Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. 7 ಲಕ್ಷದ ವರೆಗೆ ಆದಾಯ ಇರೋರಿಗೆ ತೆರಿಗೆಯಿಲ್ಲ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 7 ಲಕ್ಷ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂಬುದಾಗಿ ಹೇಳಿದರು. ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ: ‘ಆಯುಷ್ಮಾನ್ ಆರೋಗ್ಯ ಯೋಜನೆ’ ಜಾರಿ ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ…
ನವದೆಹಲಿ: ದೇಶದಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು. ಮುಂದಿನ ಐದು ವರ್ಷಗಳಲ್ಲಿ 3 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 248 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 34 ಡಿವೈಎಸ್ವಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು ಈ ಕೆಳಕಂಡ 248 ಪೊಲೀಸ್ ಇನ್ಸ್ ಪೆಕ್ಟರ್ ಸಿವಿಲ್ ಅವರುಗಳನ್ನು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದಿದೆ. ಸುಭಾಷ್ ಚಂದ್ರ ಟಿ ಅವರನ್ನು ರಾಯಚೂರಿನ ದೇವದುರ್ಗ ಗ್ರಾಮಾಂತರ ವೃತ್ತಕ್ಕೆ, ರಮಾಕಾಂತ್ ವೈ ಹುಲ್ಲೂರು ಅವರನ್ನು ಡಿಸಿಆರ್ ಬಿ ವಿಜಯನಗರ ಜಿಲ್ಲೆಗೆ, ಗುಂಡುರಾವ್ ಎನ್ ವೈ ಅವರನ್ನು ಬಳ್ಳಾರಿಯ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಹಸನ್ ಸಾಬ್ ಅವರನ್ನು ರಾಯಟೂರಿನ ಡಿಎಸ್ ಬಿ ಗೆ, ಪ್ರಕಾಶ್ ಎಲ್ ಮಾಳಿ ಅವರನ್ನು ಬಳ್ಳಾರಿಯ ಕಂಪ್ಲಿ ಪೊಲೀಸ್ ಠಾಣೆಗೆ, ವಸುಕುಮಾರ್ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 248 ಪೊಲೀಸ್ ಇನ್ಸ್…
ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು. ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು
ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿದಂತ ಅವರು 2047ರ ವೇಳೆಗೆ ಭಾರತವನ್ನು ವಿಕ್ಷಿತ್ ಭಾರತವನ್ನಾಗಿ ಮಾಡಲು ಶ್ರಮಿಸೋದಾಗಿ ತಿಳಿಸಿದರು. ಇಂದು ಲೋಕಸಭೆಯಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಆರಂಭಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನರು ದೊಡ್ಡ ಜನಾದೇಶದೊಂದಿಗೆ ಸರ್ಕಾರವನ್ನು ಆಶೀರ್ವದಿಸಿದ್ದಾರೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರವನ್ನು ಸರ್ಕಾರ ಬಲಪಡಿಸಿದೆ ಎಂದರು. ಕನಿಷ್ಠ ಬೆಂಬಲ ಬೆಲೆಗಳನ್ನು ನಿಯತಕಾಲಿಕವಾಗಿ ಹೆಚ್ಚಿಸಲಾಗಿದೆ. 2047ರ ವೇಳೆಗೆ ಭಾರತವನ್ನು ‘ವಿಕ್ಷಿತ್ ಭಾರತ’ವನ್ನಾಗಿ ಮಾಡಲು ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು. ಈ ಬಾರಿಯ ಬಜೆಟ್ 4 ಕೇಂದ್ರೀಕೃತ ವಿಭಾಗಗಳನ್ನು ಒಳಗೊಂಡಿದೆ. ಅವುಗಳೆಂದರೇ ಗರೀಬ್, ಮಹಿಳಾ, ಯುವಕರು ಮತ್ತು ರೈತರು ಎಂದರು. ನಮ್ಮ ಯುವ ದೇಶವು ಉನ್ನತ ಆಕಾಂಕ್ಷೆಗಳು, ಅದರ ವರ್ತಮಾನದ ಬಗ್ಗೆ ಹೆಮ್ಮೆ ಮತ್ತು ಉಜ್ವಲ ಭವಿಷ್ಯದ ಭರವಸೆ ಮತ್ತು ವಿಶ್ವಾಸವನ್ನು ಹೊಂದಿದೆ. ನಮ್ಮ ಸರ್ಕಾರವು ತನ್ನ ಅದ್ಭುತ ಕೆಲಸದ ಆಧಾರದ…
ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಹೆಚ್ಚಿನ ಹಣದುಬ್ಬರ ಮತ್ತು ಮೃದು ಜಾಗತಿಕ ಮಂದಗತಿಯ ನಡುವೆ ಬಜೆಟ್ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಮಾರ್ಗದರ್ಶನವನ್ನು ನೀಡುತ್ತದೆ. ಮೋದಿಯವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹಿನ್ನಲೆಯಲ್ಲಿ ನಾನು ಕೇಂದ್ರ ಬಜೆಟ್ 2024-25 ಮಂಡಿಸುತ್ತಿರೋದಾಗಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ಆರಂಭದಲ್ಲೇ ಹೇಳಿದರು. ಇದಕ್ಕೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸುವ ಮೊದಲು ಕೇಂದ್ರ ಸಚಿವ ಸಂಪುಟವು ಮಧ್ಯಂತರ ಬಜೆಟ್ ಗೆ ಅನುಮೋದನೆಯನ್ನು ಪಡೆದರು.
ಬೆಳಗಾವಿ: ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ಬಗರ್ ಹುಕುಂ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅರ್ಹರಿಗೆ ಜಮೀನು ಮಂಜೂರು ಮಾಡುವುದಾಗಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು. ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ…
ಬೆಂಗಳೂರು: ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಗೌಡರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಕೊಡದೆ ಇದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದಾಗಿ ಎಚ್ಚರಿಕೆಯನ್ನು ಮತದಾರರಿಗೆ ಕೊಟ್ಟಿದ್ದಾರೆ. ಹಿರಿಯ ಶಾಸಕ ಬಾಲಕೃಷ್ಣ ಗೌಡರ ಎಚ್ಚರಿಕೆ, ಬೆದರಿಕೆ ಮತ್ತು ಬ್ಲ್ಯಾಕ್ಮೇಲ್ ಅನ್ನು ನೀವು ಸಮರ್ಥಿಸುವಿರಾ ಎಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಳಲು ಬಯಸುತ್ತೇನೆ ಎಂಬುದಾಗಿ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಂಪಿ ಮತ್ತು ಇತರ ಮುಂದಿನ ಚುನಾವಣೆಯಲ್ಲಿ ಮತ ಹಾಕುವಿರೆಂದು ಗ್ಯಾರಂಟಿ ಕೊಡುತ್ತಿದ್ದೇವೆ. ಇಲ್ಲವಾದರೆ ರದ್ದು ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಎಚ್ಚರಿಕೆ ಕೊಡುತ್ತಿದ್ದಾರೆ. ಇದು ಎಷ್ಟು ಸರಿ ಎಂದು ಕೇಳಿದರು. ಜನರಿಗೆ ಹೆದರಿಸಿ, ಬೆದರಿಸಿ, ಗ್ಯಾರಂಟಿ ಎನ್ನುವ ಬಡಿಗೆ ಹಿಡಿದು ವೋಟ್ ಕೇಳ್ತ ಇದ್ದೀರ? ಮತದಾರರನ್ನು ಬ್ಲ್ಯಾಕ್ಮೇಲ್ ಮಾಡ್ತ ಇದ್ದೀರ? ಎಂದು ಪ್ರಶ್ನೆ ಮಾಡಿದರಲ್ಲದೆ, ಈ ಬಗ್ಗೆ…
ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು. ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದರು. ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ…
ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 100 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆ ಮತ್ತು 50 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವಂತೆ ಕೋರಿ, ಕಾರ್ಖಾನೆಯ ಆಡಳಿತ ಮಂಡಲಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಕಾರ್ಖಾನೆಯ ಉನ್ನತ ಮಟ್ಟದ ನಿಯೋಗವು ತಮ್ಮ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ `ಕೃಷ್ಣಾ’ದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಅವರು ಈ ಮಾಹಿತಿ ನೀಡಿದ್ದಾರೆ. ಬಬಲೇಶ್ವರ ತಾಲ್ಲೂಕಿನ ಕೃಷ್ಣಾ ನಗರದಲ್ಲಿರುವ ಈ ಕಾರ್ಖಾನೆಯು ಸಹಕಾರಿ ವಲಯದಡಿ ಇದ್ದು, ಸದ್ಯಕ್ಕೆ ಪ್ರತೀದಿನ 6,000 ಟನ್ ಕಬ್ಬು ಅರೆಯಲಾಗುತ್ತಿದೆ. ಇದನ್ನು 10 ಸಾವಿರ ಟನ್ ಮಟ್ಟಕ್ಕೆ ಏರಿಸಲು ಕಾರ್ಖಾನೆಯ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ, ಸರಕಾರದ ನೆರವು ಕೋರಲಾಗಿದೆ ಎಂದು ಅವರು ಹೇಳಿದರು. ಕಾರ್ಖಾನೆಯಲ್ಲಿ ಸಕ್ಕರೆ…