Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಅಂತರ್ಜಾತಿ ವಿವಾಹವಾಗುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಅಂತರ್ಜಾತಿ ವಿವಾಹವಾಗುವವರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಿದೆ. ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಪರಿಶಿಷ್ಟ ಜಾತಿಯ ಉಪ ಜಾತಿಗಳ ಯುವತಿ/ಯುವಕರನ್ನು ವಿವಾಹವಾದಲ್ಲಿ ಒಳ ಪಂಗಡಗಳ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಡಿ 2 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹತೆ ದಂಪತಿಗಳು ಪರಿಶಿಷ್ಟ ಜಾತಿ(SC)ಯ ಬೇರೆ ಬೇರೆ ಉಪಜಾತಿಯವರಾಗಿರಬೇಕು. ವಯೋಮಿತಿ – ಯುವಕ 21 ರಿಂದ 45 ವರ್ಷ ಹಾಗೂ ಯುವತಿ 18 ರಿಂದ 42 ವರ್ಷ. ಅಂತರ್ಜಾತಿ ವಿವಾಹ/ವಿಧವಾ ಮರು ವಿವಾಹ ಪ್ರೋತ್ಸಾಹಧನ ಪಡೆದವರು ಇದಕ್ಕೆ ಅರ್ಹರಲ್ಲ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ : https://swdservices.karnataka.gov.in/swincentive/Intracaste/IntracasteHaHome.aspx
ಅಹ್ಮದಾಬಾದ್ : ಅಹ್ಮದಾಬಾದ್ ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ 2024 ರ ಪಂದ್ಯದ ಸಮಯದಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಬೆಂಬಲಿಗರ ನಡುವೆ ನಡೆದ ಘರ್ಷಣೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಬ್ಬರೂ ಕ್ರಿಕೆಟಿಗರ ಅಭಿಮಾನಿಗಳು ದೈಹಿಕ ವಾಗ್ವಾದದಲ್ಲಿ ತೊಡಗಿರುವುದನ್ನು ತುಣುಕು ತೋರಿಸುತ್ತದೆ, ಇತರರು ಮಧ್ಯಪ್ರವೇಶಿಸಿ ಗೊಂದಲವನ್ನು ಶಮನಗೊಳಿಸಲು ಪ್ರಯತ್ನಿಸುತ್ತಿದ್ದಾರೆ. https://twitter.com/Satya_Prakash08/status/1772104121254097141?ref_src=twsrc%5Etfw%7Ctwcamp%5Etweetembed%7Ctwterm%5E1772104121254097141%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F ಹಾರ್ದಿಕ್ ಪಾಂಡ್ಯ ಅಭಿಮಾನಿಗಳು ರೋಹಿತ್ ಶರ್ಮಾ ಅಭಿಮಾನಿಗಳನ್ನು ನಿಂದಿಸಿದ್ದಾರೆ. ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ನ ಒಂದು ಕೆಟ್ಟ ನಿರ್ಧಾರವು ಮುಂಬೈ ಇಂಡಿಯನ್ಸ್ ತಂಡವನ್ನು ಸಂಪೂರ್ಣವಾಗಿ ಮುರಿದಿದೆ ಮತ್ತು ಅಭಿಮಾನಿಗಳನ್ನು ಭಾಗಶಃ ವಿಭಜಿಸಿದೆ” ಎಂದು ವೈರಲ್ ವೀಡಿಯೊವನ್ನು ಹಂಚಿಕೊಂಡ ಎಕ್ಸ್ ಬಳಕೆದಾರರು ಬರೆದಿದ್ದಾರೆ.
ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ನದಿಯಲ್ಲಿ ಮರಳಿನ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿಯಲ್ಲಿ ನದಿಯಲ್ಲಿದ್ದ ಗುಂಡಿಯಲ್ಲಿ ಮುಳುಗಿ ಸಹೋದರರ ಸಾವನ್ನಪ್ಪಿರುವ ಘಟನೆ ನಡೆದಿದೆ. ನದಿಹರಳಹಳ್ಳಿ ಗ್ರಾಮದ ಮಂಜಪ್ಪ ರೇಖಾಮ್ಮ ದಂಪತಿಗಳ ಪುತ್ರರಾದ ಬಸವರಾಜ್ ಪವಾರ (12), ನಾಗರಾಜ್ ಪವಾರ್ (10) ಸಾವನ್ನಪ್ಪಿದ ದುರ್ದೈವಿಗಳು. ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ತುಮಕೂರು: ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಂಕಿಕೊಂಡದಲ್ಲಿ ಬಿದ್ದ ಅರ್ಚಕ ಮತ್ತು ಮಗ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ದಂಡಿನ ಮಾರಮ್ಮ ದೇವಿ ಜಾತ್ರಾ ಪ್ರಯುಕ್ತ ನಡೆದ ಬೆಂಕಿಕೊಂಡ ಹಾಯುವಾಗ ಬಿದ್ದು ಅರ್ಚಕ ವೆಂಕಟಪ್ಪ ಹಾಗೂ ಮಗ ಕೃಷ್ಣ ಮೂರ್ತಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನೂ ಬೆಳ್ಳೂರು ಕ್ರಾಸ್ ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರ್ಚಕ ಹಾಗೂ ಅವರ ಪುತ್ರ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆ ದಿನವೇ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರದಲ್ಲಿ ರಸ್ತೆ ದಾಟುವಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ತಾಲೂಕಿನ ಜಂಬರಘಟ್ಟ ನಿವಾಸಿ ಉಮ್ಮೆ ಕೂಲ್ಸಂ ಎಂದು ಗುರುತಿಸಲಾಗಿದೆ. ಮತ್ತೊಂದು ದುರಂತದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆಂದೋಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪರಶುರಾಮ ಬಾಬು ಎಂದು ಗುರುತಿಸಲಾಗಿದೆ.
ಹೊಸಪೇಟೆ : ಕಲುಷಿತ ನೀರು ಕುಡಿದು 18 ಜನರು ಅಸ್ವಸ್ಥರಾಗಿರುವ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ. ನಲ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ನೀರು ಕುಡಿದ 18 ಜನರು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿನ ಪೈಪ್ ಲೈನ್ ಒಡೆದು ಕಲುಷಿತ ನೀರು ಮಿಕ್ಸ್ ಆಗಿರುವ ಆರೋಪದ ಜೊತೆಗೆ ಓವರ್ ಹೆಡ್ ಟ್ಯಾಂಕ್ ಸ್ವಚ್ಛ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಗಿದ್ದಾರೆ.
ಕೊಚ್ಚಿ : ಚುನಾವಣಾ ಬಾಂಡ್ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಚುನಾವಣಾ ಬಾಂಡ್ಗಳ ವಿವರಗಳು ದೊಡ್ಡ ಸಮಸ್ಯೆಯನ್ನು ಸೃಷ್ಟಿಸುತ್ತವೆ ಎಂದು ಸರ್ಕಾರಕ್ಕೆ (ಕೇಂದ್ರ) ತಿಳಿದಿದೆ ಎಂದು ಪಿಣರಾಯಿ ವಿಜಯನ್ ಹೇಳಿದರು. ಕೇಂದ್ರ ಸರ್ಕಾರ, ಬಿಜೆಪಿ, ಸಂಘ ಪರಿವಾರಕ್ಕೆ ಇದು ತಿಳಿದಿದೆ. ಆದ್ದರಿಂದ ಈ ಎಲ್ಲದರಿಂದ ರಾಷ್ಟ್ರದ ಗಮನವನ್ನು ಬೇರೆಡೆಗೆ ಸೆಳೆಯಲು, ದೆಹಲಿಯ ಮುಖ್ಯಮಂತ್ರಿಯನ್ನು ಬಂಧಿಸಲಾಯಿತು. ಇದು ನಮ್ಮ ದೇಶವು ಎಲ್ಲಿಗೆ ಕರೆದೊಯ್ಯುತ್ತಿದೆ ಎಂಬುದರ ಸೂಚನೆಯಾಗಿದೆ. ಅವರು ಈಗ ಜೈಲಿನಲ್ಲಿದ್ದಾರೆ. ನಾವು ಏನು ಬೇಕಾದರೂ ಮಾಡಬಹುದು ಮತ್ತು ಯಾರ ಬಗ್ಗೆಯೂ ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಸಂಘ ಪರಿವಾರದ ನೇತೃತ್ವದ ಬಿಜೆಪಿ ಸರ್ಕಾರದ ಧೋರಣೆಯಾಗಿದೆ” ಎಂದು ಪಿಣರಾಯಿ ವಿಜಯನ್ ಆರೋಪಿಸಿದರು. ಸಿಪಿಐ (ಎಂ) ಎಂದಿಗೂ ಚುನಾವಣಾ ಬಾಂಡ್ಗಳನ್ನು ಸ್ವೀಕರಿಸಲು ಸಿದ್ಧವಿಲ್ಲ ಮತ್ತು ಇದು ದೇಶ ಕಂಡ ಅತಿದೊಡ್ಡ ಭ್ರಷ್ಟಾಚಾರ ಹಗರಣವಾಗಿದೆ. ತಮ್ಮ ದೆಹಲಿ ಸಹವರ್ತಿಯ ಬಂಧನದ ಬಗ್ಗೆ ಮತ್ತಷ್ಟು…
ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದ್ದು ದಿ: 31-03-2022 ರವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಕ್ಕೀಡಾದ ಫಲಾನುಭವಿಗಳಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿರುತ್ತದೆ. ಫಲಾನುಭವಿ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್, ಪಂಚನಾಮ, ಇತರೆ ಸೂಕ್ತ ದಾಖಲಾತಿಗಳನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಇಲ್ಲಿ ನೀಡಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಎಸ್ ಸುಮ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾರ್ಚ್ ವಿದ್ಯುತ್ ಬಿಲ್ಗಳಿಗೆ ಯಾವುದೇ ವಿಳಂಬ ದಂಡ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಘೋಷಿಸಿದೆ. ಧನ ಇಲಾಖೆಯ ಸಾಫ್ಟ್ ವೇರ್ ವ್ಯವಸ್ಥೆ ಉನ್ನತೀಕರಣ ಪ್ರಯುಕ್ತ ಸ್ಥಗಿತಗೊಂಡಿದ್ದ ವಿದ್ಯುತ್ ಸರಬರಾಜು ಕಂಪನಿಗಳ (ಬೆಸ್ಕಾಂ) ಆನ್ ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆಗಳು ಪುನಾರಂಭಗೊಂಡಿವೆ.ಮಾರ್ಚ್ 10 ಮತ್ತು 19 ರ ನಡುವೆ ಬೆಸ್ಕಾಂಗೆ ಆನ್ ಲೈನ್ ವ್ಯವಸ್ಥೆಗೆ ತಾಂತ್ರಿಕ ನವೀಕರಣದ ನಂತರ ವಿದ್ಯುತ್ ಕಂಪನಿಯ ಈ ಕ್ರಮ ಬಂದಿದೆ. ಇದರಿಂದ ಉಂಟಾಗಿರುವ ಅನಾನುಕೂಲತೆಯನ್ನು ಮನಗಂಡಿರುವ ಬೆಸ್ಕಾಂ, ಮಾರ್ಚ್ ತಿಂಗಳ ವಿದ್ಯುತ್ ಬಿಲ್ ಮೇಲೆ ವಿಳಂಬ ಶುಲ್ಕ ವಿಧಿಸುವುದಿಲ್ಲ ಎಂದು ಘೋಷಿಸಿದೆ. ಬೆಸ್ಕಾಂ ಅಡಿಯಲ್ಲಿ ಬರುವ ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಗ್ರಾಹಕರು ವಿದ್ಯುತ್ ಬಿಲ್ ಪಾವತಿ ವಿಳಂಬವಾದರೆ ವಿಳಂಬ ಪಾವತಿ ಶುಲ್ಕ ಪಾವತಿಸಬೇಕಾಗಿಲ್ಲ.
ಮಂಡ್ಯ : ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಸಂಸದೆ ಸುಮಲತಾ ಅಂಬರೀಶ್ ಅತಂತ್ರರಾಗಿದ್ದು, ಇಂದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮಂಡ್ಯ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಜೆಪಿ ಶಾಕ್ ನೀಡಿದ್ದು, ಬಿಜೆಪಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ಕಾರ್ಯಕರ್ತರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಸಮಲತಾ ಅವರು ಮಂಡ್ಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.