Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್ಸಾಬ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು. ಮಾರ್ಚ್ 03 ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bjp-will-fight-till-traitors-are-arrested-opposition-leader-r-ashoka/…
ಬೆಂಗಳೂರು: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಸುದ್ದಿಯಾದರೂ ಕಾಂಗ್ರೆಸ್ ಮಾತ್ರ ಇದನ್ನು ನಂಬುತ್ತಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಹೇಳಲಾಗುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಂತೂ ಮಾಧ್ಯಮಗಳಿಗೆ ಬೆದರಿಕೆ ಹಾಕಿದ್ದಾರೆ ಎಂದರು. ಈ ಘಟನೆ ನಡೆದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ನಡೆಸಿ ಖಂಡಿಸಿ, ಪಾತಕಿಗಳನ್ನು ಹೆಡೆಮುರಿ ಕಟ್ಟಿ ತರುತ್ತೇವೆ ಎಂದು ಪ್ರಕಟಿಸಬೇಕಿತ್ತು. ಆದರೆ ಸಂಪುಟ ಸಭೆ ನಡೆಸಿಲ್ಲ, ಒಬ್ಬ ಸಚಿವರು ಕೂಡ ಘಟನಾ ಸ್ಥಳಕ್ಕೆ ಬಂದಿಲ್ಲ. ರಾಜ್ಯಸಭಾ ಸದಸ್ಯ ನಾಸಿರ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2024ರಿಂದ ದಿನಾಂಕ 31-03-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ. https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/ https://kannadanewsnow.com/kannada/national-indian-military-college-dehradun-invites-applications-for-entrance-test-for-class-8-admissions/
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ನಟ ಕೆ. ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಆಸ್ಪತ್ರೆಯ ವೈದ್ಯರ ಮಾಹಿತಿಯಂತೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/no-one-shouted-pakistan-zindabad-in-vidhana-soudha-dk-shivakumar/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/
ಬೆಂಗಳೂರು : ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ ಅವರು, ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದರು. ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಹಿಮಾಚಲ ಪ್ರದೇಶಕ್ಕೆ ವೀಕ್ಷರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ…
ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವಂತ ರಾಜ್ಯದ ಜನತೆಗೆ ಈಗ ಕರೆಂಟ್ ಶಾಕ್ ಕೊಡೋದಕ್ಕೆ ಕೆಇಆರ್ ಸಿ ಮುಂದಾಗಿದೆ. ಇಂದು ಸಂಜೆಯಿಂದಲೇ ವಿದ್ಯುತ್ ದರ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಾರಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗದಿಂದ ಲೋಕಸಭಾ ಚುನಾವಣೆ (LokSabha Elections)ಗೂ ಮುನ್ನವೇ ವಿದ್ಯುತ್ ದರ ಪರಿಷ್ಕರಣೆ ಮಾಡಲು ಮುಂದಾಗಿದೆ. ಇಂದು ಸಂಜೆಯೇ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆ ಮಾಡಿ, ಅಧಿಕೃತವಾಗಿ ಸ್ಲ್ಯಾಬ್ ಕೂಡ ತನ್ನ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಲಾಗುತ್ತಿತ್ತು. ಆದರೇ ಈಗ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಗೊಂಡರೇ ಪರಿಷ್ಕರಣೆ ಮಾಡೋದಕ್ಕೆ ಸಾಧ್ಯವಾಗೋದಿಲ್ಲ ಎನ್ನುವ ಕಾರಣಕ್ಕೆ, ಇಂದು ಸಂಜೆಯೇ ಪರಿಷ್ಕೃತ ದರಪಟ್ಟಿಯನ್ನು ಕೆಇಆರ್ ಸಿ ಪ್ರಕಟಿಸಲಿದೆ. ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಲಾಗಿತ್ತು. ಈ…
ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಸಂತನ್ ಅಲಿಯಾಸ್ ಟಿ ಸುತೀಂದ್ರರಾಜ (55) ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಶ್ರೀಲಂಕಾ ಪ್ರಜೆಯಾಗಿದ್ದ ಸಂತನ್ ಅವರನ್ನು 2022ರಲ್ಲಿ ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿತ್ತು. 1991 ರಲ್ಲಿ ಮಾಜಿ ಪ್ರಧಾನಿಯ ಹತ್ಯೆಗೆ ಸಂಬಂಧಿಸಿದಂತೆ 20 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ 2022 ರಲ್ಲಿ ಉನ್ನತ ನ್ಯಾಯಾಲಯವು ಬಿಡುಗಡೆ ಮಾಡಿದ ಏಳು ಜನರಲ್ಲಿ ಸಂತನ್ ಕೂಡ ಒಬ್ಬರು. ಪಿತ್ತಜನಕಾಂಗದ ವೈಫಲ್ಯದಿಂದ ಬಳಲುತ್ತಿದ್ದ ಸಂತನ್ ಅವರು ಬೆಳಿಗ್ಗೆ 7.50 ಕ್ಕೆ ನಿಧನರಾದರು ಎಂದು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯ ಡೀನ್ ಇ ಥೆರಾನಿರಾಜನ್ ತಿಳಿಸಿದ್ದಾರೆ. ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಅವರಿಗೆ ಹೃದಯ ಸ್ತಂಭನವಾಯಿತು. ಆದರೆ ಸಿಪಿಆರ್ (ಕಾರ್ಡಿಯೋಪಲ್ಮೊನರಿ ಪುನರುಜ್ಜೀವನ) ಕಾರ್ಯವಿಧಾನವನ್ನು ಅನುಸರಿಸಿ ಅವರನ್ನು ಪುನರುಜ್ಜೀವನಗೊಳಿಸಲಾಯಿತು ಮತ್ತು ಆಮ್ಲಜನಕ ಪೂರೈಕೆಯನ್ನು ನೀಡಲಾಯಿತು. ವೆಂಟಿಲೇಟರ್ನಲ್ಲಿದ್ದರು ಎಂದು ಥೆರಾನಿರಾಜನ್ ಸುದ್ದಿಗಾರರಿಗೆ ತಿಳಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಸಂತನ್ ಇಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಉಚಿತವಾಗಿ ನೀಡುವಂತ ಶುಚಿ ಯೋಜನೆಗೆ ಚಾಲನೆಯನ್ನು ನೀಡಲಾಗಿದೆ. ಹೀಗಾಗಿ ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆ, ಕಾಲೇಜುಗಳಲ್ಲಿನ ಹದಿಹರೆಯದ 10 ರಿಂದ 18 ವಯೋಮಾನದ ಹೆಣ್ಣಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಗುತ್ತದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಗಾಂಧಿನಗರದಲ್ಲಿರುವ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಿನಾಂಕ:28.02.2024, ಬುಧವಾರದಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಶುಚಿ” ಯೋಜನೆಗೆ ಮರು ಚಾಲನೆ ನೀಡಿದರು ಎಂದಿದ್ದಾರೆ. ಋತುಸ್ರಾವದ ಕುರಿತು ಇರುವ ಅವೈಜ್ಞಾನಿಕ ಅಭಿಪ್ರಾಯ / ಮೂಡ ನಂಬಿಕೆಗಳನ್ನು ದೂರಗೊಳಿಸಿ ಶುಚಿತ್ವ ಹಾಗೂ ಸ್ಯಾನಿಟರಿ ನ್ಯಾಪ್ಕಿನ್ಗಳ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳುವ ಮೂಲಕ ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ, ಶಾಲಾ ಹಾಜರಾತಿ, ಸುಧಾರಿಸಲು ಕರ್ನಾಟಕ ಸರ್ಕಾರ 2013-14ನೇ ಸಾಲಿನಲ್ಲಿ “ಶುಚಿ” ಯೋಜನೆಯನ್ನು ಪ್ರಾರಂಭಿಸಲಾಯಿತು ಎಂದು ತಿಳಿಸಿದ್ದಾರೆ. ಅದರಂತೆ, ಈ ಕಾರ್ಯಕ್ರಮದಡಿ ರಾಜ್ಯದ…
ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳ ನಂತರ, ಹಿಮಾಚಲ ಮುಖ್ಯಮಂತ್ರಿ, “ನಾನು ಯಾವುದೇ ರಾಜೀನಾಮೆಯನ್ನು ನೀಡಿಲ್ಲ. ನಾನೊಬ್ಬ ಯೋಧ, ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಮುಂದಾದಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೇ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಪ್ರಸ್ತುತ ಸರ್ಕಾರವು ಶಾಸಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಸಚಿವ ಸಂಪುಟಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ಗಂಟೆಗಳ ನಂತರ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿತ್ತು. ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ಅವರು ಅವರ ರಾಜೀನಾಮೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ…
ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನವನ್ನು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಮಾಡಿರುವುದಾಗಿ ತಿಳಇದು ಬಂದಿದೆ. ಇಂದು ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ನನ್ನ ಆತ್ಮಸಾಕ್ಷಿಯಾಗಿ ಅನುದಾನದ ಭರವಸೆ ನೀಡಿದವರಿಗೆ ಮತ ಚಲಾಯಿಸಿದ್ದೇನೆ ಎಂಬುದಾಗಿ ತಿಳಿಸಿದರು. ಈ ಮೂಲಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿರೋದನ್ನು ಖಚಿತ ಪಡಿಸಿದ್ದಾರೆ. ಅಂದಹಾಗೇ 9 ಗಂಟೆಯಿಂದ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ 116 ಶಾಸಕರು ಮತದಾನ ಮಾಡಿದ್ದಾರೆ. ಇನ್ನೂ ಮತ್ತಷ್ಟು ಶಾಸಕರು ಮತದಾನ ಮಾಡುತ್ತಿದ್ದಾರೆ. https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/ https://kannadanewsnow.com/kannada/voting-process-begins-for-4-rajya-sabha-seats-s-suresh-kumar-casts-his-vote/