Author: kannadanewsnow57

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.

Read More

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಭಾಷಣದಲ್ಲಿ, ಅವರು ಸಾಮಾನ್ಯ ಜನರಿಗೆ ಹಲವು ದೊಡ್ಡ ಘೋಷಣೆಗಳನ್ನು ಮಾಡಿದರು. ಇವುಗಳಲ್ಲಿ ದೊಡ್ಡ ಘೋಷಣೆಯೆಂದರೆ ಅಕ್ಟೋಬರ್‌ನಲ್ಲಿ ಜಿಎಸ್‌ಟಿಯಲ್ಲಿ ಹೊಸ ಸುಧಾರಣೆಗಳನ್ನು ಜಾರಿಗೆ ತರಲಾಗುವುದು. ಜಿಎಸ್‌ಟಿ ಸುಧಾರಣೆಗಳು: ಏನು ಬದಲಾಗುತ್ತದೆ? ವರದಿಗಳ ಪ್ರಕಾರ, ಜಿಎಸ್‌ಟಿಯಲ್ಲಿನ ಸುಧಾರಣೆಯಿಂದಾಗಿ ಅನೇಕ ದಿನನಿತ್ಯದ ವಸ್ತುಗಳು ಅಗ್ಗವಾಗುತ್ತವೆ. ಅನೇಕ ಉತ್ಪನ್ನಗಳ ಮೇಲೆ ತೆರಿಗೆ ಶೇಕಡಾ 10 ರಷ್ಟು ಕಡಿಮೆಯಾಗುತ್ತದೆ. ಆದಾಗ್ಯೂ, ಸರ್ಕಾರ ಇನ್ನೂ ಅದನ್ನು ದೃಢಪಡಿಸಿಲ್ಲ.ಅದೇ ಸಮಯದಲ್ಲಿ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ನಲ್ಲಿಯೂ ಬದಲಾವಣೆ ಇರುತ್ತದೆ. ಪ್ರಸ್ತುತ, ನಾಲ್ಕು ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳಿವೆ – 5 ಪ್ರತಿಶತ ತೆರಿಗೆ (ದೈನಂದಿನ ಉತ್ಪನ್ನಗಳು) 12 ಪ್ರತಿಶತ ತೆರಿಗೆ (ಪ್ರಮಾಣಿತ ಸರಕುಗಳು) 18 ಪ್ರತಿಶತ ತೆರಿಗೆ (ಎಲೆಕ್ಟ್ರಾನಿಕ್ ಉತ್ಪನ್ನಗಳು) ಮತ್ತು 28 ಪ್ರತಿಶತ ತೆರಿಗೆ (ಐಷಾರಾಮಿ ಉತ್ಪನ್ನಗಳು). ಜಿಎಸ್‌ಟಿಯಲ್ಲಿನ ಸುಧಾರಣೆಯೊಂದಿಗೆ, ಎಲ್ಲಾ ಉತ್ಪನ್ನಗಳನ್ನು ಈಗ ಎರಡು ತೆರಿಗೆ ಸ್ಲ್ಯಾಬ್‌ಗಳಾಗಿ ವಿಂಗಡಿಸಲಾಗಿದೆ, 5 ಪ್ರತಿಶತ ತೆರಿಗೆ ಮತ್ತು…

Read More

ಬೆಂಗಳೂರು : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ…

ಬೆಂಗಳೂರು : ಉತ್ತರಪ್ರದೇಶದ ಶಿವಸೇನೆಯ ಮಾಜಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಾಗಿದೆ. ಮಾಜಿ ಶಾಸಕ ಭಗವಾನ್ ಶರ್ಮಾ ವಿರುದ್ಧ ಈ ಆರೋಪ ಕೇಳಿಬಂದಿದೆ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ರಿಜಿಸ್ಟಾರ್ ಮದುವೆ ಆಗುವುದಾಗಿ ನಂಬಿಸಿ ಮಹಿಳೆಯನ್ನು ಏರ್ ಪೋರ್ಟ್ ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಲಾಗಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೋಡ್ಕಿಂಗ್ ಬೈಕ್ ಸವಾರಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲ್ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ. ಹೆಬ್ಬಾಳ ಜಂಕ್ಷನ್ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. https://twitter.com/ANI/status/1957330050707042671?ref_src=twsrc%5Etfw%7Ctwcamp%5Etweetembed%7Ctwterm%5E1957330050707042671%7Ctwgr%5E43e92f746518ae19932797d6b5146936d752e150%7Ctwcon%5Es1_c10&ref_url=https%3A%2F%2Fkannadadunia.com%2Fdcm-d-k-shivakumar-rides-bike-on-hebbals-new-flyover-video-goes-viral-watch-video%2F https://twitter.com/DKShivakumar/status/1957332496154325050

Read More

ಬೆಂಗಳೂರು: ರಾಜ್ಯದಲ್ಲಿ ಹೃದಯಸ್ತಂಭನದಿಂದ ಸಾವನ್ನಪ್ಪುವ ವರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಡಾ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಸ್ಥಾಪನೆಯಾದ ಹೃದಯಜ್ಯೋತಿ ಯೋಜನೆಯಡಿ ಈ ಅಂಕಿ ಅಂಶಗಳು ಹೊರ ಬಿದ್ದಿದೆ. 2023-24 ರ ಅವಧಿಯಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದವರ ಸಂಖ್ಯೆ 229 ಇದ್ದದ್ದು 2024-25 ರ ವೇಳೆಗೆ ಈ ಸಂಖ್ಯೆ 608 ಕ್ಕೆ ಏರಿಕೆಯಾಗಿದೆ ಎಂದು ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿಯಲ್ಲಿ ದಾಖಲಾದ ಹೃದಯಾಘಾತಕ್ಕೆ ಸಂಬಂಧಿಸಿದ ಸಾವುಗಳು ಬಹುತೇಕ ಮೂರು ಪಟ್ಟು ಹೆಚ್ಚಾಗಿದ್ದು, 2023–24ರಲ್ಲಿ 229 ರಿಂದ 2024–25ರಲ್ಲಿ 608 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಹೆಚ್ಚಳ ವರದಿಯಾದ ನಂತರ ಮತ್ತು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಹಠಾತ್ ಹೃದಯ ಸಂಬಂಧಿ ಘಟನೆಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದ ನಂತರ ಸಚಿವರು ಈ ಘೋಷಣೆ ಮಾಡಿದ್ದರು.…

Read More

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ ಮಹಿಳೆಗೂ ಈ ರೀತಿ ಆಗಬಾರದು, ಸದ್ಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಅರೆಸ್ಟ್ ಆಗುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕನಕರಾಜ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಇಂದು “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ. https://twitter.com/siddaramaiah/status/1957316710119412099 ಮಾಜಿ ಸಚಿವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More