Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್‌ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ…
ಬೆಳಗಾವಿ : ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ರದ್ದಾಗಿದ್ದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ, ಬಿಪಿಎಲ್ ಗೆ ಅರ್ಹವಲ್ಲದ ಕಾರ್ಡ್ ಗಳನ್ನು ಮಾತ್ರ ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾಗಿದ್ದರೂ ತೆರಿಗೆ ಪಾವತಿಸಿದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ. ತೆರಿಗೆ ಪಾವತಿಸದಿದ್ದರೆ ಮಾತ್ರ ಹಣ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ ಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು 2023ರ ಡಿಸೆಂಬರ್ ಮಾಹೆಯಿಂದ 2025ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308-ಎಎ ಮತ್ತು 308-ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ಸಾರ್ವತ್ರಿಕ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಅನುಬಂಧದಲ್ಲಿ ತೋರಿಸಲಾಗಿದೆ. ಜಿಲ್ಲಾಧಿಕಾರಿಗಳು, ಆಯೋಗವು ಆದೇಶಿಸಿರುವ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವು ನಿಯಮಗಳು, 1993ರ ನಿಯಮ 12ರ ಅಡಿಯಲ್ಲಿ ಚುನಾವಣಾ ಅಧಿಸೂಚನೆಯನ್ನು ಪ್ರಪತ್ರ-2 ರಲ್ಲಿ ಹೊರಡಿಸತಕ್ಕದ್ದು ಹಾಗೂ ಹೊರಡಿಸಲಾದ ಅಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು. ಪ್ರಕಟಿಸಿದ ಅಧಿಸೂಚನೆ ಪ್ರತಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಕಛೇರಿಯ ಸೂಚನಾ ಫಲಕದ ಮೇಲೆ ಹಾಗೂ ಇನ್ನಿತರ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ. https://twitter.com/siddaramaiah/status/1859293490838110658?ref_src=twsrc%5Etfw
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ಅವಘಡದಲ್ಲಿ ಯುವತಿ ಮೃತಪಟ್ಟ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಎಲೆಕ್ಟ್ರೀಕ್ ಬೈಕ್ ಶೋರೂಂ ಅಗ್ನಿ ಅವಘಡ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿರುವುದು ತಿಳಿದುಬಂದಿದೆ. ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ ಬಿಎನ್ ಎಸ್ ಸೆಕ್ಷನ್ 106ರಡಿ ಪ್ರಕರಣ ದಾಖಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆಯೇ? ಅಥವಾ ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಬೈಕ್ ಚಾಲನೆ ಮಾಡುವಾಗ ತುಂಬ ಜನರು ಮೊಬೈಲ್ ಬಳಸುತ್ತಾರೆ. ಆದರೆ ಕೆಲವೊಂದು ಸಣ್ಣ ಅಜಾಗುರೂಕತೆ ಅಪಘಾತಕ್ಕೆ ಕಾರಣವಾಗಬಹುದು. ಸ್ಕೂಟರ್ ಚಾಲಕರೊಬ್ಬರು ಇದೇ ರೀತಿಯ ಕೆಲಸವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಮೊಬೈಲ್ ನಲ್ಲಿ ಮಾತನಾಡುತ್ತ ಬೈಕ್ ಚಾಲನೆ ಮಾಡುತ್ತಿದ್ದ ಸವಾರ ಎದುರಿನಿಂದ ಬರುತ್ತಿದ್ದ ಕಾರಿಗೆ ಸ್ಕೂಟರ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದು ವ್ಯಕ್ತಿಯು ತನ್ನ ಫೋನ್‌ನಲ್ಲಿ ನಿರತನಾಗಿದ್ದರಿಂದ ಬಲ ತಿರುವು ತೆಗೆದುಕೊಳ್ಳಲು ತಡಮಾಡಿದ್ದಾನೆ ಎಂದು ತೋರಿಸಿದೆ. https://twitter.com/i/status/1856988671867801801 ವೀಡಿಯೋ ಶೇರ್ ಆದ ಬಳಿಕ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಹೆಚ್ಚಿನ ಜನರು ವ್ಯಕ್ತಿಯ ಅಸಡ್ಡೆಯನ್ನು ಖಂಡಿಸಿದರು, ಇತರರು ಮೊಬೈಲ್ ಫೋನ್‌ಗಳ ಇಂತಹ ಅಸಡ್ಡೆ ಬಳಕೆ ಸಾಮಾನ್ಯವಾಗಿದೆ ಎಂದು ಹೇಳಿದರು. ಈ ಘಟನೆ ಸ್ಕೂಟರ್ ಸವಾರರಿಗೆ ಪಾಠ ಎಂದು ಹಲವರು ಬಣ್ಣಿಸಿದ್ದಾರೆ.
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ ಹೇರ್ ಡ್ರೈಯರ್ ಸ್ವೀಚ್ ಆನ್ ಮಾಡಿದ ತಕ್ಷಣ ಬ್ಲಾಸ್ಟ್ ಆಗಿದ್ದು, ಇಳಕಲ್ ನಗರದ ಬಸಮ್ಮ ಎಂಬ ಮಹಿಳೆಯ ಎರಡೂ ಕೈಗಳು ಛಿದ್ರವಾಗಿದೆ. ಸದ್ಯ ಬಸಮ್ಮಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬ್ರಾಹ್ಮ ವಿವಾಹ ಆಚರಣೆಗಳಲ್ಲಿ ವರನು ವಧುವಿಗೆ ಅರುಂಧತಿ ನಕ್ಷತ್ರ ತೋರಿಸುವುದು ಮುಖ್ಯ ಸಂಪ್ರದಾಯವಾಗಿದೆ. ವಶಿಷ್ಠ (Mizar) ಹಾಗೂ #ಅರುಂಧತಿ (Alcor) ಅವಳಿ ನಕ್ಷತ್ರಗಳು. ಸಪ್ತರ್ಷಿ ಮಂಡಲದ (Ursa Major) ತುದಿಯಿಂದ ಮರೀಚಿಯ (Alkaid) ನಂತರದ ಎರಡನೆಯ ಸ್ಥಾನ ವಶಿಷ್ಠ ಹಾಗೂ ಅದಕ್ಕೆ ಅಂಟಿಕೊಂಡಂತೆ ಪಕ್ಕದಲ್ಲಿರುವುದೇ ಅರುಂಧತಿ ನಕ್ಷತ್ರ. ಇವೆರಡೂ ಅವಳಿ ನಕ್ಷತ್ರಗಳು. ಖಗೋಳಶಾಸ್ತ್ರದಲ್ಲಿ ಅವಳಿ ನಕ್ಷತ್ರಗಳೆಂದರೆ ಒಂದು ನಕ್ಷತ್ರವನ್ನು ಇನ್ನೊಂದು ನಕ್ಷತ್ರವು ಸುತ್ತುವುದು. ಆದರೆ ವಶಿಷ್ಠ-ಅರುಂಧತಿಯ ವಿಷಯದಲ್ಲಿ ಈ ನಿಯಮ ಬೇರೆ ಆಯಾಮ ಹೊಂದಿದೆ. ವಶಿಷ್ಠ-ಅರುಂಧತಿಗಳು ಪರಸ್ಪರ ಒಂದರ ಸುತ್ತು ಇನ್ನೊಂದು ಸುತ್ತುತ್ತವೆ. ಇದು ಖಗೋಳ ಸೋಜಿಗ. ಮತ್ತೆಲ್ಲಿಯೂ ಇಂಥ ಉದಾಹರಣೆಗಳಿಲ್ಲ. ವಶಿಷ್ಠ-ಅರುಂಧತಿ ನಕ್ಷತ್ರಗಳು ಪರಸ್ಪರ ಒಂದರ ಸುತ್ತ ಇನ್ನೊಂದು ಸದಾ ಸುತ್ತುತ್ತಿರುತ್ತವೆಯೆಂಬ ವಿಷಯವನ್ನು ಆಧುನಿಕ ಖಗೋಳ ಶಾಸ್ತ್ರಜ್ಞರು ಪತ್ತೆ ಹಚ್ಚಿದ್ದಾರೆ. ಪೌರಾಣಿಕವಾಗಿ ವಶಿಷ್ಠ-ಅರುಂಧತಿಯರದು ಆದರ್ಶ ಜೋಡಿ. ಅವರು ಪರಸ್ಪರ ಗೌರವ ಕೊಟ್ಟು ಆದರ್ಶ ಬದುಕು ನಡೆಸುತ್ತಾರೆ. ಎಂಥ ಕಠಿಣ ಸಮಯದಲ್ಲಿಯೂ ಲೋಕಕಲ್ಯಾಣಕ್ಕಾಗಿ ಕಂಕಣಬದ್ಧರಾಗಿರುತ್ತಾರೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಇವರು ಬಾಳುವ…
ಮಂಗಳೂರು : ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ (82) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ರಾಜಶೇಖರ್ ಅವರು ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು. ದಲಿತರ ಹಕ್ಕುಗಳಿಗಾಗಿ ವಾದಿಸಲು 1981 ರಲ್ಲಿ ದಲಿತ್ ವಾಯ್ಸ್ ಅನ್ನು ಪ್ರಾರಂಭಿಸಿದರು.ಇದಕ್ಕೂ ಮೊದಲು ದಿ ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದರು. ನಿಯತಕಾಲಿಕದಲ್ಲಿ ಅವರ ಬರಹಗಳು ದೇಶಾದ್ಯಂತ ವ್ಯಾಪಕ ಚರ್ಚೆಗಳನ್ನು ಹುಟ್ಟುಹಾಕಿದವು.