Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ಸವಣೂರು ಕ್ಷೇತ್ರದ ಶೀಲವಂತ ಸೋಮಾಪುರ, ದುಂಢಸಿ, ಅ.ಮ.ಕೊಪ್ಪ, ಅರಟಾಳ ತಾಂಡಾ, ಹೊಸೂರು ಯತ್ನಳ್ಳಿ, ತಾಂಡಾ, ಜಕ್ಕನಕಟ್ಟಿ ಗ್ರಾಮಗಳಲ್ಲಿ ಜನರಿಗೆ ಏರ್ಪಡಿಸಿರುವ ಧನ್ಯವಾದ ಯಾತ್ರೆಯಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಇದೊಂದು ವಿಭಿನ್ನವಾದ ವಿಶೇಷ ವಾದ ಯಾತ್ರೆಯಾಗಿದೆ. ಕಳೆದ ವರ್ಷವೇ ನನ್ನನ್ನು ಅಭೂತಪೂರ್ವ ಬೆಂಬಲದೊಂದಿಗೆ ಶಾಸಕನಾಗಿ ಆಯ್ಕೆ ಮಾಡಿದ್ದಿರಿ, ಈಗ ನಾನು ಮಾಜಿ ಶಾಸಕನಾಗಿ ನಿಮ್ಮ ಮುಂದೆ ಬಂದು ನಿಂತಿದ್ದೇನೆ. ನೀವು ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಿರಿ, ನಾನು ಇಂತಹ ಪರಿಸ್ಥಿತಿಯಲ್ಲಿ ಬಂದು ನಿಮ್ಮ ಮುಂದೆ ನಿಲ್ಲುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಕಳೆದ ಎರಡು ಮೂರು ತಿಂಗಳಲ್ಲಿ ಆಗಿರುವ ಬೆಳವಣಿಗೆಯಿಂದ ನಾನು ಭಾರತದ ಉನ್ನತ ಸಂಸತ್ತಿನ ಸದಸ್ಯನಾಗಿ ಪಾಲ್ಗೊಳ್ಳುವ ಅವಕಾಶ ದೊರೆತಿದೆ.…
ಮನೆಯಲ್ಲಿ ಎಲ್ಲರೂ ಸುಖ ಶಾಂತಿಯಿಂದ ಬಾಳಲಿ ಎಂದು ಹಾರೈಸುತ್ತೇವೆ. ಅಂತಹ ಶಾಂತಿಯಿಂದ ಬದುಕಬೇಕಾದರೆ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಬೇಕು. ಸಕಾರಾತ್ಮಕ ಶಕ್ತಿಗಳು ಹೆಚ್ಚಾಗಬೇಕಾದರೆ, ನಕಾರಾತ್ಮಕ ಶಕ್ತಿಗಳನ್ನು ತೊಡೆದುಹಾಕಬೇಕು. ಇದಲ್ಲದೇ ಮನೆಯ ಜೀವನ ಪರಿಸ್ಥಿತಿಯೂ ಬದಲಾಗಬೇಕು. ಇಷ್ಟೆಲ್ಲಾ ಆಗಬೇಕೆಂದು ಬಯಸುವವರು ಹೇಗೆ ಪೂಜಾ ಕೋಣೆಯಲ್ಲಿ ದೀಪ ಹಚ್ಚಿ ಪೂಜಿಸಬೇಕು ಎಂಬುದನ್ನು ಈ ಆಧ್ಯಾತ್ಮಿಕ ಬರಹದಲ್ಲಿ ನೋಡಲಿದ್ದೇವೆ . ಭೂಮಂಡಲದಲ್ಲಿ ಜಲ, ಮಣ್ಣು, ವಾಯು, ಭಾನು ಮತ್ತು ಅಗ್ನಿಯಿಂದ ನಡೆಸಲ್ಪಡುತ್ತದೆ. ಒಂದು ಮನೆ ನಿರ್ಮಿಸಲು ಪಂಚಭೂತಗಳ ಲೆಕ್ಕ ಚಾರ ಮಾಡಲಾಗುತ್ತದೆ. ಪುರಾತನ ವಾಸ್ತುಶಾಸ್ತ್ರದಲ್ಲಿ ಪಂಚಭೂತಗಳಿಗೆ ವಿಶೇಷ ಸ್ಥಾನವಿದೆ. ಇವುಗಳ ಸ್ಥಾನಗಳಿಗೆ ಅನುಗುಣವಾಗಿ ಮನೆ ಕಟ್ಟಡ ಮಾಡಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ಪತ್ತೆ ಪರೀಕ್ಷೆಗೆ ದರವನ್ನು ನಿಗದಿ ಪಡಿಸಿದೆ. ಆ ದರದಂತೆ ಹಣ ಪಡೆಯುವಂತೆಯೂ ಖಡಕ್ ಆದೇಶ ಮಾಡಿದೆ. ಒಂದು ವೇಳೆ ಅದಕ್ಕಿಂತ ಹೆಚ್ಚು ಹಣ ಪಡೆದ್ರೇ ದೂರು ಸಲ್ಲಿಸುವಂತೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ಪತ್ತೆ ಪರೀಕ್ಷೆಗೆ ದರ ನಿಗದಿ ಪಡಿಸಲಾಗಿದೆ. ಎಲಿಸಾ ಪರೀಕ್ಷೆಗೆ ರೂ.300, ರಾಪಿಡ್ ಪರೀಕ್ಷೆಗೆ ರೂ.250 ನಿಗದಿ ಪಡಿಸಲಾಗಿದೆ ಅಂತ ತಿಳಿಸಿದೆ. ಇನ್ನೂ ಡೆಂಘಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ದರ ಪಡೆಯುವ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಹಳೆ ಕ್ಷಯರೋಗಿಗಳ ಆಸ್ಪತ್ರೆ ಆವರಣ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು – 38 ಈ ವಿಳಾಸಕ್ಕೆ ದೂರು ಸಲ್ಲಿಸಬಹುದು. ಇ-ಮೇಲ್ ವಿಳಾಸ dhobangaloreurban@gmail.com…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಡೆಂಗ್ಯೂ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರದಿಂದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲಿದೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ. ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯಮಟ್ಟದ ವಾರ್ ರೂಮ್ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಕೆಪಿಎಸ್ಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಆಯೋಗದಿಂದ ಅಧಿಸೂಚಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಹೀಗಿದೆ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ https://kannadanewsnow.com/kannada/mahayuti-alliance-wins-big-in-maharashtra-mlc-polls/ https://kannadanewsnow.com/kannada/dengue-outbreak-437-people-test-positive-for-dengue-in-a-single-day-today/
ಪುಣೆ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ದೊಡ್ಡ ವಿಜಯವನ್ನು ದಾಖಲಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್ಸಿಪಿ ಮತ್ತು ಬಿಜೆಪಿಯನ್ನು ಒಳಗೊಂಡ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಿಗೆ ಒಂಬತ್ತು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು ಮತ್ತು ಎಲ್ಲಾ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು. ಶುಕ್ರವಾರ ನಡೆದ 11 ಕೌನ್ಸಿಲ್ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಐವರು ಬಿಜೆಪಿ ನಾಯಕರು, ಶಿವಸೇನೆ (ಶಿಂಧೆ) ಬಣ ಮತ್ತು ಎನ್ಸಿಪಿ (ಅಜಿತ್ ಪವಾರ್) ತಲಾ ಇಬ್ಬರು ಗೆಲುವು ದಾಖಲಿಸಿದ್ದಾರೆ. ಬಿಜೆಪಿ ನಾಯಕಿ ಪಂಕಜಾ ಮುಂಡೆ, ಪರಿಣಯ್ ಫುಕೆ ಮತ್ತು ಯೋಗೇಶ್ ತಿಲೇಕರ್ ತಲಾ 26 ಮತಗಳನ್ನು ಪಡೆದರು. ಎನ್ಸಿಪಿ (ಅಜಿತ್ ಪವಾರ್) ಪಕ್ಷದ ಇಬ್ಬರು, ರಾಜೇಶ್ ವಿಟೇಕರ್ ಮತ್ತು ಶಿವಾಜಿರಾವ್ ಗರ್ಜೆ ಮತ್ತು ಶಿಂಧೆ ಸೇನಾದ ಭಾವನಾ ಗಾವ್ಲಿ ಅವರನ್ನು ಸಹ ವಿಜೇತರೆಂದು ಘೋಷಿಸಲಾಯಿತು. ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ…
ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೇ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರವಾಗಿ ಗಾಯವಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೂಲತಃ ಕುಣಿಗಲ್ (ಹಾಲಿ ಬೆಂಗಳೂರಿನ ಬಗಲಗುಂಟೆಯಲ್ಲಿ ವಾಸ) ಮೂಲದ ದರ್ಶನ್ (21), ತಾಯಿ ಕಲಾ (40) ಸ್ಥಳದಲ್ಲೇ ಮೃತಪಟ್ಟಿದ್ದು ಕಲಾ ಅವರ ಮಗಳು ಮೇಘ (23) ಹಾಗೂ ಅಳಿಯ ಮಂಜುನಾಥ್ ಅವರಿಗೆ ತೀವ್ರವಾಗಿ ಗಾಯಗಳಾಗಿ ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ…
ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ವಾಲ್ಮೀಕಿ ಹಗರಣದ ಕುರಿತು ಮಾತನಾಡಿದ ಅವರು, ಒಂದೆಡೆ ಇ.ಡಿ, ಸಿಬಿಐ ಮಾಜಿ…
ಬೆಂಗಳೂರು: ರಾಜ್ಯಾಧ್ಯಂತ ಇಂದು ಡೆಂಗ್ಯೂ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 2704 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 437 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇಂದು 1 ವರ್ಷದೊಳಗಿನ 7 ಮಕ್ಕಳಿಗೆ, 18 ವರ್ಷದೊಳಗಿನ 154 ಮಕ್ಕಳಿಗೆ, 18 ವರ್ಷ ಮೇಲ್ಪಟ್ಟ 276 ಸೇರಿದಂತೆ 437 ಜನರಿಗೆ ಡೆಂಗ್ಯೂ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 165, ಬೆಂಗಳೂರು ನಗರದಲ್ಲಿ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 01, ಕಲಬುರ್ಗಿ 20 ಜನರಿಗೆ…
ಬೆಂಗಳೂರು : “ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ರಷ್ಟು ಮಾತ್ರ ನೀರಿನ ಲಭ್ಯತೆಯಿದೆ. ಸುಮಾರು 19 ಟಿಎಂಸಿಯಷ್ಟು ನೀರಿನ ಕೊರತೆ ಅಂದರೆ ಶೇ. 28 ರಷ್ಟು ನೀರಿನ ಕೊರತೆ ಕಂಡುಬಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನೀರಿನ ವಿಚಾರವಾಗಿ ನಡೆದ ಸಭೆಯ ನಂತರ ನಡೆದ ಮಾಧ್ಯಮಗೋಷ್ಠಿ ಹಾಗೂ ಇಂದಿರಾಗಾಂಧಿ ಭವನದಲ್ಲಿ ಮಾತನಾಡಿದ ಅವರು “ಹಾರಂಗಿ ಶೇ.73, ಹೇಮಾವತಿ ಶೇ.55, ಕೆ.ಆರ್.ಎಸ್ ಶೇ.54, ಕಬಿನಿಯಲ್ಲಿ ಶೇ. 96 ರಷ್ಟು ನೀರಿನ ಪ್ರಮಾಣವಿದೆ. ಕಳೆದ ವರ್ಷ ಸಾಕಷ್ಟು ಕೊರತೆ ಉಂಟಾಗಿತ್ತು. ನಾಲ್ಕು ವರ್ಷಗಳ ಹಿಂದೆ ಸಮೃದ್ಧವಾಗಿ ಮಳೆಯಾದ ಕಾರಣ ಕೊರತೆ ಕಂಡು ಬಂದಿರಲಿಲ್ಲ” ಎಂದರು. ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆಯೇ ಎಂದಾಗ “ಕಬಿನಿಯು ಶೇ96 ರಷ್ಟು ತುಂಬಿದ್ದು ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಹೊರಗೆ ಬಿಡಲಾಗುತ್ತಿದೆ” ಎಂದು ಹೇಳಿದರು. ಮಂಡ್ಯದಲ್ಲಿ ರೈತರ ಬೆಳೆಗಳಿಗೆ ನೀರು…