Author: kannadanewsnow09

ನವದೆಹಲಿ: ದೆಹಲಿ, ಗುಜರಾತ್, ಹರಿಯಾಣ, ಚಂಡೀಗಢ ಮತ್ತು ಗೋವಾದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆಯನ್ನು ಘೋಷಿಸಿವೆ. ದೆಹಲಿಯಲ್ಲಿ 7, ಗುಜರಾತ್ ನಲ್ಲಿ 26, ಕಾಂಗ್ರೆಸ್ 24, ಎಎಪಿ 2, ಹರ್ಯಾಣದಲ್ಲಿ 10, ಚಂಡೀಗಢದಲ್ಲಿ ಕಾಂಗ್ರೆಸ್ 9 ಮತ್ತು ಎಎಪಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಮುಂಬರುವ ಲೋಕಸಭಾ ಚುನಾವಣೆಗೆ ದೆಹಲಿ, ಹರಿಯಾಣ, ಗುಜರಾತ್, ಚಂಡೀಗಢ ಮತ್ತು ಗೋವಾದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಅಂತಿಮವಾಗಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡಿವೆ. ನವದೆಹಲಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿಯ ಸೌರಭ್ ಭಾರದ್ವಾಜ್, ಅತಿಶಿ, ಸಂದೀಪ್ ಪಾಠಕ್ ಮತ್ತು ಕಾಂಗ್ರೆಸ್ನ ಮುಕುಲ್ ವಾಸ್ನಿಕ್, ದೀಪಕ್ ಬಾಬಾರಿಯಾ, ಅರವಿಂದರ್ ಸಿಂಗ್ ಲವ್ಲಿ, ದೆಹಲಿಯಲ್ಲಿ ಪಕ್ಷಗಳು ನಾಲ್ಕು-ಮೂರು ಸೀಟು ಹಂಚಿಕೆ ಸೂತ್ರಕ್ಕೆ ನಿರ್ಧರಿಸಿವೆ, ಎಎಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಎಂದು ಹೇಳಿದರು. ಎಎಪಿ ದಕ್ಷಿಣ ದೆಹಲಿ, ನವದೆಹಲಿ, ಪಶ್ಚಿಮ ದೆಹಲಿ ಮತ್ತು ವಾಯುವ್ಯ ದೆಹಲಿ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು,…

Read More

ಬೆಂಗಳೂರು:  ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಗುಡ್ ನ್ಯೂಸ್ ಎನ್ನುವಂತೆ, ಬಿಬಿಎಂಪಿಯಿಂದ ಒಂದು ಬಾರಿ ಕಡೆಯ ಅವಕಾಶ ನೀಡಲಾಗಿದೆ. ಈ ಮೂಲಕ OTS ಯೋಜನೆಯಡಿ ಪರಿಹಾರ ಕಂಡುಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಆ ಬಗ್ಗೆ ಮುಂದಿದೆ ಪುಲ್ ಡಿಟೇಲ್ಸ್ ಓದಿ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವು ದಿನಾಂಕ: 22-02-2024ರಂದು(ಗುರುವಾರ) ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರಿಕರು ಈಗ ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ. ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ OTS ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು…

Read More

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾದ ನಂತರ‌ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ವಿಧಾನಸಭಾ ಚುನಾವಣೆ ವೇಳೆಯಲ್ಲಿ ದಾಖಲಾಗಿದ್ದಂತ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಪೀಠವು ಪ್ರಕರಣ ದಾಖಲಾದ ನಂತ್ರ ಎಷ್ಟು ಬಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದಂತ ವಕೀಲರು ಈವರೆಗೆ ನಾಲ್ಕು ಬಾರಿ ಸಮನ್ಸ್ ಜಾರಿಗೊಳಿಸಲಾಗಿದೆ. ಆದರೇ ಈವರೆಗೆ ಒಮ್ಮೆಯೂ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ಗಮನಕ್ಕೆ ತಂದರು. ಇದರಿಂದ ಸಿಟ್ಟಾದಂತ ಹೈಕೋರ್ಟ್ ನ್ಯಾಯಪೀಠವು, ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾದ ನಂತರ‌ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಮುಂದಿನ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ಮುಂದೆ ಶ್ರೀರಾಮುಲು ಹಾಜರಾಗಬೇಕು. ಒಂದು ವೇಳೆ ಹಾಜರಾಗಲಿದ್ದಲ್ಲಿ ಬಂಧನ ವಾರಂಟ್ ಹೊರಡಿಸಬೇಕಾಗುತ್ತದೆ ಎಂದು ಶ್ರೀರಾಮುಲುಗೆ…

Read More

ಬೆಂಗಳೂರು: ಫೆಬ್ರವರಿ.27ರಂದು ಬೆಂಗಳೂರಲ್ಲಿ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆಯ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 2 ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿತ್ತು. ಈಗ ಮುಂದುವರೆದು ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೂ ಓಓಡಿ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ಸಿಬ್ಬಂದಿಗಳಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು…

Read More

ನವದೆಹಲಿ: ಬುಕ್ ಮಾಡಿದ ಕಲ್ಯಾಣ ಮಂಟಪದಲ್ಲಿ ಆರೋಪಿಗಳು ಮದುವೆಯನ್ನು ನಡೆಸದಿರುವುದು ಐಪಿಸಿ ಸೆಕ್ಷನ್ 417 ರ ಅಡಿಯಲ್ಲಿ ಶಿಕ್ಷಾರ್ಹ ವಂಚನೆಯ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿದೆ. ಪ್ರಸ್ತುತ ಮೇಲ್ಮನವಿದಾರರ ವಿರುದ್ಧ ಐಪಿಸಿಯ ಸೆಕ್ಷನ್ 417 ರ ಅಡಿಯಲ್ಲಿ ಅಪರಾಧವನ್ನು ಹೇಗೆ ಮಾಡಲಾಗುತ್ತದೆ ಎಂದು ನಮಗೆ ಕಾಣುತ್ತಿಲ್ಲ. ಮದುವೆ ಪ್ರಸ್ತಾಪವನ್ನು ಪ್ರಾರಂಭಿಸಲು ಮತ್ತು ನಂತರ ಪ್ರಸ್ತಾಪವು ಅಪೇಕ್ಷಿತ ಅಂತ್ಯವನ್ನು ತಲುಪದಿರಲು ಅನೇಕ ಕಾರಣಗಳಿರಬಹುದು. ಪ್ರಾಸಿಕ್ಯೂಷನ್ ಮುಂದೆ ಅಂತಹ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ಸೆಕ್ಷನ್ 417 ರ ಅಡಿಯಲ್ಲಿ ಯಾವುದೇ ಅಪರಾಧವನ್ನು ಸಹ ಮಾಡಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಟ್ಟಾರೆಯಾಗಿ ಮದುವೆಯಿಂದ ಹಿಂದೆ ಸರಿಯುವುದು ಐಪಿಸಿ ಸೆಕ್ಷನ್ 417ರ ಅಡಿಯಲ್ಲಿ ವಂಚನೆ ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು. ಹೀಗಾಗಿ ವಿಧೇಯಕದ ವಿರೋಧವಾಗಿ ಹೆಚ್ಚು ಮತ ಚಲಾವಣೆಯಾದ ಕಾರಣ, ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ತಿರಸ್ಕೃತಗೊಂಡಿದೆ. ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಳ್ಳುತ್ತಿದ್ದಂತೇ ಬಿಜೆಪಿ ಸದಸ್ಯರಿಂದ ಜೈ ಶ್ರೀರಾಮ ಎಂಬುದಾಗಿ ಘೋಷಣೆ ಕೂಗಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದ ಭಾರತ್ ಮಾತಾಕಿ ಜೈ, ಜೈ ಭೀಮ್ ಎಂಬುದಾಗಿ ಘೋಷಣೆ ಕೂಗಲಾಯಿತು. ಒಟ್ಟಾರೆಯಾಗಿ ರಾಜ್ಯ ಸರ್ಕಾರಕ್ಕೆ…

Read More

ನವದೆಹಲಿ: ಪುರುಷರ ರಾಷ್ಟ್ರೀಯ ತಂಡಗಳಿಗೆ ಆದ್ಯತೆ ನೀಡುತ್ತಿರುವ ಹಾಕಿ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಭಾರತದ ಮಹಿಳಾ ಹಾಕಿ ತಂಡದ ತರಬೇತುದಾರ ಜನ್ನೆಕ್ ಸ್ಕೋಪ್ಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವರ್ಷದ ಆಗಸ್ಟ್ನಲ್ಲಿ ಅಧಿಕಾರಾವಧಿ ಕೊನೆಗೊಳ್ಳಬೇಕಿದ್ದ ಸ್ಕೋಪ್ಮನ್ ತಮ್ಮ ಕೋಚ್ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ಹಾಕಿ ಇಂಡಿಯಾಕ್ಕೆ (ಎಚ್ಐ) ಕಳುಹಿಸಿದ್ದಾರೆ ಎಂದು ಈ ಬೆಳವಣಿಗೆಯ ಬಗ್ಗೆ ತಿಳಿದಿರುವ ಜನರು ದೃಢಪಡಿಸಿದ್ದಾರೆ. ಅವರು ಇನ್ನು ಮುಂದೆ ಮುಂದುವರಿಯಲು ಬಯಸುವುದಿಲ್ಲ ಎಂದು ಅವರು ತಮ್ಮ ಉದ್ದೇಶಗಳನ್ನು ಎಚ್ಐಗೆ ಸ್ಪಷ್ಟಪಡಿಸಿದ್ದಾರೆ. ಅವರು ರಾಜೀನಾಮೆಯನ್ನು ಕಳುಹಿಸಿದ್ದಾರೆ. ಎಲ್ಲಾ ಸಂಭವನೀಯತೆಗಳಲ್ಲಿ, ಇದನ್ನು ಸ್ವೀಕರಿಸಲಾಗುವುದು ಎಂದು ಬಲ್ಲ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಮಹಿಳಾ ತಂಡ ಅರ್ಹತೆ ಪಡೆಯದ ಕಾರಣ ಆರಂಭವಾದ ಕಹಿ ಕಥೆಗೆ ತೆರೆ ಎಳೆದಿದೆ. ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಭಾರತ ತಂಡವು ಎರಡು ಅವಕಾಶಗಳನ್ನು ಕಳೆದುಕೊಂಡಿತು. ಮೊದಲು ಏಷ್ಯನ್ ಕ್ರೀಡಾಕೂಟದಲ್ಲಿ ಮತ್ತು ನಂತರ ರಾಂಚಿಯಲ್ಲಿ ನಡೆದ ಎಫ್ಐಎಚ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ತಂಡವು…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೂಡ 4 ತಂಡಗಳನ್ನು ಮಾಡಿ ಮುಂದಿನ ವಾರದಿಂದ ಆ ಎಲ್ಲ ತಂಡಗಳು ಪ್ರವಾಸ ಪ್ರಾರಂಭಿಸಲಿವೆ. ಕೇಂದ್ರದ ನಾಯಕರು ಜೊತೆಗೂಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‍ವಾಲ್ ಅವರು ಇವತ್ತಿನ ಸಭೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಮುಖರ ವಿಶೇಷ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. ಪ್ರತಿಯೊಂದು ಲೋಕಸಭಾ ಕ್ಷೇತ್ರಗಳ ಅತ್ಯಂತ ತಳಮಟ್ಟದ ವರದಿಯ ಕುರಿತು ವಿಸ್ತøತ ಚರ್ಚೆ ಆಗಿದೆ. ಆಂತರಿಕ ವರದಿ ಪ್ರಕಾರ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವಂಥ ಸ್ಥಿತಿ ಇದೆ. ತಳಮಟ್ಟದಲ್ಲಿ ಪಕ್ಷದ ಚಟುವಟಿಕೆಗಳು, ರಾಜ್ಯ ನಾಯಕರ ಲೋಕಸಭಾ ಕ್ಷೇತ್ರವಾರು ಪ್ರವಾಸ ಮತ್ತು ಕೇಂದ್ರದ ನಾಯಕರು ರಾಜ್ಯ ಪ್ರವಾಸ ಮಾಡಿದಾಗ ಕಾರ್ಯಕ್ರಮ ಮತ್ತು ಚಟುವಟಿಕೆಗಳ ಕುರಿತು…

Read More

ಬೆಂಗಳೂರು: ಶಾಸಕರನ್ನು ನಿಂದಿಸಿದ ಆರೋಪದಲ್ಲಿ ರಾಜ್ಯ ಸರ್ಕಾರದಿಂದ ಐಎಎಫ್ ಅಧಿಕಾರಿ ಶಿವಾನಂದ ನಾಯಕವಾಡ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಎಚ್ಒಎಫ್) ದಿನಾಂಕ: 18.01.2024 ರಂದು (1) ಓದಿದ ಪತ್ರದಲ್ಲಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ (ವಿಚಕ್ಷಣ) ತನಿಖಾ ವರದಿಯ ಆಧಾರದ ಮೇಲೆ ಬೆಳಗಾವಿ ಜಿಲ್ಲೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಶಾಸಕ ದುರ್ಯೋಧನ ಎಂ.ಐಹೊಳೆ ಅವರೊಂದಿಗೆ ಐಎಫ್ಎಸ್ ಶಿವಾನಂದ ನಾಯ್ಕವಾಡಿ ಅವರ ದೂರವಾಣಿ ಸಂಭಾಷಣೆಯಲ್ಲಿ ಅನುಚಿತ ಭಾಷೆಯನ್ನು ಬಳಸಿದ್ದಾರೆ ಎಂದು ವರದಿ ಮಾಡಿದ್ದಾರೆ. ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವಿಚಕ್ಷಣ) ಅವರು, ಶಿವಾನಂದ ನಾಯ್ಕವಾಡಿ, ಐಎಫ್ಎಸ್ ಶೋಕಾಸ್ ನೋಟಿಸ್ ನೀಡಿದ್ದಾರೆ.  ಈ ವಿಷಯದ ಬಗ್ಗೆ ಧಿಕಾರಿ ತನ್ನ ಹೇಳಿಕೆಯನ್ನು ಈ ಕೆಳಗಿನಂತೆ ನೀಡಿದ್ದಾರೆ: ದಿನಾಂಕ 08-01-2024 ರಂದು ಬೆಳಿಗ್ಗೆ 9.00 ಗಂಟೆಗೆ ಐಎಫ್ಎಸ್ ಶಿವಾನಂದ ನಾಯ್ಕವಾಡಿ ಅವರಿಗೆ ಹೊಸ ಸಂಖ್ಯೆಯಿಂದ…

Read More

ಬೆಳಗಾವಿ: ಜಿಲ್ಲೆಯಲ್ಲಿ ಇಂದು ನಡೆದಂತ ಎರಡು ಭೀಕರ ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ ಅಪ್ಪಿರುವಂತ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಮುಗಳಖೋಡ ಕಾಲುವೆಯ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದಾರೆ. ಬೆಳಗಾವಿಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆಯ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ‘ಎರಡು ಕಾರು’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: 3 ಸ್ಥಳದಲ್ಲೇ ಸಾವು ಬೆಳಗಾವಿ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ…

Read More