Author: kannadanewsnow09

ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು. ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ…

Read More

ಮಾಸ್ಕೋ: ಪಶ್ಚಿಮ ರಷ್ಯಾದ ವಾಯುನೆಲೆಯಿಂದ ಟೇಕ್ ಆಫ್ ಆಗುವ ವೇಳೆ 15 ಪ್ರಯಾಣಿಕರನ್ನು ಹೊತ್ತ ರಷ್ಯಾದ ಮಿಲಿಟರಿ ಸಾರಿಗೆ ವಿಮಾನ ಅಪಘಾತಕ್ಕೀಡಾಗಿದೆ. ರಷ್ಯಾದ ರಕ್ಷಣಾ ಸಚಿವಾಲಯವು ಅಪಘಾತವನ್ನು ದೃಢಪಡಿಸಿದೆ.  ಈ ಕುರಿತಂತೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/BNONews/status/1767499684384288901 https://kannadanewsnow.com/kannada/fish-vendors-note-applications-invited-for-three-wheelers-under-matsyavahini-scheme/ https://kannadanewsnow.com/kannada/breaking-iafs-tejas-aircraft-crashes-in-rajasthan-pilot-safe/

Read More

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ ಮಾಡುವಾಗ ಪ.ಜಾ/ಪ.ಪಂಗಡ -01, ಮಹಿಳೆ-01 ಮತ್ತು ಸಾಮಾನ್ಯ-0 ಮೀಸಲಾತಿ ನಿಗದಿಪಡಿಸಲಾಗಿದೆ. ಈಗಾಗಲೇ ನಿಗಮದ ಫ್ರಾಂಚೈಸಿಗಳು ಈ ಯೋಜನೆಯಡಿ ಅವರ ಮೀನು ಮಾರಾಟ ಜಾಲವನ್ನು ವಿಸ್ತರಿಸಲು ಬಯಸಿದಲ್ಲಿ ಅವರಿಗೆ ಆದ್ಯತೆ ನೀಡಲಾಗುವುದು. ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರಿಕೆ ಇಲಾಖೆಯಿಂದ ಅನುಮೋದಿತ ಮೀನುಗಾರರ ಉತ್ಪಾದಕ ಸಂಸ್ಥೆಗಳು (ಈಈPಔs), ಮೀನು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೀನುಗಾರಿಕೆ ಸಹಕಾರ ಸಂಘಗಳು/ಒಕ್ಕೂಟಗಳು, ಮಹಿಳಾ ಸ್ವಸಹಾಯ ಗುಂಪುಗಳು, ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ನಿರುದ್ಯೋಗಿ ಯುವಕ/ಯುವತಿಯರು/ಪ್ರಧಾನ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಶೇ.38.75ರಿಂದ ಶೇ.48.5ರಷ್ಟು ತುಟ್ಟಿಭತ್ಯೆಯನ್ನು ( Dearness Allowance-DA ) ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ( DA Hike ) ಮಾಡಿ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ( Karnataka Government ) ಕೂಡ ಆದೇಶ ಮಾಡಿದೆ. ಹಾಗಾದ್ರೇ ಡಿಎ 3.75ರಷ್ಟು ಹೆಚ್ಚಳವಾದ ನಂತ್ರ ಯಾರಿಗೆ ಎಷ್ಟು ವೇತನ ಸಿಗಲಿದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. 2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ…

Read More

ಶಿವಮೊಗ್ಗ : ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60 ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೂಚನೆ ನೀಡಿದರು. ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ)ಅಧಿನಿಯಮ 2024ನ್ನು ರೂಪಿಸಿ ಆದೇಶಿಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಜಿಲ್ಲೆಯಾದ್ಯಂತ ಅಧಿನಿಯಮ ಜಾರಿಗೊಳಿಸುವ ಸಂಬಂಧ ಅವರು ಸೂಚನೆ ನೀಡಿದರು. ಕನ್ನಡ ಭಾಷೆಯ ಸಮಗ್ರ ಅಭಿವೃದ್ದಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳು ಮತ್ತು ಕಲ್ಯಾಣ ಕ್ರಮಗಳನ್ನು ಕಲ್ಪಿಸುವುದಕ್ಕಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ ಜಾರಿಗೆ ಬಂದಿದ್ದು ಜಿಲ್ಲೆಯಾದ್ಯಂತ ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳು ಹಾಗೂ ಸಮಿತಿ ಸದಸ್ಯರು ಮೊದಲು ಒಂದು ವಾರ ಜಿಲ್ಲೆಯಲ್ಲಿ ಕನ್ನಡ ಭಾಷೆ ಬಳಕೆ ಬಗ್ಗೆ ವ್ಯಾಪಕ ಅರಿವು ಮೂಡಿಸಿ ನಂತರ ಕ್ರಮ ವಹಿಸಬೇಕೆಂದರು.…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ( Dearness Allowance -DA) ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ. 2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ…

Read More

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಈಗಾಗಲೇ ಆದೇಶ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ( Karnataka Government Employees )  ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆಯನ್ನು ( Dearness Allowance -DA ) ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಇಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಲು ಅನುಮೋದನೆ ನೀಡಲಾಗಿದೆ ಎಂದಿದೆ. ಕೇಂದ್ರ ವೇತನ ಶ್ರೇಣಿ ಪಡೆಯುವ ನೌಕರರ ಡಿಎಯನ್ನು ಶೇಕಡಾ 46 ರಿಂದ 50 ಕ್ಕೆ ಪರಿಷ್ಕರಿಸಲಾಗುವುದು. ಇದು ವರ್ಷಕ್ಕೆ 1792.71 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ…

Read More

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಕ್ರೈ ತಡೆಗೆ ಮಹತ್ವದ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಇದರ ಭಾಗವಾಗಿ 43 ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿ ಆದೇಶಿಸಿದೆ. ಅಲ್ಲದೇ ಠಾಣಾಧಿಕಾರಿಗಳನ್ನು ನೇಮಕ ಮಾಡಿದೆ. ಈ ಕುರಿತಂತೆ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಸಿಇಎನ್ ಪೊಲೀಸ್ ಠಾಮೆಗಳ ಮಂಜೂರಾತಿ ಬಲದಿಂದ ತಲಾ 1 ಪಿಎಸ್ಐ ಹುದ್ದೆಯನ್ನು ಪಿಐ ದರ್ಜೆಗೆ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ ಎಂದಿದೆ. ಇನ್ನೂ 43 ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಡಿವೈಎಸ್ಪಿ ಹುದ್ದೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶಿಸಲಾಗಿದೆ. ಆರ್ಥಿಕ ಇಲಾಖೆಯ ದಿನಾಂಕ 21-02-2024ರಲ್ಲಿ ನೀಡಿರುವ ಸಹಮತಿ ಮೇರೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ನಗರದಲ್ಲಿ ನೀರಿನ ಬಿಕ್ಕಟ್ಟು ಉಲ್ಬಣಗೊಂಡಿದೆ. ಹನಿ ನೀರಿಗೂ ಆಹಾಕಾರ ಎದ್ದಿರುವಂತ ಸಂದರ್ಭದಲ್ಲೇ ಪೊಲೀಸ್ ಠಾಣೆಗಳಿಗೂ ನೀರಿನ ಬಿಕ್ಕಟ್ಟಿನ ಎಫೆಕ್ಟ್ ತಟ್ಟಿದೆ. ಬೆಂಗಳೂರಿನ ಪೊಲೀಸ್ ಠಾಣೆಗಳಿಗೂ ನೀರು ಇಲ್ಲದೇ ಇಲಾಖೆಯ ಕಾರಿನಲ್ಲೇ ಕ್ಯಾನ್ ನೀರು ಸಾಗಿಸುತ್ತಿರೋದು ಕಂಡು ಬಂದಿದೆ. ಬೆಂಗಳೂರಿನಲ್ಲಿ ಬೇಸಿಗೆಯ ಈ ಹೊತ್ತಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಟ್ಯಾಂಕರ್ ನೀರಿನ ದರ ಕೂಡ ಹೆಚ್ಚಾಗಿದ್ದ ವೇಳೆಯಲ್ಲಿ ಅವುಗಳಿಗೆ ಮೂಗುದಾರ ಎನ್ನುವಂತೆ ರಾಜ್ಯ ಸರ್ಕಾರ ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿತ್ತು. ಬೆಂಗಳೂರಿನ ವಿವಿಧೆಡೆಯಲ್ಲಿ ನೀರಿನ ಆಹಾಕಾರ ದಿನೇ ದಿನೇ ಹೆಚ್ಚಾಗುತ್ತಿದೆ. ಇದೇ ಹೊತ್ತಿನಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ ಆರ್ ನಗರದ ಪೊಲೀಸ್ ಠಾಣೆಯಲ್ಲೂ ನೀರಿನ ಬಿಕ್ಕಟ್ಟಿನ ಎಫೆಕ್ಟ್ ತಟ್ಟಿದೆ. ಪೊಲೀಸರು ಇಲಾಖೆಯ ವಾಹನದಲ್ಲಿ ಕರ್ತವ್ಯದ ಜೊತೆಗೆ ನೀರಿನ ಕ್ಯಾನ್ ತುಂಬಿಕೊಂಡು ಪೊಲೀಸ್ ಠಾಣೆಗೆ ಸಾಗಿಸುತ್ತಿರೋದು ಕಂಡು ಬಂದಿದೆ. ಕಳೆದೊಂದು ತಿಂಗಳಿನಿಂದ ನೀರಿನ ಸಮಸ್ಯೆ ಬೆಂಗಳೂರಲ್ಲಿ ತೀವ್ರಗೊಂಡಿದೆ. ವಿಜಯನಗರ ಹೊಸಹಳ್ಳಿಯಲ್ಲಿ ನೀರಿಲ್ಲದೇ ಜನರು ಪರದಾಡುವಂತೆ ಆಗಿದೆ. ಅಡುಗೆ ಮಾಡೋದಕ್ಕೆ…

Read More

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಮಾಡಿದ ಒಂದು ದಿನದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ( Tamil Nadu Chief Minister MK Stalin ) ಮಂಗಳವಾರ ಸಿಎಎಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಭಾರಿ ಪ್ರತಿಭಟನೆಗಳ ನಡುವೆ, ಸಿಎಎಯನ್ನು 2019 ರಲ್ಲಿ ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು 2014 ಕ್ಕಿಂತ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ಪ್ರಕ್ರಿಯೆಯನ್ನು ತ್ವರಿತಗೊಳಿಸುತ್ತದೆ. ಸಿಎಎ ಕಾಯ್ದೆಯು ಹಲವಾರು ವಿಳಂಬಗಳನ್ನು ಮತ್ತು ವಿರೋಧ ಪಕ್ಷಗಳಿಂದ ನಿರಂತರ ಟೀಕೆಗಳನ್ನು ಎದುರಿಸಿದೆ. ಈ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸ್ಟಾಲಿನ್ ಘೋಷಣೆ ಮಾಡಿದ್ದಾರೆ. ಈ ಮೂಲಕ ದೇಶದಲ್ಲಿ…

Read More