Author: kannadanewsnow57

ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಏಪ್ರಿಲ್‌ 1 ರಿಂದ ಹೊಸ ಆಸ್ತಿ ತೆರಿಗೆಯನ್ನು ಜಾರಿಗೆ ತರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಎಂಟು ವರ್ಷಗಳ ಬಳಿಕ ಬೆಂಗಳೂರಿನಲಿ ಆಸ್ತಿ ತೆರಿಗೆ ಹೆಚ್ಚಳವಾಗುತ್ತಿದೆ. ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಡಿ ಎಲ್ಲ ಮಾದರಿಗಳ ಆಸ್ತಿ ತೆರಿಗೆಯನ್ನು ಕನಿಷ್ಠ 5.3 ರಿಂದ ಗರಿಷ್ಠ 8.2ರವರೆಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 2016 ರಲ್ಲಿ ಕೊನೆಯದಾಗಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿತ್ತು. ಅದಕ್ಕೆ ಹೋಲಿಸಿದರೆ ಈಗ ತೆರಿಗೆಯಲ್ಲಿ ಶೇ. 6.5 ರಷ್ಟು ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.

Read More

ನವದೆಹಲಿ :  ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಇದೀಗ ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್‌ ಪಿ ಮೈತ್ರಿ ಜೊತೆಗೆ ಸೀಟು ಹಂಚಿಕೆ ಫೈನಲ್‌ ಆಗಿದ್ದು, ಟಿಡಿಪಿ 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ-ಟಿಡಿಪಿ-ಜೆಎಸ್‌ ಪಿ ಮೈತ್ರಿ ಔಪಚಾರಿಕವಾಗಿ ಮುದ್ರೆ ಒತ್ತಲಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 6 ಲೋಕಸಭಾ 10 ವಿಧಾನಸಭಾ ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ (ಜೆಎಸ್ಪಿ) 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ. ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಇದರಲ್ಲಿ 175 ವಿಧಾನಸಭಾ ಸ್ಥಾನಗಳು ಮತ್ತು 25 ಲೋಕಸಭಾ ಸ್ಥಾನಗಳಿವೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸೋಮವಾರ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ  ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/swincentive/HAhome.aspx ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು. ವಿಶೇಷ ಸೂಚನೆ : ಸರಳ ವಿವಾಹವಾದ ಒಂದು ವರ್ಷದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ದಂಪತಿಗಳು ಅರ್ಜಿ ಸಲ್ಲಿಸುವುದು.

Read More

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಎರಡು ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇಂದು ಬೆಂಗಳೂರು-ಕಲಬುರಗಿ ಹಾಗೂ ಮೈಸೂರು-ಚೆನ್ನೈ ನಡುವೆ ಸಂಚರಿಸಲಿರುವ ಎರಡು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಈ ಮೂಲಕ  ಕರ್ನಾಟಕದಲ್ಲಿ ಒಟ್ಟು ವಂದೇ ಭಾರತ್‌ ರೈಲುಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಇನ್ನು ತಿರುವನಂತಪುರಂ-ಕಾಸರಗೋಡು ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಿಸಲಾಗಿದ್ದು, ಇದಕ್ಕೂ ಇಂದು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ.

Read More

ಬೆಂಗಳೂರು : ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು.ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500, ₹10,000 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದರು. ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ ಎಂದು ಹೇಳಿದ್ದಾರೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10.…

Read More

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾ.16ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಯೋಜನೆಗೆ ಯಾರು ಅರ್ಹರು?: ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು(ಈಈPಔ), ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ. ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸ್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8970754167, ಸಂಡೂರು ಮೀನುಗಾರಿಕೆ…

Read More

ನವದೆಹಲಿ: ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲು ಪ್ರೋತ್ಸಾಹಿಸುವ ತಮ್ಮ ಸರ್ಕಾರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಿಎಂ ಸೂರ್ಯ ಘರ್ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ, ದೇಶದಲ್ಲಿ ಸೌರ ಶಕ್ತಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ದೇಶದಲ್ಲಿ ವಾಸಿಸುವ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಪಿಎಂ ಸೂರ್ಯ ಘರ್ ಯೋಜನೆ ಮೂಲಕ ದೇಶದ ಕೋಟಿ ಮನೆಗಳಿಗೆ ವಿದ್ಯುತ್ ದೀಪಗಳನ್ನು ಒದಗಿಸಲಾಗುವುದು. ನೀವು ಪಿಎಂ ಸೂರ್ಯ ಘರ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದರೆ ನೀವು ಭಾರತದ ನಿವಾಸಿಯಾಗಿರಬೇಕು. ಈ ಯೋಜನೆಯ ಲಾಭವನ್ನು ಪಡೆಯಲು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಪಿಎಂ ಸೂರ್ಯ ಘರ್ ಯೋಜನೆ 2024 ದೇಶದಲ್ಲಿ ವಾಸಿಸುವ ಕೋಟ್ಯಂತರ ಜನರು ವಿದ್ಯುತ್ ಬಿಲ್ ನಿಂದ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಪಿಎಂ ಸೂರ್ಯ ಘರ್ ಯೋಜನೆ ಮೂಲಕ, ಜನರು…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಸೌತೆಕಾಯಿ ಹೆಚ್ಚು ಪೋಷಕಾಂಶಗಳಿರುವ ತರಕಾರಿ. ಇದರಲ್ಲಿ ತಾಮ್ರ, ಮೆಗ್ನೇಶಿಯಮ್‌, ವಿಟಮಿನ್‌ ಸಿ, ಕೆ, ಪೊಟ್ಯಾಶಿಯಂ ಹಾಗು ಮ್ಯಾಂಗನೀಸ್‌ ಅಂಶಗಳಿವೆ. ನೀರಿನಂಶವೂ ಕೂಡ ಹೇರಳವಾಗಿರುತ್ತದೆ. ಬಿಸಿಲಿಗೆ ದಣಿದು ಬಂದು ಒಂದು ಸೌತೆಕಾಯಿ ತಿಂದರೆ ದೇಹಕ್ಕೆ ಬೇಕಾಗುವಷ್ಟು ನೀರಿನ ಅಂಶ ಈ ತರಕಾರಿ ನೀಡುತ್ತದೆ. ಇದನ್ನು ಹೆಚ್ಚಾಗಿ ಸಲಾಡ್‌ಗಳಲ್ಲಿ ಬಳಸುತ್ತಾರೆ ಏಕೆಂದರೆ ಇದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ಒಟ್ಟಿಗೆ ಒದಗುತ್ತವೆ. ಹಸಿ ಸೌತೆಕಾಯಿಯಲ್ಲಿ ಶೇಕಡಾ 95ರಷ್ಟು ನೀರಿನ ಪ್ರಮಾಣವಿದೆ. ಆದರೆ ಒಂದು ಪ್ರಶ್ನೆ ಇದೆ. ಹಸಿ ಸೌತೆಕಾಯಿ ಸೇವಿಸಿದ ಮೇಲೆ ನೀರು ಕುಡಿಯಬಹುದೇ ಅಥವಾ ಕುಡಿಯಬಾರದೇ ಎಂದು. ಆಹಾರ ತಜ್ಞರ ಅಭಿಪ್ರಾಯದಂತೆ ಸೌತೆಕಾಯಿ ತಿಂದ ಮೇಲೆ ಯಾವುದೇ ಕಾರಣಕ್ಕೂ ನೀರು ಸೇವಿಸಬಾರದು. ಇದರಿಂದ ಆರೋಗ್ಯದ ಮೇಲೆ ಭಾರೀ ಕೆಟ್ಟ ಪರಿಣಾಮ ಬೀರಬಹುದು ಎಂದು ಸಹ ಹೇಳುತ್ತಾರೆ. ಸೌತೆಕಾಯಿಯಲ್ಲಿ ಈಗಾಗಲೇ ಹೇರಳ ಪ್ರಮಾಣದ ನೀರಿನ ಅಂಶ ಹಾಗು ಪೋಷಕಾಂಶಗಳು ಇವೆ. ಇದರ ಮೇಲೆಯೂ ನೀರು ಸೇವಿಸಿದರೆ ದೇಹ ಆ ಪೋಷಕಾಂಶಗಳಿಂದ ವಂಚಿತವಾಗುತ್ತದೆ. ಸೌತೆಕಾಯಿ ತಿಂದ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಬೆಳ್ಳುಳ್ಳಿ ಅಡುಗೆಯ ರುಚಿ ಹೆಚ್ಚಿಸುತ್ತದೆ ನಿಜ. ಆದರೆ ಇದೇ ಬೆಳ್ಳುಳ್ಳಿ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅದೆಷ್ಟೋ ರೋಗಗಳಿಗೆ ಬೆಳ್ಳುಳ್ಳಿ ರಾಮಬಾಣವಾಗಿದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಪ್ರತಿನಿತ್ಯ ಒಂದೆರಡು ಎಸಳು ಸೇವಿಸಿದರೆ ದೇಹಕ್ಕೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನೇಕ ಔಷಧೀಯ ಗುಣವಿರುವ ಅಹಾರ ಪದಾರ್ಥವಾಗಿದೆ. ಬೆಳ್ಳುಳ್ಳಿಯಲ್ಲಿ ಪ್ರೋಟೀನ್‌, ವಿಟಮಿನ್‌ ಎ, ಸಿ, ಬಿ , ಜಿಂಕ್‌, ಕ್ಯಾಲ್ಸಿಯಂ, ಮೆಗ್ನೀಸಿಯಂ ಅಂಶಗಳು ಹೇರಳವಾಗಿವೆ. ಇನ್ನು ಇದರಲ್ಲಿ ಕಡಿಮೆ ಕ್ಯಾಲೋರಿ ಇದೆ. ಇಷ್ಟೆಲ್ಲಾ ಪೋಷಕಾಂಶಗಳನ್ನು ಹೊಂದಿದ ಬೆಳ್ಳುಳ್ಳಿಯಲ್ಲಿ ಸಣ್ಣ ಪುಟ್ಟ ಜ್ವರ ಕೆಮ್ಮಿನಿಂದ ಹಿಡಿದು ಕ್ಯಾನ್ಸರ್‌ಗೆ ಕಾರಣವಾಗುವ ಕೋಶಗಳ ವಿರುದ್ಧವೂ ಹೋರಾಡುವ ಶಕ್ತಿ ಇದೆ. ಅಡುಗೆ ಮಾಡುವಾಗ ಬೆಳ್ಳುಳ್ಳಿ ಬಳಸುವುದ ಸಹಜ. ಇದಲ್ಲದೇ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಅಥವಾ ಹುರಿದ ಬೆಳ್ಳುಳ್ಳಿ ತಿಂದರೆ ಆರೋಗ್ಯಕ್ಕೆ ಆಗುವ ಪ್ರಯೋಜನೆಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಹುರಿದು ತಿಂದರೆ ದೀರ್ಘಕಾಲದವರೆಗೆ ಹೃದಯದ ಆರೋಗ್ಯ ಕ್ಷೇಮವಾಗಿರುತ್ತದೆ. ಹೃದಯ ಸಂಬಂಧಿ ಕಾಯಿಲೆಗಳನ್ನು ಇದು ದೂರ ಮಾಡುತ್ತದೆ. ಬೆಳ್ಳುಳ್ಳಿ ಕೊಲೆಸ್ಟ್ರಾಲ್‌…

Read More