Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ನಿನ್ನೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿತ್ತು. ಇದೀಗ 44 ಕಾಂಗ್ರೆಸ್ ಕಾರ್ಯಕರ್ತರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ನೀಡಿ, ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯನ್ನು ಹೊರಡಿಸಿದ್ದಾರೆ. ಆಯಾ ಇಲಾಖೆಯಿಂದ ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ. ಇಲ್ಲಿದೆ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗಿರುವಂತ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ

Read More

ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿಯವರು 21,000 ಕೋಟಿ ರೂಪಾಯಿ ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi Yojana -PM-Kisan) ಯೋಜನೆಯ 16 ನೇ ಕಂತನ್ನು ಮಹಾರಾಷ್ಟ್ರದ ಯವತ್ಮಾಲ್ನಿಂದ ಸಾರ್ವಜನಿಕ ಸಭೆಯಲ್ಲಿ ಬಿಡುಗಡೆ ಮಾಡಿದರು. ಹಾಗಾದರೇ ಅನ್ನದಾತರೇ ನಿಮ್ಮ ಖಾತೆಗೆ ಪಿಎಂ-ಕಿಸಾನ್ ಯೋಜನೆ ಹಣ ಬಂದಿದ್ಯಾ ಅಂತ ಚೆಕ್ ಮಾಡೋ ಬಗ್ಗೆ ಮುಂದೆ ಓದಿ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana -PM-Kisan) ನ 16 ನೇ ಕಂತು ಇಂದು ಬಿಡುಗಡೆ ಮಾಡಲಾಗಿದೆ. 2,000 ರೂ.ಗಳ ಈ ಕಂತು, ಸಣ್ಣ ಮತ್ತು ಅತಿಸಣ್ಣ ರೈತರನ್ನು ಬೆಂಬಲಿಸುವ ಸರ್ಕಾರದ ನಿರಂತರ ಪ್ರಯತ್ನಗಳಲ್ಲಿ ಮತ್ತೊಂದು ಹೆಜ್ಜೆಯಾಗಿದೆ. ಪಿಎಂ-ಕಿಸಾನ್ ಯೋಜನೆಯ ಪ್ರಮುಖ ವಿವರಗಳು ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತದೆ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ.ಗಳ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ. ನೇರ ಲಾಭ…

Read More

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುವದಕ್ಕೆ ಇಂದು ಸಂಜೆಯವರೆಗೆ ಡೆಡ್ ಲೈನ್ ನೀಡಲಾಗಿದೆ. ಒಂದು ವೇಳೆ ಫೆ.29ರ ಇಂದು ಶೇ.60ರಷ್ಟು ಕನ್ನಡವಿರುವಂತ ನಾಮಫಲಕಗಳನ್ನು ಹಾಕದೇ ಇದ್ದರೇ, ಅಂತಹ ಮಳಿಗೆಗೆ ಬೀಗಮುದ್ರೆ, ಲೈಸೆನ್ಸ್ ರದ್ದುಗೊಳಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಲಾಗಿದೆ ಎಂದಿದ್ದಾರೆ. ಅದರಂತೆ, ಈ ಹಿಂದೆ ಮಾನ್ಯ ಮುಖ್ಯ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡಿ ಆದೇಶಿಸಿದ್ದರು. ಆ ಬಳಿಕ ಕಾರ್ಯಕರ್ತರಿಗೂ ನೀಡುವುದಾಗಿ ತಿಳಿಸಿದ್ದರು. ಅದರಂತೆ ಇದೀಗ 40 ನಿಗಮ-ಮಂಡಳಿ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿ ನೀಡದಂತೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ, 2017 ರ ಸೆಕ್ಷನ್ 6 ರನ್ವಯ, ದಿನಾಂಕ. 04-04-2019 ರಿಂದ ಜಾರಿಗೆ ಬರುವಂತೆ, ಸರ್ಕಾರಿ ಆಸ್ಪತ್ರೆಯಿಂದ / ರಾಜ್ಯ ಸರ್ಕಾರ / ಕೇಂದ್ರ ಸರ್ಕಾರ / ಸ್ಥಳೀಯ ನಿಕಾಯಗಳು ಒಡೆತನ ಹೊಂದಿರುವ ನಿಯಂತ್ರಣ ಹೊಂದಿರುವ ಸೊಸೈಟಿ ಅಥವಾ ನ್ಯಾಸ / ಸ್ವಾಯತ್ತ ಸಂಸ್ಥೆಯಿಂದ ಪವರ್ತಿಸಲಾದ ಅಥವಾ ನಿರ್ವಹಿಸಲಾದ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿಯನ್ನು ನೀಡತಕ್ಕದ್ದಲ್ಲ ಎಂದು ತಿಳಿಸಿದ್ದಾರೆ. ಅದಾಗ್ಯೂ, ಕೆಲವು ಅನಧಿಕೃತ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು, ಸರ್ಕಾರಿ ಆಸ್ಪತ್ರೆಯಿಂದ 200…

Read More

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಜಾತಿಗಣತಿ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದಂತ ಜಯಪ್ರಕಾಶ್ ಹೆಗಡೆಯವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ.  ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು ಇಂದು ಜಾತಿಗಣತಿ ವರದಿಯನ್ನು ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದಲ್ಲಿ ಜಾತಿಗಣತಿ ವರದಿ ಪ್ರಕರಗೊಳ್ಳುವ ಸಾಧ್ಯತೆ ಇದೆ. ಜಾತಿ ಗಣತಿಯ ವರದಿಯ ಆಧಾರದ ಮೇಲೆ ಲೋಕಸಭಾ ಚುನಾವಣೆಯನ್ನು ಎದುರಿಸೋದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

Read More

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಬುಧವಾರದಂದು ಚಾಲನೆ ನೀಡಲಾಯಿತು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಹೆಣ್ಣುಮಕ್ಕಳು ಆರೋಗ್ಯ ಸಚಿವರೊಂದಿಗೆ ಜ್ಯೋತಿ ಬೆಳಗಿಸಿ, ಯೋಜನೆಗೆ ಮರುಚಾಲನೆ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿಯ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಗಳ ವಿತರಣೆ ಬುಧವಾರದಿಂದ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳನ್ನ ತಲುಪಿಸಲಿದ್ದು, ಶಾಲೆಯ ಮುಖ್ಯಸ್ಥರು ಹೆಣ್ಣುಮಕ್ಕಳಿಗೆ ಕಿಟ್ ಗಳನ್ನ ವಿತರಣೆ ಮಾಡಲಿದ್ದಾರೆ. ಒಂದು ಪ್ಯಾಕ್ ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್ ಗಳಿದ್ದು, ಒಂದು ವರ್ಷಕ್ಕೆ ಸಾಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳಿರುವ ಕಿಟ್ ಗಳನ್ನ ಒಟ್ಟಿಗೆ ವಿದ್ಯಾರ್ಥಿನಿಯರಿಗೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಅರ್ಥಪೂರ್ಣ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಇದರ ಭಾಗವಾಗಿ ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೆಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಉಪಾಧ್ಯಕ್ಷರಾಗಿ ನಾಲ್ವರನ್ನು ನೇಮಿಸಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ ಎಂದಿದೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಿದ್ದಾರೆ. ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/cm-siddaramaiah-gives-green-signal-to-40-congress-workers-to-be-given-corporation-board-seats/ https://kannadanewsnow.com/kannada/state-human-rights-commission-issues-notice-to-bmrcl-for-insulting-farmer-in-metro/

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ವಿಪಕ್ಷಗಳ ನಾಯಕರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ. ಆದರೇ ಅಸಲಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದ್ಯಾ.? ಆ ಬಗ್ಗೆ ಮುಂದೆ ಓದಿ. ನಿನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಲಾಗಿದೆ. ಇದು ರಾಜ್ಯದ ಶಕ್ತಿ ಸೌಧದಲ್ಲೇ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಪಕ್ಷಗಳು ಒತ್ತಾಯಿಸಿದ್ದವು. ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ – ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಲಾಗಿದೆ.…

Read More

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ತೆರಳೋದಕ್ಕೆ ಹೋದಂತ ರೈತರೊಬ್ಬರನ್ನು ಕೊಳಕು ಬಟ್ಟೆಯ ಕಾರಣಕ್ಕೆ ಭದ್ರತಾ ಸಿಬ್ಬಂದಿಗಳು ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಸಂಚಾರಕ್ಕೆ ನಿರಾಕರಿಸಲಾಗಿತ್ತು. ಈ ಪ್ರಕರಣ ಸಂಬಂಧ ರಾಜ್ಯ ಮಾನವ ಹಕ್ಕುಗಳ ಆಯೋಗವು ಬಿಎಂಆರ್ ಸಿಎಲ್ ಗೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ರಾಜ್ಯ ಮಾನವಹಕ್ಕುಗಳ ಆಯೋಗದಿಂದ ನಮ್ಮ ಮೆಟ್ರೋದ ಎಂಡಿಗೆ ನೋಟಿಸ್ ನೀಡಲಾಗಿದ್ದು, ಅದರಲ್ಲಿ ವ್ಯಕ್ತಿಯ ಬಟ್ಟೆಯ ಆಧಾರದಲ್ಲಿ ಅವಕಾಶ ನಿರಾಕರಣ ಮಾಡುವಂತಿಲ್ಲ. ಸಾರ್ವಜನಿಕ ಸಾರಿಗೆಯಲ್ಲಿ ಅವಕಾಶ ನಿರಾಕರಿಸುವಂತಿಲ್ಲ. ಆ ರೀತಿಯಾದ್ರೇ ಅದು ಮಾನವಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂಬುದಾಗಿ ಎಚ್ಚರಿಸಿದೆ. ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನ ಕೊಳಕು ಬಟ್ಟೆ ಧರಿಸಿದ ಕಾರಣಕ್ಕೆ ಪ್ರಯಾಣ ನಿರಾಕರಿಸಿರೋದು ತಪ್ಪು. ಈ ಕುರಿತಂತೆ 4 ವಾರಗಳಲ್ಲಿ ಸಂಪೂರ್ಣ ವರದಿಯನ್ನು ನೀಡುವಂತೆ ಬಿಎಂಆರ್ ಸಿಎಲ್ ಎಂಡಿಗೆ ಸೂಚಿಸಲಾಗಿದೆ. ಈ ಮೂಲಕ ನಮ್ಮ ಮೆಟ್ರೋಗೆ ಮಾನವಹಕ್ಕುಗಳ ಆಯೋಗವು ಶಾಕ್ ನೀಡಿದೆ. https://kannadanewsnow.com/kannada/actor-dali-dhananjay-appointed-as-ambassador-of-bangalore-international-film-festival/ https://kannadanewsnow.com/kannada/centre-bans-another-muslim-outfit-for-terror-links-in-kashmir/

Read More