Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು…
ದಾವಣಗೆರೆ ; ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆÉಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸತ್ಕದ್ದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ. https://kannadanewsnow.com/kannada/davanagere-by-election-slated-to-be-held-on-november-23-for-jagalur-town-panchayat-member-post/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ದಾವಣಗೆರೆ : ಜಗಳೂರು ಪಟ್ಟಣ ಪಂಚಾಯಿತಿಯ 9 ನೇ ವಾರ್ಡ್ಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಅಧಿಸೂಚನೆ ಹೊರಡಿಸಿದ್ದಾರೆ. ಹಿಂದುಳಿದ ವರ್ಗ `ಬ` ಗೆ ಮೀಸಲಿರುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ನ.12 ರಂದು ನಾಮಪತ್ರಗಳನು ಪರಿಶೀಲನೆ, ನ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ನ.23 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದ್ದು ನ.26 ರಂದು ಚುನಾವಣಾ ಪ್ರಕ್ರಿಯೆಗಳು ಮುಕ್ತಾಯವಾಗಲಿವೆ. ಸದಸ್ಯರಾದ ಬಿ.ಟಿ.ರವಿಕುಮಾರ್ ಬಿನ್ ತಿಮ್ಮಾರೆಡ್ಡಿ ಇವರ ಸದಸ್ಯತ್ವವು ಹೈಕೋರ್ಟ್ ಆದೇಶದಂತೆ ರದ್ದಾಗಿದ್ದು ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. https://kannadanewsnow.com/kannada/for-farmers-attention-applications-invited-for-training-in-animal-husbandry-activities/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿಯನ್ನು ಆಯೋಜಿಸಲಾಗಿದೆ. ನವೆಂಬರ್ 5, 6 ಮತ್ತು 29,30 ರಂದು ಆಧುನಿಕ ಹೈನುಗಾರಿಕೆ ತರಬೇತಿ, ನ.11 ಮತ್ತು 12 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ, ನ.15 ಮತ್ತು 16 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/bbmp-officials-raid-plastic-godowns-shops-in-bengaluru-fined-rs-1-40-lakh/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಬೆಂಗಳೂರು: ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿಂದು 1 ಗೋಡನ್ ಹಾಗೂ 12 ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 2200 ಕೆ.ಜಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ವಶಕ್ಕೆ ಪಡೆದು 1.40 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಮಳಿಗೆಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಬಿ.ಎಸ್.ಡ.ಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ, ಚೀಫ್ ಮಾರ್ಷಲ್ ರವರ ನೇತೃತ್ವದಲ್ಲಿ ಇಂದು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಸುವ ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಲಾಯಿತು. ನಗರದ ಪದ್ಮನಾಭನಗರ ವ್ಯಾಪ್ತಿಯಲ್ಲಿ ರಾಜಲಕ್ಷ್ಮೀ ಪ್ಯಾಕೇಜಿಂಗ್ ಗೋಡನ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಒಮ್ಮೆ ಬಳಸುವ ಗಿಫ್ಟ್ ಪ್ಯಾಕಿಂಗ್ ರಾಪರ್, ಹ್ಯಾಂಡ್ ಕವರ್, ಪ್ಲಾಸ್ಟಿಕ್ ಗ್ಲಾಸ್, ಸಿಲ್ವರ್ ಲೇಪಿತ ಪ್ಲೇಟ್, ಸಿಲ್ವರ್ ಕವರ್ ಮತ್ತು ಪ್ಲಾಸ್ಟಿಕ್ ರೋಲ್ ಸೇರಿದಂತೆ ಇನ್ನಿತರೆ…
ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇವೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ? ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ ಎಂದು ತಿಳಿಸಿದ್ದಾರೆ. 40 ವರ್ಷದಲ್ಲಿ ಸಣ್ಣ ಕಪ್ಪು ಚುಕ್ಕೆ ಕೂಡ ಇಲ್ಲದ ನನ್ನನ್ನು ಕೇವಲ ಷಡ್ಯಂತ್ರದಿಂದ ಕೆಳಗಿಳಿಸಲು…
ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋದ ನಿಲ್ದಾಣದಲ್ಲಿ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿದ್ದು, ಇಂತಹ ಪರಿಸ್ಥಿತಿಗೆ ಕಾರಣವಾಗಿದ್ದರ ಬಗ್ಗೆ ಪ್ರಾಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಈ ಸಮಸ್ಯೆ ಬಗ್ಗೆ ಬಿಎಂಆರ್ ಸಿಎಲ್ ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 6-11 ಗಂಟೆಯವರೆಗೆ ಸುಮಾರು 11000 ಜನರು ದಿನನಿತ್ಯ ಪ್ರಯಾಣಿಸುತ್ತದ್ದು, ಇಂದು, ಸದರಿ ಸಮಯದಲ್ಲಿ 15800 ಪ್ರಯಾಣಿಸಿದ್ದಾರೆ. ದೀರ್ಘ ರಜೆಯ ನಂತರ ಬಂದ ಪ್ರಯಾಣಿಕರ ಸರಂಜಾಮುಗಳನ್ನು ತ್ವರಿತವಾಗಿ ಪರಿಶೀಲಿಸಿ ಜನದಟ್ಟಣೆಯನ್ನು ಕಡಿಮೆಮಾಡಿ ಪ್ರಯಾಣಕ್ಕೆ ಅನೂಕೂಲ ಮಾಡಲಾಯಿತು ಎಂದು ತಿಳಿಸಿದೆ. https://twitter.com/OfficialBMRCL/status/1853400042209726810 https://kannadanewsnow.com/kannada/important-information-for-kset-passouts-last-chance-for-original-document-verification/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಬೆಂಗಳೂರು: ಕೆಸೆಟ್ ಪರೀಕ್ಷೆ ಪಾಸಾದಂತವರಿಗೆ ಕೊನೆಯ ಅವಕಾಶ ಎನ್ನುವಂತೆ ಮೂಲ ದಾಖಲಾತಿ ಪರಿಶೀಲನೆಗೆ ಅವಕಾಶ ನೀಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ದಿನಾಂಕ 11.07.2024 80 22.07.2024 31.07.2024. 17.08.2024 13.09.2024 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗಿತ್ತು, ಆದರೆ ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ / ದಾಖಲಾತಿ ಪರಿಶೀಲನೆ ಅಪೂರ್ಣಗೊಂಡ ಅಭ್ಯರ್ಥಿಗಳು ಮತ್ತೊಮ್ಮೆ ಮೂಲ ದಾಖಲೆಗಳ ಪರಿಶೀಲನೆಗೆ ಕಾಲಾವಾಶ ನೀಡುವಂತೆ ಪ್ರಾಧಿಕಾರಕ್ಕೆ ಕೋರಿರುತ್ತಾರೆ ಎಂದಿದೆ. ಪರಿಶೀಲನೆಗೆ ಅರ್ಹರಿದ್ದು ಇದುವರೆಗೂ ದಾಖಲಾತಿ ಪರೀಶೀಲನೆ ಪೂರ್ಣಗೊಳ್ಳದ (PG Degree Completed / Pursuing) en (Annexure-B) wond ದಿನಾಂಕ 12.11.2024 ರಂದು ಬೆಳಿಗ್ಗೆ 10.00 ಘಂಟೆಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು, ಇಲ್ಲಿ ದಾಖಲಾತಿ ಪರಿಶೀಲನೆಗೆ ತಪ್ಪದೆ ಹಾಜರಾಗುವಂತೆ ತಿಳಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ದಾಖಲಾತಿ ಪರಿಶೀಲನೆಗೆ ಯಾವುದೇ ಅವಕಾಶ ನೀಡಲಾಗುವುದಿಲ್ಲ ಹಾಗೂ ದಾಖಲಾತಿ ಪರಿಶೀಲನೆಗೆ ಹಾಜರಾಗದೆ ಇರುವ ಅಭ್ಯರ್ಥಿಗಳನ್ನು ಅರ್ಹತಾ…
ಬೆಂಗಳೂರು: ನಗರದ ಪಶ್ಚಿಮ ವಲಯ ಮತ್ತಿಕೆರೆ ಉಪವಿಭಾಗ ಯಶವಂತಪುರ ಆರ್.ಟಿ.ಒ ರಸ್ತೆಯಲ್ಲಿರುವ ಮಾರುಕಟ್ಟೆ ಪ್ರದೇಶದಲ್ಲಿ ಇಂದು BBMP ವಲಯ ಆಯುಕ್ತರಾದ ಅರ್ಚನಾ ರವರ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ 32 ಮಳಿಗೆಗಳಿಗೆ ಬೀಗ ಮುದ್ರೆ ಹಾಕಲಾಗಿರುತ್ತದೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ನೋಟೀಸ್ ಗಳನ್ನು ಜಾರಿ ಮಾಡಲಾಗಿದ್ದು, ಸಾಕಷ್ಟು ಸಮಯಾವಕಾಶವನ್ನು ನೀಡಿದ್ದರೂ ಬಾಕಿ ಆಸ್ತಿ ತೆರಿಗೆಯನ್ನು ಪಾವತಿಸಿರುವುದಿಲ್ಲ. ಈ ಕಾರಣ ಬಿಬಿಎಂಪಿ ಕಾಯ್ದೆ 2020 ಹಾಗೂ ನಿಯಮಾವಳಿಗಳನ್ವಯ, ವಾಣಿಜ್ಯೇತರ ಆಸ್ತಿಗಳಿಗೆ ಬೀಗಮುದ್ರೆ ಹಾಕುವುದರ ಮೂಲಕ ಬಾಕಿ ಆಸ್ತಿತೆರಿಗೆ ವಸೂಲಿ ಮಾಡಲಾಗುತ್ತಿದೆ. ಮತ್ತಿಕೆರೆ ಸಹಾಯಕ ಕಂದಾಯ ಅಧಿಕಾರಿ ಉಪವಿಭಾಗದಲ್ಲಿನ ಸ್ವತ್ತುಗಳಲ್ಲಿ ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳಲ್ಲಿ ಅತೀ ಹೆಚ್ಚು ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದ ಸ್ವತ್ತಿಗೆ ಬೀಗಮುದ್ರೆ (Sealing) ಮಾಡಲಾಗಿರುತ್ತದೆ. *ವಸತಿಯೇತರ ಉಪಯೋಗದ, ಪಿಐಡಿ ಸಂಖ್ಯೆ: 7-39-27 ಮತ್ತು 7-39-27/1, ಸುಬೇದಾರ್ ಛತ್ರಂ ರಸ್ತೆ, ಯಶವಂತಪುರ (ವಾರ್ಡ್ ಸಂಖ್ಯೆ 45 –…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ. ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಇನ್ನೂ ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/ https://kannadanewsnow.com/kannada/breaking-deeply-concerned-india-condemns-violence-against-hindus-in-canada/