Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: ಆಧುನಿಕತೆಯ ಭರಾಟೆಯಲ್ಲಿ ಸಂಕ್ರಾಂತಿಯ ಸುಗ್ಗಿ ಸಂಭ್ರಮಮರೆಯಾಗುತ್ತಿದೆ ಎಂದು ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಹೇಳಿದರು. ನಗರದ ಐಯುಡಿಪಿ ಬಡಾವಣೆಯಲ್ಲಿ ಇತ್ತೀಚೆಗೆ ನಡೆದ ಸಂಕ್ರಾಂತಿ ಸಂಭ್ರಮ2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಎಲ್ಲೆಡೆ ಸುಗ್ಗಿಯ ಸಂಭ್ರಮ ಮರೆಯಾಗುತ್ತಿದೆ.ಯುವಜನತೆ ಮೊಬೈಲ್ ನಲ್ಲಿ ಮುಳುಗಿದೆ.ಮಹಿಳೆಯರು,ಮಕ್ಕಳು ಟಿವಿಯ ಧಾರಾವಾಹಿ,ರಿಯಾಲಿಟಿ ಶೋನಂತಹ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು. ಈ ಹಿಂದೆ ಹಳ್ಳಿಗಳಲ್ಲಿ ಸುಗ್ಗಿ ಸಂಭ್ರಮ ನೋಡೋದೇ ನಮ್ಮ ಪುಣ್ಯ ಎನಿಸುತ್ತಿತ್ತು.ಆದರೆ ಈಗ ಹಳ್ಳಿಗಳು ನಗರಪ್ರದೇಶಗಳಾಗಿ ಮಾರ್ಪಾಡುತ್ತಿವೆ.ಹೀಗಾಗಿ ಸಂಕ್ರಮಣದ ಸಂಸ್ಕ್ರತಿ,ಸಂಪ್ರದಾಯ ತೆರೆಮರೆಗೆ ಸರಿಯುತ್ತಿವೆ.ಭಾರತೀಯರ ಮೊದಲ ಹಬ್ಬ ಎನಿಸಿರುವ ಸಂಕ್ರಾಂತಿ ಹಬ್ಬ ಕೇವಲ ಎಳ್ಳು ಬೆಲ್ಲ ಹಂಚುವ ಫ್ಯಾಷನ್ ಎನಿಸಿದೆ.ಈ ಸಂಭ್ರಮದ ಹಿಂದೆ ರೈತರ ಶ್ರಮ ಇರುತ್ತಿತ್ತು.ವರ್ಷವಿಡಿ ಬೆಳೆದ ರಾಗಿ,ಭತ್ತ ಹಾಗು ವಿವಿಧ ಬೆಳೆಗಳ ರಾಶಿಹಾಕಿ ಪೂಜಿಸುವ ವಾಡಿಕೆ ಇತ್ತು.ಆ ಆಚರಣೆ ನಮ್ಮ ಸಂಸ್ಕೃತಿ,ಸಂಪ್ರದಾಯ ಮರೆಯಾಗುತ್ತಿವೆ. ಎಲ್ಲೆಡೆ ಅವಿಭಕ್ತ ಕುಟುಂಬಗಳು ಇಬ್ಬಾಗವಾಗಿ ಸ್ವಾರ್ಥದ ಬದುಕು ಸಾಗಿಸುತ್ತಿದ್ದು,ನಗರದಲ್ಲಿ ವಾಸಿಸುವ ಕುಟುಂಬ ಅಕ್ಕಪಕ್ಕದಲ್ಲಿರುವವರ ಬಾಂದವ್ಯತೆಯನ್ನು ದೂರವಿಡ್ತಿದ್ದಾರೆ.ಯಾವುದೇ ಕುಟುಂಬಕ್ಕೆ ಏನಾದ್ರು ಸಮಸ್ಯೆ ಎದುರಾದರೆ ಅದು…
ಬೆಂಗಳೂರು: ನಿವೇಶನ ಖರೀದಿಯ ವೇಳೆಯಲ್ಲಿ ಎಷ್ಟೇ ಎಚ್ಚರಿಕೆ ವಹಿಸಿದ್ರೂ ಕೆಲವೊಮ್ಮೆ ಮೋಸ ಆಗೋದು ಉಂಟು. ಆದರೇ ಈ ನಡುವೆ ಆನ್ ಲೈನ್ ಸೇವೆ ಆರಂಭದ ನಂತ್ರ ಕೊಂಚ ಇದಕ್ಕೆಲ್ಲ ಬ್ರೇಕ್ ಬಿದ್ದಿದೆ. ನೀವು ಸೈಟ್ ಖರೀದಿ ಮಾಡ್ತಾ ಇದ್ದೀರಿ ಅಂದರೇ, ನೋಂದಣಿಯ ವೇಳೆಯಲ್ಲಿ ಕೆಲವು ಮಹತ್ವದ ಮಾಹಿತಿಯನ್ನು ಪರಿಶೀಲಿಸುವುದು ಮುಖ್ಯವಾಗಿದೆ. ಅದು ಯಾವುವು ಅಂತ ಮುಂದೆ ಓದಿ. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದಲೇ ಮಾಹಿತಿ ಹಂಚಿಕೊಳ್ಳಲಾಗಿದೆ. ಕಾವೇರಿ 2.0 ತಂತ್ರಾಂಶದಲ್ಲಿ ದಾಸ್ತಾವೇಜುಗಳ ನೋಂದಣಿಗೆ ಅರ್ಜಿ ಸಲ್ಲಿಸಲು ಮಾಹಿತಿ ನಮೂದಿಸಿದ ನಂತ್ರ, ಅಂತಿಮ ಅರ್ಜಿಯನ್ನು ಉಪ ನೋಂದಣಾಧಿಕಾರಿ ಅವರಿಗೆ ಸಲ್ಲಿಸುವ ಮುನ್ನ ಅರ್ಜಿದಾರರು ಅಥವಾ ಪಕ್ಷದಾರರು ಕಡ್ಡಾಯವಾಗಿ ದಾಸ್ತಾವೇಜು ಸಾರಾಂಶವನ್ನು ಪರಿಶೀಲಿಸಬೇಕು ಅಂತ ತಿಳಿಸಿದೆ. ಈ ಮಹತ್ವದ ದಾಸ್ತಾವೇಜು ಸಾರಾಂಶ ಪರಿಶೀಲಿಸೋದು ಮರೆಯಬೇಡಿ ಸ್ವತ್ತಿನ ಮಾಲೀಕರ ಹೆಸರು ಹಾಗೂ ಸ್ವತ್ತಿನ ಪಿಐಡಿ ಸಂಖ್ಯೆ ದಾಸ್ತಾವೇಜು ಮಾದರಿ, ಆರ್ಟಿಕಲ್ ಮತ್ತು ಸಬ್ ಆರ್ಟಿಕಲ್ ಪಕ್ಷಕಾರರ ಹೆಸರುಗಳು, ಗುರುತಿನ ದಾಖಲೆಗಳಾದಂತ ಆಧಾರ್, ಪಾಸ್…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಜನವರಿ 31 ರಂದು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭವಾಗಲಿದೆ. ನಂತರ ಆರ್ಥಿಕ ಸಮೀಕ್ಷೆ ನಡೆಯಲಿದೆ. https://twitter.com/ANI/status/1880272225942794425 ಒಟ್ಟಾರೆಯಾಗಿ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 2025 ರ ಜನವರಿ 31 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10, 2025 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 4, 2025 ರಂದು ಕೊನೆಗೊಳ್ಳುತ್ತದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಗೆ ತಂದಿರುವಂತ ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಾರಿಗೊಂಡ 10 ದಿನಗಳಲ್ಲಿ ಬರೋಬ್ಬರಿ 1280 ಸಿಬ್ಬಂದಿಗಳು ಈ ಯೋಜನೆಯಡಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆ ಯು ಸಾರಿಗೆ ನೌಕರರ ದಶಕಗಳ ಬೇಡಿಕೆ. ಅದನ್ನು ಸಾಕಾರಗೊಳಿಸಲು ನಿಗಮವು ಕರ್ನಾಟಕ ರಾಜ್ಯಾದ್ಯಂತ ಇಂದಿನವರೆಗೆ 314 ಆಸ್ಪತ್ರೆಗಳೊಂದಿಗೆ ಒಡಂಬಂಡಿಕೆ ಮಾಡಿಕೊಂಡಿದೆ. ಈ ಯೋಜನೆಯು ನಿಗಮದ ಅತಿ ದೊಡ್ಡ ಯೋಜನೆಯಾಗಿದ್ದು, 34000 ಸಿಬ್ಬಂದಿಗಳು, ಅವರ ಪತಿ/ಪತ್ನಿ ಮಕ್ಕಳು, ತಂದೆ ತಾಯಿ ಒಳಗೊಂಡಂತೆ ಸರಿ ಸುಮಾರು 1.50 ಲಕ್ಷ ಫಲಾನುಭವಿಗಳಿಗೆ 300 ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಪ್ರತಿ ನಿಮಿಷ ವ್ಯವಹರಿಸಿ ಉತ್ತಮ ಆರೋಗ್ಯ ಸೇವೆ ಒದಗಿಸುವುದಾಗಿದೆ ಎಂಬುದಾಗಿ ತಿಳಿಸಿದೆ. ಈ ಯೋಜನೆಯು ಪ್ರಾರಂಭಗೊಂಡು ನೆನ್ನೆಗೆ 10 ದಿವಸಗಳಷ್ಟೇ ಆಗಿದೆ. ಇಲ್ಲಿಯವರೆಗೆ ಅಂದರೆ 17-01-2025 ಬೆಳಗ್ಗೆ 11 ಗಂಟೆಯವರೆಗೆ 1280 ಸಿಬ್ಬಂದಿಗಳು…
ಬೆಂಗಳೂರು: ಬಿಎಂಆರ್ಸಿಎಲ್, ದಿನಾಂಕ 19.01.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದು, ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ಫೀಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ, ಮೇಲಿನ ಅವಧಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗುತ್ತವೆ. ಹಸಿರು ಮಾರ್ಗದ ರೈಲು ಸಮಯಗಳಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ ಸೇವೆ ಇರಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲಿನ ಬದಲಾವಣೆಯನ್ನು ಗಮನಿಸ ಬೇಕೆಂದು ಕೋರಿದೆ. ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.
ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು. ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು. ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ ಉಲ್ಲಾಳ್ ನಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಹಂಚಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಹಾಗೂ ಸರ್ಕಾರದ ಉಪ ಕಾರ್ಯದರ್ಶಿ ರಾಜ್ಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2024-25 ನೇ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಿಂದಾಗಿ ಗ್ರಾಮೀಣ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸದರಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೆ ತಲಾ 10.00 ಕೋಟಿಗಳಂತೆ ಒಟ್ಟು 1890.00 ಕೋಟಿಗಳ ಅನುದಾನದಲ್ಲಿ ರಸ್ತೆ,ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಲೆಕ್ಕ ಶೀರ್ಷಿಕೆ-5054-03-337-0-75-059 ರಡಿ ಕೈಗೆತ್ತಿಕೊಳ್ಳಲು ಉಲ್ಲೇಖ 1 ರಲ್ಲಿ ಆರ್ಥಿಕ ಇಲಾಖೆಯು ಹಂಚಿಕೆ ಮಾಡಿರುತ್ತದೆ ಎಂದಿದ್ದಾರೆ. ಆದುದರಿಂದ, ಉಲ್ಲೇಖ-1 ರಲ್ಲಿ ಹಂಚಿಕೆಯಾಗಿ ಅನುಬಂಧ-1 ರಲ್ಲಿನ ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರವಾರು ಹಂಚಿಕೆಯಾಗಿರುವ ಅನುದಾನಕ್ಕೆ ಆಯಾ ವಿಧಾನಸಭಾ ಕ್ಷೇತ್ರದ…
ಬೆಂಗಳೂರು: ರಾಜ್ಯದಲ್ಲಿ ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈ ಸಂಬಂಧ ರಾಜ್ಯಾಧ್ಯಂತ ಆಶಾಕಿರಣ ಯೋಜನೆ ವಿಸ್ತರಣೆ ಮಾಡಿದೆ. ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಆಶಾಕಿರಣ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ದಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ ₹13.30 ಕೋಟಿ ಮೊತ್ತವನ್ನು ಮೀಸಲಿರಿಸಲು ತೀರ್ಮಾನಿಸಿದೆ. ಈ ಮೂಲಕ ದೃಷ್ಟಿ ದೋಷ ಉಳ್ಳವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸಲಾಗುತ್ತದೆ. https://twitter.com/KarnatakaVarthe/status/1880179222234427526
ಮಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆಯಲ್ಲೂ ವಿವಿಧ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ…
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆ ಮೂಲಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದೆ. ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದರು. ರಾಹುಲ್ ಗಾಂಧಿ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಜೂನ್ 7ರಂದು ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. 2024ರಲ್ಲಿ ಈ ಪ್ರಕರಣದಲ್ಲಿ ನ್ಯಾಯಾಲಯವು ಜಾಮೀನು ನೀಡಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.…











