Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ  ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/swincentive/HAhome.aspx ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು. ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ನೋಂದಾಯಿತ ಸಂಘ-ಸಂಸ್ಥೆ, ಧಾರ್ಮಿಕ ಸಂಸ್ಥೆಗಳು ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಂಪತಿಗಳು ವಿವಾಹವಾಗಿರಬೇಕು ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕನಿಷ್ಠ 10 ಜೋಡಿಗಳು ವಿವಾಹವಾಗಿರತಕ್ಕದ್ದು ಸರಳ…

Read More

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline)  ಕೌನ್ಸಿಲಿಂಗ್ (counseling)  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು…

Read More

ಚಾಮರಾಜನಗರ : ರಾಜ್ಯ ಕಾಂಗ್ರೆಸ್‌ ಸರ್ಕಾರವು ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ, ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದರು. ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ…

Read More

ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೊಂದಾಯಿಸು ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಈ ಪ್ರಯುಕ್ತ ಗ್ರಾಮೀಣ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಇನ್ನೂ ಹೆಚ್ಚಿನ ಸದಸ್ಯರನ್ನು ನೊಂದಾಯಿಸಿಕೊಳ್ಳಲು ಮಾರ್ಚ್ 31 ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಸದಾವಕಾಶವನ್ನು ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

Read More

ನವದೆಹಲಿ: ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಆರು ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ವ್ಯಕ್ತಿಗಳು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ವೆಬ್ ಪೋರ್ಟಲ್ (https://indiancitizenshiponline.nic.in) ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಉಪಕ್ರಮವು ಸೋಮವಾರ ಎಂಎಚ್ಎ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ -2019) ಅಡಿಯಲ್ಲಿ ನಿಯಮಗಳ ಅಧಿಸೂಚನೆಯನ್ನು ಅನುಸರಿಸುತ್ತದೆ. ಈಗ ಪೌರತ್ವ (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯಲ್ಪಡುವ ಈ ನಿಯಮಗಳು, 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ಮೇಲೆ ತಿಳಿಸಿದ ಸಮುದಾಯಗಳಿಗೆ ಸೇರಿದ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲು ಅನುಕೂಲ ಮಾಡಿಕೊಡುತ್ತದೆ. ನರೇಂದ್ರ ಮೋದಿ ಸರ್ಕಾರವು ಮಾರ್ಚ್ 11, 2024 ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ನಿಯಂತ್ರಿಸುವ ನಿಯಮಗಳನ್ನು ಜಾರಿಗೆ ತರುವುದಾಗಿ ಅಧಿಕೃತವಾಗಿ ಘೋಷಿಸಿತ್ತು. ವ್ಯಾಪಕ ಪ್ರತಿಭಟನೆಗಳ…

Read More

ಬೆಂಗಳೂರು :  ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-01-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಕುರಿತಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ ಹಾಗೂ ಉಲ್ಲೇಖದ ಆದೇಶದಂತೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ: 01-01-2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4% ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-01-2024 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದ ಸಿಂಬಂನ 27 ನೇ ತಿರುವಿನಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಸುವರ್ಣ ಸಂಭ್ರಮದ ಸ್ಮರಣಾರ್ಥ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಚೆ ಲಕೋಟೆ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್‌  ರಾಜೇಂದ್ರ‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಇಸ್ಲಾಮಾಬಾದ್ : ಪಾಕಿಸ್ತಾನದ ಮುಲ್ತಾನ್ ನಗರದಲ್ಲಿ ಮಂಗಳವಾರ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಮುಲ್ತಾನ್ನ ಮೊಹಲ್ಲಾ ಜವಾದನ್ನಲ್ಲಿ ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ನಂತರ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೆಸ್ಕ್ಯೂ 1122 ಜಿಲ್ಲಾ ತುರ್ತು ಅಧಿಕಾರಿ ಕಲೀಮ್ ಉಲ್ಲಾ ಜಿಯೋ ನ್ಯೂಸ್ಗೆ ತಿಳಿಸಿದ್ದಾರೆ. ಸಾವಿನ ಸಂಖ್ಯೆಯನ್ನು ದೃಢಪಡಿಸಿದ ಅಧಿಕಾರಿ, ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದ 11 ಜನರಲ್ಲಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಗಾಯಗೊಂಡ ಇಬ್ಬರನ್ನು ನಿಶ್ತಾರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರಲ್ಲಿ ಒಂದೇ ಕುಟುಂಬದ ಏಳು ಮಂದಿ ಸೇರಿದ್ದಾರೆ. ಮೃತರನ್ನು ದಾನಿಶ್ (15), ಫಹೀಮ್ ಅಬ್ಬಾಸ್ (40), ಅಮೀರ್ ಅಲಿ (12), ವಸೀಮ್ (14), ಸನೂಬರ್ (40), ಬುಖ್ತಾವರ್ ಅಮೀನ್ (18) ಮತ್ತು ಕೋಮಲ್ (13) ಎಂದು ಗುರುತಿಸಲಾಗಿದೆ.

Read More

ನವದೆಹಲಿ : ಒಂದೆಡೆ ವಿರೋಧ ಪಕ್ಷಗಳು ಸಿಎಎ ಅನುಷ್ಠಾನವನ್ನು ವಿರೋಧಿಸುತ್ತಿವೆ. ಈ ಘಟನೆಯನ್ನು ವಿರೋಧಿಸಿ ಅಸ್ಸಾಂನಲ್ಲಿಯೂ ಇಂದು ಬಂದ್ ಗೆ ಕರೆ ನೀಡಲಾಗಿದೆ. ಅದೇ ಸಮಯದಲ್ಲಿ,ಮುಸ್ಲಿಂ ಲೀಗ್‌ ಹಾಗೂ ಡಿವೈಎಫ್‌ ಐ ಸಿಎಎ ಜಾರಿಗೆ ವಿರೋಧಿಸಿ ಸುಪ್ರೀಂಕೋರ್ಟ್‌ ಗೆ ಅರ್ಜಿ ಸಲ್ಲಿಸಿವೆ. ಸಿಎಎ ಅಧಿಸೂಚನೆ ಹೊರಡಿಸಿದ ಒಂದು ದಿನದ ನಂತರ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವೆ. ಸಿಎಎ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ ಎಂದು ಇಬ್ಬರೂ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ. ಇದಲ್ಲದೆ, ಸಿಎಎ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಅದನ್ನು ಜಾರಿಗೆ ತರಬಾರದಿತ್ತು. ಸಿಎಎ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿವೆ. ಇವೆಲ್ಲವನ್ನೂ ನ್ಯಾಯಾಲಯವು ಇಲ್ಲಿಯವರೆಗೆ ಆಲಿಸಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಹಿಂಸಿಸಲಾಗುತ್ತಿದೆ ಎಂದು…

Read More