Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,765 ಇವಿ ಚಾರ್ಜಿಂಗ್ ಸ್ಟೇಷನ್ಗಳಿವೆ. ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ. ಎಲೆಕ್ಟ್ರಿಕ್ ವಾಹನ ವಲಯದಲ್ಲಿ ಒಂದು ಹೆಜ್ಜೆ ಸದಾ ಮುಂದಿರುವ ಕರ್ನಾಟಕ, 2017ರಲ್ಲಿ ಇವಿ ನೀತಿಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿದೆ. 2021ರಲ್ಲಿ ಹೆಚ್ಚುವರಿ ಪ್ರೋತ್ಸಾಹದೊಂದಿಗೆ ಈ ನೀತಿಯನ್ನು ಪರಿಷ್ಕರಿಸಲಾಯಿತು. ಇದಲ್ಲದೇ, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸುವ ಕಾರ್ಯತಂತ್ರದ ಕ್ರಮವಾಗಿ ಸರ್ಕಾರವು ರಾಜ್ಯಾದ್ಯಂತ ಮಾದರಿ ಇವಿ ನಗರಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ. ವರದಿಯ ಪ್ರಕಾರ, ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್…
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ಕಲ್ಯಾಣ ಕರ್ನಾಟಕದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1825863905236631657 ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ಕಲ್ಪಿಸುವಂತ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು. ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಶಿಕ್ಷಕರು ಕೊರತೆಯಿರುವಂತ ಶಾಲೆಗಳಿಗೆ 45 ಸಾವಿರ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸದ್ಯದಲ್ಲೇ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಈಗಾಗಲೇ 1200 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/siddaramaiahs-blood-is-not-in-his-blood-it-is-not-in-his-blood-dk-shivakumar/ https://kannadanewsnow.com/kannada/breaking-wrestler-vinesh-phogat-likely-to-contest-haryana-assembly-elections/
ಕಲಬುರ್ಗಿ : ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು. ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು. ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ…
ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿರುವ ಬಗ್ಗೆ ಮಾಧ್ಯಮದವರಿಗೆ ತಮ್ಮ ಪ್ರತಿಕ್ರಿಯೆ ನೀಡುತ್ತಾ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ,ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂ ರವರು ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಇಂತಹ ತಾರತಮ್ಯವೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜ್ಯಪಾಲರನ್ನು ಮೂದಲಿಸಲಾಗಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ನವರ ವಿರುದ್ಧ ಪ್ರತಿಭಟನೆ…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು ಲ್ಯಾಟರಲ್ ಎಂಟ್ರಿ ಮೂಲಕ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ರದ್ದುಗೊಳಿಸಿದೆ. ಜಂಟಿ ಕಾರ್ಯದರ್ಶಿ, ನಿರ್ದೇಶಕ ಮತ್ತು ಉಪ ನಿರ್ದೇಶಕರ ಮಟ್ಟದ 45 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಈ ನೇಮಕಾತಿ ಡ್ರೈವ್ ಹೊಂದಿತ್ತು. ವಿವಿಧ ಇಲಾಖೆಗಳಲ್ಲಿ ಜಂಟಿ ಕಾರ್ಯದರ್ಶಿ / ನಿರ್ದೇಶಕ / ಉಪ ಕಾರ್ಯದರ್ಶಿ ಮಟ್ಟದ 45 ಹುದ್ದೆಗಳಿಗೆ ಲ್ಯಾಟರಲ್ ನೇಮಕಾತಿಗೆ ಸಂಬಂಧಿಸಿದ ಜಾಹೀರಾತು ಸಂಖ್ಯೆ 54/2024 ಅನ್ನು ಆಗಸ್ಟ್ 17 ರಂದು ಉದ್ಯೋಗ ಸುದ್ದಿ, ವಿವಿಧ ಪತ್ರಿಕೆಗಳು ಮತ್ತು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಕೋರಿಕೆ ಪ್ರಾಧಿಕಾರದ ಕೋರಿಕೆಯ ಮೇರೆಗೆ 2024 ಅನ್ನು ರದ್ದುಪಡಿಸಲಾಗಿದೆ” ಎಂದು ಯುಪಿಎಸ್ಸಿ ನೋಟಿಸ್ನಲ್ಲಿ ತಿಳಿಸಿದೆ. ಇದಕ್ಕೂ ಮುನ್ನ ಸಿಬ್ಬಂದಿ ಮತ್ತು ತರಬೇತಿ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಪತ್ರ ಬರೆದು, ಆಗಸ್ಟ್ 17, 2024 ರಂದು ಹೊರಡಿಸಲಾದ ಲ್ಯಾಟರಲ್ ಎಂಟ್ರಿ ನೇಮಕಾತಿಯ ಜಾಹೀರಾತನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು. ಲ್ಯಾಟರಲ್ ಪ್ರವೇಶವನ್ನು 2005 ರಲ್ಲಿ ಎರಡನೇ ಆಡಳಿತ…
ನವದೆಹಲಿ: ಮುಂಬರುವ ಜೀವನಚರಿತ್ರೆ ಚಲನಚಿತ್ರವು ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಸ್ಪೂರ್ತಿದಾಯಕ ಪ್ರಯಾಣವನ್ನು ನಿರೂಪಿಸುತ್ತದೆ ಎಂದು ತಯಾರಕರು ಮಂಗಳವಾರ ಪ್ರಕಟಿಸಿದ್ದಾರೆ. ಇನ್ನೂ ಹೆಸರಿಡದ ಈ ಜೀವನಚರಿತ್ರೆಯನ್ನು ಭೂಷಣ್ ಕುಮಾರ್ ಅವರ ಟಿ-ಸೀರೀಸ್ ನಿರ್ಮಿಸಲಿದ್ದು, “ಸಚಿನ್: ಎ ಬಿಲಿಯನ್ ಡ್ರೀಮ್ಸ್” ಮತ್ತು ಮುಂಬರುವ ಅಮೀರ್ ಖಾನ್ ಅಭಿನಯದ “ಸಿತಾರೆ ಜಮೀನ್ ಪರ್” ಚಿತ್ರಗಳಿಗೆ ಹೆಸರುವಾಸಿಯಾದ ರವಿ ಭಾಗ್ಚಂದ್ಕಾ ಸಹ-ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರವು ಸಿಂಗ್ ಅವರ ಸಾಟಿಯಿಲ್ಲದ ಪ್ರಯಾಣ ಮತ್ತು ಕ್ರಿಕೆಟ್ಗೆ ನೀಡಿದ ಕೊಡುಗೆಗಳ ಭವ್ಯ ಆಚರಣೆಯಾಗಿದೆ. ಅವರ ವೃತ್ತಿಜೀವನದ ಸಾರವನ್ನು ಸೆರೆಹಿಡಿಯುತ್ತದೆ. 2007 ರ ಟಿ 20 ವಿಶ್ವಕಪ್ನಲ್ಲಿ ಮರೆಯಲಾಗದ ಆರು ಸಿಕ್ಸರ್ಗಳು, ಅವರ ಧೈರ್ಯಶಾಲಿ ಆಫ್-ಫೀಲ್ಡ್ ಕದನಗಳು ಮತ್ತು ನಂತರ 2012 ರಲ್ಲಿ ಕ್ರಿಕೆಟ್ಗೆ ಮರಳಿದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸಿಂಗ್, ತಮ್ಮ ಜೀವನ ಕಥೆ ಸವಾಲುಗಳನ್ನು ಜಯಿಸಲು ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಆಶಿಸುತ್ತೇನೆ ಎಂದು…
ಬೆಂಗಳೂರು: ನಗರದ ಸಿಲಿಕಾನ್ ಸಿಟಿಯ ಕೇಂದ್ರ ಬಿಂದುವಾಗಿರುವಂತ ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನು ಮರು ನಾಮಕರಣಗೊಳಿಸಲಾಗುತ್ತಿದೆ. ಇನ್ಮುಂದೆ ಎಲೆಕ್ಟ್ರಾನಿಕ್ ಸಿಟಿ ಹೆಸರು ಮರು ನಾಮಕರಣಗೊಳಿಸಲಾಗಿತ್ತು, ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಸಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಈ ಕುರಿತಂತೆ ಮಾತನಾಡಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೆಸರನ್ನು ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರು ನಾಮಕರಣಗೊಳಿಸುತ್ತಿರುವುದಾಗಿ ಘೋಷಿಸಿದರು. ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ…
ಬೆಂಗಳೂರು: ನಾವು ಜನರಿಗೆ ಮನವರಿಕೆ ಮಾಡಲು ಪಾದಯಾತ್ರೆ ಮಾಡಿದೆವು. ಆದರೆ, ನೀವ್ಯಾಕೆ ನಮ್ಮಿಂದ ಮುಂಚೆ ಹೋಗಿ ನಾನು ಕಳ್ಳನಲ್ಲ; ನನ್ನಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಹೇಳಿದ್ದೀರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ನಿರಪರಾಧಿ ಎಂದು ಸಾಬೀತುಪಡಿಸುವ ಬದಲಾಗಿ ಹಿಂದುಳಿದವರು ಎಂಬ ರಕ್ಷಣಾ ಕವಚದಡಿ ಆಶ್ರಯ ಪಡೆಯಲೆತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಸದನದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಇನ್ನೂ ಒಂದು ದಿನ ಸದನ ಇದ್ದರೂ ನೀವ್ಯಾಕೆ ಓಡಿ ಹೋದಿರಿ ಎಂದು ಕೇಳಿದರು. ನೀವು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೀರಲ್ಲವೇ? ಎಂದರಲ್ಲದೆ, ನಮ್ಮ ತಪ್ಪಿಲ್ಲದ ಕಾರಣ ಹಿಂದೆ ಹಿಂದೆ ಬಂದು ನಾವು ಉತ್ತರ ಕೊಟ್ಟೆವಾ ಎಂದು ಪ್ರಶ್ನಿಸಿದರು. ಕೋವಿಡ್ ಮಹಾಮಾರಿ ಇದ್ದರೂ ಕಾಂಗ್ರೆಸ್ಸಿಗರು ಮೇಕೆದಾಟು ಪಾದಯಾತ್ರೆ ಮಾಡಿ ನಾಟಕ ಪ್ರದರ್ಶನ ಮಾಡಿದ್ದಾಗಿ ಆಕ್ಷೇಪಿಸಿದರು. ಆದರೂ ನಾವು ಅಡ್ಡಿ ಮಾಡಲಿಲ್ಲ ಎಂದರಲ್ಲದೆ, ಹಿಂದುಳಿದ ಸಮಾಜಕ್ಕೆ ಸೇರಿದ ಪ್ರಾಮಾಣಿಕ ಪ್ರಧಾನಿಯವರ…
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ…
ಬೆಂಗಳೂರು: ಘನತೆವೆತ್ತ ರಾಜ್ಯಪಾಲರಿಗೆ ಧಮ್ಕಿ ಹಾಕುವ ಕೆಲಸವನ್ನು ಸಚಿವ ಜಮೀರ್ ಅಹ್ಮದ್ ಅವರು ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್ ಅವರು ಆಕ್ಷೇಪಿಸಿದರು. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಇಂದು ಭೇಟಿ ನೀಡಿ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ಸಿನವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಲು ಅವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. 3 ಜನ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ತನಿಖೆ ಮಾಡಲು ಅವರು ಅವಕಾಶ ಕೊಟ್ಟಿದ್ದಾರೆ. ರಾಜ್ಯಪಾಲರ ಭಿತ್ತಿಪತ್ರಕ್ಕೆ ಚಪ್ಪಲಿಯಲ್ಲಿ ಹೊಡೆದ ಇವರು ಸಂವಿಧಾನಕ್ಕೆ ಗೌರವ ಕೊಡುತ್ತಾರಾ ಎಂದು ಪ್ರಶ್ನಿಸಿದರು. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಕಾರಣ ಎಂದು ಜಮೀರ್ ಅಹ್ಮದ್ ಅವರು ಹೇಳಿದ್ದು, ಅವರ ವಿರುದ್ಧ ದೂರು ಕೊಡಲಾಗಿದೆ ಎಂದರು. ಜಮೀರ್ ಅಹ್ಮದ್ ಅವರನ್ನು ಬಂಧಿಸಲು ಕೋರಿದ್ದಾಗಿ ಹೇಳಿದರು. ಐವಾನ್ ಡಿಸೋಜಾ, ರಕ್ಷಿತ್…