Subscribe to Updates
Get the latest creative news from FooBar about art, design and business.
Author: kannadanewsnow57
ಮಂಡ್ಯ: ಡಿಸೆಂಬರ್ 20, 21ರಂದು ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( School and College Holiday ) ಎರಡು ದಿನ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದು, ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಸದರಿ ಸಮ್ಮೇಳನ ಕಾರ್ಯಕ್ರಮಕ ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು, ಸಚಿವರುಗಳು, ನ್ಯಾಯಾಧೀಶರುಗಳು ಹಾಗೂ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಸದರಿ ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ…
ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಿನ ಜಾವ ಪಾರ್ಕ್ ಗೆ ಬರುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಯ ಹಲವಡೆ ತಾಪಮಾನ ಕುಸಿದಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ…
ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹಧನ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಶೂನ್ಯ ವೇಳೆ ಜೆಡಿಎಸ್ ಸದಸ್ಯ ಮಂಚೇಗೌಡ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವ ವೆಂಕಟೇಶ್ ಅವರು, ನಮ್ಮ ಪ್ರಣಾಳಿಕೆಯಂತೆ ಹಾಲಿನ ಪ್ರೋತ್ಸಾಹಧನ ಹೆಚ್ಚಳ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದಕ್ಕೀನು ಸಮಯವಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಳ ಮಾಡಲಾಗುವುದು, ಆದರೆ ಸದ್ಯಕ್ಕೆ ಪ್ರೋತ್ಸಾಹಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು 2023-24 ನೇ ಸಾಲಿನಲ್ಲಿ 1,300 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ಈಗಾಗಲೇ 1,245 ಕೋಟಿ ರೂ. ಬಿಡುಗಡೆ ಆಗಿದೆ. ಉಳಿದ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಲಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ನಿನ್ನೆ ನಡೆದ ವಿಚಾರಣೆಯಲ್ಲಿ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಆರಂಭಿಸಿದರು. ಸಂತ್ರಸ್ತ ಬಾಲಕಿಯ ದೂರುದಾರ ತಾಯಿಯ ನಡವಳಿಕೆಯನ್ನು ಗಮನಿಸಬೇಕು. ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ಮಹಿಳೆ 56 ದೂರನ್ನು ನೀಡಿದ್ದಾರೆ. ಘಟನೆ ನಡೆದ ಒಂದುವರೆ ತಿಂಗಳ ನಂತರ ಮಾರ್ಚ್ 14ಕ್ಕೆ ಕೇಸ್ ದಾಖಲಾಗಿದೆ ಎಂದು ವಾದಿಸಿದರು. ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಬಾಲಕಿಯ ಹೇಳಿಕೆ ಇದೆ. ಹಲವು ಜನರ ಸಮ್ಮುಖದಲ್ಲಿ ಈ…
ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸಿದ್ದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ ಬಸ್ ಗಳನ್ನು ಖರೀದಿಸಲಾಗುವುದು. ಈಗಾಗಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4,000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ…
ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ ಉಜ್ವಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ಗಳನ್ನು ಒದಗಿಸುತ್ತದೆ. ಸರ್ಕಾರವು ಉಜ್ವಲ ಯೋಜನೆ 2.0 ಅನ್ನು ತಂದಿದೆ, ಅದರ ನೋಂದಣಿ ಪ್ರಾರಂಭವಾಗಿದೆ, ಇದರ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್ಗಳು ಮತ್ತು ಒಲೆಗಳನ್ನು ನೀಡಲಾಗುವುದು. ಹೊಸದಾಗಿ ರೂಪುಗೊಂಡ ಕುಟುಂಬಗಳು: ಈ ಯೋಜನೆಯು ಹೊಸದಾಗಿ ಮದುವೆಯಾದ ಕುಟುಂಬಗಳಿಗೆ ಮತ್ತು ಹೊಸದಾಗಿ ಸೇರಿದ ಕುಟುಂಬಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಈ ಕುಟುಂಬಗಳು ಈಗ ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು. ಒಂದು ಬಾರಿಯ ಪ್ರಯೋಜನ: ಉಜ್ವಲ ಯೋಜನೆಯ ಲಾಭವನ್ನು ಪ್ರತಿ ಕುಟುಂಬಕ್ಕೆ ಒಮ್ಮೆ ಮಾತ್ರ ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ಈ ಪ್ರಯೋಜನವನ್ನು…
ಮಂಡ್ಯ : ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದ್ದು, ಅಧಿಕೃತವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. “ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ. ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕವಿಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು…
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪರೀಕ್ಷಾ ಪೆ ಚರ್ಚಾ” 2024-25ನೇ ಸಾಲಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿ “ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯನ್ನು ಜನವರಿಯಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರೊಂದಿಗೆ ವಿದ್ಯಾರ್ಥಿಗಳಲ್ಲಿರುವ “ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ಜನವರಿ 2025 ಮಾಹೆಯಲ್ಲಿ ನೇರವಾಗಿ ಸಂವಹನ ನಡೆಸುವರು. ಉದ್ದೇಶಗಳು:- 1. ಮಕ್ಕಳಲ್ಲಿರುವ ಪರೀಕ್ಷಾ ಒತ್ತಡ ಕಡಿಮೆ ಮಾಡುವುದು. 2. ನಮ್ಮ ಭವಿಷ್ಯದ ರಾಷ್ಟ್ರ ನಿರ್ಮಾತೃಗಳಿಗೆ ಕಲಿಕೆಯನ್ನು ಹೆಚ್ಚು ಆಸಕ್ತಿ ಹಾಗೂ ಸಂತೋಷದಾಯಕವಾಗಿಸುವುದು. 3. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ನೇರ ಸಂವಹನ ನಡೆಸಿ, ಪರೀಕ್ಷಾ ಪದ್ಧತಿ ಕುರಿತು ಅಮೂಲ್ಯವಾದ ಸಲಹೆಗಳನ್ನು ಪಡೆದು ಪರೀಕ್ಷಾ ಪದ್ಧತಿಯನ್ನು ಉತ್ತಮಪಡಿಸುವುದು. ಅರ್ಹತೆ:- ಸರ್ಕಾರಿ,…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆಗಳು ಹೆಚ್ಚು ನಡೆಯುತ್ತಿದ್ದು, ಜನರನ್ನು ವಂಚಿಸಲು ಸೈಬರ್ ವಂಚಕರು ಹಲವು ತಂತ್ರಗಳನ್ನು ಬಳಕೆ ಮಾಡುತ್ತಿದ್ದಾರೆ. ಹೌದು, ಸೈಬರ್ ವಂಚಕರು ಹಲವು ತಂತ್ರಗಳನ್ನು ಬಳಸಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದಾರೆ. ಇದೀಗ ಮದುವೆ ಆಮಂತ್ರಣದ ಲಿಂಕ್ ಮೂಲಕ ಖದೀಮರು ವೈಯಕ್ತಿಕ ಮಾಹಿತಿ ಕದಿಯುತ್ತಿದ್ದಾರೆ. ಮದುವೆ ಸೀಸನ್ ನಲ್ಲಿ ವಂಚಕರು ಮದುವೆ ಆಮಂತ್ರಣ ಪತ್ರಿಕೆಗಳ ನೆಪದಲ್ಲಿ ಮಾಲ್ ವೇರ್ ಹರಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಡಿಜಿಟಲ್ ಮದುವೆ ಆಹ್ವಾನವು ನಿಮ್ಮನ್ನು ಬಲೆಗೆ ಸಿಲುಕಿಸದಂತೆ ನೋಡಿಕೊಳ್ಳಿ! ವೈಯಕ್ತಿಕ ಮಾಹಿತಿಯನ್ನು ಕದಿಯಲು ವಂಚಕರು ವಾಟ್ಸಾಪ್ ಅನ್ನು ಬಳಸುತ್ತಿದ್ದಾರೆ. ಜಾಣರಾಗಿರಿ – ಅನುಮಾನಾಸ್ಪದ ಸಂದೇಶಗಳನ್ನು 1930 ಗೆ ವರದಿ ಮಾಡಿ ಎಂದು ಬೆಂಗಳೂರು ನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. https://Twitter.com/BlrCityPolice/status/1868550234617627042
ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಇಲಾಖೆ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ…