Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾವು ಜನರಿಗೆ ಮನವರಿಕೆ ಮಾಡಲು ಪಾದಯಾತ್ರೆ ಮಾಡಿದೆವು. ಆದರೆ, ನೀವ್ಯಾಕೆ ನಮ್ಮಿಂದ ಮುಂಚೆ ಹೋಗಿ ನಾನು ಕಳ್ಳನಲ್ಲ; ನನ್ನಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಹೇಳಿದ್ದೀರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ನಿರಪರಾಧಿ ಎಂದು ಸಾಬೀತುಪಡಿಸುವ ಬದಲಾಗಿ ಹಿಂದುಳಿದವರು ಎಂಬ ರಕ್ಷಣಾ ಕವಚದಡಿ ಆಶ್ರಯ ಪಡೆಯಲೆತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಸದನದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಇನ್ನೂ ಒಂದು ದಿನ ಸದನ ಇದ್ದರೂ ನೀವ್ಯಾಕೆ ಓಡಿ ಹೋದಿರಿ ಎಂದು ಕೇಳಿದರು. ನೀವು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೀರಲ್ಲವೇ? ಎಂದರಲ್ಲದೆ, ನಮ್ಮ ತಪ್ಪಿಲ್ಲದ ಕಾರಣ ಹಿಂದೆ ಹಿಂದೆ ಬಂದು ನಾವು ಉತ್ತರ ಕೊಟ್ಟೆವಾ ಎಂದು ಪ್ರಶ್ನಿಸಿದರು. ಕೋವಿಡ್ ಮಹಾಮಾರಿ ಇದ್ದರೂ ಕಾಂಗ್ರೆಸ್ಸಿಗರು ಮೇಕೆದಾಟು ಪಾದಯಾತ್ರೆ ಮಾಡಿ ನಾಟಕ ಪ್ರದರ್ಶನ ಮಾಡಿದ್ದಾಗಿ ಆಕ್ಷೇಪಿಸಿದರು. ಆದರೂ ನಾವು ಅಡ್ಡಿ ಮಾಡಲಿಲ್ಲ ಎಂದರಲ್ಲದೆ, ಹಿಂದುಳಿದ ಸಮಾಜಕ್ಕೆ ಸೇರಿದ ಪ್ರಾಮಾಣಿಕ ಪ್ರಧಾನಿಯವರ…
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್‌ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ…
ಬೆಂಗಳೂರು: ಘನತೆವೆತ್ತ ರಾಜ್ಯಪಾಲರಿಗೆ ಧಮ್ಕಿ ಹಾಕುವ ಕೆಲಸವನ್ನು ಸಚಿವ ಜಮೀರ್ ಅಹ್ಮದ್ ಅವರು ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್ ಅವರು ಆಕ್ಷೇಪಿಸಿದರು. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಇಂದು ಭೇಟಿ ನೀಡಿ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ಸಿನವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಲು ಅವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. 3 ಜನ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ತನಿಖೆ ಮಾಡಲು ಅವರು ಅವಕಾಶ ಕೊಟ್ಟಿದ್ದಾರೆ. ರಾಜ್ಯಪಾಲರ ಭಿತ್ತಿಪತ್ರಕ್ಕೆ ಚಪ್ಪಲಿಯಲ್ಲಿ ಹೊಡೆದ ಇವರು ಸಂವಿಧಾನಕ್ಕೆ ಗೌರವ ಕೊಡುತ್ತಾರಾ ಎಂದು ಪ್ರಶ್ನಿಸಿದರು. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಕಾರಣ ಎಂದು ಜಮೀರ್ ಅಹ್ಮದ್ ಅವರು ಹೇಳಿದ್ದು, ಅವರ ವಿರುದ್ಧ ದೂರು ಕೊಡಲಾಗಿದೆ ಎಂದರು. ಜಮೀರ್ ಅಹ್ಮದ್ ಅವರನ್ನು ಬಂಧಿಸಲು ಕೋರಿದ್ದಾಗಿ ಹೇಳಿದರು. ಐವಾನ್ ಡಿಸೋಜಾ, ರಕ್ಷಿತ್…
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್‌ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ…
ಅಜ್ಮೀರ್: 1992ರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದ್ದು, ಮೂರು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಅಂತ್ಯ ಹಾಡಿದೆ. ನಫೀಸ್ ಚಿಸ್ತಿ, ನಸೀಮ್ ಅಲಿಯಾಸ್ ಟಾರ್ಜಾನ್, ಸಲೀಮ್ ಚಿಸ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಘನಿ ಮತ್ತು ಸೈಯದ್ ಜಮೀನ್ ಹುಸೇನ್ ಎಂಬ ಆರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5 ಲಕ್ಷ ರೂ. 1992 ರಲ್ಲಿ ದೇಶಾದ್ಯಂತ ಆಘಾತಗಳನ್ನು ಉಂಟುಮಾಡಿದ ಈ ಹಗರಣವು ಆರೋಪಿಗಳು ಬಾಲಕಿಯರ 250 ಕ್ಕೂ ಹೆಚ್ಚು ನಗ್ನ ಛಾಯಾಚಿತ್ರಗಳನ್ನು ಪಡೆದುಕೊಂಡು, 100 ಕ್ಕೂ ಹೆಚ್ಚು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಮೇಲೆ ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲು ಬ್ಲ್ಯಾಕ್ಮೇಲ್ ಮಾಡಿದ್ದರು. ದುರಂತವೆಂದರೆ, ಆಘಾತದಿಂದಾಗಿ ಆರು ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತ್ರಸ್ತರನ್ನು ಬ್ಲ್ಯಾಕ್ಮೇಲ್ ಮಾಡಲು ಆರೋಪಿಗಳಿಗೆ ಸಹಾಯ ಮಾಡಲು ನಗ್ನ ಛಾಯಾಚಿತ್ರಗಳನ್ನು ಮುದ್ರಿಸುವಲ್ಲಿ ಮತ್ತು ಪ್ರಸಾರ ಮಾಡುವಲ್ಲಿ ಫೋಟೋ…
ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅನ್ಯಕೋಮಿನ ವಿದ್ಯಾರ್ಥಿನಿಗೆ ಮತ್ತೊಂದು ಕೋಮಿನ ಅಪ್ರಾಪ್ತ ವಿದ್ಯಾರ್ಥಿ ಚಾಕುವಿನಿಂದ ಕೈಗೆ ಇರಿದಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಹಿಂದೂ ವಿದ್ಯಾರ್ಥಿಯೊಬ್ಬ, ಮುಸ್ಲೀಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿರುವುದಾಗಿ ಹೇಳಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾದಂತ ವಿದ್ಯಾರ್ಥಿನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನವರು. ಸಹಪಾಠಿಯೇ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆಯ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/important-information-for-state-government-employees-these-documents-are-mandatory-to-apply-for-pension/ https://kannadanewsnow.com/kannada/breaking-country-cant-wait-for-another-rape-sc/
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಿವೃತ್ತ ವೇತನದ ಕುರಿತಂತೆ ರಾಜ್ಯ ಸರ್ಕಾರವು ನಿವೃತ್ತಿ ವೇತನ ನಿಯಮಗಳನ್ನು ಸರಳೀಕರಿಸಿದ್ದು, ನಿವೃತ್ತಿ ವೇತನ ಕಡತಗಳನ್ನು ವಿಳಂಬ ಮಾಡದೆ ಸಿದ್ದಪಡಿಸಬೇಕು. ವಿಳಂಬವಾದಲ್ಲಿ ನೌಕರನಿಗೆ ಆರ್ಥಿಕ ತೊಂದರೆಗಳಾಗುತ್ತವೆ ಎಂದು ಸೂಚನೆ ನೀಡಲಾಗಿದೆ. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ನಾನ್ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದಿರಬೇಕು. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸಬೇಕು. ನಿವೃತ್ತನಾಗುವ ಸರ್ಕಾರಿ ನೌಕರನಿಂದ ಪಡೆದ ನಮೂನೆ-1ಬಿ ವಿವರಗಳನ್ನು ಮತ್ತು ಇತರೆ ದಾಖಲೆಗಳನ್ನು ನಿವೃತ್ತಿ ದಿನಾಂಕಕ್ಕಿಂತ ಮೂರು ತಿಂಗಳು ಮುಂಚಿತವಾಗಿ ಮಹಾಲೇಖಪಾಲರಿಗೆ ಕಳುಹಿಸಬೇಕು. 285 ಮೇರೆಗೆ ನಿವೃತ್ತರಾಗುವ ನೌಕರರ ವಿವರಗಳನ್ನು 1 ಬಿ ನಮೂನೆಯಲ್ಲಿ ಸ್ವಯಂ ನಿವೃತ್ತಿ ಅಂಗೀಕಾರ ಆದೇಶ ಬಂದ ನಂತರ ಪಡೆದು ನಿವೃತ್ತಿ ವೇತನ ಕಡತ ತಯಾರಿಸಬೇಕು. ಮಹಾಲೇಖಪಾಲರು ಪ್ರತಿ ವರ್ಷದ ಜನವರಿ31 ಮತ್ತು ಜುಲೈ-31 ನಲ್ಲಿ ಮುಂದಿನ 12 ಮತ್ತು 18…
ಬೆಂಗಳೂರು: ನಗರದಲ್ಲಿ ಬೃಹತ್ ಗಾತ್ರದ ಮರವೊಂದು ಗಾಳಿಗೆ ಉರುಳಿ ಬಿದ್ದ ಪರಿಣಾಮ, ಅದರ ಅಡಿಯಲ್ಲಿ ಸಾಗುತ್ತಿದ್ದಂತ ಕಾರೊಂದು ಜಖಂ ಆಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ, ಕಾರೊಂದರ ಮೇಲೆ ಬಿದ್ದಿದೆ. ಈ ಪರಿಣಾಮ ಕಾರು ಜಖಂ ಆಗಿದೆ. ಅದರಲ್ಲಿದ್ದಂತ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಗಾಯಾಳು ಚಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೃಹತ್ ಗಾತ್ರದ ಮರವನ್ನು ಬಿಬಿಎಂಪಿಯ ಸಿಬ್ಬಂದಿಗಳು ತೆರವುಗೊಳಿಸುವಂತ ಕಾರ್ಯದಲ್ಲಿ ತೊಡಗಿದ್ದಾರೆ. https://kannadanewsnow.com/kannada/important-information-for-state-government-employees-heres-the-complete-list-of-da-calculations-recommendations/ https://kannadanewsnow.com/kannada/breaking-country-cant-wait-for-another-rape-sc/ https://kannadanewsnow.com/kannada/breaking-man-hacked-to-death-in-belagavi/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Karnataka Govt Employees) ಹಲವು ಬೇಡಿಕೆಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿ, ಅದರಂತೆ ವೇತನ ನೀಡುವುದಾಗಿತ್ತು. ಇವುಗಳಲ್ಲಿ 7ನೇ ವೇತನ ಆಯೋಗ (7th Pay Commission) ಜಾರಿಯ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಹಾಗಾದ್ರೇ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸ್ಸುಗಳ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಆಗಸ್ಟ್.1ರಿಂದ 7ನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಮಂಗಳವಾರದಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. 7ನೇ ವೇತನ ಆಯೋಗದ ಜಾರಿಯೇ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗಿತ್ತು. ಇಂತಹ ಬೇಡಿಕೆಯನ್ನು ಈಡೇರಿಸುವಂತ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಮಂಗಳೂರು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ…
ಬೆಂಗಳೂರು : Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ https://kseab.karnataka.gov.in/ ವೆಬ್ ಸೈಟ್ ನಲ್ಲಿ ಲಭ್ಯಮಾಡಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯ ಮಾಡಲಾಗಿರುವ…