Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಬಜೆಟ್ ಅಧಿವೇಶನದ ಮೊದಲ ದಿನದಂದು 2024 ರ ಜನವರಿ 31 ರಂದು ನಡೆಯಲಿರುವ ರಾಷ್ಟ್ರಪತಿಗಳ ವಿಶೇಷ ಭಾಷಣಕ್ಕೆ ಹಾಜರಾಗಲು ಅನುವು ಮಾಡಿಕೊಡುವ ಮೂಲಕ ಸದನದ ಎಲ್ಲಾ 11 ಸದಸ್ಯರ ಅಮಾನತು ಹಿಂಪಡೆಯಲು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ತಮಗೆ ನೀಡಲಾದ ಅಧಿಕಾರವನ್ನು ಕೋರಿದ್ದಾರೆ. ಅಮಾನತುಗೊಂಡ 11 ಸಂಸದರು ಹಕ್ಕುಚ್ಯುತಿ ಮತ್ತು ಸದನ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ರಾಜ್ಯಸಭಾ ಹಕ್ಕುಬಾಧ್ಯತಾ ಸಮಿತಿ ತೀರ್ಪು ನೀಡಿತ್ತು. ಒಟ್ಟಾರೆಯಾಗಿ ಬಜೆಟ್ ಅಧಿವೇಶನದ ಮೊದಲ ದಿನದಂದು 2024 ರ ಜನವರಿ 31 ರಂದು ನಡೆಯಲಿರುವ ರಾಷ್ಟ್ರಪತಿಗಳ ವಿಶೇಷ ಭಾಷಣಕ್ಕೆ ಹಾಜರಾಗಲು ಅನುವು ಮಾಡಿಕೊಡುವ ಮೂಲಕ ಸದನದ ಎಲ್ಲಾ 11 ಸದಸ್ಯರ ಅಮಾನತು ಹಿಂಪಡೆಯಲು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ತಮಗೆ ನೀಡಲಾದ ಅಧಿಕಾರವನ್ನು ಕೋರಿದ್ದಾರೆ. https://twitter.com/ANI/status/1752319579202949538 https://kannadanewsnow.com/kannada/bigg-news-list-of-most-corrupt-countries-in-the-world-released-what-is-indias-rank/ https://kannadanewsnow.com/kannada/rajasthan-congress-leader-manvendra-singhs-wife-dies-in-car-accident/
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಏನು ಪ್ರಯೋಜನ ಅನ್ನೋದ್ರ ಬಗ್ಗೆ ನಾವು ಇವಾಗ ತಿಳ್ಕೊಳೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಭೇಟಿ ಬಗ್ಗೆ ಲಘುವಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಜೆಡಿಎಸ್, ಆ ಪಕ್ಷವನ್ನು ಗೊಸುಂಬೆ, ಊಸರವಳ್ಳಿ ಎಂದು ಜರೆದಿದೆ. ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ ಎಂದು ಕಿಡಿಕಾರಿದೆ. RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಭಾಕರ ಭಟ್ಟರ ಶಾಲೆಯಲ್ಲಿ, ನಿನ್ನೆ ದಿನ ಮಂಡ್ಯದಲ್ಲಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಅಳವಡಿಸಬೇಕಿದ್ದು, ಎಲ್ಲರೂ ಅದನ್ನು ಅನುಷ್ಠಾನಗೊಳಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಯ ಪ್ರತಿನಿಧಿಗಳಿಗೆ ತಿಳಿಸಿದರು. ಬೆಂಗಳೂರು ಅಭಿವೃದ್ಧಿ ಹಾಗೂ ನಾಗರಿಕ ಸಮಸ್ಯೆಗಳ ಕುರಿತು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(FKCCI)ಯು ಕೈಗಾರಿಕಾ ಮತ್ತು ವಾಣಿಜ್ಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಈಗಾಗಲೇ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ಗಳಲ್ಲಿನ 40 ಅಡಿ ರಸ್ತೆಗಳಲ್ಲಿರುವ ಮಳಿಗೆಗಳನ್ನು ಸರ್ವೇ ಮಾಡಿ ತಿಳುವಳಿಕೆ ಪತ್ರ ನೀಡಿ ನಾಮಫಲಕಗಳನ್ನು ಬದಲಾವಣೆ ಮಾಡಲು ಸೂಚನೆ ನೀಡಲಾಗಿದೆ. ಅದರಂತೆ ಈಗಾಗಲೇ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಅಳವಡಿಸುವ ಕಾರ್ಯ ನಗರದಾದ್ಯಂತ ಸಕ್ರಿಯವಾಗಿ ನಡೆಯುತ್ತಿದ್ದು, ಫೆಬ್ರವರಿ 28 ರೊಳಗಾಗಿ ಎಲ್ಲಾ ಮಳಿಗೆಗಳು ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ…
ಬೆಂಗಳೂರು: ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ. ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಮರ್ಯಾದೆ ಇದ್ದರೆ ಅವರ ಅನುದಾನದಿಂದ ಕಂಬ ನಿರ್ಮಿಸಿ ಧ್ವಜ ಹಾರಿಸಬೇಕಿತ್ತು. ಹನುಮನನ್ನು ಹೇಗೆ ವಿರೋಧ ಮಾಡಬೇಕೆಂದು ಚಿಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು : ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ಅವರಿಂದ ನಾಮಪತ್ರ ಸಲ್ಲಿಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪುಟ್ಟಣ್ಣ ವಿಧಾನಸಭಾ ಚುನಾವಣೆಗೆ ನಿಲ್ಲಲು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಜೀನಾಮೆ ಕೊಟ್ಟಿದ್ದ ಕ್ಷೇತ್ರವಿದು. ಉಪಚುನಾವಣೆಗೆ ಐದನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಹಿಂದೆಯೂ ಬಿಜೆಪಿ, ಜೆಡಿಎಸ್ ಸ್ಪರ್ಧೆ ಮಾಡಿದ್ದರೂ ಆದರೂ ಬಿಜೆಪಿ, ಜೆಡಿಎಸ್ ನವರನ್ನು ಸೋಲಿಸಿ ಪುಟ್ಟಣ್ಣ ಗೆದ್ದಿದ್ದರು. ಸತತವಾಗಿ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಗೆಲ್ಲಬೇಕೆಂದರೆ ಶಿಕ್ಷಕರ ಬೆಂಬಲವನ್ನು ಪಡೆದಿದ್ದು, ಅವರ ಮನಸ್ಸನ್ನು ಗೆದ್ದಿದ್ದಾರೆ. ಹಾಗಾಗಿ ಅವರನ್ನು ಶಿಕ್ಷಕರು ಒಪ್ಪಿದ್ದಾರೆ ಎಂದರು. ಜೆಡಿಎಸ್ – ಬಿಜೆಪಿ ಜನರಿಗೆ ಪ್ರಚೋದನೆ ನೀಡಿ ಗಲಾಟೆ ಶಾಂತಿ ಕದಡಿದ್ದಾರೆ ಮಂಡ್ಯ ಘಟನೆಯ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ನನ್ನ ತಪ್ಪಿದ್ದರೆ ನೇಣಿಗೆ ಹಾಕಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರ ಟ್ರಕ್ಕಿಂಗ್ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಅರಣ್ಯದೊಳಗೆ ಜನ ಜಂಗುಳಿಯನ್ನು ತಪ್ಪಿಸೋದಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದು, ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಜ.26ರಂದು ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ವಿಧಿಸಿದೆ ಎಂದಿದ್ದಾರೆ. ಈ ಸಂಬಂಧ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಸ್ಪಷ್ಟ ಸೂಚನೆ ನೀಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಚಾರಣಿಗರು ದಟ್ಟ ಅರಣ್ಯದ ಗಿರಿ ಪ್ರದೇಶಗಳಿಗೆ ಅದರಲ್ಲೂ ಅಮೂಲ್ಯ ಜೀವವೈವಿಧ್ಯದಿಂದ ಕೂಡಿದ ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುತ್ತವೆ ಹೀಗಾಗಿ ಇಂತಹ ಚಾರಣ ಪಥಕ್ಕೆ…
ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; 2ಎ ಮೀಸಲು ವ್ಯಾಪ್ತಿಯಲ್ಲಿ ಸುಮಾರು 108 ಉಪ ಜಾತಿಗಳು ಇವೆ. ಆದರೆ, ಮೀಸಲಾತಿ ಸೌಲಭ್ಯದ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಆಮೇಲೆ ಕಾಂತರಾಜು ವರದಿ, ಇನ್ನೊಂದು ವರದಿಯ ಬಗ್ಗೆ ಮಾತನಾಡಿ ಎಂದು ಸಿದ್ದರಾಮಯ್ಯ ಅವರಿಗೆ ಪಂಥಾಹ್ವಾನ ನೀಡಿದರು. ಕಾಂತರಾಜು ವರದಿ ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ, ಯಡಿಯೂರಪ್ಪ ಈ ವರದಿಯನ್ನು ಸ್ವೀಕಾರ ಮಾಡಲಿಲ್ಲ ಎಂದುಹೇಳಿಕೊಂಡು ತಿರುಗುತ್ತಿದ್ದಾರೆ. ಈಗ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಆಯಿತು. ಯಾಕೆ ಆ ವರದಿಯನ್ನು ಸ್ವೀಕಾರ ಮಾಡಿ ಜಾರಿ ಮಾಡಲಿಲ್ಲ. ಯಾರು ಅಡ್ಡ ಇದಾರೆ ನಿಮಗೆ. ತಾಕತ್ತು ಇದ್ದರೆ ಆ ಕಾಂತರಾಜು ವರದಿ…
ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕೆಲವು ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಗೆಲುವಿಗಾಗಿ ಜಿಲ್ಲಾ ಉಸ್ತುವಾರಿಗಳು, ರಾಜ್ಯ ಉಸ್ತುವಾರಿಗಳನ್ನು ನೇಮಕಗೊಳಿಸಿದ್ದಾವೆ. ಇದರ ನಡುವೆ ಸಮಾಜವಾದಿ ಪಕ್ಷದಿಂದ ಒಂದು ಹೆಚ್ಚು ಮುಂದೆ ಎನ್ನುವಂತೆ ಲೋಕಸಭಾ ಚುನಾವಣೆಗೆ 16 ಅಭ್ಯರ್ಥಿಗಳ ಹೆಸರನ್ನೇ ಘೋಷಣೆ ಮಾಡಿದೆ. ಹೌದು 2024 ರ ಲೋಕಸಭಾ ಚುನಾವಣೆಗೆ ( Lok Sabha elections 2024 ) ಸಮಾಜವಾದಿ ಪಕ್ಷ (Samajwadi Party -SP) ಮಂಗಳವಾರ 16 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮೈನ್ಪುರಿಯಿಂದ ಡಿಂಪಲ್ ಯಾದವ್, ಸಂಭಾಲ್ನಿಂದ ಶಫಿಕುರ್ ರೆಹಮಾನ್ ಬಾರ್ಕ್ ಮತ್ತು ಲಕ್ನೋದಿಂದ ರವಿದಾಸ್ ಮೆಹ್ರೋತ್ರಾ ಸ್ಪರ್ಧಿಸಲಿದ್ದಾರೆ. ಹೀಗಿದೆ ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಘೋಷಣೆಯಾದ 16 ಅಭ್ಯರ್ಥಿಗಳ ಪಟ್ಟಿ ಅಕ್ಷಯ್ ಯಾದವ್ (ಫಿರೋಜಾಬಾದ್), ದೇವೇಶ್ ಶಾಕ್ಯ (ಇಟಾ), ಧರ್ಮೇಂದ್ರ ಯಾದವ್ (ಬದಾಯುನ್), ಉತ್ಕರ್ಷ್ ವರ್ಮಾ (ಖಿರಿ), ಆನಂದ್ ಭದೌರಿಯಾ (ಧೌರಾಹರಾ), ಅನು ಟಂಡನ್ (ಉನ್ನಾವೊ), ನವಲ್ ಕಿಶೋರ್ ಶಾಕ್ಯ (ಫರೂಕಾಬಾದ್), ರಾಜಾರಾಮ್…
ತ್ರಿಪುರ: ಕರ್ನಾಟಕ ರಣಜಿ ಕ್ಯಾಪ್ಟನ್ ಆಗಿರುವಂತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎಂಬುದಾಗಿ ಸದ್ಯಕ್ಕೆ ತಿಳಿದು ಬಂದಿದೆ. ಅವರು ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದಂತ ಅವರು, ವಿಮಾನದಲ್ಲಿ ನೀರು ಕುಡಿಯುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-imran-khan/