Author: kannadanewsnow09

ಟಿಬೆಟ್: ಇಂದು 6.8 ತೀವ್ರತೆಯ ಭೂಕಂಪದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 126 ಕ್ಕೆ ಏರಿದೆ ಎಂದು ಚೀನಾದ ಏಜೆನ್ಸಿ ಕ್ಸಿನ್ಹುವಾವನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ. ಭೂಕಂಪದಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಬೀದಿಗಳಲ್ಲಿ ಕಸದ ರಾಶಿ ಬಿದ್ದಿದ್ದು, ಸುಮಾರು 200 ಜನರು ಗಾಯಗೊಂಡಿದ್ದಾರೆ. ಬಂಜರು ಮತ್ತು ವಿರಳ ಜನಸಂಖ್ಯೆಯ ಪ್ರದೇಶದಲ್ಲಿ 1,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಚೀನಾದ ಪ್ರಸಾರಕ ಸಿಸಿಟಿವಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಪ್ರಸಾರಕರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕಟ್ಟಡದ ಅವಶೇಷಗಳು ಬೀದಿಗಳಲ್ಲಿ ಹರಡಿಕೊಂಡಿವೆ ಮತ್ತು ಕಾರುಗಳು ಪುಡಿಪುಡಿಯಾಗಿವೆ. ಮಂಗಳವಾರ ಸಂಜೆ ಟಿಬೆಟ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಆಫ್ ಸೀಸ್ಮಾಲಜಿ (ಎನ್ಸಿಎಸ್) ವರದಿ ಮಾಡಿದೆ. ಭಾರತೀಯ ಕಾಲಮಾನ ಸಂಜೆ 5:52 ಕ್ಕೆ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪವು 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಎಪಿ ವರದಿಯ ಪ್ರಕಾರ, ಚೀನಾದ ಅಧ್ಯಕ್ಷ…

Read More

ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇದೀಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಶುರುವಾಗಿದ್ದು, ಈಶ್ವರಪ್ಪ ಈ ಸಂಘಟನೆಯ ಸಂಚಾಲಕರಾಗಲಿದ್ದಾರೆ. ಹಿಂದುಗಳ ಪರವಾಗಿ ಮತ್ತು ಹಿಂದುಳಿದವರ ಪರವಾಗಿ ಈ ಬ್ರಿಗೇಡ್ ಧ್ವನಿ ಎತ್ತಲಿದೆಯಂತೆ. ನಗರದ ಖಾಸಗಿ ಹೋಟೆಲ್‌ ನಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದ ಕೆ ಎಸ್ ಈಶ್ವರಪ್ಪ ಬ್ರಿಗೇಡ್ ಕುರಿತಾಗಿ ಮಾಹಿತಿ ಹಂಚಿಕೊಂಡರು. ಫೆಬ್ರವರಿ 4 ರಂದು ಕ್ರಾಂತಿ ವೀರ ಬ್ರಿಗೇಡ್ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಇದಕ್ಕೆ ಚಾಲನೆ ನೀಡಲಾಗುತ್ತದೆ. ಹಿಂದೂಗಳು ಮತ್ತು ಶೋಷಿತರು ಒಂದಾಗಬೇಕು ಎಂಬ ಉದ್ದೇಶದೊಂದಿಗೆ ಈ ಸಂಘಟನೆ ಕಾರ್ಯನಿರ್ವಹಲಿದ್ದು, ಈಶ್ವರಪ್ಪ ಅವರ ಪುತ್ರ ಕಾಂತೇಶ್ ಕಾರ್ಯಾಧ್ಯಕ್ಷರಾಗಿದ್ದಾರೆ. ಅಲ್ಲದೆ, ಗೂಳಿಹಟ್ಟಿ ಶೇಖರ್, ಮುಕುಡಪ್ಪ ಅವರು ಸಂಚಾಲಕರಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಕ್ರಾಂತಿ ವೀರ ಬ್ರಿಗೇಡ್ ಕುರಿತಾಗಿ ಮಾತನಾಡಿದ ಕೆ ಎಸ್ ಈಶ್ವರಪ್ಪ,…

Read More

ಬೆಂಗಳೂರು: ಬಿಜೆಪಿ ನಾಯಕರು ಬೀದಿ ಹೋರಾಟ ನಡೆಸಿರುವುದು ವಿಪರ್ಯಾಸ! ಬಿಜೆಪಿ ನಾಯಕರಿಗೆ ಕಳಂಕಿತರನ್ನು, ಆರೋಪಿತರನ್ನು ಮತ್ತು ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನೂ ತಮ್ಮ ಹೋರಾಟಗಳಲ್ಲಿ ಜೊತೆ ಜೊತೆಯಲಿ ಕರೆದುಕೊಂಡು ಹೋಗದೆ ಇದ್ದರೆ ಆತ್ಮತೃಪ್ತಿ ಇರುವುದಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮೂರನ್ನು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಮಾತಿನಂತೆ ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ವರ್ತನೆಯನ್ನು ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಹೋರಾಟಗಳಿಗೆ ಬಿಜೆಪಿ ನಾಯಕರು ಕ್ರಿಮಿನಲ್ ಆರೋಪದ ಮುಖಂಡರನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗುತ್ತಿರುವುದು ನಾಚಿಕೆಗೇಡಿನ ಪರಮಾವಧಿ. ಇಡೀ ರಾಷ್ಟ್ರ ನೋಡುವಂತೆ ಪಿಎಸ್ಐ ಹಗರಣದಲ್ಲಿ ಗಂಭೀರ ಆರೋಪವನ್ನು ಹೊತ್ತಿದ್ದ ಭಾರತೀಯ ಜನತಾ ಪಕ್ಷ ತದನಂತರ ಸದರಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಕೈ ತೊಳೆದುಕೊಳ್ಳುವ ಪ್ರಯತ್ನವನ್ನು ಮಾಡಿತ್ತು. ಕರ್ನಾಟಕದ ಸಾವಿರಾರು ಯುವಕರ ಭವಿಷ್ಯವನ್ನು ಕಸಿ ದಂತಹ…

Read More

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು. ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ…

Read More

ಚಿಕ್ಕಮಗಳೂರು: ನಾನು ಕೊನೆಯವರೆಗೂ ಜನಪರವಾಗಿ ಹೋರಾಟ ಮಾಡುತ್ತೇನೆ. ಸಂವಿಧಾನಿಕ, ಪ್ರಜಾತಂತ್ರ ಹೋರಾಟವನ್ನು ಮುಂದುವರೆಸುವುದಾಗಿ ನಕ್ಸಲ್ ನಾಯಕಿ ಮುಂಡಗಾರು ಲತಾ ತಿಳಿಸಿದ್ದಾರೆ. ನಾಳೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದಾರೆ. ಅವರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಕೂಡ ಒಬ್ಬರಾಗಿದ್ದಾರೆ. ಅವರು ಶರಣಾಗತಿಗೂ ಮುನ್ನಾ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸೋ ಸಂಬಂಧ ಸರ್ಕಾರಕ್ಕೆ ತಲುಪಿಸಲಾಗಿದೆ. ನಾವು ಸಮಾಜದ ಮುಖ್ಯ ವಾಹಿನಿಗೆ ಬರುತ್ತಿದ್ದೇವೆ ಎಂದಿದ್ದಾರೆ. ನಾನು ಪ್ರಜಾತಂತ್ರ, ಸಾಂವಿಧಾನಿಕ ಹೋರಾಟವನ್ನು ಶರಣಾಗತಿಯ ನಂತ್ರವೂ ಮುಂದುವರೆಸಲಿದ್ದೇನೆ. ಕೊನೆಯವರೆಗೂ ನಾನು ಜನಪರವಾಗಿ ನಿಂತು ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿರೋ ಕಾರಣ ಶರಣಾಗತಿ ಆಗುತ್ತಿರೋದಾಗಿ ಹೇಳಿದ್ದಾರೆ. ನಾನು ಯಾವುದೇ ಕಾರಣಕ್ಕೂ ಜನಪರ ಹೋರಾಟಗಳಿಂದ ಹಿಂದೆ ಸರಿಯೋದಿಲಲ್. ನನ್ನ ಉಸಿರು ಇರೋವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. https://kannadanewsnow.com/kannada/death-toll-in-tibet-earthquake-rises-to-126/ https://kannadanewsnow.com/kannada/notification-to-fill-up-300-posts-in-health-department-soon-siddaramaiah/

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದಂತ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು ಎಂಬುದಾಗಿ ಸೂಚಿಸಿದರು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ…

Read More

ನೇಪಾಳ: ನೇಪಾಳ ಗಡಿಯ ಬಳಿ ಮಂಗಳವಾರ ಬೆಳಿಗ್ಗೆ 7.1 ತೀವ್ರತೆಯ ಭೂಕಂಪ ಸಂಭವಿಸಿದೆ. ಸುದ್ದಿ ಸಂಸ್ಥೆ ಎಎಫ್ಪಿ ಪ್ರಕಾರ, ಈ ಪ್ರದೇಶದಲ್ಲಿ ಭೂಕಂಪ ಮತ್ತು ಅದರ ಪರಿಣಾಮವಾಗಿ ಕಟ್ಟಡ ಕುಸಿತದಿಂದಾಗಿ ಇದುವರೆಗೆ 126 ಜನರು ಸಾವನ್ನಪ್ಪಿದ್ದಾರೆ. ಬಿಹಾರ, ದೆಹಲಿ-ಎನ್ಸಿಆರ್, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಭಾರತದ ಹಲವಾರು ಭಾಗಗಳು ಸಹ ಆಘಾತವನ್ನು ಅನುಭವಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮತ್ತು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಪ್ರಕಾರ, ಬೆಳಿಗ್ಗೆ 6: 35 ಕ್ಕೆ ಟಿಬೆಟ್ನ ಕ್ಸಿಜಾಂಗ್ನಲ್ಲಿ 10 ಕಿ.ಮೀ ಆಳದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 28.86 ಉತ್ತರ ಮತ್ತು ರೇಖಾಂಶ 87.51 ಪೂರ್ವದಲ್ಲಿತ್ತು. ಎನ್ಸಿಎಸ್ ಪ್ರಕಾರ, ಕ್ಸಿಜಾಂಗ್ನಲ್ಲಿ ನಾಲ್ಕು ಭೂಕಂಪಗಳು ಸಂಭವಿಸಿವೆ. ಮೊದಲನೆಯದು ಬೆಳಿಗ್ಗೆ 5:41 ಕ್ಕೆ ರಿಕ್ಟರ್ ಮಾಪಕದಲ್ಲಿ 4.2, ಎರಡನೇ ಮತ್ತು ದೊಡ್ಡದು (7.1) ಬೆಳಿಗ್ಗೆ 6:35 ಕ್ಕೆ, ಮೂರನೆಯದು ಬೆಳಿಗ್ಗೆ 7:02 ಕ್ಕೆ 4.7 ತೀವ್ರತೆಯಲ್ಲಿ ಮತ್ತು ನಾಲ್ಕನೆಯದು 7:07 ಕ್ಕೆ…

Read More

ಹೈದರಾಬಾದ್ : ದಂಪತಿಗಳ ಖಾಸಗಿ ವೀಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇದಕ್ಕೆ ಹೆದರಿದಂತ ದಂಪತಿಗಳು ಆಘಾತಕಾರಿ ಘಟನೆಯೊಂದರಲ್ಲಿ ತಮ್ಮ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಘಾಟ್ಕೇಸರ್ ನ ಘನಪುರ್ ಹೊರ ವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಪಾರ್ವತಮ್ಮ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ರಸ್ತೆ ಮಧ್ಯದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಬೆಂಕಿಗೆ ಆಹುತಿಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಆಘಾತಕಾರಿ ಘಟನೆಯು ಪ್ರತ್ಯಕ್ಷದರ್ಶಿಗಳ ಮುಂದೆ ನಡೆದಿದ್ದು, ಅವರು ಭಯಾನಕ ದೃಶ್ಯವನ್ನು ವಿವರಿಸಿದರು. ವರದಿಗಳ ಪ್ರಕಾರ, ನಲ್ಗೊಂಡ ಜಿಲ್ಲೆಯ ಬೀಬಿನಗರ ನಿವಾಸಿ ಪಾರ್ವತಮ್ಮ ಶ್ರೀರಾಮ್ ನರಪಲ್ಲಿಯಲ್ಲಿರುವ ಸೈಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶ್ರೀರಾಮ್ ಸೈಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಹುಡುಗಿಯನ್ನು ಭೇಟಿಯಾದನು. ಅವರಿಬ್ಬರೂ ಆಪ್ತ ಸ್ನೇಹಿತರಾದರು ಮತ್ತು ಪರಸ್ಪರ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದೆ. https://twitter.com/sirajnoorani/status/1876587502561358122 ಏನಿದು ಘಟನೆ? ಈ ಘಟನೆಗೆ ಹತ್ತಿರದ ಹೊಲದಲ್ಲಿ ಕೆಲಸ ಮಾಡುವ ರೈತರು ಸಾಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ.…

Read More

ನವದೆಹಲಿ: ಜಲಜೀವನ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಮಹತ್ವದ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಖರ್ಗೆ, ಎರಡು ಜಿಲ್ಲೆಗಳ 1,672 ಜನವಸತಿಗಳ ಸುಮಾರು 31.67 ಲಕ್ಷ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಸದರಿ ಯೋಜನೆಯ ಮೂಲಕ ಕಲಬುರಗಿ ಜಿಲ್ಲೆಯ 3,95,858 ಹಾಗೂ ಬೀದರ್ ಜಿಲ್ಲೆಯ 1,74,838 ಮನೆಗಳಿಗೆ ನಳಗಳ ಮೂಲಕ ನಿರಂತರ ಕುಡಿಯುವ ನೀರು ಒದಗಿಸಬಹುದಾಗಿದೆ ಎಂದರು. ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳು ಅಭಿವೃದ್ದಿಗೆ ಸಹಕಾರಿಯಾಗುವ ಅಂಶಗಳನ್ನು ಹೊಂದಿದೆ ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮಗ್ರ ಅಧ್ಯಯನ…

Read More

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆ ನಡೆಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳು ಮುಂದಿದೆ ಓದಿ. • ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ. • ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ. • ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. • ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ…

Read More