Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ರಾಜ್ಯದ ಜನರು ಬಹು ಕುತೂಹಲದಿಂದ ನಿರೀಕ್ಷೆ ಮಾಡುತ್ತಿದ್ದಂತ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಕೆ ಮಾಡಿದ್ದಾರೆ. ವಿಧಾನಸೌಧಕ್ಕೆ ಎರಡು ಬಾಕ್ಸ್ ಗಳಲ್ಲಿ ಜಾತಿಗಣತಿ ವರದಿಯ ಪ್ರತಿಗಳ ಜೊತೆಗೆ ಜಯಪ್ರಕಾಶ್ ಹೆಗ್ಡೆ ಅವರ ತಂಡವು ಆಗಮಿಸಿತು. ವಿಧಾನಸೌಧದಲ್ಲಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಾವು ತಯಾರಿಸಿದಂತ ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಯಪ್ರಕಾಶ್ ನೀಡಿದಂತ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಸ್ವೀಕರಿಸಿದರು. ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ಅವರು, ಜಾತಿಗಣತಿ ವರದಿಯನ್ನು ಸ್ವೀಕರಿಸಿರೋದು ಸಂತಸದ ವಿಚಾರವಾಗಿದೆ. ಜಾತಿ ಗಣತಿ ವರದಿ ಬಿಡುಗಡೆ ಮಾಡಿ ನಂತ್ರ ಚರ್ಚೆ ಮಾಡುವುದು ಸೂಕ್ತ. ಜಾತಿ ಗಣತಿ ವರದಿ ನೋಡದೇ ವಿರೋಧ ಮಾಡುವುದು ಸರಿಯಲ್ಲ ಎಂದರು. ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿಗಣತಿ ವರದಿಯಲ್ಲಿ ಏನಿದೆ.? ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ…
ನವದೆಹಲಿ: ಇಂಗ್ಲೇಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಾವಳಿಗೆ ಬಿಸಿಸಿಐ ಭಾರತದ ಬಲಿಷ್ಟ ತಂಡವನ್ನು ಇಂದು ಪ್ರಕಟಿಸಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ಭಾರತ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದೆ. ಫಿಟ್ನೆಸ್ಗೆ ಒಳಪಟ್ಟಿದ್ದ ಅಂತಿಮ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಟೆಸ್ಟ್ನಲ್ಲಿ ಭಾಗವಹಿಸಿದ್ದ ಕೆಎಲ್ ರಾಹುಲ್ ಅವರನ್ನು ಧರ್ಮಶಾಲಾದಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್ನಿಂದ ಹೊರಗಿಡಲಾಗಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅವರ ಸಮಸ್ಯೆಯ ಹೆಚ್ಚಿನ ನಿರ್ವಹಣೆಗಾಗಿ ಲಂಡನ್ನ ತಜ್ಞರೊಂದಿಗೆ ಸಮನ್ವಯ ಸಾಧಿಸುತ್ತಿದೆ. ಏತನ್ಮಧ್ಯೆ, ರಾಂಚಿಯಲ್ಲಿ ನಡೆದ 4 ನೇ ಟೆಸ್ಟ್ಗೆ ತಂಡದಿಂದ ಬಿಡುಗಡೆಯಾದ ಜಸ್ಪ್ರೀತ್ ಬುಮ್ರಾ 5 ನೇ ಟೆಸ್ಟ್ಗಾಗಿ ಧರ್ಮಶಾಲಾದಲ್ಲಿ ತಂಡದೊಂದಿಗೆ ಸಂಪರ್ಕ ಹೊಂದಲಿದ್ದಾರೆ. ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಮಾರ್ಚ್ 2, 2024 ರಿಂದ ಪ್ರಾರಂಭವಾಗುವ ಮುಂಬೈ ವಿರುದ್ಧದ…
ಧಾರವಾಡ: ಮಕ್ಕಳು ಅಂದ್ರೇ ಅಳೋದು ಕಾಮನ್. ಅದನ್ನು ಸಹಿಸಿಕೊಳ್ಳುವುದಕ್ಕಿಂತ ಅರ್ಥ ಮಾಡಿಕೊಂಡು ಬೇಕು, ಬೇಡಗಳನ್ನು ನೀಗಿಸೋದು, ಈಡೇರಿಸೋದು ತಂದೆ-ತಾಯಿಗಳ ಕರ್ತವ್ಯ. ಆದ್ರೇ ಧಾರವಾಡದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅದೇ ಮಗು ಅತ್ತಿದ್ದಕ್ಕೆ ಗೋಡೆಗೆ ಎತ್ತಿ ಎಸೆದು ಪಾಪಿ ತಂದೆಯೊಬ್ಬ ಕೊಂದೇ ಬಿಟ್ಟಿದ್ದಾನೆ. ಹೌದು ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದೆ. ಅದೇ ಮಗು ಅಳುತ್ತಿದೆ ಎಂಬುದಾಗಿ ಅದನ್ನು ಸಹಿಸದಂತ ತಂದೆಯೊಬ್ಬ ಗೋಡೆಗೆ ಮಗುವನ್ನೇ ಎಸೆದು ಕೊಂದಿರೋ ಘಟನೆ ನಡೆದಿದೆ. ಯಾದವಾಡ ಗ್ರಾಮದ ಶಂಬುಲಿಂಗಯ್ಯ ಶಾಪುರಮಠ ಎಂಬಾತನೇ ಹೀಗೆ ಮಗು ಕೊಂದಿರುವಂತ ಪಾಪಿ ತಂದೆಯಾಗಿದ್ದಾರೆ. ರಾತ್ರಿ ಮಗು ಅಳುತ್ತಿದ್ದಕ್ಕೆ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದಂತ ಈತ, ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾರೆ. ಈ ಪರಿಣಾಮ ಮಗುವಿನ ತಲೆಗೆ ಗಂಭೀರವಾದಂತ ಗಾಯವಾಗಿತ್ತು. ಕೂಡಲೇ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೇ ಗಂಭೀರವಾಗಿ ತಲೆಗೆ ಪೆಟ್ಟಾಗಿದ್ದಂತ ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಗರಗ ಪೊಲೀಸ್…
ಬೆಂಗಳೂರು: ಬಿಜೆಪಿ ಮುಖಂಡ, ನಟ ಕೆ.ಶಿವರಾಮ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಅವರು ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ. ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಬಿಜೆಪಿ ಮುಖಂಡರಾಗಿದ್ದ ಅವರು, ಛಲವಾದಿ ಮಹಾಸಭಾದ ಅಧ್ಯಕ್ಷರೂ ಆಗಿದ್ದರು. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. https://kannadanewsnow.com/kannada/legal-action-will-be-taken-against-those-who-raised-pro-pakistan-slogans-home-minister-dr-g-parameshwara/ https://kannadanewsnow.com/kannada/2008%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%9a%e0%b2%bf%e0%b2%a8%e0%b3%8d%e0%b2%a8%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%95%e0%b3%8d%e0%b2%b0%e0%b3%80%e0%b2%a1/
ಬಳ್ಳಾರಿ: ಕೆಲ ದಿನಗಳ ಹಿಂದೆ ನಟ ಯಶ್ ಹುಟ್ಟು ಹಬ್ಬದ ಪ್ಲೆಕ್ಸ್ ಕಟ್ಟೋ ವೇಳೆಯಲ್ಲಿ ವಿದ್ಯುತ್ ಹರಿದು ಯಶ್ ಅಭಿಮಾನಿಗಳು ಸಾವನ್ನಪ್ಪಿದ್ದರು. ಇಂದು ಯಶ್ ಅಭಿಮಾನಿಯ ಕಾಲಿನ ಮೇಲೆ ಅವರ ಬೆಂಗಾವಲು ವಾಹನದ ಕಾರು ಹರಿದು ಕಾಲಿಗೆ ಗಾಯವಾಗಿರೋ ಘಟನೆ ನಡೆದಿದೆ. ಇಂದು ನಟ ಯಶ್ ಅವರು ಬಳ್ಳಾರಿಗೆ ಅಮೃತೇಶ್ವರ ಸ್ವಟಿಕ ಲಿಂಗ ದೇಗುಲದ ಉದ್ಘಾಟನೆಗೆ ತೆರಳಿದ್ದರು. ದೇವಾಲಯ ಉದ್ಘಾಟನೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನ ಬಳಿಯಲ್ಲಿ ಅವರ ಬೆಂಗಾವಲು ವಾಹನದ ಕಾರು ಅಭಿಮಾನಿಯೊಬ್ಬರ ಕಾಲಿನ ಮೇಲೆ ಹರಿದಿದೆ. ನಟ ಯಶ್ ಅಭಿಮಾನಿಯಾಗಿರುವಂತ ಸಿರಗುಪ್ಪದ ವಸಂತ್ ಎಂಬುವರು ಯಶ್ ನೋಡಲು ಅವರನ್ನೇ ಹಿಂಬಾಲಿಸಿಕೊಂಡು ತೆರಳಿದ್ದರು. ಈ ವೇಳೆಯಲ್ಲಿ ಬಳ್ಳಾರಿ ಹೊರವಲಯದ ಬಾಲಾಜಿ ಕ್ಯಾಂಪ್ ಬಳಿಯಲ್ಲಿ ಯಶ್ ಬೆಂಗಾವಲು ಕಾರು ಅವರ ಕಾಲಿನ ಮೇಲೆ ಹರಿದು, ಗಾಯಗೊಂಡಿದ್ದಾರೆ. ಇದೀಗ ರಕ್ತ ಸುರಿಯುತ್ತಿದ್ದಂತ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/legal-action-will-be-taken-against-those-who-raised-pro-pakistan-slogans-home-minister-dr-g-parameshwara/ https://kannadanewsnow.com/kannada/caste-census-report-will-be-good-for-all-communities-former-commission-chairman-kantharaju/
ಹಿಮಾಚಲ ಪ್ರದೇಶ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಈ ಆದೇಶವನ್ನು ಪ್ರಕಟಿಸಿದ್ದಾರೆ. ಸ್ಪೀಕರ್ ಎಲ್ಲಾ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದರು. ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ಸಚಿವ ಹರ್ಷವರ್ಧನ್ ಚೌಹಾಣ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹಿಮಾಚಲ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡಿ ಅಡ್ಡ ಮತದಾನ ಆರೋಪ ಎದುರಿಸುತ್ತಿರುವಂತ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ. https://twitter.com/ANI/status/1763080831914877377
ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ. ಅಂದಹಾಗೇ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ…
ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರನ್ನಾಗಿ ಹಾಸ್ಯನಟ ಸಾಧುಕೋಕಿಲ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸರ್ಕಾರದ ಕಾರ್ಯದರ್ಶಿಯಾಗಿರುವಂತ ರಂದೀಪ್.ಡಿ ಅವರು ಟಿಪ್ಪಣಿ ಹೊರಡಿಸಿದ್ದು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ. ಈಗ ಬಿಡುಗಡೆಯಾಗಿರುವಂತ 44 ನಿಗಮ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿ ಆದೇಶದ ಪಟ್ಟಿಯಲ್ಲಿ, ನಟ ಸಾಧು ಕೋಕಿಲ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. https://kannadanewsnow.com/kannada/cm-siddaramaiah-appoints-dr-b-yogesh-babu-as-chairman-of-karnataka-wine-board/ https://kannadanewsnow.com/kannada/breaking-2-week-deadline-for-installation-of-60-kannada-signboards-dk-shivakumar-2/
ಕೆಎನ್ಎನ್ ಸಿನಿಮಾ ಡೆಸ್ಕ್: ಬಾಲಿವುಡ್ನ ನೆಚ್ಚಿನ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮದುವೆಯಾದ ಆರು ವರ್ಷಗಳ ನಂತರ ತಮ್ಮ ಮೊದಲ ಮಗುವನ್ನು ಒಟ್ಟಿಗೆ ಸ್ವಾಗತಿಸಲು ಸಜ್ಜಾಗಿದ್ದಾರೆ. ಇಂದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಾಲಿವುಡ್ ನೆಚ್ಚಿನ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು, ಮದುವೆಯಾದ 6 ವರ್ಷಗಳ ನಂತ್ರ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಟಿಪ್ಪಣಿಯನ್ನು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದೀಪಿಕಾ ಮತ್ತು ರಣವೀರ್ ನವೆಂಬರ್ 14, 2018 ರಂದು ಇಟಲಿಯ ಲೇಕ್ ಕೊಮೊ ಬಳಿ ಭವ್ಯ ಸಮಾರಂಭದಲ್ಲಿ ವಿವಾಹವಾದರು. 2013ರಲ್ಲಿ ತೆರೆಕಂಡ ‘ಗೋಲಿಯೋನ್ ಕಿ ರಾಸ್ಲೀಲಾ- ರಾಮ್ ಲೀಲಾ’ ಚಿತ್ರದ ಚಿತ್ರೀಕರಣದ ವೇಳೆ ಅವರು ಪ್ರೀತಿಯ ಬಲೆಯಲ್ಲಿ ಸಿಲುಕಿದರು. ದಂಪತಿಗಳು ಮಕ್ಕಳನ್ನು ಹೊಂದುವ ಬಯಕೆಯನ್ನು ಮತ್ತೆ ಮತ್ತೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವಾರು ಬಾರಿ ಗರ್ಭಧಾರಣೆಯ ವದಂತಿಗಳನ್ನು ಹುಟ್ಟುಹಾಕಿದ್ದರು. ಆದಾಗ್ಯೂ, ಈ ಬಾರಿ, ಸುದ್ದಿ…
ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಾ.ಬಿ ಯೋಗೇಶ್ ಬಾಬು. ಅವರನ್ನು ಮನವೊಲಿಸಿದ್ದಂತ ಕಾಂಗ್ರೆಸ್ ಪಕ್ಷದ ನಾಯಕರು ಎನ್.ವೈ ಗೋಪಾಲಕೃಷ್ಣ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ನೀಡಿದ್ದರು. ಇಂತಹ ಡಾ.ಬಿ ಯೋಗೇಶ್ ಬಾಬು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿದ್ದಾರೆ. ಈ ಕುರಿತಂತೆ ಸರ್ಕಾರದ ಕಾರ್ಯದರ್ಶಿಯಾಗಿರುವಂತ ರಂದೀಪ್.ಡಿ ಅವರು ಟಿಪ್ಪಣಿ ಹೊರಡಿಸಿದ್ದು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ. ಈಗ ಬಿಡುಗಡೆಯಾಗಿರುವಂತ 44 ನಿಗಮ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿ ಆದೇಶದ ಪಟ್ಟಿಯಲ್ಲಿ, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಡಾ.ಬಿ ಯೋಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ…