Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ ಸಲ್ಲಿಸಲು ದಾಖಲಾತಿಗಳು 1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ 2. ಸದಸ್ಯರ ಜಾತಿ…
ಬೆಂಗಳೂರು : ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳು ರಾಜ್ಯದ ಜನತೆಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದ್ದು, ಈ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ಹಲವು ಸೌಲಭ್ಯಗಳು ಸಿಗಲಿವೆ. ಸರ್ಕಾರದ ಅಭಿವೃದ್ಧಿ ನಿಗಮಗಳು ಹಿಂದುಳಿದ ವರ್ಗಗಳು, ಅಲೆಮಾರಿ ಜನಾಂಗ, ಮಹಿಳೆಯರು, ನಿರುದ್ಯೋಗಿ ಪದವೀಧರರು ಮತ್ತು ಇತರ ಗುಂಪುಗಳಿಗೆ ಸ್ವ-ಉದ್ಯೋಗಕ್ಕಾಗಿ ಸಾಲ, ಸಹಾಯಧನ, ಸಬ್ಸಿಡಿ ಮತ್ತು ತರಬೇತಿಯಂತಹ ಆರ್ಥಿಕ ನೆರವು ನೀಡುತ್ತವೆ. 1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಗಂಗಾ ಕಲ್ಯಾಣ ಯೋಜನೆ 2. ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)…
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ನಡೆಸುವ ನೇಮಕಾತಿ ಪರೀಕ್ಷೆಗಳಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಸ್ಥಳಗಳಲ್ಲಿ ಮುಖ ದೃಢೀಕರಣಕ್ಕೆ(Face authentication) ಒಳಗಾಗುತ್ತಾರೆ ಎಂದು ಯುಪಿಎಸ್ ಸಿ ತಿಳಿಸಿದೆ. ಈ ನವೀಕರಣವನ್ನು ಶುಕ್ರವಾರ (ಜನವರಿ 9) UPSC ಯ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಲಾಗಿದೆ. ಸೆಪ್ಟೆಂಬರ್ 2025 ರ ಆರಂಭದಲ್ಲಿ, ಎರಡು ಪರೀಕ್ಷೆಗಳ ಸಮಯದಲ್ಲಿ ತ್ವರಿತ ಮತ್ತು ಸುರಕ್ಷಿತ ಅಭ್ಯರ್ಥಿ ಪರಿಶೀಲನೆಗಾಗಿ AI- ಸಕ್ರಿಯಗೊಳಿಸಿದ ಮುಖದ ದೃಢೀಕರಣ ತಂತ್ರಜ್ಞಾನವನ್ನು ಪರೀಕ್ಷಿಸಲು ಆಯೋಗವು ಒಂದು ಪ್ರಾಯೋಗಿಕ ಕಾರ್ಯಕ್ರಮವನ್ನು ನಡೆಸಿತು. ರಾಷ್ಟ್ರೀಯ ಇ-ಆಡಳಿತ ವಿಭಾಗದ (NeGD) ಸಹಾಯದಿಂದ ಪೈಲಟ್ ಅನ್ನು ನಡೆಸಲಾಯಿತು. ಈ ಉಪಕ್ರಮವು ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ಬಲಪಡಿಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಪ್ರವೇಶದ ಸುಲಭತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತದೆ ಎಂದು UPSC ಹೇಳಿದೆ. ಭಾರತೀಯ ಆಡಳಿತ ಸೇವೆ(IAS), ಭಾರತೀಯ ವಿದೇಶಾಂಗ ಸೇವೆ(IFS) ಮತ್ತು ಭಾರತೀಯ ಪೊಲೀಸ್ ಸೇವೆ(IPS) ಸೇರಿದಂತೆ ಇತರ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆ ಸೇರಿದಂತೆ ಸರ್ಕಾರಿ ಉದ್ಯೋಗಗಳಿಗೆ ಆಯೋಗವು…
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು” ಸೇವೆಗಳನ್ನು ನೀಡಲಾಗುತ್ತಿದೆ. ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಜನರು ತಾಲ್ಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿರುತ್ತದೆ. ಪ್ರತಿಯೊಂದು ತಾಲ್ಲೂಕು ಗಳು 30-40 ಗ್ರಾಮ ಪಂಚಾಯತಿಗಳನ್ನು ಹಾಗೂ ಪ್ರತಿಯೊಂದು ಹೋಬಳಿಯಲ್ಲಿ ಆರರಿಂದ ಏಳು ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ. ಈ ಎಲ್ಲಾ ಗ್ರಾಮ ಪಂಚಾಯತಿಯ ಸುಮಾರು 20-50 ಸಾವಿರ ಜನರು ಸರ್ಕಾರಿ ಸೇವೆಯನ್ನು ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ…
ಹೈದರಾಬಾದ್ : ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ತಂದೆ-ತಾಯಿಯ ಆಸ್ತಿಯಲ್ಲಿ ವಾಸಿಸುವ ಹಕ್ಕಿಲ್ಲ ಎಂದು ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತೆಲಂಗಾಣ ಹೈಕೋರ್ಟ್ ಕಳೆದ ವಾರ ಪತಿ ಮತ್ತು ಪತ್ನಿಗೆ ತನ್ನ ಹೆತ್ತವರಿಗೆ ಮಾಸಿಕ 6,000 ರೂ.ಗಳ ಜೀವನಾಂಶವನ್ನು ಪಾವತಿಸುವಂತೆ ಮತ್ತು ಸಾಕಷ್ಟು ಆರೈಕೆಯನ್ನು ನೀಡುವಂತೆ ಆದೇಶಿಸಿತ್ತು, ವಿಶೇಷವಾಗಿ ಹಾಸಿಗೆ ಹಿಡಿದಿರುವ ತಾಯಿಗೆ, ಇಲ್ಲದಿದ್ದರೆ ಅವರು ತಮ್ಮ ಹೆತ್ತವರ ಆಸ್ತಿಯಲ್ಲಿ ವಾಸಿಸಲು ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ವಿಕಲಚೇತನರು, ಹಿರಿಯ ನಾಗರಿಕರು ಮತ್ತು ತೃತೀಯ ಲಿಂಗಿ ವ್ಯಕ್ತಿಗಳ ಸಬಲೀಕರಣ ಇಲಾಖೆಯ ಆದೇಶವನ್ನು ಕಾನೂನುಬಾಹಿರ, ನಿರಂಕುಶ ಮತ್ತು ಅನುಚ್ಛೇದ 14 ರ ಉಲ್ಲಂಘನೆ ಎಂದು ಘೋಷಿಸಲು ನ್ಯಾಯಾಲಯದ ಮಧ್ಯಸ್ಥಿಕೆಯನ್ನು ಕೋರಿ 71 ವರ್ಷ ಮತ್ತು 66 ವರ್ಷ ವಯಸ್ಸಿನ ಸಿಕಂದರಾಬಾದ್ ಮೂಲದ ದಂಪತಿ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಮಾಧವಿ ದೇವಿ ಅವರು ಜನವರಿ 6 ರಂದು ಈ ಆದೇಶ ನೀಡಿದ್ದಾರೆ. ಮತ್ತು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು…
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಜಹಿದುಲ್ ಇಸ್ಲಾಂ (35) ಹಾಗೂ ಫಿರ್ದೋಸ್ ಎನ್ನುವ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು 2 ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು. ನಕಲಿ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಬಾಲಕಿಯ ರೇಪ್ & ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಬಾಲಕಿ ರೇಪ್ & ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಬೆಚ್ಚಿ ಬೀಳಿಸೋ ಕ್ರೌರ್ಯ ಬಯಲಾಗಿದೆ. 6 ವರ್ಷದ ಕಂದಮ್ಮನ ಮೇಲೆ ದುಷ್ಕರ್ಮಿ ಮೃಗದ ರೀತಿ ಕ್ರೌರ್ಯ ನಡೆಸಿದ್ದಾನೆ. ಕಂದಮ್ಮನ ಮೇಲೆ ಯೂಸುಫ್ ಅತ್ಯಾಚಾರ ಎಸಗಿದ್ದಾನೆ. ತನಿಖೆ ವೇಳೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಪತ್ತೆಯಾಗಿದೆ. ಘಟನೆ ಹಿನ್ನೆಲೆ ಕೊಲ್ಕತ್ತಾ ಮೂಲದ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿ ಯೂಸುಫ್ ಪರಾರಿಯಾಗಿದ್ದ. ಅಲ್ಲದೆ ಶವವನ್ನು ಚರಂಡಿಗೆ ಎಸೆದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾನೆ. ವೈಟ್ ಫೀಲ್ಡ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ. ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲು ಬೀದರ್ ಆಸ್ಪತ್ರೆಗೆ ಹೋಗಿದ್ದ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಆಸ್ಪತ್ರೆ ಲಿಫ್ಟ್ ಏಕಾಏಕಿ ಕೈಕೊಟ್ಟಿದ್ದರಿಂದ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ಲಿಫ್ಟ್ ರಿಪೇರಿ ಮಾಡಿ ಬಾಗಿಲು ತೆರೆದಾಗ ಸಚಿವರು, ಎಂಎಲ್ ಸಿ ಲಿಫ್ಟ್ ನಿಂದ ಹೊರ ಬಂದಿದ್ದಾರೆ. 102 ವರ್ಷದ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲ ದಿನಗಳಿಂದ ಬೀದರ್ ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಣ್ಣ ಖಂಡ್ರೆ ಭೇತಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಪುತ್ರನೇ ತಂದೆಯನ್ನು ರಾಡ್ ನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಾಡ್ ನಿಂದ ಹೊಡೆದು ಸತೀಶ್ (60) ಕೊಲೆಗೈದ ಪುತ್ರ ರಂಜಿತ್. ಕೌಟುಂಬಿಕ ಕಲಹದಿಂದ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಿದ್ದ ತಾಯಿ,ಮಗ, ಇದೇ ವಿಚಾರಕ್ಕೆ ತಂದೆಯ ಜೊತೆಗೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಕೂಡ ಜಗಳವಾಗಿದ್ದು, ಈ ವೇಳೆ ಸ್ಟೀಲ್ ರಾಡ್ ನಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.














