Author: kannadanewsnow57

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯನ್ನು ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ. https://twitter.com/siddaramaiah/status/1830506436901679354?ref_src=twsrc%5Egoogle%7Ctwcamp%5Eserp%7Ctwgr%5Etweet ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

Read More

ಅನೇಕ ಬಾರಿ ಹೊಸ ವಾಹನವನ್ನು ಖರೀದಿಸಿದಾಗ, ನಮ್ಮ ಮನಸ್ಸಿನಲ್ಲಿ ಅದರ ಭವಿಷ್ಯದ ಬಗ್ಗೆ ಅನೇಕ ಕನಸುಗಳು ಇರುತ್ತವೆ. ಅದರಲ್ಲೂ ಹೊಸ ಕಾರು ಖರೀದಿಸುವಾಗ ಅದರ ಬಗ್ಗೆ ಹಲವು ಪ್ರಶ್ನೆಗಳು ನಮ್ಮ ಮನದಲ್ಲಿ ಮೂಡುತ್ತವೆ. ನಾವು ಆಗಾಗ್ಗೆ ಕಾರಿನಲ್ಲಿ ದೀರ್ಘ ಪ್ರಯಾಣವನ್ನು ಯೋಜಿಸುತ್ತೇವೆ, ಆದರೆ ನಿಮ್ಮ ಪ್ರಯಾಣದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ನೀವು ವಾಸ್ತು, ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಸಹ ನೋಡಿಕೊಳ್ಳಬೇಕು. ನೀವು ಹೊಸ ವಾಹನವನ್ನು ಖರೀದಿಸುವಾಗ, ನಿಮಗೆ ಮುಖ್ಯವಾದ ವಿಷಯವೆಂದರೆ ಅದರ ಸರಿಯಾದ ಸಂಖ್ಯೆ. ನಿಮ್ಮ ಅವಶ್ಯಕತೆಗೆ ಅನುಗುಣವಾಗಿ ವಾಹನ ಸಂಖ್ಯೆ ಇಲ್ಲದಿದ್ದರೆ, ನಿಮ್ಮ ವಾಹನವನ್ನು ಚಾಲನೆ ಮಾಡುವಾಗ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲ ಕುಟುಂಬದ ವಾಹನವಾಗಿ ಬಳಸುತ್ತಿದ್ದರೆ ಒಮ್ಮೊಮ್ಮೆ ಅಪಘಾತವಾಗುವ ಸಂಭವವಿರುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ ಯಾವ ವಾಹನದ ಸಂಖ್ಯೆ ನಿಮಗೆ ಹೆಚ್ಚು ಮಂಗಳಕರವಾಗಿದೆ ಎಂದು ತಿಳಿಯಿರಿ. ವಾಹನ ಸಂಖ್ಯೆಯ ಮೂಲ ಅಂಕಿಯನ್ನು ತಿಳಿಯುವುದು ಹೇಗೆ ನಿಮ್ಮ ವಾಹನದ ಮೂಲ ಸಂಖ್ಯೆಯು ಅದರ…

Read More

ನವದೆಹಲಿ : ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ಬಂಧಿಸಿದೆ. ಏಜೆನ್ಸಿಯು ಅವರ ಮನೆಯ ಮೇಲೆ ದಾಳಿ ನಡೆಸಿ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ದೆಹಲಿಯ ಓಖ್ಲಾದಲ್ಲಿರುವ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ, ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದು, ಬಳಿಕ ಬಂಧಿಸಿದ್ದಾರೆ. ಇಡಿ ದಾಳಿ ವೇಳೆ ಟ್ವೀಟ್ ಮಾಡಿದ್ದ ಶಾಸಕ ಅಮನತುಲ್ಲಾ ಖಾನ್, ಇಡಿ ಜನರು ನನ್ನನ್ನು ಬಂಧಿಸಲು ನನ್ನ ಮನೆಗೆ ಬಂದಿದ್ದಾರೆ” ಎಂದು ಹೇಳಿದರು. ಕಳೆದ ಎರಡು ವರ್ಷಗಳಿಂದ ತನಿಖಾ ಸಂಸ್ಥೆ ನಿರಂತರವಾಗಿ ಕಿರುಕುಳ ನೀಡುತ್ತಿದೆ ಎಂದು ಎಎಪಿ ಶಾಸಕರು ಸ್ವಯಂ-ನಿರ್ಮಿತ ವೀಡಿಯೊದಲ್ಲಿ ಹೇಳಿದ್ದಾರೆ. ಬೆಳಿಗ್ಗೆ ಏಳು ಗಂಟೆಯಾಗಿದೆ, ಮತ್ತು ಇಡಿ ಸರ್ಚ್ ವಾರೆಂಟ್ ಹೆಸರಿನಲ್ಲಿ ನನ್ನನ್ನು ಬಂಧಿಸಲು ಬಂದಿದೆ, ನನ್ನ ಅತ್ತೆಗೆ ಕ್ಯಾನ್ಸರ್ ಇದೆ, ಮತ್ತು ಅವರು ಪ್ರಸ್ತುತ ನನ್ನ ಮನೆಯಲ್ಲಿದ್ದಾರೆ, ನಾನು ಅವರಿಗೆ…

Read More

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಬಹಳ ಆಸಕ್ತಿದಾಯಕ ದೃಶ್ಯ ಕಂಡುಬಂದಿದೆ, ಅಲ್ಲಿ 7 ತಿಂಗಳ ‘ಗರ್ಭಿಣಿ’ ಪ್ಯಾರಾ ಅಥ್ಲೀಟ್ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಗ್ರೇಟ್ ಬ್ರಿಟನ್‌ನ ಜೋಡಿ ಗ್ರಿನ್‌ಹ್ಯಾಮ್ ಈ ಸಾಧನೆ ಮಾಡಿದ್ದಾರೆ. ಗ್ರಿನ್ಹ್ಯಾಮ್ ಬಿಲ್ಲುಗಾರಿಕೆಯಲ್ಲಿ ಪದಕ ಗೆದ್ದರು. ಈಗ ಜಗತ್ತಿನಾದ್ಯಂತ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರ ಧೈರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಜೋಡಿ ಗ್ರಿನ್ಹ್ಯಾಮ್ ಕಂಚಿನ ಪದಕ ಗೆದ್ದರು. ಆಗಸ್ಟ್ 31 ರಂದು, ಜೋಡಿ ಗ್ರಿನ್‌ಹ್ಯಾಮ್ ಮಹಿಳಾ ಕಾಂಪೌಂಡ್‌ನಲ್ಲಿ ಗ್ರೇಟ್ ಬ್ರಿಟನ್‌ನ ಫೋಬೆ ಪ್ಯಾಟರ್ಸನ್ ಪೈನ್ ವಿರುದ್ಧ ಕಂಚಿನ ಪದಕ ಗೆದ್ದಿದ್ದಾರೆ. https://twitter.com/worldarchery/status/1830145440907416031?ref_src=twsrc%5Etfw%7Ctwcamp%5Etweetembed%7Ctwterm%5E1830145440907416031%7Ctwgr%5Efbd0a2ce6dc4c564b99fbec72a5aa408842f88f6%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Frepublictv-epaper-dh4cc384888f0f4e69bffec2529fceb0e8%2Fwatchmanputshandinsidelionsenclosureseewhathappenednext-newsid-n629112827 ಜೋಡಿ ಗ್ರಿನ್‌ಹ್ಯಾಮ್ ಗರ್ಭಿಣಿಯಾಗಿದ್ದಾಗ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಪ್ಯಾರಾ ಅಥ್ಲೀಟ್ ಆದರು. ಆಕೆ ಸುಮಾರು 28 ವಾರಗಳ ಅಂದರೆ 7 ತಿಂಗಳ ಗರ್ಭಿಣಿಯಾಗಿದ್ದಳು. ಇದರ ನಡುವೆಯೂ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ನಿರ್ಧರಿಸಿ ಪದಕ ಗೆಲ್ಲುವ ಮೂಲಕ ಇತಿಹಾಸದ ಪುಟಗಳಲ್ಲಿ ಹೆಸರು ದಾಖಲಿಸಿದ್ದಾರೆ. ಜೋಡಿ ಗ್ರಿನ್ಹ್ಯಾಮ್ ಅವರ ಎಡಗೈಯಲ್ಲಿ ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂಬುದು ಗಮನಾರ್ಹ.

Read More

ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 2 ಮತ್ತು 3 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತೆ ವಹಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಗ್ರಾಮದಲ್ಲಿ ಕೆರೆ, ಹಳ್ಳ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇದೆ. ಜಾನುವಾರುಗಳನ್ನು ನೀರು ಕುಡಿಸಲು ಕೆರೆ ಕಟ್ಟೆಗಳ ಬಳಿ ಹೋಗಬಾರದು. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿ, ಪ್ರಾಣ ಹಾನಿ ತಡೆಯುವ ದೃಷ್ಟಿಯಿಂದ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಬೇಕು ಎಂದು ಈ ಮೂಲಕ ಕಲಬುರಗಿ ಜನತೆಯಲ್ಲಿ ಮನವಿ ಮಾಡಿದ್ದಾರೆ.

Read More

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ನಾಳೆ (ಸೆ.3) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯಲ್ಲಿ ಅವರು, 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್.ಎಸ್.ಎಲ್.ಸಿ. ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲಾ ವೃತ್ತದಿಂದ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ…

Read More

ಪ್ರಸಕ್ತ (2024-25) ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್: www.sw.kar.nic.in ನ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿ ನಮೂನೆ (ದೃಢೀಕರಣ), ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ (ದೃಢೀಕರಣ), ಜಾತಿ ದೃಢೀಕರಣ ಪ್ರಮಾಣ ಪತ್ರ (ದೃಢೀಕರಣ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ(ದೃಢೀಕರಣ) ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ(ದೃಢೀಕರಣ) ದಾಖಲಾತಿಗಳನ್ನು ಸಲ್ಲಿಸಬೇಕು. ಅಗತ್ಯ ದಾಖಲಾತಿಗಳನ್ನು ಲಗತ್ತಿಸದೇ ಇರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ,…

Read More

ನವದೆಹಲಿ : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸರ್ಕಾರದ ನಿಯಮಗಳ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ. ಜಾತಿವಾರು ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಕ್ರಮಗಳನ್ನು ಜಾರಿಗೆ ತರಲು ಸಾಮಾಜಿಕ-ಆರ್ಥಿಕ ಜಾತಿವಾರು ಜನಗಣತಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Read More

ನವದೆಹಲಿ : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸರ್ಕಾರದ ನಿಯಮಗಳ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ. ಜಾತಿವಾರು ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದ ಮತ್ತು ಇತರ ಹಿಂದುಳಿದ ವರ್ಗಗಳ ಕಲ್ಯಾಣ ಕ್ರಮಗಳನ್ನು ಜಾರಿಗೆ ತರಲು ಸಾಮಾಜಿಕ-ಆರ್ಥಿಕ ಜಾತಿವಾರು ಜನಗಣತಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಪಿಐಎಲ್ ಒತ್ತಾಯಿಸಿತ್ತು.

Read More

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದಾಗಿ ತಮ್ಮ ಗಂಡನ ಕಣ್ಣಿನ ಆಪರೇಷನ್ ಮಾಡಿಸಿದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಆನಗೋಳ ಗ್ರಾಮದಲ್ಲಿ ತಮ್ಮ ಗಂಡನಿಗೆ ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಆಪರೇಷನ್ ಮಾಡಿದ ಮಹಿಳೆಯೊಬ್ಬರು ವಿಡಿಯೋ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಧನ್ಯವಾದ ತಿಳಿಸಿದ್ದಾರೆ. ಆನಗೋಳ ಗ್ರಾಮದ ಚಂದ್ರಶೇಖರ್ ಬಡಿಗೇರ್ ಎಂಬುವರಿಗೆ ಅವರ ಪತ್ನಿ ಅನಿತಾ ಬಡಿಗೇರ್ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಅನಿತಾ ಕೂಡಿಟ್ಟಿದ್ದರು. ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್​ ಅವರ ಕಣ್ಣಿನ ಆಪರೇಷನ್​ ಮಾಡಿಸಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಕಣ್ಣಿನ ಆಪರೇಷನ್ ಮಾಡಿಸಿದ್ದು, ವಿಡಿಯೋ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದ ನನ್ನ ಗಂಡನ ಕಣ್ಣಿನ ಆಪರೇಷನ್ ಮಾಡಿಸಿದ್ದೇನೆ. ಈ ಯೋಜನೆ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ…

Read More