Author: kannadanewsnow09

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಹೆಸರಲ್ಲಿ ವಂಚನೆಗೆ ಯತ್ನಿಸಿದಂತ ಆರೋಪಿ ಗೋವರ್ಧನ್ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಮೂಲಕ ವಂಚನೆ ಕೇಸ್ ಗೆ ಬ್ರೇಕ್ ಹಾಕಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ಆಪ್ತ ಸಹಾಯಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ತುಮಕೂರು ಪೊಲೀಸರು ಆರೋಪಿ ಗೋವರ್ಧನ್ ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೇ ಆರೋಪಿ ಗೋವರ್ಧನ್ ಜನರಿಗೆ ಗಂಗಾಕಲ್ಯಾಣ ಯೋಜನೆ ಮಾಡಿಸಿಕೊಡುವುದಾಗಿ ಹೇಳುತ್ತಿದ್ದರಂತೆ. ಇದಕ್ಕಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಲೆಟರ್ ಹೆಡ್ ಹಾಗೂ ಸಹಿಯನ್ನು ನಕಲಿ ಮಾಡಿ, ವಂಚನೆಗೆ ಯತ್ನಿಸಿದ್ದರಂತೆ. ಈ ವಿಷಯವ ತಿಳಿದು ಬಂದ ಕಾರಣ, ಸೋಮಣ್ಣ ಆಪ್ತ ಸಹಾಯಕ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಿಡಿಗೇಶಿ ಮೂಲದ ಗೋವರ್ಧನ್ ಬಂಧಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/mother-four-sisters-murder-arshad-wanted-to-become-hindu/ https://kannadanewsnow.com/kannada/breaking-yadgir-man-hacked-to-death-with-knife/

Read More

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ ನೀವಾದರೂ ಬುದ್ಧಿ ಹೇಳಿ. ಸುಪಾರಿ ಕೊಟ್ಟಂಥ ಇಷ್ಟು ದೊಡ್ಡ ಆರೋಪ ಯಾವ ಸಚಿವರ ಮೇಲೂ ಬಂದಿಲ್ಲ; ಆರೋಪಮುಕ್ತನಾಗುವವರೆಗೆ ನೀನು (ಪ್ರಿಯಾಂಕ ಖರ್ಗೆ) ಸಚಿವನಾಗಿ ಮುಂದುವರೆಯಬೇಡ ಎಂದು ನಿಮ್ಮ ಮಗನಿಗೆ ನೀವಾದರೂ ಬುದ್ಧಿ ಹೇಳಿ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಿದರು. ಸುಪಾರಿ ಕೊಡುವ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೀವು ಹೇಗೆ ಸಚಿವಸಂಪುಟದಲ್ಲಿ ಇಟ್ಟುಕೊಳ್ಳುತ್ತೀರಿ ಸಿದ್ದರಾಮಯ್ಯನವರೇ? ಎಂದರಲ್ಲದೆ, ಭ್ರಷ್ಟಾಚಾರಕ್ಕಾಗಿ ಹಿಂಸಿಸಿ ಸಾವಿಗೆ ದುಷ್ಪ್ರೇರಣೆ ಆಗಿದ್ದು, ಅದರಲ್ಲಿ ನೇರವಾಗಿ ಸಚಿವರೇ ಭಾಗಿಯಾಗಿದ್ದಾರೆ. ಸುಪಾರಿ ಕೊಟ್ಟದ್ದಕ್ಕೆ ಬೆನ್ನಿಗೆ ನಿಂತರೆ ಸುಪಾರಿ ಕೊಟ್ಟಿದ್ದೀರೆಂದೇ ಅರ್ಥ. ಸಂವಿಧಾನದ ಬಗ್ಗೆ ಮಾತನಾಡುವ ಖರ್ಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಗ ಸುಪಾರಿಯಲ್ಲಿ ಭಾಗವಹಿಸಿದ್ದಾರೆ ಎಂದರೆ, ಇವರು ಸಚಿವರಾಗಿ ಒಂದು…

Read More

ನವದೆಹಲಿ: ಸುರಕ್ಷಿತ ಹೂಡಿಕೆಯಾಗಿ, ಚಿನ್ನದ ಬೆಲೆ ಹೊಸ ವರ್ಷದಲ್ಲಿಯೂ ದಾಖಲೆಯ ಮಟ್ಟವನ್ನು ತಲುಪಬಹುದು. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 85,000 ರೂ. ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಮುಂದುವರಿದರೆ, ಇದು ದೇಶೀಯ ಮಾರುಕಟ್ಟೆಯಲ್ಲಿ 90,000 ರೂ.ಗಳ ಮಟ್ಟವನ್ನು ತಲುಪಬಹುದು. ವಿತ್ತೀಯ ನೀತಿಯಲ್ಲಿ ಹೊಂದಾಣಿಕೆಯ ನಿಲುವು ಮತ್ತು ಕೇಂದ್ರ ಬ್ಯಾಂಕುಗಳ ಖರೀದಿ ಕೂಡ ಚಿನ್ನದ ಏರಿಕೆಗೆ ಸಹಾಯ ಮಾಡುತ್ತಿದೆ. ಆದಾಗ್ಯೂ, ಭೌಗೋಳಿಕ ರಾಜಕೀಯ ಬಿಕ್ಕಟ್ಟು ಕಡಿಮೆಯಾದರೆ, ರೂಪಾಯಿ ಮೌಲ್ಯ ಕುಸಿಯುವುದನ್ನು ನಿಲ್ಲಿಸುತ್ತಿದ್ದಂತೆ ಅಮೂಲ್ಯ ಲೋಹವು ದುರ್ಬಲಗೊಳ್ಳಬಹುದು. ಪ್ರಸ್ತುತ, ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 79,350 ರೂ ಮತ್ತು ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ನಲ್ಲಿ ಫ್ಯೂಚರ್ಸ್ ಟ್ರೇಡ್ನಲ್ಲಿ 10 ಗ್ರಾಂಗೆ 76,600 ರೂ ಆಗಿದೆ. 2024 ರಲ್ಲಿ ಚಿನ್ನವು ಶೇಕಡಾ 23 ರಷ್ಟು ಆದಾಯವನ್ನು ನೀಡಿತು, ಬೆಳ್ಳಿ ಶೇಕಡಾ 30 ರಷ್ಟು ಹೆಚ್ಚಳ ಚಿನ್ನವು ಬಲವಾಗಿ ಕಾರ್ಯನಿರ್ವಹಿಸಿತು, 2024 ರಲ್ಲಿ ಅದರ ಹೊಸ…

Read More

ಬೆಳಗಾವಿ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಸಹಿತ ಕೆರೆಗೆ ಬಿದ್ದಂತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವಂತ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಕಾರಿನ ಒಳಗಡೆ ಸಿಲುಕಿಕೊಂಡಿದ್ದಂತ ಕಿರಣ್ ನೀರಿನಿಂದ ಹೊರ ಬರಲಾಗದೇ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಕಿರಣ್ ನಾವಲಗಿ(45) ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಕಾರು ಮೇಲೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. https://kannadanewsnow.com/kannada/do-you-suffer-from-frequent-colds-sneezes-heres-the-solution/ https://kannadanewsnow.com/kannada/mother-four-sisters-murder-arshad-wanted-to-become-hindu/

Read More

ಚಳಿಗಾಲದ ಒಣಹವೆ, ಶೀತಲ ಗಾಳಿಯಿಂದ ವಾತಾವರಣದಲ್ಲಿ ಹಲವಾರು ಬದಲಾವಣೆಯಾದಂತೆ, ಇದಕ್ಕೆ ಅನುಗುಣವಾಗಿ ಮನುಷ್ಯನ ದೇಹದಲ್ಲಿಯೂ ಬದಲಾವಣೆಗಳು ಉಂಟಾಗುತ್ತದೆ ಮತ್ತು ಅನೇಕ ಅರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಅವುಗಳೆಂದರೆ ಸಂಧಿಗಳಲ್ಲಿ ನೋವು, ಶೀತ ಮತ್ತು ಕೆಮ್ಮು, ಕಿವಿಯಲ್ಲಿ ಸೋಂಕು ಮುಂತಾದವು. ಕೇವಲ ಚಳಿಗಾಲದಲ್ಲದೇ ಎಲ್ಲಾ ಋತುಗಳಲ್ಲಿ ಕಾಡುವ ಸಾಮಾನ್ಯ ಶೀತದ ಬಗ್ಗೆ ಮುಂದೆ ತಿಳಿಯೋಣ. ಆಯುರ್ವೇದ ದಲ್ಲಿ ಪದೇ ಪದೇ ಶೀತವಾಗುವುದನ್ನು ಪ್ರತಿಶ್ಯಾಯ ಎಂದು ಕರೆಯುತ್ತಾರ. ಪ್ರತಿಶ್ಯಾಯವು ಪ್ರತಿ ಮತ್ತು ಶ್ಯಾಯ ಎಂಬ ಎರಡು ಪದಗಳಿಂದ ಕೂಡಿದೆ. ಪ್ರತಿ ಎಂದರೆ ಅಭಿಮುಖ ( opposite direction) , ಶ್ಯಾಯ ಎಂದರೆ ಗಮನ / ಹರಿಯುವುದು ಎಂದರ್ಥ. ಪ್ರತಿಕ್ಷಣಮ್ ಶ್ಯಾಯತೆ ಇತಿ ಪ್ರತಿಶ್ಯಾಯಃ | ಅಂದರೆ ಯಾವ ರೋಗದಲ್ಲಿ ನಿರಂತರವಾಗಿ ( continuous flow) ಹರಿಯುವಿಕೆ ಇರುತ್ತದೆ ಅದನ್ನು ಪ್ರತಿಶ್ಯಾಯ ಎನ್ನುವರು. ಇದು ಕೆಲವರಿಗೆ ಚಳಿಗಾಲದಲ್ಲಿ ಅಥವಾ ಒಂದು ನಿರ್ದಿಷ್ಟ ಋತುವಿನಲ್ಲಿ ಬಂದರೆ ಇನ್ನು ಕೆಲವರಿಗೆ ವರ್ಷವಿಡಿ ಈ ಸಮಸ್ಯೆ ಕಾಡುತ್ತಿರುತ್ತದೆ.ಇದನ್ನು ಆಧುನಿಕ ವೈದ್ಯಕೀಯ ಶಾಸ್ತ್ರದಲ್ಲಿ…

Read More

ಬೆಂಗಳೂರು: ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ ಎನ್ನುವಂತೆ ಗಣರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ…

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ…

Read More

ಬೆಂಗಳೂರು: ಹೆಸರೆತ್ತಿದರೇ ಸಾಕು ಬಿಜೆಪಿಯವರು ಸಿಬಿಐ ತನಿಖೆಗೆ ಕೊಡಿ ಅಂತಾರೆ. ಈಶ್ವರಪ್ಪ ಕೇಸಲ್ಲಿ ಡೆತ್ ನೋಟ್ ನಲ್ಲಿ ಗುತ್ತಿಗೆದಾರ ಅವರ ಹೆಸರನ್ನು ಉಲ್ಲೇಖಿಸಿದ್ದರು. ಅದರೇ ಗುತ್ತಿಗೆದಾರ ಸಚಿನ್ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಇದ್ಯಾ.? ಅವರು ಯಾಕೆ ರಾಜೀನಾಮೆ ಕೊಡಬೇಕು ಅಂತ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಮುನ್ನಾ ಬರೆದಿರುವಂತ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಎಲ್ಲಿಯಾದರೂ ಉಲ್ಲೇಖಿಸಿದ್ದಾರಾ? ಅವರ ಹೆಸರು ಎಲ್ಲಿಯೂ ಡೆತ್ ನೋಟಿನಲ್ಲಿ ಇಲ್ಲ ಅಲ್ವ. ಅವರು ಯಾಕೆ ಹೀಗೆ ಇರದೇ ಇದ್ದರೂ ರಾಜೀನಾಮೆ ಕೊಡಬೇಕು ಅಂತ ಕೇಳಿದರು. ಈಶ್ವರಪ್ಪ ಕೇಸಲ್ಲಿ ಡೆತ್ ನೋಟ್ ನಲ್ಲಿ ಈಶ್ವರಪ್ಪ ಅವರ ಹೆಸರಿತ್ತು. ಸಚಿನ್ ಆತ್ಮಹತ್ಯೆ ಕೇಸಲ್ಲಿ ಪ್ರಿಯಾಂಕ್ ಹೆಸರು ಎಲ್ಲೂ ಇಲ್ಲ. ಪ್ರಿಯಾಂಕ್ ಖರ್ಗೆ ಯಾವುದೇ ತನಿಖೆಗೂ ಸಿದ್ಧ ಅಂತ ಹೇಳಿದ್ದಾರೆ. ನಾವೀಗ ದೂರು ದಾಖಲಿಸಿಕೊಂಡು ಸಿಐಡಿ ತನಿಖೆಗೆ ಕೊಟ್ಟಿದ್ದೇವೆ…

Read More

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ವರ್ಷ ಬಿಜೆಪಿ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದುಕೊಂಡು ಹೋಗುವ ಕಾರ್ಯಕ್ರಮ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದ ಹಿತೈಷಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದರ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವರ್ಷ ಜನವರಿ- ಫೆಬ್ರವರಿಯಲ್ಲಿ ಬಿಜೆಪಿಯಿಂದ ಅಯೋಧ್ಯೆಗೆ ಕರೆದುಕೊಂಡು ಹೋಗುವ ಯೋಜನೆ ಇಲ್ಲ ಎಂದು ವಿವರ ನೀಡಿದರು. 2024 ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಾಪನೆ ಮಾಡಿದ್ದ ಅಯೋಧ್ಯೆಗೆ…

Read More

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು ಎಂದು ಆಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಲ್ಲಿವರೆಗೆ ಬಾಣಂತಿ ಸಾವಿನ ಸಂಬಂಧ ಒಬ್ಬರನ್ನೂ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ; ಅವರು ಕೂಡ ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು ಎಂದು ಒತ್ತಾಯಿಸಿದರು. ಬಾಣಂತಿಯರ ಸಾವನ್ನು ಸರಕಾರ ನಿಲ್ಲಿಸದೆ ಇರುವುದನ್ನು ಖಂಡಿಸಿ ಇಡೀ ರಾಜ್ಯದಲ್ಲಿ, ಪ್ರತಿದಿನ 5 ಜಿಲ್ಲೆಗಳಲ್ಲಿ ರಾಜ್ಯ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳು ನಾಳೆಯಿಂದ ಪ್ರತಿಭಟನೆ ನಡೆಸಲಿವೆ ಎಂದ…

Read More