Author: kannadanewsnow57

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ  ಸಿದ್ದರಾಮಯ್ಯ, ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಸಾರಿಗೆ ಹಾಗೂ ಮುಜರಾಯಿ ಸಚಿವರು , ಮತ್ತು ಮಾನ್ಯ ಅಧ್ಯಕ್ಷರು , ಕೆ ಎಸ್ ಆರ್ ಟಿ ಸಿ ರವರ ನಿರ್ದೇಶನದಂತೆ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಆದೇಶ ನೀಡಿದೆ. ಆದೇಶದಲ್ಲಿ ಕೆ ಎಸ್ ಆರ್ ಟಿ ಸಿ ಯ ಸಿಬ್ಬಂದಿಗಳಿಗೆ ( ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿಯನ್ನು ಹಾಗೂ ಜುಲೈ-2022 ರಿಂದ ನವೆಂಬರ್-2022 ರ ಮಾಹೆಯ 5 ತಿಂಗಳು, ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ. ಮುಂದುವರೆದು, ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ ರೂ.6 ಕೋಟಿ…

Read More

ಬೆಂಗಳೂರು :ಬೆಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಸ್ಕರಿಸಿದ ನೀರಿನ ಬಳಕೆ ಕಡ್ಡಾಯಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ನಿರಾಕ್ಷೇಪಣಾ ಪತ್ರ ಹಾಗೂ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಜಲಮಂಡಳಿ ತಿಳಿಸಿದೆ. ಜಲಮಂಡಳಿ ಕಾಯ್ದೆಯಂತೆ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಗುಣಮಟ್ಟ ದೃಢೀಕರಣವಾಗಿರುವ ಪರಿಸರ ಸ್ನೇಹಿ ಸಂಸ್ಕರಿಸಿದ ನೀರನ್ನು ಮಾತ್ರ ಬಳಸಬೇಕೆಂದು ಆದೇಶಿಸಲಾಗಿದೆ. ಅದಕ್ಕೆ ಪೂರಕವಾಗಿ ಜಲಮಂಡಳಿ ವತಿಯಿಂದ ಪರಿಸರ ಜಲಸ್ನೇಹಿ ವೆಬ್‌ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಸಂಸ್ಕರಿಸಿದ ನೀರನ್ನು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಬೇಕು ಎಂದು ಜಲಮಂಡಳಿ ಸಾರ್ವಜನಿಕರಿಗೆ ತಿಳಿಸಿದೆ.

Read More

ನವದೆಹಲಿ : ಕಡಲ ಭದ್ರತೆಯನ್ನು ಕಾಪಾಡುವ ದಿಟ್ಟ ಕಾರ್ಯಾಚರಣೆಯಲ್ಲಿ, ಸೊಮಾಲಿ ಕಡಲ್ಗಳ್ಳರು ಈ ಪ್ರದೇಶದಲ್ಲಿ ಹಾದುಹೋಗುವ ಹಡಗುಗಳನ್ನು ಅಪಹರಣದ ಯತ್ನವನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ತಡೆದಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಡಿಸೆಂಬರ್ 14, 2023 ರಂದು ಸೊಮಾಲಿ ಕಡಲ್ಗಳ್ಳರಿಂದ ಕಮಾಂಡರ್ ಆಗಿದ್ದ ಮಾಜಿ ಎಂವಿ ರುಯೆನ್, ಕಡಲ್ಗಳ್ಳರ ಹಡಗಾಗಿ ಮತ್ತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆದರಿಕೆಗೆ ತ್ವರಿತವಾಗಿ ಪ್ರತಿಕ್ರಿಯಿಸಿದ ಭಾರತೀಯ ನೌಕಾಪಡೆಯ ಯುದ್ಧನೌಕೆ ಮಾರ್ಚ್ 15 ರಂದು ಕಡಲ್ಗಳ್ಳರ ಹಡಗನ್ನು ತೊಡಗಿಸಿಕೊಂಡಿತು. ಭಾರತೀಯ ನೌಕಾಪಡೆ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ರುಯೆನ್ ಅನ್ನು ತಡೆದಾಗ, ರುಯೆನ್ ನೌಕಾಪಡೆಯ ಯುದ್ಧನೌಕೆಯ ಮೇಲೆ ಗುಂಡು ಹಾರಿಸಿದರು ಎಂದು ತಿಳಿದುಬಂದಿದೆ, ಇದು ನೌಕಾ ಅಧಿಕಾರಿಗಳಿಂದ ಪ್ರತಿಕ್ರಿಯೆಗೆ ಕಾರಣವಾಯಿತು. https://twitter.com/indiannavy/status/1768845479390130611?ref_src=twsrc%5Etfw%7Ctwcamp%5Etweetembed%7Ctwterm%5E1768845479390130611%7Ctwgr%5E5d7791a1c6cd5c89bac1c2b65040fe88549e783e%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಬೆಂಗಳೂರು : ಆಯೋಗವು ಕಾಲ ಕಾಲಕ್ಕೆ ತಿದ್ದು ಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022 ರಸ್ತೆಯ ಉಳಿಕೆ ಮೂಲ ವೃಂದದಲ್ಲಿನ ಕೆಳಕಂಡ ಗ್ರೂಪ್ ‘ಸಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ, ಪ್ರಮುಖ ದಿನಾಂಕಗಳು ಅರ್ಜಿ ಸಲಿ..ಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ 29-04-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-05-2024 ಶುಲ್ಕ ಪಾವತಿಗೆ ಕೊನೆಯ ದಿನಾಂಕ 28-05-2024 ಅರ್ಜಿ ಸಲಿ..ಸುವ ಹಂತಗಳು/ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಅರ್ಜಿಭರ್ತಿಮಾಡಿ ಸೆರೆ..ಸಿದ ಮಾತ್ರಕ್ಕೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ಎಲಾ. ಪರತ್ರುಗಳನ್ನು ಪೂರೈಸಿರುತ್ತಾರೆ ಎಂದಲ್ಲ. ತದನಂತರದಲಿ., ಅರ್ಜಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಹಾಗೂ ಯಾವುದೇ ಹಂತದಲಿ.. ನ್ಯೂನತೆಗಳು ಕಂಡುಬಂದಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಈ ಅರ್ಜಿಸಲಿ..ಸುವ ಪ್ರಕ್ರಿಯೆಯು ಒಂದುಬಾರಿಯ ನೋಂದಣಿ ಪ್ರಕ್ರಿಯೆಯನ್ನು ಒಳಗೊಂಡಿದ್ದು (OTR-ONE TIME REGISTRATION) ಅಭ್ಯರ್ಥಿಗಳು ನೀಡಿರುವಮಾಹಿತಿಯನ್ನು ಮುಂದಿನ ಪರಿಗಣಿಸಲಾಗುವುದರಿಂದ, ಅಭ್ಯರ್ಥಿಗಳು Profile Creation /…

Read More

ನವದೆಹಲಿ : ಲಿವ್-ಇನ್-ರಿಲೇಶನ್ಶಿಪ್ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ವಿಭಿನ್ನ ಧರ್ಮಗಳನ್ನು ಪ್ರೀತಿಸುವ ದಂಪತಿಗಳು ಧಾರ್ಮಿಕ ಮತಾಂತರವಿಲ್ಲದೆ ಸಂಬಂಧದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಧಾರ್ಮಿಕ ಮತಾಂತರವಿಲ್ಲದೆ ಯುವಕರು ಮತ್ತು ಮಹಿಳೆಯರು ಒಟ್ಟಿಗೆ ವಾಸಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಹೇಳಿದೆ. ಎರಡು ವಿಭಿನ್ನ ಧರ್ಮಗಳ ಜನರು ಈಗ ಒಟ್ಟಿಗೆ ವಾಸಿಸಲು ಕಾನೂನು ಅನುಮತಿ ಪಡೆಯಬೇಕೇ? ಇಂತಹ ಪ್ರಶ್ನೆಯನ್ನು ಕೇಳಲಾಗುತ್ತಿದೆ. ಲಿವ್-ಇನ್ ಸಂಬಂಧಗಳ ಬಗ್ಗೆ ಅಲಹಾಬಾದ್ ಹೈಕೋರ್ಟ್ನ ಹೇಳಿಕೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಪ್ರೀತಿ ವಿಚಾರದಲ್ಲಿ ದಂಪತಿಗಳು ರಕ್ಷಣೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ರೇಣು ಅಗರ್ವಾಲ್ ಅವರಿದ್ದ ಏಕಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಉತ್ತರ ಪ್ರದೇಶದಲ್ಲಿ ಮತಾಂತರ ಕಾನೂನಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ನಿರ್ಧಾರವನ್ನು ನೀಡಿದೆ. ಮತಾಂತರವು ಮದುವೆಗೆ ಮಾತ್ರವಲ್ಲ, ಮದುವೆಯಂತಹ ಪ್ರತಿಯೊಂದು ಸಂಬಂಧಕ್ಕೂ ಅಗತ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಅದಕ್ಕಾಗಿಯೇ ವಿವಾಹಿತ ದಂಪತಿಗಳು ಲಿವ್-ಇನ್ ಇಲ್ಲದೆ ಒಟ್ಟಿಗೆ ವಾಸಿಸುವುದು ಕಾನೂನುಬಾಹಿರವಾಗಿದೆ. ಯುವಕನ…

Read More

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.  ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ  ಸರ್ಕಾರ ಆದೇಶಿಸಿದೆ. ಈ ಮೂಲಕ  ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.

Read More

ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಬೇಕಿದ್ದ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಬೇರೆ ದೇಶಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ಇಷ್ಟವಿಲ್ಲದಿರುವುದು ಇದಕ್ಕೆ ಕಾರಣವಾಗಿರಬಹುದು. ವರದಿಯ ಪ್ರಕಾರ, ಐಸಿಸಿ ಬಿಸಿಸಿಐಯನ್ನು ಪಾಕಿಸ್ತಾನಕ್ಕೆ ಪ್ರಯಾಣಿಸಲು ಒತ್ತಾಯಿಸಲು ಸಾಧ್ಯವಿಲ್ಲ ಮತ್ತು ಇತರ ಪರ್ಯಾಯಗಳನ್ನು ಅನ್ವೇಷಿಸಬಹುದು ಎಂದು ಹಿರಿಯ ಆಡಳಿತಗಾರರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿಯೊಬ್ಬ ಸದಸ್ಯರು ಮಂಡಳಿಯ ಸಭೆಗಳಲ್ಲಿ ಚರ್ಚೆಗಾಗಿ ಕಳವಳಗಳನ್ನು ಎತ್ತಬಹುದು ಮತ್ತು ನಂತರ ಅದು ಮತಕ್ಕೆ ಹೋಗುತ್ತದೆ. ಆದರೆ ಸದಸ್ಯ ರಾಷ್ಟ್ರದ ಸರ್ಕಾರವು ಅಲ್ಲಿ ಆಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ. ಏಕೆಂದರೆ ಐಸಿಸಿ ಮಂಡಳಿಯ ನಿಲುವು ಏನೆಂದರೆ, ತನ್ನ ಸದಸ್ಯರು ತನ್ನದೇ ಸರ್ಕಾರ ಹೊರಡಿಸಿದ ಯಾವುದೇ ನೀತಿ / ಸೂಚನೆಗಳಿಗೆ ವಿರುದ್ಧವಾಗಿ ಹೋಗುತ್ತಾರೆ ಎಂದು ನಿರೀಕ್ಷಿಸುವುದಿಲ್ಲ” ಎಂದು ಅವರು ಹೇಳಿದರು.

Read More

ತುಮಕೂರು : ಲೋಕಸಭೆ ಚುನಾವಣೆಗೆ  ಭರ್ಜರಿ ಸಿದ್ಧತೆ  ನಡೆಸಿರುವ ಕಾಂಗ್ರೆಸ್‌  ಇದೀಗ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ಪಕ್ಷದಲ್ಲಿ ಇನ್ನೂ 21   ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕು ಎಂದರು. ನಮ್ಮ ಸರ್ಕಾರ  ಕೊಟ್ಟ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡಿದೆ. ಮಹಿಳೆಯರಿಗೆ ಅನುಕೂಲವಾಗುವಂತೆ  ಯೋಜನೆ ರೂಪಿಸಿದ್ದೇವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅ

Read More

ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಶಾಸಕ ʻಎಂ.ವೈ.ಪಾಟೀಲ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950 ಕಲಂ 5 ರ ಉಪಕಲಂ (2) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಯಮಾವಳಿಗಳು, 1961ರ ನಿಯಮ 3(3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ರೀ ಎಂ. ವೈ. ಪಾಟೀಲ್, ಮಾನ್ಯ ಶಾಸಕರು, ಅಫಜಲ್ಪುರ ವಿಧಾನಸಭಾ ಕ್ಷೇತ್ರ ಇವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.

Read More