Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ : ಶಿಗ್ಗಾವಿ ಸವಣೂರು ಕ್ಷೇತ್ರದ ಅಭಿವೃದ್ಧಿ ಕುರಿತು ನಾನು ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ದ ಮಾಡಿರುವ ಆರೋಪಗಳಿಗೆ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿ, ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಾನು ಖಂಡಿತವಾಗಿಯೂ ಒಂದು ಮನೆ ಕಟ್ಟಿಲ್ಲ ನನ್ನ ಕ್ಷೇತ್ರದಲ್ಲಿ ಐದು ಲಕ್ಷ ರೂಪಾಯಿಯ ಹನ್ನೆರಡುವರೆ ಸಾವಿರ ಮನೆ ಕಟ್ಟಿಸಿದ್ದೇನೆ. ನಿಮ್ಮದೆ ಸರ್ಕಾರ ಇದೆ ದಾಖಲೆ ತೆಗೆದು ನೋಡಿ ಮುಖ್ಯಮಂತ್ರಿಯಾಗಿ ಈ ರೀತಿ ಹಸಿ ಸುಳ್ಳು ಹೇಳುವುದು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಜೀವನದ ಹಂಗು ತೊರೆದು ನಮ್ಮ ಸರ್ಕಾರ ಕೊರೊನಾ ಸಂಪೂರ್ಣ ನಿಯಂತ್ರಿಸಲು ಆಸ್ಪತ್ರೆ ಬೆಡ್ ಗಳು, ಆಕ್ಸಿಜನ್ ಕಿಟ್ ಗಳು, , ಔಷಧಿ, ಚುಚ್ಚು ಮದ್ದುಗಳನ್ನು ಮತ್ತು ಕೇವಲ ಎರಡು ಟೆಸ್ಟ್ ಲ್ಯಾಬ್ ಗಳಿದ್ದಿದ್ದನ್ನು…
ಚನ್ನಪಟ್ಟಣ/ರಾಮನಗರ: ಚನ್ನಪಟ್ಟಣದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ಧ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಗೆಲ್ಲುವ ಮೂಲಕ ಅಧರ್ಮಕ್ಕೆ ಹೀನಾಯ ಸೋಲಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಚನ್ನಪಟ್ಟಣ ಉಪ ಚುನಾವಣೆಯ ಕಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಗೊಳ್ಳರದೊಡ್ಡಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಕುತಂತ್ರ ಅಧರ್ಮ ಹಾಗೂ ಧರ್ಮದ ನಡುವಿನ ಚುನಾವಣೆ ಇದಾಗಿದೆ. ಈ ಬಾರಿ ನಿಖಿಲ್ ಅಭಿವನ್ಯುವಲ್ಲ. ಅರ್ಜುನನಾಗಿ ಯುದ್ಧ ಎದುರಿಸುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಪಡೆ ಅವರಿಗೆ ಸಾಥ್ ಕೊಡುತ್ತಿದ್ದಾರೆ. ಎರಡೂ ಪಕ್ಷಗಳ ನಾಯಕರು ಕೃಷ್ಣನ ಪಾತ್ರ ವಹಿಸಿ ಅಧರ್ಮವನ್ನು ಹಿಮ್ಮೆಟ್ಟಿಸಲಿದ್ದಾರೆ. ಸಚಿವರ ದಂಡು ಚನ್ನಪಟ್ಟಣದಲ್ಲಿದೆ. ಡಿಸಿಎಂ ಇವತ್ತು ಬಂದಿದ್ದಾರೆ, ಎಲ್ಲಾ ಕಂಡೆ ನಮ್ಮನ್ನು ಬೈದುಕೊಂಡು ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು. ಚದುರಂಗ ಆಡಿದವರೆಲ್ಲ ಏನಾದರು? ಚದುರಂಗ ಆಡಿದವರೆಲ್ಲಾ ಮುಳುಗಿದ್ದಾರೆ ಡಿಕೆಶಿ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವರು; ಚದುರಂಗ…
ಚನ್ನಪಟ್ಟಣ : “ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷಗಳ ಕಾಲ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರು ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. “ಚುನಾವಣೆಗೆ ನಾಲ್ಕೈದು ದಿನವಿರುವಾಗ ಜನರ ಬಳಿಗೆ ಬರುವ ಕುಮಾರಸ್ವಾಮಿ ಅವರೇ ನಿಮ್ಮ ಈ ಧೋರಣೆಯನ್ನು ಇನ್ನೆಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತೀರಿ” ಎಂದರು. ಕುಮಾರಸ್ವಾಮಿ ಸಹವಾಸ ಮಾಡಿ ಸಾಕಾಗಿದೆ “18 ಸೀಟು ಇಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವೇ? ಬಿಜೆಪಿಯವರು ದಡ್ಡರು, ಕೇವಲ ಎರಡು ಕ್ಷೇತ್ರ ಗೆದ್ದಿರುವುದಕ್ಕೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ಕಾಂಗ್ರೆಸ್ ನವರಾಗಿದ್ದರೆ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ. ಈ ಹಿಂದೆ ಅವರ ಸಹವಾಸ ಮಾಡಿ ಅನುಭವಿಸಿದ್ದು ಸಾಕಾಗಿದೆ. ಚುನಾವಣೆ ಸಮೀಪಿಸಲಿ ಆಗ ಆ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳಿದರು. ಚನ್ನಪಟ್ಟಣದ ಜನರ ಕಾಳಜಿ ನಾವು…
ಕೋಲಾರ: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 10 ಸಾವಿರ ಕೋಟಿ ರೂಪಾಯಿಯನ್ನು ಮುಸ್ಲಿಮರಿಗೆ ನೀಡುತ್ತೇನೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅವರ ಮತ ಗಳಿಸಲು ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ. ಈಗ ವಕ್ಫ್ ಮೂಲಕ ಕಾಂಗ್ರೆಸ್ ರೈತರ ಜಮೀನು ಕಬಳಿಸುತ್ತಿದೆ. ಕೆಎಸ್ಆರ್ಟಿಸಿಯ ಸ್ಲೀಪ್ ಲೈಕ್ ಎ ಬೇಬಿ ಎಂಬಂತೆ, ಮುಸ್ಲಿಂ ಮೂಲಭೂತವಾದಿಗಳು ಹಾಗೂ ಭಯೋತ್ಪಾದಕರು ಕರ್ನಾಟಕದಲ್ಲಿ ಆರಾಮವಾಗಿ ನಿದ್ರಿಸುವ ವಾತಾವರಣ ಸೃಷ್ಟಿಯಾಗಿದೆ ಎಂದರು. ಮುಸ್ಲಿಮ್ ಗಲಭೆಕೋರರು ಪೊಲೀಸ್ ಠಾಣೆಗೆ ನುಗ್ಗಿ ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದನ್ನು ಕೂಡ ವಾಪಸ್ ಪಡೆದು ಮುಸ್ಲಿಮರನ್ನು ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ದಾರೆ. ಮುಡಾ ಹಗರಣದ…
ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜಿಲ್ಲೆಯ ಕೈ ನಾಯಕರಿಂದ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಫೆ.02 ರಂದು ಚುನಾವಣೆ ನಿಗಧಿಯಾಗಿದೆ. ಈ ಬಾರಿ ಘಟಾನುಘಟಿಗಳು ಸ್ಪರ್ಧೆಗೆ ರಣಕಣ ಸಜ್ಜಾಗಿದ್ದು, ಚುನಾವಣೆ ಮತ್ತಷ್ಟು ರಂಗೇರುವಂತೆ ಮಾಡಿದೆ. ಚುನಾವಣಾ ಸಂಬಂಧ ಸೋಮವಾರ ಶಾಸಕ ಕೆ.ಎಂ.ಉದಯ್ ಅವರ ಸ್ವಗ್ರಾಮದ ನಿವಾಸದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮುಖಂಡರು ಮತ್ತು ಆಕಾಂಕ್ಷಿಗಳ ಸಭೆ ನಡೆಸಿ ಮನ್ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ಪಕ್ಷ, ಚಿಹ್ನೆ ಹೆಸರಿನಲ್ಲಿ ಚುನಾವಣೆ ನಡೆಯದಿದ್ದರೂ ರಾಜಕೀಯ ನಂಟು ಬೆಸೆದುಕೊಂಡಿದೆ. ಎಲ್ಲವೂ ರಾಜಕೀಯ ಲೆಕ್ಕಾಚಾರದ ಮೇಲೆ ನಡೆಯಲಿದೆ. ಈಗಾಗಲೇ 6 ಮಂದಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಈಗಿನಿಂದಲೇ ಚುನಾವಣಾ ತಯಾರಿ ಮಾಡಿಕೊಂಡು ಗ್ರಾಮೀಣ ಭಾಗದಲ್ಲಿ ಮತದಾನಕ್ಕೆ ನೇಮಕಗೊಂಡಿರುವ ಡೇರಿಗಳ ಪ್ರತಿನಿಧಿಯನ್ನು ಮನವೊಲಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ…
ಬೆಂಗಳೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಮೂಲಗಳ ಅತಿಕ್ರಮಣವನ್ನು ತೆರವುಗೊಳಿಸಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ನಮ್ಮ ಜಲಾಶಯಗಳ ಸಂರಕ್ಷಣೆಯಿಂದ ಪರಿಸರ ಸಮತೋಲನವನ್ನು ಕಾಪಾಡಬಹುದು ಎಂದು ಸಚಿವರು ಹೇಳಿರುವರಲ್ಲದೆ, ಕೃಷಿ ಚಟುವಟಿಕೆಗಳನ್ನು ಬೆಂಬಲಿಸುವುದು ಹಾಗೂ ನಮ್ಮ ಸಮುದಾಯಗಳಿಗೆ ಜಲ ಭದ್ರತೆಯನ್ನು ಖಚಿತಪಡಿಸುವುದು ಆದ್ಯತೆಯ ಕ್ರಮವಾಗಬೇಕು ಎಂದು ತಿಳಿಸಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಅನೇಕ ಜಲಾಶಯಗಳಲ್ಲಿ ಅತಿಕ್ರಮಣಗಳಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು ಈ ಗಂಭೀರ ವಿಷಯವನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. 1. ಜಲಮೂಲಗಳ ಅತಿಕ್ರಮಣವನ್ನು ಗುರುತಿಸುವುದು ಹಾಗೂ ವರದಿ ಸಲ್ಲಿಸುವುದು: ಗ್ರಾಮ…
ನವದೆಹಲಿ: ನವೆಂಬರ್ 2 ರಂದು ತಮ್ಮ 59 ನೇ ಹುಟ್ಟುಹಬ್ಬದಂದು ಅಭಿಮಾನಿ ಕಾರ್ಯಕ್ರಮವೊಂದರಲ್ಲಿ ನಟ ಶಾರುಖ್ ಖಾನ್ ಧೂಮಪಾನವನ್ನು ತ್ಯಜಿಸುವ ಬಗ್ಗೆ ಮಾತನಾಡಿದರು. ಅವರ ಅಭಿಮಾನಿಗಳು ಅವರ ನಿರ್ಧಾರವನ್ನು ಆಚರಿಸುತ್ತಿದ್ದಂತೆ, ಕೆಲವರು ಧೂಮಪಾನವನ್ನು ತ್ಯಜಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಆದಾಗ್ಯೂ, 30 ವರ್ಷಗಳಿಂದ ಆಕ್ರಮಣಕಾರಿಯಾಗಿ ಧೂಮಪಾನ ಮಾಡಿದ ಶಾರುಖ್ ಈ ವಿಷಯದಲ್ಲಿ ತಮ್ಮನ್ನು ತಾವು ರೋಲ್ ಮಾಡೆಲ್ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಈವೆಂಟ್ನ ವೀಡಿಯೊದಲ್ಲಿ ಅಭಿಮಾನಿಗಳು ತಮ್ಮ ಆರಾಧ್ಯ ದೈವದ ಹೆಜ್ಜೆಗಳನ್ನು ಅನುಸರಿಸುವ ಬದ್ಧತೆಯನ್ನು ಘೋಷಿಸುವುದನ್ನು ತೋರಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಆರ್ಕೆ, “ಜಬ್ ಜಬ್ ಜಿಂದಗಿ ಮೇ ಜೈಸಾ ಅಚ್ಚಾ ಲಗೆ ವೋ ಕರೋ… ನನ್ನ ರೋಲ್ ಮಾಡೆಲ್ ನಹೀ ಹೂಂ… (ನಿಮಗೆ ಯಾವುದು ಸರಿ ಎನಿಸುತ್ತದೆಯೋ ಅದನ್ನು ಮಾಡಿ. ನಾನು ರೋಲ್ ಮಾಡೆಲ್ ಅಲ್ಲ. 30 ವರ್ಷಗಳ ಕಾಲ ಧೂಮಪಾನ ಮಾಡಿದ ನಂತರ ಧೂಮಪಾನವನ್ನು ತ್ಯಜಿಸಲು ಸಲಹೆ ನೀಡುವುದು ಸರಿ ಎಂದು ನಾನು ಭಾವಿಸುವುದಿಲ್ಲ ಎಂದು ಶಾರುಖ್ ಒತ್ತಿ ಹೇಳಿದರು.…
ಜೀವನದಲ್ಲಿ ಎಷ್ಟೇ ದೊಡ್ಡ ಸಮಸ್ಯೆ ಬಂದರೂ ಕಣ್ಣಿಗೆ ಗೊತ್ತಾಗುವುದಿಲ್ಲ. ಆದರೆ ಸ್ವಲ್ಪ ಸಾಲ ತೆಗೆದುಕೊಂಡರೆ ಸಾಕು. ಆ ಸಾಲದ ಜೊತೆಗೆ ಸಂಪೂರ್ಣ ಪರಿಹಾರ, ನಮಗೆ ಏನೂ ಉಳಿಯುವುದಿಲ್ಲ. ಎಷ್ಟೇ ದೊಡ್ಡ ಋಣವಾದರೂ ಆ ಋಣ ತೀರಿಸಲು ನಾವು ಮಾಡಬೇಕಾದ ಪೂಜೆ ಮುರುಗನ ಆರಾಧನೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ…
ಮೈಸೂರು: 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಬಾರಿಗೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎ.1 ಆರೋಪಿಯಾಗಿದ್ದಾರೆ. ಅವರಿಗೆ ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನವೆಂಬರ್.6ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಈಗಾಗಲೇ ಮುಡಾ ಹಗರಣದಲ್ಲಿ ಎ.2 ಆರೋಪಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ, ಎ.4 ಆರೋಪಿಯನ್ನು ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ಒಳಪಡಿಸಿದ್ದರು. ಇದೀಗ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. https://kannadanewsnow.com/kannada/people-of-soraba-taluk-mescom-to-hold-mass-contact-meeting-tomorrow-on-the-spot-solution-to-your-problem/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಶಿವಮೊಗ್ಗ: ಮೆಸ್ಕಾಂ ಗ್ರಾಹಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಎನ್ನುವಂತೆ ಸೊರಬ ಮೆಸ್ಕಾಂ ಕಚೇರಿಯಲ್ಲಿ ನಾಳೆ ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 05-11-2024ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೆಸ್ಕಾಂ ಸೊರಬ ಉಪ ವಿಭಾಗೀಯ ಕಚೇರಿಯಲ್ಲಿನ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ. ನಾಳೆಯ ಮೆಸ್ಕಾಂ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಭಾಗವಹಿಸಿ, ವಿದ್ಯುತ್ ಸಮಸ್ಯೆ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅವುಗಳನ್ನು ಪರಿಹರಿಸುವಂತ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಸೊರಬ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/mig-29-fighter-jet-crashes-near-agra/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/ https://kannadanewsnow.com/kannada/breaking-deeply-concerned-india-condemns-violence-against-hindus-in-canada/