Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 16 ಮತ್ತು 17 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಈಗ ಮೊಬೈಲ್ ಬಳಕೆದಾರರಿಗೆ ಸ್ಪ್ಯಾಮ್ ಮತ್ತು ನಿಜವಾದ SMS ಅನ್ನು ಗುರುತಿಸುವುದು ಸುಲಭವಾಗಿದೆ. ಟೆಲಿಕಾಂ ಆಪರೇಟರ್ಗಳು SMS ಹೆಡರ್ಗೆ ಹೊಸ ಪ್ರತ್ಯಯಗಳನ್ನು (ಅಕ್ಷರಗಳು) ಸೇರಿಸಲು ಪ್ರಾರಂಭಿಸಿದ್ದಾರೆ, ಇದು ಕಳುಹಿಸುವವರ ಗುರುತು ಮತ್ತು ಸಂದೇಶದ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಮಂಗಳವಾರ ಈ ಮಾಹಿತಿಯನ್ನು ನೀಡಿದೆ. COAI ರಿಲಯನ್ಸ್ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾದಂತಹ ಪ್ರಮುಖ ಟೆಲಿಕಾಂ ಆಪರೇಟರ್ಗಳನ್ನು ಒಳಗೊಂಡಿದೆ. ಈಗ SMS ನಲ್ಲಿ ಸಂದೇಶವು ಯಾವ ವರ್ಗಕ್ಕೆ ಸೇರಿದೆ ಎಂದು ನೀವು ನೋಡುತ್ತೀರಿ COAI ಮಹಾನಿರ್ದೇಶಕ ಎಸ್ಪಿ ಕೊಚಾರ್ ಮಾತನಾಡಿ, ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು ಪ್ರಚಾರ (‘ಪಿ’), ಸೇವೆಗೆ ಸಂಬಂಧಿಸಿದ (‘ಎಸ್’), ವಹಿವಾಟು (‘ಟಿ’) ಮತ್ತು ಸರ್ಕಾರಿ (‘ಜಿ’) ಸಂದೇಶಗಳಿಗೆ ಪ್ರತ್ಯಯ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಈ ಕ್ರಮವನ್ನು ಟೆಲಿಕಾಂ ವಾಣಿಜ್ಯ ಸಂವಹನ ಗ್ರಾಹಕ ಆದ್ಯತೆ ನಿಯಂತ್ರಣ (TCCCPR) ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ, ಇದನ್ನು ಫೆಬ್ರವರಿ 12, 2025…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 6 ಮಂದಿ ಕೆಎಎಸ್ ಅಧಿಕಾರಿಗಳು, 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ ಸೇರಿದಂತೆ 34 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಶಿವಪ್ರಕಾಶ್ ದೇವರಾಜು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್ ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್ ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್ ಗದಗ ಎಸ್ಪಿಯಾಗಿ ರೋಹನ್ ಜಗದೀಶ್ ಕೆಜಿಎಫ್ ಎಸ್‌ಪಿಯಾಗಿ ಶಿವಾಂಶು ರಜಪೂತ್ ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್. ಉತ್ತರ…
ಚನ್ನಪಟ್ಟಣ: ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಡಿಜಿಟಲ್ ಅರೆಸ್ಟ್ ಗೆ ಬಲಿಯಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ಸೈಬರ್ ವಂಚನೆ ಜಾಲಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆ. ಕುಮಾರ್ (48) ಮೃತ. ವಂಚನೆಯ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ ಬೆಸ್ಕಾಂನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಗಂಡುಮಗು ವಿನೊಂದಿಗೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಾಗಿದ್ದರು. ‘ವಿಕ್ರಮ್ ಗೋಸ್ವಾಮಿ ಹೆಸರಿನ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಕರೆಮಾಡಿ, ನಿನ್ನ ಮೇಲೆ ಅರೆಸ್ಟ್ ವಾರಂಟ್ ಬಂದಿದೆ ಎಂದು ಹೆದರಿಸಿದ್ದ. ನಿನ್ನನ್ನು ಪ್ರಕರಣವೊಂದರಲ್ಲಿ ಬಂಧಿಸುತ್ತೇನೆ ಎಂಬ ಬೆದರಿಕೆ ಹಾಕಿ ನಂತರ ಸಹಾಯದ ನೆಪದಲ್ಲಿ 1.95 ಲಕ್ಷ ರೂ. ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದ. ಬಳಿಕ ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು 11 ಲಕ್ಷ ರೂ.ವರೆಗೂ ಹಾಕಿಸಿಕೊಂಡಿದ್ದನು. ಇಷ್ಟಕ್ಕೆ ಸುಮ್ಮನಾಗದೆ ಮತ್ತೆ…
ಬೆಂಗಳೂರು : ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆನ್ನು ಕೈಬಿಡಲು ಮುಂದಾಗಿದೆ.ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು. ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು: * ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ…
ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬಂದಿದ್ದು, ಮಾರಾಟಗಾರರಾದ ಕನಕಗಿರಿ ತಾಲ್ಲೂಕಿನ ಮುಸಲಾಪುರದ ಮೆ|| ಸಜ್ಜಲಶ್ರೀ ಆಗ್ರೋ ಕೇಂದ್ರ ಮತ್ತು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ಮೆ|| ಸ್ಪಂದನ ಆಗ್ರೋ ಟ್ರೇಡರ್ಸ್ ಇವರ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಕ್ಲಾಸ್ 3, 4, 5, 8 ಮತ್ತು 35 ರ ಉಲ್ಲಂಘನೆಗಳಿಗಾಗಿ ಅಮಾನತ್ತುಗೊಳಿಸಲಾಗಿದೆ ಮತ್ತು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಉಲ್ಲಂಘನೆಗಾಗಿ ಇವರ ರಸಗೊಬ್ಬರ ಮಾರಾಟ ಪರವಾನಿಗೆಗಳನ್ನು ರದ್ದುಗೊಳಿಸಲಾಗಿರುತ್ತದೆ. ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್ ಅನ್ನು ನೀಡದೇ ಇದ್ದಲ್ಲಿ ಅಥವಾ…
ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹಳ ಮಹತ್ವದ್ದಾಗಿದ್ದು, ಎಷ್ಟೇ ಶ್ರೀಮಂತಿಕೆ ಇದ್ದರೂ ಆರೋಗ್ಯ ಇಲ್ಲವಾದಲ್ಲಿ ಅವನು ಬಡವ, ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ “ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಜೀವನದಲ್ಲಿ ಆರೋಗ್ಯವೇ ಮಹಾಭಾಗ್ಯವಾಗಿದ್ದು, ಸರ್ಕಾರವು ಗೃಹ ಆರೋಗ್ಯ ಯೋಜನೆ ಜಾರಿ ಮಾಡಿರುವುದು ಬಡವರ್ಗದ ಜನರಿಗೆ ಬಹಳ ಉಪಯುಕ್ತವಾಗಿದೆ ಎಂದರು. ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಗೃಹ ಆರೋಗ್ಯ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿ ಕೈಬರಹದಲ್ಲಿ ಭೂ ದಾಖಲೆ ನೀಡುವ ವ್ಯವಸ್ಥೆ ಬದಲಿಗೆ ಕಂದಾಯ ಇಲಾಖೆ ಡಿಜಿಟಲ್ ರೂಪದಲ್ಲಿಯೇ ಕಂದಾಯ ದಾಖಲೆ ನೀಡುವುದನ್ನು ಕಡ್ಡಾಯಗೊಳಿಸಿದೆ. ಹೌದು, ಇನ್ಮುಂದೆ ಎ ಮತ್ತು ಬಿ ವರ್ಗದ ಭೂದಾಖಲೆಗಳನ್ನು ಸಾಂಪ್ರದಾಯಿಕ ದೃಢೀಕೃತ ನಕಲು ಪ್ರತಿ ಅಥವಾ ಕೈಬರಹದ ಮೂಲಕ ನೀಡುವ ಬದಲು ಡಿಜಿಟಲ್ ರೂಪದಲ್ಲಿಯೇ ನೀಡಲಾಗುವುದು. ಈಗಾಗಲೇ ಡಿಜಿಟಲ್ ಭೂದಾಖಲೆಗಳ ವಿತರಣೆಗೆ ಶುರುವಾಗಿದೆ. ಇನ್ನು ಮುಂದೆ ‘ಎ’ ಹಾಗೂ ‘ಬಿ’ ವರ್ಗದ ಭೂದಾಖಲೆಗಳನ್ನು ಸಾಂಪ್ರದಾಯಿಕ ದೃಢೀಕೃತ ನಕಲು ಪ್ರತಿ ಅಥವಾ ಕೈಬರಹದ ದಾಖಲೆ ನೀಡುವ ಬದಲಾಗಿ ಡಿಜಿಟಲ್ ರೂಪದಲ್ಲಿಯೇ ಸಿಗಲಿದೆ. ಸದ್ಯ ರಾಜ್ಯದ ಎಲ್ಲ240 ತಹಸೀಲ್ದಾರ್ ಕಚೇರಿಗಳಲ್ಲಿ ಡಿಜಿಟಲ್ ದಾಖಲೆ ನೀಡಲಾಗುತ್ತಿದ್ದು, ಶೀಘ್ರವೇ ರಾಜ್ಯದಲ್ಲಿರುವ 700 ‘ಅಟಲ್ಜಿ ಜನಸ್ನೇಹಿ ಕೇಂದ್ರಗಳಿಗೂ ವಿಸ್ತರಿಸಲು ಕಂದಾಯ ಇಲಾಖೆ ಮುಂದಾಗಿದೆ. ಅರ್ಜಿದಾರರು ಕೋರುವ ಭೂ ದಾಖಲೆ ಈಗಾಗಲೇ ಸ್ಕ್ಯಾನ್ ಆಗಿ ದೃಢೀಕರಣಗೊಂಡಿದ್ದರೆ ಒಂದೇ ದಿನದಲ್ಲಿ ಡಿಜಿಟಲ್ ದಾಖಲೆ ವಿತರಿಸಲಾಗುವುದು. ಸ್ಕ್ಯಾನಿಂಗ್ ಪ್ರಕ್ರಿಯೆ ಆಗದಿದ್ದರೆ ಏಳು ದಿನದೊಳಗೆ ಡಿಜಿಟಲ್ ದಾಖಲೆ ವಿತರಿಸಲಾಗುವುದು. ಯಾವುದೇ…
ಬೆಂಗಳೂರು: ಛಾಪಾ ಕಾಗದ (ಇ-ಸ್ಟಾಂಪಿಂಗ್) ಬದಲಿಗೆ ಡಿಜಿಟಲ್ ಇ-ಸ್ಟ್ಯಾಂಪಿಂಗ್ ವಿತರಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ರಾಜ್ಯ ಸರ್ಕಾರ ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯಲ್ಲಿನ ದೋಷ ಸರಿಪಡಿಸಲು ಮತ್ತು ವಂಚನೆಗಳನ್ನು ತಡೆಯಲು ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025 ಜಾರಿಗೆ ತಂದಿದೆ. ಈ ಹಿಂದೆ ಇ-ಸ್ಟಾಂಪಿಂಗ್ ಛಾಪಾ ಕಾಗದಗಳನ್ನು ಬಳಸಲಾಗುತ್ತಿತ್ತು, ಆದರೆ ಇನ್ನು ಮುಂದೆ ಡಿಜಿಟಲ್ ಇ-ಸ್ಟಾಂಪಿಂಗ್ ವ್ಯವಸ್ಥೆ ಬಳಸಬಹುದಾಗಿದೆ. ಬ್ಯಾಂಕ್ ಚಲನ್ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಲು ನೂತನ ವಿಧೇಯಕ ಅವಕಾಶ ಕಲ್ಪಿಸಿದೆ.
ಆಧಾರ್ ಬಯೋಮೆಟ್ರಿಕ್ಸ್ ಅನ್ನು ನವೀಕರಿಸದ 7 ವರ್ಷ ವಯಸ್ಸಿನ ಮಕ್ಕಳಿಗೆ ಪೋಷಕರು ಕಡ್ಡಾಯ ಬಯೋಮೆಟ್ರಿಕ್ ನವೀಕರಣ (MBU) ಅನ್ನು ಪೂರ್ಣಗೊಳಿಸುವ ಅಗತ್ಯವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಒತ್ತಿ ಹೇಳಿದೆ. ಇದು ಪ್ರಮಾಣಿತ ಅವಶ್ಯಕತೆಯಾಗಿದೆ ಮತ್ತು ಯಾವುದೇ ಆಧಾರ್ ಸೇವಾ ಕೇಂದ್ರಗಳು ಅಥವಾ ಗೊತ್ತುಪಡಿಸಿದ ಕೇಂದ್ರಗಳಲ್ಲಿ ನವೀಕರಣಗಳನ್ನು ಮಾಡಬಹುದು. 5 ವರ್ಷದೊಳಗಿನ ಮಕ್ಕಳಿಗೆ, ಆಧಾರ್ ನೋಂದಣಿಯು ಛಾಯಾಚಿತ್ರ, ಹೆಸರು, ಜನ್ಮ ದಿನಾಂಕ, ಲಿಂಗ, ವಿಳಾಸ ಮತ್ತು ಪುರಾವೆ ದಾಖಲೆಗಳನ್ನು ಒಳಗೊಂಡಿರುತ್ತದೆ, ಆದರೆ ಬೆರಳಚ್ಚುಗಳು ಅಥವಾ ಐರಿಸ್ ಸ್ಕ್ಯಾನ್ಗಳನ್ನು ಒಳಗೊಂಡಿರುವುದಿಲ್ಲ, ಏಕೆಂದರೆ ಈ ಬಯೋಮೆಟ್ರಿಕ್ಗಳು ಸಂಪೂರ್ಣವಾಗಿ ಅಭಿವೃದ್ಧಿಗೊಂಡಿಲ್ಲ. “5 ನೇ ವಯಸ್ಸಿನಲ್ಲಿ, ಮೊದಲ MBU ಬೆರಳಚ್ಚುಗಳು, ಐರಿಸ್ ಮತ್ತು ನವೀಕರಿಸಿದ ಫೋಟೋವನ್ನು ಸೆರೆಹಿಡಿಯುವ ಅಗತ್ಯವಿದೆ. 5 ರಿಂದ 7 ವರ್ಷ ವಯಸ್ಸಿನ ನಡುವೆ ಪೂರ್ಣಗೊಳಿಸಿದರೆ ಈ ನವೀಕರಣವು ಉಚಿತವಾಗಿದೆ. 7 ವರ್ಷಗಳ ನಂತರ, 100 ರೂ. ಶುಲ್ಕ ಅನ್ವಯಿಸುತ್ತದೆ” ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಕಾಲಿಕ MBU ಪೂರ್ಣಗೊಳಿಸುವಿಕೆಯು ಬಯೋಮೆಟ್ರಿಕ್ ಡೇಟಾದ…












