Author: kannadanewsnow57

ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕೃಣಾ ಘಟಕ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಛಯ, ವಾಣಿಜ್ಯ ಕಟ್ಟಡಗಳು, ವಿದ್ಯಾರ್ಥಿ ನಿಲಯಗಳು, ಶಿಕ್ಷಣ ಸಂಸ್ಥೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರ ತಿಳಿಸಿದೆ. ತ್ಯಾಜ್ಯ ನೀರು ಸಂಸ್ಕರಿಸಿ ಮರು ಬಳಕೆಗೆ ಸಂಬಂಧಿಸಿದಂತೆ 2016 ರ ಸರ್ಕಾರಿ  ಅಧಿಸೂಚನೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೊಸ ಅಂಶಗಳನ್ನು ಸೇರಿಸಿ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ.

Read More

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಪಕ್ಷ ಹೇಳಿದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಹೇಳಿದ್ರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲಿದಿದ್ದರೆ ಇಲ್ಲ. ಹಾವೇರಿ, ಬೆಳಗಾವಿಯಿಂದ ನನ್ನನ್ನು ಕರೆಯುತ್ತಿದ್ದಾರೆ. ಆದರೆ ಹುಬ್ಬಳ್ಳಿ-ಧಾರವಾಡಕ್ಕೆ ಬಹಳ ಜನ ಬೆಂಬಲ ತೋರಿಸುತ್ತಿದ್ದಾರೆ ಎಂದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಜನರ ಒತ್ತಡ ಬಹಳಷ್ಟಿದ್ದು, ಪಕ್ಷದ ನಾಯಕರು ಹೇಳಿದ್ರೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

Read More

ಚಾಮರಾಜನಗರ : ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದು ಹೇಳಿದ್ದಾರೆ. ನಾನು ಈ ಹಿಂದೆ 12 ಬಾರಿ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೆ. ಈ ಭಾರಿ ಸರ್ಕಾರ ರಚನೆಯಾದ ಬಳಿಕ ಎರಡನೇ ಭಾರಿ ಬಂದಿದ್ದೇನೆ. ಇಲ್ಲಿಗೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದರು.

Read More

ಚಾಮರಾಜನಗರ : ಸಂವಿಧಾನ ಬದಲಿಸುವುದು ಬಿಜೆಪಿಯ ಹಿಡನ್‌ ಅಜೆಂಡಾ, ಸಂಸದ ಅನಂತ್‌ ಕುಮಾರ ಹೆಗಡೆ ಮೂಲಕ ಅದನ್ನು ಹೇಳಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಅನಂತ್‌ ಕುಮಾರ ಹೆಗಡೆ ಆರ್ಡಿನರಿ ವ್ಯಕ್ತಿ ಅಲ್ಲ, ಐದು ಸಲ ಸಂಸದರು, ಸಚಿವರಾಗಿದ್ದವರು. ಸಂವಿಧಾನ ಬದಲಿನ ವಿಚಾರ ಹೇಳಬೇಕಾದ್ರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗುತ್ತಾ, ಅವರ ವಿರುದ್ಧ ಏನಾದ್ರೂ ಕ್ರಮ ತೆಗೆದುಕೊಂಡರಾ? ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು ಬಿಜೆಪಿಯವರು ಸಂವಿಧಾನ ಜಾರಿಯಾದ ದಿನದಿಂದಲೂ ವಿರೋಧ ಮಾಡಿಕೊಂಡು ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಅವರನ್ನು ಹೀನಾಯವಾಗಿ ಸೋಲಿಸಿ ಎಂದು ಹೇಳಿದ್ದಾರೆ.

Read More

ನವದೆಹಲಿ : ದೇಶ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್‌ ಫ್ರಂಟ್‌ ನ್ನು ಐದು ವರ್ಷಗಳ ನಿಷೇಧ ಹೇರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.  ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (JKNF)ನ್ನ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘಟನೆ’ ಎಂದು ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ನಿಷೇಧಿಸಿದೆ. ಗೃಹ ಸಚಿವಾಲಯವು ತನ್ನ ಆದೇಶದಲ್ಲಿ, ತೀವ್ರಗಾಮಿ ಹುರಿಯತ್ ಕಾನ್ಫರೆನ್ಸ್ನ ಘಟಕವಾದ ಜೆಕೆಎನ್ಎಫ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿದೆ. ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ಹಾನಿಕಾರಕವಾದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಜೆಕೆಎನ್ಎಫ್ ತೊಡಗಿದೆ ಎಂದು ಸರ್ಕಾರ ಹೇಳಿದೆ. ” ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ…

Read More

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮೂಲಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಯಿತು ಎಂದು ಪ್ರಧಾನಿ ಮೋದಿ ಹೇಳಿದರು. ಯುಕೆ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ. ನಾವು ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚಿಸಿದ್ದೇವೆ. ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಶೀಘ್ರ ತೀರ್ಮಾನಕ್ಕಾಗಿ ಕೆಲಸ ಮಾಡುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ‘ಚಲೋ ಇಂಡಿಯಾ’ ಮತ್ತು ‘ಲಿವಿಂಗ್ ಬ್ರಿಡ್ಜ್’ ಎಂಬ ಎರಡು ಪ್ರಮುಖ ಅಭಿಯಾನಗಳನ್ನು ಪ್ರಾರಂಭಿಸಿದೆ. ‘ಚಲೋ ಇಂಡಿಯಾ’ ಅಭಿಯಾನವು ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಲಿವಿಂಗ್ ಬ್ರಿಡ್ಜಸ್ ಅಭಿಯಾನವು ಯುಕೆಯಲ್ಲಿ ಭಾರತೀಯ ಮೂಲದ ಜನರ ಕೊಡುಗೆಯನ್ನು ಆಚರಿಸಲು. ಭಾರತದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ತಮ್ಮ…

Read More

ಬೆಂಗಳೂರು : 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆಯನ್ನು ಮುಂದೂಡಿಕೆಯಾಗಿದೆ. ಮಾರ್ಚ್ 15 & 16 ರಂದು ನಡೆಸಲು ಉದ್ದೇಶಿಸಲಾಗಿದ್ದ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆ / Physical ನ್ನು (PST & PET) ಕಾರಣಾಂತರಗಳಿಂದ ಮುಂದೂಡಿ ಇದೀಗ ಮಾರ್ಚ್ 18 & 19 ರಂದು ನಡೆಸಲು ಉದ್ದೇಶಿಸಲಾಗಿದೆ.

Read More

ಬೆಂಗಳೂರು : ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್‌ ಕ್ರಮವನ್ನು ಸ್ವಯಂಚಾಲಿತ ವ್ಯವಸ್ಥೆ ಇಂದಿನಿಂದ ಜಾರಿಯಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯ ಸೇವೆಯಾಗಿರುವಂತ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ದಾಖಲಾಗೋದಕ್ಕೆ ಗ್ರಾಮಾಧಿಕಾರಿಗಳು ದೃಢೀಕರಣದ ನಂತ್ರ ದಾಖಲಾಗುತ್ತಿದ್ದವು. ಆದ್ರೇ ಇದಕ್ಕೆ ತಿಲಾಂಜನಿ ನೀಡಲಾಗಿದೆ. ಇನ್ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿದ್ದಾವೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಹೇಳಿದರು. ಆಯಾ ಪಹಣಿ ಮೇಲೆ ಬ್ಯಾಂಕ್‌ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ  ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/swincentive/HAhome.aspx ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು. ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ನೋಂದಾಯಿತ ಸಂಘ-ಸಂಸ್ಥೆ, ಧಾರ್ಮಿಕ ಸಂಸ್ಥೆಗಳು ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಂಪತಿಗಳು ವಿವಾಹವಾಗಿರಬೇಕು ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕನಿಷ್ಠ 10 ಜೋಡಿಗಳು ವಿವಾಹವಾಗಿರತಕ್ಕದ್ದು ಸರಳ…

Read More

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline)  ಕೌನ್ಸಿಲಿಂಗ್ (counseling)  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು…

Read More