Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಲಾಗಿದೆ. ಇದರ ನಡುವೆಯೂ ಡೆಂಗ್ಯೂ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜೂನ್.29ರವರೆಗೆ ಶಿವಮೊಗ್ಗ ಜಿಲ್ಲೆಯಾಧ್ಯಂತ 299 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ವರದಿಯಾಗಿದೆ ಅಂತ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲಪ್ಪ ಅವರು ಮಾಹಿತಿ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯಲ್ಲಿನ ವಿಶೇಷ ಸಭೆಯಲ್ಲಿ ಸಭೆಗೆ ಮಾಹಿತಿ ನೀಡಿದಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಜನರು ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮನೆಯ ಬಳಿಯಲ್ಲಿ ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯೂಗೂ ಕಾರಣವಾಗಲಿದೆ. ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಮನವಿ ಮಾಡಿದರು. ಈಜಿಪ್ಟಿಯಾ ಇಡಿಪಸ್ ಎನ್ನುವಂತ ಸೊಳ್ಳೆ ಕಡಿತದಿಂದ ಡೆಂಗ್ಯೂ ಹರಡುತ್ತಿದೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಲಾರ್ವಾ ನಾಶದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಾರ್ವಾಹಾರಿ ಗಪ್ಪಿ ಮೀನುಗಳನ್ನು ನಿಂತ ನೀರಲ್ಲಿ ಬಿಡುವಂತ ಕ್ರಮ ಕೈಗೊಳ್ಳಲಾಗಿದೆ ಎಂದರು. ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್.29ರವರೆಗೆ 287 ಕೇಸ್ ಗಳು ದಾಖಲಾಗಿದ್ದಾವೆ. ಸಾಗರದಲ್ಲಿ 28 ಡೆಂಗ್ಯೂ…
ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರೆಸ್ ಟ್ರಸ್ಟ್ ಆಫ್ ಸಾಗರ್(ರಿ)ಯಿಂದ ಜುಲೈ.6ರಂದು ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಪತ್ರಿಕಾ ವಿತರಕರುಗಳಿಗೆ ಸೈಕಲ್ ವಿತರಣೆ, ಪತ್ರಕರ್ತರುಗಳಿಗೆ ವಿಮೆ ಬಾಂಡ್ ವಿತರಣೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಪ್ರೆಸ್ಟ್ ಟ್ರಸ್ಟ್ ಆಫ್ ಸಾಗರದ ಅಧ್ಯಕ್ಷರಾದಂತ ಹೆಚ್.ವಿ ರಾಮಚಂದ್ರರಾವ್ ಅವರು, ದಿನಾಂಕ 06-07-2024ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಅಣಲೇಕೊಪ್ಪದಲ್ಲಿ, ಸಾಗರ ಇಲ್ಲಿನ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಸಾಗರ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಈ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾನೆ ಮಾಡಲಿದ್ದಾರೆ. ಸಾಗರ ಉಪವಿಭಾಗೀಯ ಅಧಿಕಾರಿ ಯತೀಶ್ ಎನ್ ಅವರು ಪತ್ರಿಕಾ ವಿತರಕರುಗಳಿಗೆ ಸೈಕಲ್ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜ ಸುಧಾರಣೆಯಲ್ಲಿ ಮಾಧ್ಯಮದ ಹೊಣೆಗಾರಿಕೆ ಎನ್ನುವ ಬಗ್ಗೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದಂತ ಡಾ.ಪ್ರಭಾಕರ್ ರಾವ್ ಅವರು ಉಪನ್ಯಾಸ ನೀಡಲಿದ್ದಾರೆ ಅಂತ ತಿಳಿಸಿದ್ದಾರೆ.…
ಉತ್ತರ ಪ್ರದೇಶ: 121 ಜನರು ಸಾವನ್ನಪ್ಪಿದ ಹತ್ರಾಸ್ ಕಾಲ್ತುಳಿತ ದುರಂತದಲ್ಲಿ ಆರು ಜನರನ್ನು ಬಂಧಿಸಲಾಗಿದೆ ಎಂದು ಹತ್ರಾಸ್ ಪೊಲೀಸರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯಕ್ಕಾಗಿ ಬಂಧಿಸಲ್ಪಟ್ಟ ಆರು ಜನರಲ್ಲಿ ಕಾರ್ಯಕ್ರಮದ ಸಂಘಟಕರೂ ಸೇರಿದ್ದಾರೆ ಎಂದು ಅಲಿಗಢದ ಐಜಿ ಶಲಭ್ ಮಾಥುರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಪೇಂದ್ರ, ಮಂಜು ಯಾದವ್ ಮತ್ತು ಮುಖೇಶ್ ಕುಮಾರ್ ಬಂಧಿತರಲ್ಲಿ ಸೇರಿದ್ದಾರೆ. ಬಂಧಿತ ಆರು ಜನರು ಘಟನೆಯ ನಂತರ ತಕ್ಷಣ ಪರಾರಿಯಾಗಿದ್ದಾರೆ ಮತ್ತು ತನಿಖೆಗೆ ಸಹಕರಿಸಲಿಲ್ಲ ಎಂದು ಪೊಲೀಸರು ಆರೋಪಿಸಿದ್ದಾರೆ.
5.7.2024 ಶುಕ್ರವಾರ ಅಮಾವಾಸ್ಯೆ ತಿಥಿ ಬರಲಿದೆ. ಈ ಅಮಾವಾಸ್ಯೆಯ ತಿಥಿಯು ಶುಕ್ರವಾರದಂದು ಬರುವುದರಿಂದ ಈ ದಿನ ನಾವು ಮಾಡುವ ಆಚರಣೆಗಳು ನಮಗೆ ದುಪ್ಪಟ್ಟು ಲಾಭವನ್ನು ನೀಡುತ್ತವೆ. ಎಂದಿನಂತೆ ಮನೆಯಲ್ಲಿ ಮಹಿಳೆಯರು ಅಮಾವಾಸ್ಯೆಯ ದಿನ ಬೆಳಗ್ಗೆ ಎದ್ದು ಸ್ವಚ್ಛ ಸ್ನಾನ ಮಾಡಿ ಅಡುಗೆ ಮುಗಿಸುತ್ತಾರೆ. ಪುರುಷರು ಮತ್ತು ಪೂರ್ವಜರಿಗೆ ಸರಿಯಾದ ದೀದಿ ದರ್ಪಣ ವಸ್ತುಗಳನ್ನು ನೀಡಿ. ಮಧ್ಯಾಹ್ನ ನಿಮ್ಮ ಪೂಜೆಯನ್ನು ಪೂರ್ಣಗೊಳಿಸಿ. ನಾಳೆ ಸಂಜೆ ಪಾರಾಯಣ ಮಾಡಬಹುದಾದ ಈ ಆಚರಣೆಯನ್ನು ಮಾಡಿದರೆ ನಿಮ್ಮ ಕುಟುಂಬಕ್ಕೆ ಸಕಲ ಸಂಪತ್ತು ದೊರೆಯುತ್ತದೆ. ನಿಮ್ಮ ಕುಟುಂಬದಲ್ಲಿ ಪಿತೃ ಶಾಪಗಳಿದ್ದರೆ, ಅವು ನಿವಾರಣೆಯಾಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…
ಶಿವಮೊಗ್ಗ: ಮಹಿಳಾ ಪೌರ ಕಾರ್ಮಿಕರ ಮೇಲೆ ಸಾಗರ ನಗರಸಭೆಯ ಮೇಸ್ತ್ರಿ ನಾಗರಾಜ ಹಲ್ಲೆ ನಡೆಸಿ, ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ವಿಚಾರವಾಗಿ ಇಂದಿನ ಸಾಗರ ನಗರಸಭೆ ವಿಶೇಷ ಸಭೆಯಲ್ಲಿ ವಿಪಕ್ಷಗಳ ನಾಯಕರು, ಮುಖಂಡರು ಧ್ವನಿ ಎತ್ತಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಕನ್ನಡ ನ್ಯೂಸ್ ನೌನಲ್ಲಿ ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ ಎಂಬುದಾಗಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಈ ಬಗ್ಗೆ ನಿನ್ನೆಯಷ್ಟೇ ಸಾಗರ ನಗರಸಭೆಯ ಆಯುಕ್ತರಾದಂತ ಹೆಚ್.ಕೆ ನಾಗಪ್ಪ ಅವರನ್ನು ಪ್ರತಿಕ್ರಿಯೆ ಕೋರಲಾಗಿತ್ತು. ಅವರು ನೀಡಿದಂತ ಹೇಳಿಕೆಯನ್ನು ‘ಅವರವರು ಹಲ್ಲೆ’ ಮಾಡ್ಕೊಂಡಿದ್ದಾರೆ: ಪೌರ ಕಾರ್ಮಿಕರ ಮೇಲೆ ‘ಮೇಸ್ತ್ರಿ’ ಹಲ್ಲೆಗೆ ‘ಸಾಗರ ನಗರಸಭೆ ಆಯುಕ್ತ’ರ ಉಡಾಫೆ ಉತ್ತರ ಎಂಬುದಾಗಿ ಪ್ರಕಟಿಸಲಾಗಿತ್ತು. ಇಂದಿನ ಸಾಗರ ನಗರಸಭೆ ವಿಶೇಷ ಸಭೆಯಲ್ಲಿ ಪ್ರತಿಧ್ವನಿ ಇಂದು ಸಾಗರ ನಗರಸಭೆಯ ವಿಶೇಷ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಸ್ತ್ರಿ…
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೋ ಆಸ್ಪತ್ರೆಯ ಹೇಳಿಕೆಯ ಪ್ರಕಾರ, ಅವರು ಆರೋಗ್ಯ ಪ್ರಸ್ತುತ ವೀಕ್ಷಣೆಯಲ್ಲಿದ್ದಾರೆ ಮತ್ತು ಸ್ಥಿರ ಸ್ಥಿತಿಯಲ್ಲಿದ್ದಾರೆ. https://twitter.com/ANI/status/1808544461120786595
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ ಗಳ ದರವನ್ನು ಮರು ನಿಗದಿಪಡಿಸಿ, ಸರ್ಕಾರ ಆದೇಶಿಸಿದೆ. ಈ ಮೂಲಕ ಖಾಸಗಿ ಲ್ಯಾಬ್, ಆಸ್ಪತ್ರೆಗಳ ದುಬಾರಿ ದರಕ್ಕೆ ಬ್ರೇಕ್ ಹಾಕಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳ ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು (Screening test) ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ…
ನವದೆಹಲಿ : ತಮಿಳುನಾಡಿನ ಸಿಎಂ ಕರ್ನಾಟಕದ ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿರುವುದಕ್ಕೆ ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ,150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತಿಲ್ಲ. ಹೊಸೂರು ತಮಿಳುನಾಡಿನಲ್ಲಿದ್ದರೂ ಅದರ ಭಾರ ಬೆಂಗಳೂರಿನ ಮೇಲಿದೆ. ಬೆಂಗಳೂರು ಬೆಳೆಯುತ್ತಿರುವುದನ್ನು ನೋಡಿದರೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಹೊಸದಾಗಿ ವಿಮಾನ ನಿಲ್ದಾಣ ಇಲ್ಲಿ ಮಾಡದಿದ್ದರೂ ಹೆಚ್ಎಎಲ್ ಅನ್ನು ದೇಶಿಯ ವಿಮಾನ ನಿಲ್ದಾಣವಾಗಿ ಬಳಕೆ ಮಾಡಬಹುದಾಗಿದ್ದೆ. ನಾನು ಸಿಎಂ ಆಗಿದ್ದಾಗ ರಕ್ಷಣಾ ಸಚಿವರ ಬಳಿ ಇದರ ಬಗ್ಗೆ ಮಾತನಾಡಿದ್ದೆ. ಹೆಚ್ಎಎಲ್ ಅನುಮತಿ ನೀಡಿದರೆ ಅದರ ಬಳಕೆಗೆ ಸರ್ಕಾರ ಸಿದ್ಧವಿದೆ ಎಂದರು. ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನಲ್ಲಿ ಐಟಿ ಅಭಿವೃದ್ಧಿಯಾಗುವುದಿಲ್ಲ. ಬೆಂಗಳೂರು ಐಟಿ ಕ್ಷೇತ್ರದಲ್ಲಿ ಈಗಾಗಲೇ ಬೆಳೆದಿದೆ. ನಮ್ಮ ಜನರು ಬುದ್ಧಿವಂತಿರಿದ್ದಾರೆ. ಟ್ಯಾಲೆಂಟ್ ನಿಂದ ಬೆಂಗಳೂರು ಬೆಳೆದಿದೆ ಎಂದರು. ಇನ್ನು ಕಾಂಗ್ರೆಸ್ನ ಸಂಸದ…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದೆ. ಈ ಬೆನ್ನಲ್ಲೇ ಪರೀಕ್ಷೆಯನ್ನು ಹೆಚ್ಚು ಮಾಡುವಂತೆಯೂ ಆರೋಗ್ಯ ಇಲಾಖೆ ಸೂಚಿಸಿತ್ತು. ಈ ನಂತ್ರ ಈಗ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಇಂದು ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಡೆಂಗ್ಯೂ ಜ್ವರ ಪತ್ತೆ ಹ್ಚಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್ ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗ ಶಾಲೆಗಳ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಡೆಂಗ್ಯೂ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದೆ. ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಡೆಂಗ್ಯೂ ಪತ್ತೆ ಹಚ್ಚುವ ಪರೀಕ್ಷೆಗಳಾದಂತ ಎಲಿಸಾ, ರಾಪಿಡ್ ಟೆಸ್ಟ್ ಗಳಿಗೆ ಈ ಕೆಳಕಗಿನಂತೆ ದರ ನಿಗದಿಪಡಿಸಿದೆ. ಹೀಗಿದೆ ಡೆಂಗ್ಯೂ ಪತ್ತೆ ಪರೀಕ್ಷೆಯ ದರ ಪಟ್ಟಿ ಡೆಂಗ್ಯೂ ಎಲಿಸಾ ಎನ್ಎಸ್1- ರೂ.300 ಡೆಂಗ್ಯೂ ಎಲಿಸಾ ಐಜಿಎಂ – ರೂ.300 ಸ್ಕ್ರೀನ್ ಟೆಸ್ಟ್ ರಾಪಿಡ್ ಕಾರ್ಡ್…
ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಜ್ವರ ಆರ್ಭಟಿಸಿದೆ. ಈ ಆರ್ಭಟಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ ಪಡಿಸಲಾಗಿದೆ. ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿತ್ತು. ಈ ಬೆನ್ನಲ್ಲೇ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ. ದಿನಾಂಕ 04-07-2024ರಂದು ವಿಧಾನಸೌಧದ ಕೊಠಡಿ ಸಂಖ್ಯೆ 122ರಲ್ಲಿ ಮಧ್ಯಾಹ್ನ 3.30ಕ್ಕೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/18-dengue-cases-26-chikungunya-confirmed-in-bengaluru-today/