Author: kannadanewsnow57

ಚೆನ್ನೈ : ಟಾಟಾ ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಉದ್ಘಾಟನಾ ಪಂದ್ಯದ ಟಿಕೆಟ್ ಗಳ ಆನ್ಲೈನ್ ಮಾರಾಟವು ಮಾರ್ಚ್ 18, 2024 ರಂದು ಪ್ರಾರಂಭವಾಗಲಿದೆ. ಮಾರ್ಚ್ 22, 2024 ರಂದು ಎಂ.ಎ.ನಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ಗಳು. ಚಿದಂಬರಂ ಸ್ಟೇಡಿಯಂ, ಚೆಪಾಕ್, ಚೆನ್ನೈ ಮಾರ್ಚ್ 18, 2024 ರಂದು (ಸೋಮವಾರ) ಬೆಳಿಗ್ಗೆ 9:30 ರಿಂದ ಪೇಟಿಎಂ ಮತ್ತು www.insider.in ಮೂಲಕ ಮಾರಾಟವಾಗಲಿದೆ. ಟಿಕೆಟ್ ಖರೀದಿಸುವವರಿಗೆ ಸಾಮಾನ್ಯ ಸೂಚನೆಗಳು: ಕ್ರೀಡಾಂಗಣಕ್ಕೆ ಪ್ರವೇಶಕ್ಕಾಗಿ ಟಿಕೆಟ್ ಗಳಲ್ಲಿ ನಮೂದಿಸಿರುವ ಪ್ರವೇಶ ಮತ್ತು ಗೇಟ್ ಅನ್ನು ಗಮನಿಸಲು  ವಿನಂತಿಸಲಾಗಿದೆ. ಆನ್ಲೈನ್ ಮಾರಾಟದಲ್ಲಿ, ಪ್ರತಿ ವ್ಯಕ್ತಿಗೆ ಎರಡು ಟಿಕೆಟ್ಗಳನ್ನು ನೀಡಲಾಗುವುದು. ಕಾರ್ ಪಾರ್ಕಿಂಗ್ ಮತ್ತು ದ್ವಿಚಕ್ರ ವಾಹನ ಪಾರ್ಕಿಂಗ್ ಇಲ್ಲಿ ಲಭ್ಯವಿದೆ: ಪಿಡಬ್ಲ್ಯೂಡಿ – ವಾಲಾಜಾ ರಸ್ತೆಯ ವಿ ಪಟ್ಟಾಭಿರಾಮನ್ ಗೇಟ್ ಎದುರು ಮದ್ರಾಸ್ ವಿಶ್ವವಿದ್ಯಾಲಯ ಕ್ಯಾಂಪಸ್ ಒಮುಂಡುರಾರ್ ವೈದ್ಯಕೀಯ ಕಾಲೇಜು ಕ್ಯಾಂಪಸ್. ರೈಲ್ವೆ ಕಾರ್ ಪಾರ್ಕಿಂಗ್ ವಿಕ್ಟೋರಿಯಾ ಹಾಸ್ಟೆಲ್…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ  ಒಟ್ಟು 247 ಪಿಡಿಒ ಹುದ್ದೆಗಳನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗಿದೆ. ಅಂಗೀಕೃತ  ವಿಶ್ವವಿದ್ಯಾಲಯದ  ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ  ಹೊಂದಿದ್ದಾರೆ.  ಏಪ್ರಿಲ್‌  15 ರಿಂಧ ಮೇ.  15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್‌ ಸಿ ಹುದ್ದೆಗಳ  ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಉಳಿಕೆ ಮೂಲ ವೃಂದದಲ್ಲಿನ ಖಾಲಿ ಇರುವ 313 ಗ್ರೂಪ್‌ ಸಿ  ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  ಏಪ್ರಿಲ್‌ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ ಸಿ ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.…

Read More

ಬೆಂಗಳೂರು : ಕರ್ನಾಟಕ ರತ್ನ ಡಾ.ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಜಿಲ್ಲಾಸ್ಪತ್ರೆಗಳ 65 ಹೃದಯ ತಜ್ಞರು ಆನ್‌ಲೈನ್‌ ಸಂಪರ್ಕದಲ್ಲಿದ್ದು ರೋಗಿಯ ಆರೋಗ್ಯ ಮತ್ತು ಜೀವ ರಕ್ಷಣೆಗೆ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಜೊತೆಗೆ ಅಗತ್ಯವೆನಿಸಿದರೆ ₹30 ಸಾವಿರ ಮೊತ್ತದ ಇಂಜೆಕ್ಷನ್‌ ಉಚಿತವಾಗಿ ನೀಡಲಾಗುತ್ತದೆ. ಮುಂದಿನ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡಲು ʼಕರ್ನಾಟಕ ರತ್ನ ಡಾ.ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿʼ ಯೋಜನೆ ಜಾರಿಗೊಳಿಸಲಾಗಿದೆ. ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್‌ ಹವರ್‌) ಚಿಕಿತ್ಸೆ ನೀಡಿ ಜೀವ ಉಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಲೋಕಸಭೆ ಚುನಾವಣೆಯಲ್ಲಿ 83.4 ಲಕ್ಷ ವಿಕಲಚೇತನರು ಹಾಗೂ 85 ವರ್ಷ ಮೇಲ್ಪಟ್ಟ 82 ಲಕ್ಷ ವೃದ್ಧ ಮತದಾರರು ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ. ಸಿ-ವಿಜಿಲ್‍ನಲ್ಲಿ ದೂರು ಕೊಡಿ: ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ…

Read More

ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು…

Read More

ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದ ‘ಮಾದರಿ ನೀತಿ ಸಂಹಿತೆ’ ಹಿನ್ನೆಲೆಯಲ್ಲಿ, ನಿಗಮದ ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ಸುಗಳ ಮೇಲಿನ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ವೇಳಾಪಟ್ಟಿಯು ದಿನಾಂಕ 16-03-2024 ರಂದು ಘೋಷಣೆಯಾಗಿದ್ದು, ‘ಮಾದರಿ ನೀತಿ ಸಂಹಿತೆ’ ತಕ್ಷಣದಿಂದಲೇ ಜಾರಿಯಾಗಿರುತ್ತದೆ. ಆದುದರಿಂದ. ನಿಗಮದ ಬಸ್ ನಿಲ್ದಾಣಗಳು / ಘಟಕಗಳು ಮತ್ತು ಬಸ್ಸುಗಳ ಮೇಲಿನ ಜಾಹೀರಾತುಗಳನ್ನು ತೆರವುಗೊಳಿಸುವ ಸಂಬಂಧ, ಕೆಳಕಂಡಂತೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಿಗಮದ ಬಸ್ಸುಗಳ ಮೇಲೆ, ಹಾಗೂ ಬಸ್ ನಿಲ್ದಾಣ / ಘಟಕಗಳಲ್ಲಿ ಹೋರ್ಡಿಂಗ್ಸ್ ಮತ್ತು ಗ್ಲೋಸೈನ್ ಫಲಕಗಳಲ್ಲಿ, ಯಾವುದೇ ರಾಜಕೀಯ ನೇತಾರರ ಭಾವಚಿತ್ರ / ರಾಜಕೀಯ ಪಕ್ಷ / ವ್ಯಕ್ತಿ / ವಿಷಯಗಳಿಗೆ ಸಂಬಂಧಿಸಿದ ಜಾಹೀರಾತುಗಳು ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯ ಕ್ರಮ ವಹಿಸುವುದು. ಚುನಾವಣೆ ನೀತಿ ಸಂಹಿತೆ ಮುಕ್ತಾಯವಾಗುವವರೆಗೆ, ನಿಗಮದ ಬಸ್ಸುಗಳ ಮೇಲೆ, ಬಸ್…

Read More

ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರದಂದು, ಲೋಕಸಭೆ ಸಾರ್ವತ್ರಿಕ ಚುನಾವಣೆ – 2024ರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಿಂದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಕುರಿತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಬೇಕು. ಅದೇರೀತಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆಯ ಕುರಿತು ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು ಎಂದು ಆಯಾ ಜಿಲ್ಲಾ ಚುನಾವಣಾಧಿಕಾರಗಳಿಗೆ ನಿರ್ದೇಶನ ನೀಡಿದರು. ಫ್ಲೈಯಿಂಗ್ ಸ್ಕ್ವಾಡ್‌ ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು…

Read More

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು. ಕೆಲಸ ವಿರಾಮ ಸಮತೋಲನವನ್ನು ಸುಧಾರಿಸಲು ಹಾಗೂ ಸರ್ಕಾರಿ ನೌಕರರ ಕೆಲಸದ . ಗುಣಮಟ್ಟವನ್ನು ಹೆಚ್ಚಿಸಲು ವಾರದ ಐದು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸಲು ಏಳನೇ ವೇತನ ಆಯೋಗದಲ್ಲಿ ಶಿಫಾರಸ್ಸು ಮಾಡಲಾಗಿದೆ. ರಾಜ್ಯದಲ್ಲಿ ಸರ್ಕಾರಿ ನೌಕರರ ಗುಣಮಟ್ಟ ಹೆಚ್ಚಿಸಲು ವಾರದಲ್ಲಿ ಐದು ದಿನ ಮಾತ್ರ ಕೆಲಸದ ಅವಧಿ ಇರಬೇಕು ಎಂದು ವರದಿಯಲ್ಲಿ ಶಿಫಾರಸ್ದು ಮಾಡಲಾಗಿದ್ದು, ಗರಿಷ್ಠ ವೇತನವನ್ನು 1.04, 600ರೂ.ಗಳಿಂದ 2.41, 200 ರೂ.ವರೆಗೆ ಹೆಚ್ಚಿಸಬೇಕು. ಹೊಸ ವೇತನ ಶ್ರೇಣಿಯನ್ನು 2022 ಜುಲೈನಿಂದಲೇ ಪೂರ್ವನ್ವಯ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್‌ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ. ಅರ್ಜಿ ಸಲ್ಲಿಕೆ ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಹಾಗೂ ಹೋಬಳಿಗೆ ನಿಗದಿಪಡಿಸಿದ ಗುರಿಗಳನ್ವಯ ಕಾರ್ಯಕ್ರಮ ಅನುಷ್ಠಾನಗೊಳಿಸುವುದು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ರೈತರ ಅರ್ಜಿ ರೈತರ ಭಾವಚಿತ್ರ FID (FID ಇಲ್ಲವಾದಲ್ಲಿ ಆಧಾರ್‌ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್‌ ಪಾಸ್‌ ಬುಕ್ ಪ್ರತಿ) ಕೃಷಿ ಭಾಗ್ಯ ಪ್ಯಾಕೇಜ್‌ ನಲ್ಲಿ ಈ ಕೆಳಕಂಡ ಘಟಕಗಳು ಒಳಗೊಂಡಿದೆ ಕ್ಷೇತ್ರ ಬದು ನಿರ್ಮಾಣ ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಪೋಲಾಗದಂತೆ ಅದೇ ಜಮೀನಿನಲ್ಲಿ ಇಂಗಿಸಲು ಹಾಗೂ ಕೃಷಿ ಹೊಂಡದಲ್ಲಿ ಸಂಗ್ರಹಿಸಲು ಕ್ಷೇತ್ರ ಬದು ನಿರ್ಮಾಣ. ಕೃಷಿ ಹೊಂಡ ಎಲ್ಲಾ ರೀತಿಯ…

Read More

ನವದೆಹಲಿ: ಲೋಕಸಭಾ ಚುನಾವಣೆ 2024 ರ ದಿನಾಂಕಗಳನ್ನು ಘೋಷಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ ಅವರು ‘ನಾನು ಮೋದಿಯ ಕುಟುಂಬ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೊವನ್ನು ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಭಾರತ, ನನ್ನ ಕುಟುಂಬ. ಕೇಂದ್ರ ಸರ್ಕಾರವು ನಡೆಸುತ್ತಿರುವ ಎಲ್ಲಾ ಯೋಜನೆಗಳನ್ನು ಸಹ ಈ ಅಭಿಯಾನದ ವೀಡಿಯೊದಲ್ಲಿ ಉಲ್ಲೇಖಿಸಲಾಗಿದೆ ಎಂದು ನಮಗೆ ತಿಳಿಸಿ. ಈ ಅಭಿಯಾನಕ್ಕೆ ‘ನಾನು ಮೋದಿ ಕುಟುಂಬ’ ಎಂದು ಹೆಸರಿಡಲಾಗಿದೆ. https://twitter.com/i/status/1768841540191838455

Read More