Subscribe to Updates
Get the latest creative news from FooBar about art, design and business.
Author: kannadanewsnow09
ಕೊಪ್ಪಳ: ಬಿಜೆಪಿಯೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಬೆನ್ನಲ್ಲೇ ಕೆಆರ್ ಪಿಪಿ ಪಕ್ಷ ಕೂಡ ಮೈತ್ರಿಯೊಂದಿಗೆ ಕಣಕ್ಕೆ ಇಳಿಯೋ ಸೂಚನೆ ನೀಡಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಅಂತ ಕೆ ಆರ್ ಪಿಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೋದಿ ಮತ್ತೆ ಪ್ರಧಾನಿಯಾಗೋದಾದ್ರೇ ಹೊಂದಾಣಿಕೆ ಮಾಡಿಕೊಂಡು ಹೋಗೋದಕ್ಕೆ ನಾವು ಸಿದ್ಧರಿದ್ದೇವೆ ಎಂಬುದಾಗಿ ಹೇಳಿದ್ದಾರೆ. ನಮ್ಮ ನಿಲುವು ಇಷ್ಟೇ ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗೋದಕ್ಕೆ ಕೆ ಆರ್ ಪಿಪಿ ಹೊಂದಾಣಿಕೆ ರಾಜಕಾಣ ಮಾಡೋದಕ್ಕೆ ಸಿದ್ಧವಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಹೋಗೋ ಬಗ್ಗೆ ಸದ್ಯಕ್ಕೆ ಯಾವ ನಿರ್ಧರ ಕೈಗೊಂಡಿಲ್ಲ. ಬಿಜೆಪಿ ನಯಾಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಕೆ ಆರ್ ಪಿ ಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ 4 ರಿಂದ 5 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕೋ ಚಿಂತನೆ ನಡೆಸಲಾಗಿದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/note-applications-invited-for-training-in-sheep-and-goat-rearing/ https://kannadanewsnow.com/kannada/good-news-for-guarantee-scheme-beneficiaries-convention-to-be-held-in-all-taluks-in-february/
ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜನವರಿ 30 ಮತ್ತು 31 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್‍ಕಾರ್ಡ್ ಜೆರಾಕ್ಸ್, 2 ಪಾಸ್ ಪೋಟೋ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಸುಂಕದ್ ತಿಳಿಸಿದ್ದಾರೆ. https://kannadanewsnow.com/kannada/good-news-for-poor-suffering-from-kidney-failure-free-dialysis-centres-opened-across-the-state/ https://kannadanewsnow.com/kannada/103-people-tested-positive-for-coronavirus-in-the-state-134-recovered/
‘ಕಿಡ್ನಿ ವೈಫಲ್ಯ’ದಿಂದ ಬಳಲುತ್ತಿರುವ ಬಡವರಿಗೆ ಗುಡ್ ನ್ಯೂಸ್: ರಾಜ್ಯಧ್ಯಂತ ‘ಉಚಿತ ಡಯಾಲಿಸಿಸ್ ಕೇಂದ್ರ’ಗಳು ಕಾರ್ಯಾರಂಭ
ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಉಚಿತವಾಗಿ ಉತ್ತಮ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಹೊಸ ಡಯಾಲೈಸರ್ ಯಂತ್ರಗಳ ಸೇವೆಗೆ ಚಾಲನೆ ನೀಡಿದೆ. ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದರು. ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219ಕ್ಕೆ ಹೆಚ್ಚಿಸಲಾಗಿದ್ದು, 800 ಹೊಸ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗುತ್ತಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದಿನಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಿವೆ. ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ 20 ನೂತನ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಸಿಎಂ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಅಲ್ಲದೇ ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸೋದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಳೆ ನಾಡಿದ್ದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರ್ನಾಟಕ ಬಿಜೆಪಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಪ್ರವಾಸದ ವಿವರವನ್ನು ಬಿಡುಗಡೆ ಮಾಡಲಾಗಿದೆ. ದಿನಾಂಕ 28-01-2024ರಂದು ಬೆಳಿಗ್ಗೆ 9 ಗಂಟೆಗೆ ಮಂತ್ರಾಲಯಕ್ಕೆ ಭೇಟಿ ನೀಡಲಿದ್ದಾರೆ. ಆ ನಂತ್ರ 12 ಗಂಟೆಯವರೆಗೆ ರಾಯಚೂರಿನ ಜಿಲ್ಲಾ ಕಾರ್ಯಾಲಯದಲ್ಲಿ ಮನ್ ಕಿ ಬಾತ್ ವೀಕ್ಷಣೆ ಮಾಡಲಿದ್ದಾರೆ. ಸಂಜೆ 5.30ರ ಹಾಗೆ ಯಾದಗಿರಿ ತಲುಪಿ ಪತ್ರಿಕಾಗೋಷ್ಠಿ, ಕಾರ್ಯಕರ್ತರ ಸಭೆ, ಬೂತ್ ಅಧ್ಯಕ್ಷರ ಮನೆಗೆ ಭೇಟಿಯನ್ನು ನೀಡಿ, ಅಲ್ಲಿಂದ ಸಂಜೆ 7.30ಕ್ಕೆ ರಸ್ತೆ ಮಾರ್ಗದ ಮೂಲಕ ಕಲಬುರ್ಗಿಯನ್ನು ತಲುಪಿ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ದಿನಾಂಕ 29-01-2024ರಂದು ಕಲಬುರ್ಗಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಿಗ್ಗೆ 10.30ಕ್ಕೆ ಬೀದರ್ ತಲುಪಲಿದ್ದಾರೆ. ಬೆಳಿಗ್ಗೆ 10.30ರಿಂದ 2 ಗಂಟೆಯ ಅವಧಿಯಲ್ಲಿ ಬೂತ್ ಅಧ್ಯಕ್ಷರ ಮನೆ…
ಧಾರವಾಡ : ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು. ಸರಕಾರದ ಅಭಿವೃದ್ದಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ, ಗುರಿ ನೀಡಲಾಗಿದೆ. ಸರಕಾರದಿಂದ ಹಂತಹಂತವಾಗಿ ಅನುದಾನವೂ ಬಿಡುಗಡೆ ಆಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಫೆಬ್ರವರಿ ತಿಂಗಳಲ್ಲಿ…
ಬೆಂಗಳೂರು; ರಾಜ್ಯದಲ್ಲಿ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 134 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 2,224 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದೆ. ಇಂದು ಹೊಸದಾಗಿ ಬಳ್ಳಾರಿ 03, ಬೆಳಗಾವಿ 04, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 65, ಬೀದರ್, ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದಿದೆ. ಇನ್ನೂ ಹಾಸನ 02, ಕಲಬುರ್ಗಿ 03, ಕೊಪ್ಪಳ 02, ಮೈಸೂರು 05, ಶಿವಮೊಗ್ಗ 02, ತುಮಕೂರು 10 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸೇರಿದಂತೆ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ ದೃಢಪಟ್ಟಿದೆ. ಸೋಂಕಿತರಾದಂತ 134 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 310 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಳ್ಳಾರಿಯ ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡುವಂತ ಪ್ರವಾಸಿಗರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ಕೆಲ ಡ್ರೆಸ್ ಗಳನ್ನು ಧರಿಸಿ ತೆರಳಿದ್ರೇ, ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ. ಎಸ್ ದಿವಾಕರ್ ಮಾಹಿತಿ ಹಂಚಿಕೊಂಡಿದ್ದು, ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ ಎಂಬುದಾಗಿ ತಿಳಿಸಿದ್ದಾರೆ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಹೇಳಿದ್ದಾರೆ. ಸೋ ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡುವಂತ ಪ್ರವಾಸಿಗರು ಇನ್ಮುಂದೆ ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಹೋದ್ರೆ, ಮಹಿಳೆಯರು ತುಂಡುಡುಗೆಯಲ್ಲಿ ತೆರಳಿದ್ರೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ…
ಬೆಂಗಳೂರು: ಇದೇ ಮೊದಲ ಬಾರಿಗೆ ಐತಿಹಾಸಿಕ ದಾಖಲೆ ಎನ್ನುವಂತೆ ಭಾರತದ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯನ್ ಓಪನ್-2024ರ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದ್ದರು. ಇಂತಹ ಅವರು ಕನ್ನಡಿಗರಾಗಿದ್ದು, ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಭಾರತದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಜೋಡಿ 6-4ರಲ್ಲಿ ಸಮಬಲ ಸಾಧಿಸಿತು. 7-6 ಗೆಲುವು. ಬೋಪಣ್ಣ ಇತ್ತೀಚೆಗೆ ಡಬಲ್ಸ್ನಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಕುರಿತಂತೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್…
ಪಾಟ್ನಾ: ‘ಮಹಾಘಟಬಂಧನ್’ ( Mahagathbandhan ) ಸರ್ಕಾರದ ನೇತೃತ್ವ ವಹಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Bihar Chief Minister Nitish Kumar ) ಅವರು ಭಾನುವಾರ ಬೆಳಿಗ್ಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಸಿಎಂ ಆಪ್ತ ಮೂಲಗಳು ಶನಿವಾರ ತಿಳಿಸಿವೆ. ಪಿಟಿಐ ಜೊತೆ ಮಾತನಾಡಿದ ಮೂಲಗಳು, ಶನಿವಾರ ಸಂಜೆಯ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲವಾದರೂ, “ಅದು ಖಂಡಿತವಾಗಿಯೂ ಭಾನುವಾರ ಬೆಳಿಗ್ಗೆ ವೇಳೆಗೆ ನಡೆಯಲಿದೆ” ಎಂದು ಹೇಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ ಸಾಂಪ್ರದಾಯಿಕ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು. “ಹಗಲಿನಲ್ಲಿ ನಿರೀಕ್ಷಿಸಲಾದ ತೀವ್ರ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು” ಸಚಿವಾಲಯದಂತಹ ಸರ್ಕಾರಿ ಕಚೇರಿಗಳನ್ನು ಭಾನುವಾರ ತೆರೆಯಲು ಕೇಳಲಾಗಿದೆ, ಇದು ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ನೋಡಬಹುದು ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಪಕ್ಷದ ಸಭೆಯಲ್ಲಿ, ರಾಜ್ಯ ಬಿಜೆಪಿ ನಾಯಕರು ಜೆಡಿಯು ಮುಖ್ಯಸ್ಥರು ‘ಮಹಾಘಟಬಂಧನ್’ ನಿಂದ ಹೊರಬಂದ ಸಂದರ್ಭದಲ್ಲಿ ಅವರಿಗೆ ಬೆಂಬಲದ…
ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಿದರು. ಈ ಮೂಲಕ ಮಧುಮೇಹಿಗಳ ಸೇವೆಗೆ ಡಯಾಲಿಸಿಸ್ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರೇ, ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗಿಯಾಗಿದ್ದರು. ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್…