Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೇಡಿಕೆ ಇಳಿಕೆಯಾದ ಕಾರಣ ಎಮ್ಮೆ ಹಾಲು ಮಾರಾಟ ಸ್ಥಗಿತಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿ ಚಿಂತನೆ ನಡೆಸಿದೆ. ಕೆಲ ತಿಂಗಳ ಹಿಂದಟೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದ ಎಮ್ಮೆ ಹಾಲಿಗೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಮಾರಾಟವನ್ನು ಸ್ಥಗಿತಗೊಳಿಸುವ ಸಂಬಂಧ ಕೆಎಂಎಫ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಎಮ್ಮೆ ಹಾಲಿಗೆ ಬೇಡಿಕೆ ಕಡಿಮೆಯಾಗಿದ್ದು, ಪ್ರತಿದಿನ ಕೇವಲ ಎರಡು ಸಾವಿರ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಇದರಿಂದ ಸಂಸ್ಥೆಗೆ ಲಾಭಕ್ಕಿಂತ ನಷ್ಟವಾಗುತ್ತಿದ್ದು, ಹೀಗಾಗಿ ಎಮ್ಮೆ ಹಾಲಿನ ಮಾರಾಟ ಸ್ಥಗಿತಗೊಳಿಸಲು ಕೆಎಂಎಫ್ ನಿರ್ಧರಿಸಿದೆ ಎನ್ನಲಾಗಿದೆ.
ಕೊಯಮತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊಯಮತ್ತೂರಿಗೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಬಾಂಬ್ ಬೆದರಿಕೆಯ ವರದಿಗಳು ಹೊರಬಂದ ನಂತರ ಭಾರಿ ಭದ್ರತೆಯ ನಡುವೆ ಕೊಯಮತ್ತೂರಿನಲ್ಲಿ ರೋಡ್ ಶೋ ನಡೆಸಿದರು. ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಐದು ಹಂತದ ಭದ್ರತೆಯನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಕೊಯಮತ್ತೂರು ನಗರ ಪೊಲೀಸ್ ಮತ್ತು ಇತರ ವಿವಿಧ ಘಟಕಗಳ ಸಿಬ್ಬಂದಿ ಸಮಗ್ರ ತನಿಖೆ ನಡೆಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. https://twitter.com/i/status/1769706254174228876 ಈ ಹಿಂದೆ ತಮಿಳುನಾಡು ಪೊಲೀಸರಿಂದ ಅನುಮತಿ ನಿರಾಕರಿಸಲ್ಪಟ್ಟಿದ್ದ ಪ್ರಧಾನಿ ಮೋದಿ ರೋಡ್ ಶೋ, ಮದ್ರಾಸ್ ಹೈಕೋರ್ಟ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದ ನಂತರ, ಸೂಕ್ತ ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಪೊಲೀಸರಿಗೆ ಸೂಚಿಸಿದ ನಂತರ ರೋಡ್ ಶೋ ನಡೆಸಿದರು. ನಗರದ ಮೆಟ್ಟುಪಾಳಯಂ ರಸ್ತೆಯಲ್ಲಿ ಪ್ರಧಾನಿ ಮೋದಿ ಅವರು ರೋಡ್ ಶೋ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಏಳು ಹಂತಗಳ ವೇಳಾಪಟ್ಟಿಯನ್ನು ಘೋಷಿಸಿದ ನಂತರ ಇದು ರಾಜ್ಯದಲ್ಲಿ ಅವರ ಮೊದಲ…
ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 24ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ,ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕ ಭಾಗದ ಬೀದರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಚುನಾವಣೆಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಿದೆ. ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಕುರಿತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಬೇಕು. ಅದೇರೀತಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆಯ ಕುರಿತು ಮಾಹಿತಿ…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು…
ಗಜೇಂದ್ರಗಡ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರು ತಿಂಗಳಲ್ಲಿ ಕಾಂಗ್ರೆಸ್ ವಿಭಜನೆ ಆಗಲಿದೆ ಎಂದು ಮಾಜಿ ಸಿಎಂ ಬಸರಾಜ ಬೊಮ್ಮಾಯಿ ಹೇಳಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಮತ್ತೆ ಪ್ರಧಾನಿಯಾಗಿ ಮೂರು ತಿಂಗಳ ಬಳಿಕ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ವಿಭಜನೆ ಆಗಲಿದೆ. ನಾನು ಸಂಸದನಾಗಿ ರೋಣಕ್ಕೆ ಬರುವುದು ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಎಂದು ತಿಳಿಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದಾರೆ.
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ತೆರಳಲಿದ್ದು, ಮಾರ್ಚ್ 21 ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕಾ ಪ್ರಾಧಿಕಾರ ಏಪ್ರಿಲ್ ನಲ್ಲಿ ನಡೆಸುವ 2024 ನೇ ಸಾಲಿನ ಯುಜಿ ಸಿಇಟಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ. ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಿನಾಂಕ 18-04-2024 ಮತ್ತು 19-04-2024 ರಂದು ನಡೆಸಲಾಗುವ ಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶ ನೀಡಿದ್ದರೂ ಮತ್ತೆ ದಿನಾಂಕ ವಿಸ್ತರಣೆ ಮಾಡಲು ಅಭ್ಯರ್ಥಿಗಳು ಕೋರಿಕೆಯನ್ನು ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ 18-03-2024 ರ ಸಂಜೆ 6.00 ರಿಂದ ರಾತ್ರಿ 11.59 ರವರೆಗೆ ನೊಂದಣಿ ಮಾಡಿ ಅರ್ಜಿ ಸಲ್ಲಿಸಲು ಹಾಗು 21-03-2024 ರ ಸಂಜೆ 5.30 ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗು ಶುಲ್ಕ ಪಾವತಿಸಬಹುದಾಗಿದೆ. ಈ ಮೇಲಿನ ದಿನಾಂಕಗಳಂದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರ ಸಿಇಟಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ವೃತ್ತಿಪರ ಕೋರ್ಸುಗಳಿಗೆ ನೊಂದಣಿ, ಆನ್‌ಲೈನ್ ಅರ್ಜಿ…
ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ಸೋಮವಾರ ಒಂದೇ ದಿನ ಮಂಡ್ಯ ಸೇಇದಂತೆ ರಾಜ್ಯದ ವಿವಿಧೆಡೆ 1 ಕೋಟಿಗೂ ಹೆಚ್ಚು ದಾಖಲೆ ಇಲ್ಲದ ನಗದು ವಶಕ್ಕೆ ಪಡೆಯಲಾಗಿದೆ. ಮಂಡ್ಯದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ೯೯.೨೦ ಲಕ್, ತುಮಕೂರಿನಲ್ಲಿ 8 ಲಕ್ಷ ರೂ. ಚಿಕ್ಕಮಗಳೂರಿನಲ್ಲಿ 90 ಸಾವಿರ, ಹುಬ್ಬಳ್ಳಿಯಲ್ಲಿ 8 ಲಕ್ಷ, ಬಾಗಲಕೋಟೆಯಲ್ಲಿ 1.72 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಎರಡು ದಿನಗಳಲ್ಲಿ 45.76 ಲಕ್ಷ ರೂ. ಸೇರಿದಂತೆ 15.89 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಳೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ದಿನಾಂಕ: 19.03.2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದ್ದಾರೆ. ಈ ಸೌಲಭ್ಯವನ್ನು ಪಡೆಯಲು ರಜೆಯನ್ನು ಮಂಜೂರು ಮಾಡುವ ಸಕ್ಷಮ ಅಧಿಕಾರಿಯಿಂದ ಮುಂಚಿತವಾಗಿ ರಜೆಯನ್ನು ಪಡೆಯತಕ್ಕದ್ದು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿರುವ ಕುರಿತು ನೌಕರರ ಸಂಘದಿಂದ ಪಡೆದ ಅಧಿಕೃತ ಹಾಜರಾತಿ ಪುಮಾಣ…