Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ದೆಹಲಿಯ ಶಾಹದರಾ ಪ್ರದೇಶದ ವಿವೇಕ್ ವಿಹಾರ್ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 3 ರಿಂದ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಟ್ಟಡ ಆವೃತವಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ, ಹಲವಾರು ಅಗ್ನಿಶಾಮಕ ವಾಹನಗಳೊಂದಿಗೆ (Fire Tenders) ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಟ್ಟಡದೊಳಗೆ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. https://twitter.com/ANI/status/2050771059306283452?s=20
ಲಕ್ನೋ: ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ದುರುಪಯೋಗದ ಕುರಿತು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ಕೇವಲ ಒಬ್ಬ ವ್ಯಕ್ತಿಯನ್ನು ಅವರ ಜಾತಿಯ ಹೆಸರಿನಿಂದ ಸಂಬೋಧಿಸಿದ ತಕ್ಷಣವೇ ಅದು ಈ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಪ್ರಮುಖ ಅವಲೋಕನಗಳು: ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರ ಏಕಸದಸ್ಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ಕೆಳಗಿನ ಅಂಶಗಳನ್ನು ಒತ್ತಿ ಹೇಳಿದೆ. ಸಂತ್ರಸ್ತನನ್ನು ಜಾತಿಯ ಹೆಸರಿನಲ್ಲಿ ಅವಮಾನಿಸುವ, ಬೆದರಿಸುವ ಅಥವಾ ಸಾರ್ವಜನಿಕವಾಗಿ ಕೀಳಾಗಿ ಕಾಣುವ ಸ್ಪಷ್ಟವಾದ ‘ದುರುದ್ದೇಶ’ ಇದ್ದಾಗ ಮಾತ್ರ ಅದನ್ನು ಅಟ್ರಾಸಿಟಿ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಬಹುದು. ವೈಯಕ್ತಿಕ ಜಗಳಗಳಿಗೆ ಅನ್ವಯಿಸದು: ವೈಯಕ್ತಿಕ ಜಗಳ ಅಥವಾ ಹಲ್ಲೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾತಿಯ ಪ್ರಸ್ತಾಪ ಬಂದ ತಕ್ಷಣವೇ ಅದನ್ನು ದೌರ್ಜನ್ಯ ಕಾಯ್ದೆಯಡಿ ತರುವುದು ಕಾನೂನಿನ ದುರುಪಯೋಗವಾಗುತ್ತದೆ. ಸಾರ್ವಜನಿಕ ಸ್ಥಳದ ನಿಯಮ: ಆರೋಪಿಯು ಸಂತ್ರಸ್ತನ ಸಾಮಾಜಿಕ ವರ್ಗವನ್ನು ಗುರಿಯಾಗಿಸಿಕೊಂಡು ಸಾರ್ವಜನಿಕವಾಗಿ ಅವಮಾನಿಸುವ ಉದ್ದೇಶ ಹೊಂದಿರಬೇಕು. ಪ್ರಕರಣದ ಹಿನ್ನೆಲೆ: 2019ರಲ್ಲಿ ಅಮೇಯ್ ಪಾಂಡೆ…
ಇಂದಿನ ಡಿಜಿಟಲ್ ಯುಗದಲ್ಲಿ ಯುಪಿಐ (UPI) ವಹಿವಾಟುಗಳು ಹೆಚ್ಚಾಗಿದ್ದರೂ, ವ್ಯಾಪಾರ ಮತ್ತು ವೈಯಕ್ತಿಕ ಹಣಕಾಸು ವ್ಯವಹಾರಗಳಲ್ಲಿ ‘ಚೆಕ್’ (Cheque) ಇಂದಿಗೂ ಅತ್ಯಂತ ವಿಶ್ವಾಸಾರ್ಹ ಸಾಧನವಾಗಿದೆ. ಆದರೆ, ಸಹಿ ಮಾಡಿ ಬೇರೆಯವರಿಗೆ ಚೆಕ್ ನೀಡುವಾಗ ಸರಿಯಾದ ಮುನ್ನೆಚ್ಚರಿಕೆ ವಹಿಸದಿದ್ದರೆ, ಅದು ಕೇವಲ ಆರ್ಥಿಕ ನಷ್ಟ ಮಾತ್ರವಲ್ಲದೆ ನಿಮ್ಮನ್ನು ಜೈಲಿಗೂ ಕಳುಹಿಸಬಹುದು. ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್‌ನ ಸೆಕ್ಷನ್ 138 (Section 138) ಅಡಿಯಲ್ಲಿ ಚೆಕ್ ಬೌನ್ಸ್ ಆಗುವುದು ಗಂಭೀರ ಅಪರಾಧವಾಗಿದೆ. ಈ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು ಇಲ್ಲಿವೆ: ಸೆಕ್ಷನ್ 138 ಎಂದರೇನು? ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಉಳಿಸಲು ಈ ಕಟ್ಟುನಿಟ್ಟಿನ ನಿಯಮವನ್ನು ತರಲಾಗಿದೆ. ವ್ಯಕ್ತಿಯೊಬ್ಬ ತನ್ನ ಹಣಕಾಸಿನ ಜವಾಬ್ದಾರಿಯನ್ನು ತೀರಿಸಲು ನೀಡಿದ ಚೆಕ್ ಬ್ಯಾಂಕಿನಲ್ಲಿ ತಿರಸ್ಕೃತಗೊಂಡರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಚೆಕ್ ಬೌನ್ಸ್ ಆಗಲು ಪ್ರಮುಖ ಕಾರಣಗಳು: ಖಾತೆಯಲ್ಲಿ ಸಾಕಷ್ಟು ಹಣವಿಲ್ಲದಿರುವುದು (Insufficient Funds). ಚೆಕ್ ಕ್ಲಿಯರ್ ಆಗುವ ಮೊದಲೇ ಬ್ಯಾಂಕ್ ಖಾತೆಯನ್ನು ಮುಚ್ಚುವುದು. ಸಹಿ ತಾಳೆಯಾಗದಿರುವುದು ಅಥವಾ…
ಬೆಂಗಳೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯಲ್ಲಿ ತರಹೇವಾರಿ ಮಾವಿನ ಹಣ್ಣುಗಳು ಲಭ್ಯವಿವೆ. ಆದರೆ, ಮಾವಿನ ಹಣ್ಣಿನ ಮೇಲಿರುವ ಮೋಹದಿಂದ ನೀವು ಮಾರುಕಟ್ಟೆಗೆ ಹೋದಾಗ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಹಣ್ಣುಗಳನ್ನು ಬೇಗ ಹಣ್ಣಾಗಿಸಲು ವ್ಯಾಪಾರಿಗಳು ಬಳಸುತ್ತಿರುವ ಅಪಾಯಕಾರಿ ರಾಸಾಯನಿಕಗಳು ನಿಮ್ಮ ಹೊಟ್ಟೆಯನ್ನು ಸೇರುತ್ತಿವೆ. ಕ್ಯಾಲ್ಸಿಯಂ ಕಾರ್ಬೈಡ್ ಎಂಬ ‘ನಿಧಾನ ವಿಷ’ ಹೆಚ್ಚಿನ ಲಾಭದ ಆಸೆಗೆ ಬಿದ್ದ ಕೆಲವು ವ್ಯಾಪಾರಿಗಳು ಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣಾಗಲು ಬಿಡದೆ, ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ಎಂಬ ರಾಸಾಯನಿಕವನ್ನು ಬಳಸುತ್ತಿದ್ದಾರೆ. ಇದನ್ನು ಸಾಮಾನ್ಯ ಭಾಷೆಯಲ್ಲಿ ‘ಮಸಾಲೆ’ ಎನ್ನಲಾಗುತ್ತದೆ.ಇದರಲ್ಲಿ ಆರ್ಸೆನಿಕ್ ಮತ್ತು ಫಾಸ್ಫರಸ್ ಅಂಶಗಳಿದ್ದು, ಇದು ಮಾನವನ ಆರೋಗ್ಯಕ್ಕೆ ತೀವ್ರ ಹಾನಿಕಾರಕ. ಈ ಹಣ್ಣುಗಳನ್ನು ಸೇವಿಸುವುದರಿಂದ ತಲೆತಿರುಗುವಿಕೆ, ವಾಂತಿ, ಅತಿಸಾರ ಮತ್ತು ದೀರ್ಘಕಾಲದ ಬಳಕೆಯಿಂದ ಕ್ಯಾನ್ಸರ್‌ನಂತಹ ಭೀಕರ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಕೃತಕವಾಗಿ ಹಣ್ಣಾಗಿಸಿದ ಮಾವಿನ ಹಣ್ಣನ್ನು ಗುರುತಿಸುವುದು ಹೇಗೆ? ಮಾರುಕಟ್ಟೆಯಲ್ಲಿ ಹಣ್ಣುಗಳನ್ನು ಖರೀದಿಸುವಾಗ ಈ ಕೆಳಗಿನ ವ್ಯತ್ಯಾಸಗಳನ್ನು ಗಮನಿಸಿ:…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ರಾಜ್ಯ ಸರ್ಕಾರವು ‘8 ಗ್ಯಾರಂಟಿ’ಗಳನ್ನೊಳಗೊಂಡ ವಿಶೇಷ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಾಲಾ ಶಿಕ್ಷಣದಲ್ಲಿ ದೀರ್ಘಕಾಲದಿಂದ ಇರುವ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ಸಮಸ್ಯೆಗಳನ್ನು ನೀಗಿಸಿ, ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವಂತೆ ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷಣಕ್ಕೆ ‘ಅಷ್ಟ ಗ್ಯಾರಂಟಿ’ಗಳು: ಗ್ಯಾರಂಟಿ 1- ಶಿಕ್ಷಕರ ಕೊರತೆ ಇನ್ನಿಲ್ಲ :5ನೇ ತರಗತಿವರೆಗೆ ತರಗತಿಗೊಬ್ಬರು ಹಾಗೂ 6ನೇ ತರಗತಿಯಿಂದ ವಿಷಯಕ್ಕೊಬ್ಬರಂತೆ ಶಿಕ್ಷಕರ ನೇಮಕ ಗ್ಯಾರಂಟಿ 2-ಪೋಷಕರು ಬಯಸುವ ಮಾಧ್ಯಮ : ಎಲ್ಲಾ ಶಾಲೆಗಳಲ್ಲೂ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ಲಭ್ಯ. ಇಂಗ್ಲಿಷ್ ಬೋಧನೆಗಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ಗ್ಯಾರಂಟಿ 3-ಉಚಿತ ಸಾರಿಗೆ ಸೌಲಭ್ಯ :ಕೆಪಿಎಸ್ ವಿದ್ಯಾರ್ಥಿಗಳಿಗೆ ಉಚಿತ…
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಣಹವೆ ಮುಂದುವರಿಯಲಿದ್ದು, ಹಗಲಿನ ವೇಳೆ ಬಿಸಿಲನ ತೀವ್ರತೆ ಹೆಚ್ಚಾಗಲಿದೆ. ಆದರೆ, ಸಂಜೆ ಅಥವಾ ರಾತ್ರಿ ವೇಳೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಮೇ 8ರವರೆಗೂ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಪ್ರಮಾಣ ತುಸು ಕಡಿಮೆಯಾಗಲಿದೆ. ನಂತರ ಮತ್ತೆ ಮಳೆ ಚುರುಕಾಗುವ ನಿರೀಕ್ಷೆಯಿದೆ.ಮಳೆ ಬಿದ್ದ ಕಡೆಗಳಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ವಾತಾವರಣವು ಸ್ವಲ್ಪ ಮಟ್ಟಿಗೆ ತಂಪಾಗಿದೆ. ಕಲಬುರಗಿಯಲ್ಲಿ ದಾಖಲೆಯ ತಾಪಮಾನ: 45.4 ಡಿಗ್ರಿ ಸೆಲ್ಸಿಯಸ್ ದಾಖಲು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ತಾಪ ತೀವ್ರವಾಗಿದ್ದು, ಜನರ ಜೀವನ…
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹಿರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024 ರಲ್ಲಿ 21 ರ ಅಡಿ ಕಲಂ 4 ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸತಕ್ಕದ್ದಲ್ಲ. ಬಳಿಸಿದ್ದಲ್ಲಿ ಎರಡು ನೂರು ರೂಪಾಯಿಗಳವರೆಗೆ ಇದ್ದ ದಂಡ (ಜುಲ್ಮಾನೆಯ)ದ ಬದಲಾಗಿ ಒಂದು ಸಾವಿರ ರೂಪಾಯಿಗಳವರೆಗೆ ದಂಡ (ಜುಲ್ಮಾನೆ) ವನ್ನು ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 21 ಎ ರ ಆಡಿ ಕಲಂ 4ಎ (ಹುಕ್ಕಾ ಬಾರ್ ನಡೆಸುವುದಕ್ಕಾಗಿ ದಂಡನೆ) ಪ್ರರಕಣದ ಉಪಬಂಧಗಳನ್ನು ಉಲ್ಲಂಘಿಸುವ ಯಾರೇ ವ್ಯಪ್ತಿಯು, ಒಂದು ವರ್ಷಕ್ಕೆ ಕಡಿಮೆಯಿಲ್ಲದ ಆದರೆ ಮೂರು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗೆ ಕಾರಗೃಹ ವಾಸ ಮತ್ತು 50 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿಲ್ಲದ ಆದರೆ 01…
ಬೆಂಗಳೂರು : ಸರ್ವೊಚ್ಚ ನ್ಯಾಯಾಲಯದ (ಸುಪ್ರಿಂ ಕೋರ್ಟ) ಅಂಗಳ ತಲುಪಿದ ಯಾವುದೇ ಬಗೆಯ ವ್ಯಾಜ್ಯಗಳ ಪರಿಹಾರಕ್ಕಾಗಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸರ್ವೋಚ್ಛ ನ್ಯಾಯಾಲಯವು ವಿಶೇಷ ಅಭಿಯಾನ ಹಮ್ಮಿಕೊಂಡಿದೆ ಎಂದು ಹೈಕೋರ್ಟನ ನ್ಯಾಯಮೂರ್ತಿ ಗೌರವಾನ್ವಿತ ಅನು ಶಿವರಾಮ್ ಅವರು ಹೇಳಿದರು. ಬೆಂಗಳೂರಿನ ಹೈಕೋರ್ಟ ಸಭಾಂಗಣದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಆಗಸ್ಟ್ 21, 22 ಮತ್ತು 23ರಂದು ಅಭಿಯಾನ ನಡೆಯಲಿದ್ದು, ರಾಜ್ಯದ ಯಾವುದೇ ಭಾಗದಲ್ಲಿನ ಪಕ್ಷಗಾರರು ತಾವು ಇರುವ ಸ್ಥಳದಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ವ್ಯಾಜ್ಯ ಪರಿಹಾರ ಮಾಡಿಕೊಳ್ಳಬಹುದು. ಪಕ್ಷಗಾರರಿಬ್ಬರು ಒಂದೆಡೆ ಸೇರಿ ವ್ಯಾಜ್ಯ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿಯಾನ ಹಿನ್ನೆಲೆಯಲ್ಲಿ ಎಲ್ಲ ಕಡೆಗಳಲ್ಲಿ ಈಗಾಗಲೇ 4328 ಕೇಸಗಳನ್ನು ಗುರುತಿಸಿದ್ದೇವೆ. ಜನತೆಯ ಸಮಯ ಮತ್ತು ಖರ್ಚು ವೆಚ್ಚ ಉಳಿಸಬೇಕು ಎಂದು ಯೋಜಿಸಿ ಅಭಿಯಾನ ರೂಪಿಸಲಾಗಿದೆ ಎಂದು ಅವರು ತಿಳಿಸಿದರು. ಸುಪ್ರೀಂ ಕೋರ್ಟನ ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಅವರು ಮಾತನಾಡಿ, ಈ ಅಭಿಯಾನ ಸರ್ವೊಚ್ಚ ನ್ಯಾಯಾಲಯದ ಐತಿಹಾಸಿಕ ಪ್ರಥಮ…
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಂತಿಮ ಚಿತ್ರಣ ಈಗ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಶನಿವಾರ ಸಂಜೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯು ಮಧ್ಯರಾತ್ರಿಯವರೆಗೂ ಮುಂದುವರಿಯಿತು. ಈ ವೇಳೆ 2023ರ ಚುನಾವಣೆಯ ಸಮಯದಲ್ಲಿ ‘ಸಿಂಧು’ ಎಂದು ಪರಿಗಣಿಸಲಾಗಿದ್ದ ಹಲವು ಮತಗಳು ಈಗ ‘ಅಸಿಂಧು’ ಎಂದು ಘೋಷಿಸಲ್ಪಟ್ಟಿವೆ. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ ಬರೋಬ್ಬರಿ 255 ಮತಗಳು ಕಡಿತಗೊಂಡಿವೆ. ಮತಪತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರಿನ ಮುಂದೆ ‘ಡಬಲ್ ಟಿಕ್’ ಮಾಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ. ಕಾಂಗ್ರೆಸ್ ಆಕ್ರೋಶ ಮತ್ತು ಟ್ಯಾಂಪರಿಂಗ್ ಆರೋಪ ಮರು ಎಣಿಕೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್…
ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಮೇ ಮೂರನೇ ವಾರದಿಂದ ರಾಜ್ಯದ ರಸ್ತೆಗಳಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಅನುಮಾನವಾಗಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವೇತನ ಹೆಚ್ಚಳ ಮತ್ತು ಬಾಕಿ ಇರುವ ವೇತನದ ಹಿಂಬಾಕಿ ಪಾವತಿ ಕುರಿತು ಸರ್ಕಾರ ಹಾಗೂ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ನಡುವೆ ನಡೆದ ಸುಮಾರು 12 ಸುತ್ತಿನ ಮಾತುಕತೆಗಳು ಫಲಪ್ರದವಾಗಿಲ್ಲ. ನೌಕರರ ಬೇಡಿಕೆಗಳಿಗೆ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ಸಮಿತಿಯು ತಿರಸ್ಕರಿಸಿದ್ದು, ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದೆ. ನೌಕರರ ಪ್ರಮುಖ ಬೇಡಿಕೆಗಳು ಇಲ್ಲಿವೆ: ಸಾರಿಗೆ ನೌಕರರ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಐದು ಬೇಡಿಕೆಗಳನ್ನು ಇಟ್ಟಿವೆ: 38 ತಿಂಗಳ ಹಿಂಬಾಕಿ: ಬಾಕಿ ಇರುವ ಸಂಪೂರ್ಣ 38 ತಿಂಗಳ ವೇತನದ ಹಿಂಬಾಕಿಯನ್ನು ಕೂಡಲೇ ಪಾವತಿಸಬೇಕು. ವೇತನ ಹೆಚ್ಚಳ: 2024ರ ಜನವರಿ 1 ರಿಂದ ಜಾರಿಗೆ ಬರುವಂತೆ…














