಪ್ರದರ್ಶನದಿಂದಾಗಿ ಅಸಮಾಧಾನವನ್ನು ಹುಟ್ಟುಹಾಕಲಾಯಿತು. ಇದು ರಾಜಕೀಯ ಚರ್ಚೆಗಳಿಗೆ ಕಾರಣವಾಯಿತು. ತಪ್ಪನ್ನು ಒಪ್ಪಿಕೊಂಡ ತಮಿಳುನಾಡು ಸರ್ಕಾರ, ಇಸ್ರೋ ಸೌಲಭ್ಯದ ಜಾಹೀರಾತಿನಲ್ಲಿ ಚೀನಾದ ರಾಕೆಟ್ ನ ಛಾಯಾಚಿತ್ರಕ್ಕೆ ಸಂಬಂಧಿಸಿದ ಮೇಲ್ವಿಚಾರಣೆಯನ್ನು ಒಪ್ಪಿಕೊಂಡಿದೆ. ಪ್ರಚಾರ ಸಾಮಗ್ರಿಯಲ್ಲಿ ಚೀನಾದ ಚಿಹ್ನೆಯನ್ನು ಅಸಾಮಾನ್ಯವಾಗಿ ಸೇರಿಸುವುದರಿಂದ…
ಬೆಂಗಳೂರು: ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ( KSRTC, BMTC, KKRTC, NWKRTC ) ದೆಹಲಿಯ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2022 -23ನೇ ಸಾಲಿನ ಒಟ್ಟು 5 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಲಭಿಸಿರುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ ಈ ಸಂಸ್ಥೆಯು 58 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆ ಎಸ್ ಆರ್ ಟಿ ಸಿ ಗೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ…
ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಾದರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ( Karnataka Congress Government ) ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತವಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಗೃಹ ಜ್ಯೋತಿ ( Gruha Jyothi Scheme ) ಗ್ರಾಹಕರಿಗೆ ಸಿಹಿಸುದ್ದಿ. ಸಿಗಲಿದೆ ಇನ್ನಷ್ಟು ಲಾಭಗಳು ಅಂತ ತಿಳಿಸಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಮಾಸಿಕ ಅರ್ಹ 48 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ಉಚಿತವಾಗಿ ( 10 Unit Electricity Free ) ನೀಡುವುದಾಗಿ ತಿಳಿಸಿದೆ. ಸರಾಸರಿ 48 ಯೂನಿಟ್ ಗಿಂತ ಕಡಿಮೆ ಬಳಸುವ ಸುಮಾರು 70 ಲಕ್ಷ ಗ್ರಾಹಕರಿಗೆ ಇದರಿಂದ…
ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇದೇ ಸಂದರ್ಭದಲ್ಲಿ ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದರು. ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದರು. ನಾವು ತಲಾ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿ ಪ್ರತಿ ಕೆಜಿಗೆ 34 ರೂಪಾಯಿ ಕೊಡ್ತೀವಿ ಅಕ್ಕಿ ಕೊಡಿ ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬರಗಾಲದ ಹಿನ್ನಲೆಯಲ್ಲಿ ಮೇವಿನ ಖರೀದಿ ಮತ್ತು ಮೇವು ಸಾಗಾಣಿಕೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷಾ.ಹೆಚ್.ಜಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ಬರಗಾಲ ಇರುವ ಹಿನ್ನಲೆಯಲ್ಲಿ ಮೇವು ಖರೀದಿ ಮತ್ತು ಸಾಗಾಣಿಕೆ ದರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ. ಹೀಗಿದೆ ಮೇವು ಖರೀದಿ ಪರಿಷ್ಕೃತ ದರಪಟ್ಟಿ ಒಣಗಿದ ಜೋಳದ ದಂಡು – ಪ್ರತಿ ಮೆಟ್ರಿಕ್ ಟನ್ ಗೆಳ ರೂ.6000 ದಿಂದ 7000ಕ್ಕೆ ಪರಿಷ್ಕರಿಸಲಾಗಿದೆ. ಒಣಗಿದ ಮುಸುಕಿನ ಜೋಳದ ಮೇವು – 6000 ದಿಂದ 7000 ಸಾವಿರಕ್ಕೆ ಸಾಗಾಣಿಕೆ ದರ ಹೊರತುಪಡಿಸಿ ಪರಿಷ್ಕರಿಸಲಾಗಿದೆ. ಬಾಡಿದ ಕಬ್ಬು(ಸೋಗೆ ಸಹಿತ) ರೂ.3000 ಭತ್ತದ ಒಣ ಹುಲ್ಲು ರೂ.6000 ದಿಂದ 7000ಕ್ಕೆ ದರ ಪರಿಷ್ಕರಿಸಲಾಗಿದೆ. ರಾಗಿಯ ಒಣ ಹುಲ್ಲು ರೂ.6000 ದಿಂದ 7000ಕ್ಕೆ ಪರಿಷ್ಕರಿಸಲಾಗಿದೆ. ಹೀಗಿದೆ ಪರಿಷ್ಕೃತ ಮೇವು ಸಾಗಾಣಿಕೆ ದರಗಳು ಹಾಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಗೆ ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ:28-02-2024 ರವರೆಗೆ ಮುಂದುವರೆಸಲಾಗಿತ್ತು ಎಂದಿದ್ದಾರೆ. ಯಶಸ್ವಿನಿ ಯೋಜನೆಯು ಒಂದು ಜನಪ್ರಿಯ ಯೋಜನೆಯಾಗಿದ್ದು, ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಆದುದರಿಂದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/what-are-the-benefits-of-pm-jeevan-jyoti-bima-yojana-what-is-the-qualification-here-the-information/
ಬೆಂಗಳೂರು: ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಸಿರುವ ಸ್ಮಾರ್ಟ್ ಕಾರ್ಡ್ ಮಾನ್ಯತಾ ಉಚಿತ ಬಸ್ ಪಾಸ್ ಅವಧಿಯನ್ನು ಮೇ.31ರವರೆಗೆ ವಿಸ್ತರಿಸಿ ಕೆಎಸ್ಆರ್ ಟಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ಾರ್ಡ್ ಅವಧಿಯು ದಿನಾಂಕ: 31.12.2023 ಕ್ಕೆ ಕೊನೆಗೊಂಡಿದ್ದು, ಉಲ್ಲೇಖಿತ-1 ರ ಪತ್ರದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರು ಸದರಿ ಸ್ಮಾರ್ಟ್ಕಾರ್ಡ್ ಅವಧಿಯನ್ನು ವಿಸ್ತರಿಸುವಂತೆ ಕೋರಿದ್ದ ಮೇರೆಗೆ ಉಲ್ಲೇಖ-2 ರಲ್ಲಿ ಸೂಕ್ತಾಧಿಕಾರಿಗಳ ಅನುಮೋದನೆಯನ್ವಯ ದಿನಾಂಕ: 29.02.2024 ರವರೆಗೆ ಅವಧಿಯನ್ನು ವಿಸ್ತರಿಸಲು ಕ್ರಮವಹಿಸಲಾಗಿತ್ತು ಎಂದಿದ್ದಾರೆ. ಮುಂದುವರೆದು, ಆಡಳಿತಾತ್ಮಕ ಕಾರಣಗಳಿಂದಾಗಿ, ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಕಾರ್ಡ್ ಪಡೆದ ಪತ್ರಕರ್ತರಿಗೆ ಕ.ರಾ.ರ.ಸಾ.ನಿಗಮದ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್ಕಾರ್ಡ್ ಬಸ್ಪಾಸ್ಗಳ ಮಾನ್ಯತಾ ಅವಧಿಯನ್ನು ಸೂಕ್ತಾಧಿಕಾರಿಗಳ ಅನುಮೋದನೆ ಉಲ್ಲೇಖ-3 ರಂತೆ ದಿನಾಂಕ: 31.05.2024 ರವರೆಗೆ ವಿಸ್ತರಿಸುವುದು, ಈ ಬಗ್ಗೆ ನಿಗಮದ ಎಲ್ಲಾ ಚಾಲನಾ…
ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಮುಸ್ಲಿಂ ಮೂಲಭೂತವಾದಿಗಳು ಗಲಾಟೆ ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ. ಎಫ್ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದರು. ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧವನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ…
ಬೆಂಗಳೂರು: ರಾಜ್ಯ ಸರ್ಕಾರ ಸ್ವೀಕರಿಸಿರುವುದು ಕಾಂತರಾಜು ವರದಿನಾ ಜಯ ಪ್ರಕಾಶ ಹೆಗಡೆ ವರದಿನಾ ಎಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರಿಗೆ ನೀಡಿದ ಆದೇಶದಲ್ಲಿ ಜಾತಿ ಗಣತಿ ಮಾಡಲು ಆದೇಶ ಇರಲಿಲ್ಲ. ಆಗ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಲಿಲ್ಲ. ಜಾತಿ ಗಣತಿ ಯಾರು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಐದಾರು ಅರ್ಜಿ ವಿಚಾರಣೆ ಹಂತದಲ್ಲಿವೆ ಎಂದರು. ಈಗ ನೀಡಿರುವ ವರದಿಯಲ್ಲಿ ಕೆಲವು ಜಾತಿಗಳ ಉಪಜಾತಿಗಳನ್ನು ಬೇರ್ಪಡಿಸಿದ್ದಾರೆ. ಕೆಲವು ಜಾತಿಗಳ ಉಪ ಜಾತಿಗಳನ್ನು ಬೇರ್ಪಡಿಸಿಲ್ಲ ಎಂಬ ಮಾಹಿತಿ ಇದೆ. ಈ ವರದಿ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲಿ,. ಈ ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ನಾವು ಹಿಂದುಳಿದ ವರ್ಗದವರ ವಿರೋಧಿಗಳಲ್ಲ. ಜನಸಂಖ್ಯೆಗೆ ಅನುಗುಣವಾಗಿ ಅವರಿಗೆ ನ್ಯಾಯ ಸಿಗಬೇಕು. ಈ ವರದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಬಳಕೆಯಾಗಬಾರದು ಎಂದು…