Subscribe to Updates
Get the latest creative news from FooBar about art, design and business.
Author: kannadanewsnow57
ಕಲಬುರಗಿ : ಕಲಬುರಗಿಯ ಆಳಂದಲ್ಲಿ ಮತಗಳವು ಪ್ರಕರಣದಲ್ಲಿ ಆಳಂದ ಕ್ಷೇತ್ರದ ಮಾಜಿ ಶಾಸಕ ಸುಭಾಷ್ ಗುತ್ತೇಧಾರ್ ಪಾತ್ರ ದೃಢವಾಗಿದ್ದು, ಈ ಬಗ್ಗೆ ಎಸ್ ಐಟಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಎಸ್ ಐಟಿಯು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ 22,000 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮತ ಕಳವು ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ ಅವರ ಪುತ್ರ ಹರ್ಷಾನಂದ ಗುತ್ತೇದಾರ ಹಾಗೂ ಪಶ್ಚಿಮ ಬಂಗಾಳ ಮೂಲದ ಆದ್ಯ ಸೇರಿ 7 ಮಂದಿಯನ್ನು ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿದ್ದರು. ಆಳಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಜ್ಯ ಸರ್ಕಾರ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಿದ್ದು, ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮತಗಳವು ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮನೆಯ ಮೇಲೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಸುಭಾಷ್ ಗುತ್ತೇದಾರ್ ಮನೆ…
ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ. ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ನೆಲೆಸಿರುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ನೀಡಲಾಗಿದೆ. ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ಇದರಿಂದಾಗಿ ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಮತ್ತು 199ಸಿ ಸೇರಿಸಿ ಏ.7ರಂದು ಅಧಿಸೂಚನೆ ಹೊರಡಿಸಿದೆ. ಇದರನ್ವಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕ) ನಿಯಮ-2025ನ್ನು ರೂಪಿಸಿದೆ. ಹೊಸ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳ ಬಗ್ಗೆ ನಿಯಮಗಳಲ್ಲಿ ತಿಳಿಸಲಾಗಿದೆ. ಪಂಚಾಯತಿ ವ್ಯಾಪ್ತಿಯಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ನಿನ್ನೆ ಸಂಜೆ ಅಪಘಾತವಾಗಿದೆ. ನೈಸ್ ರಸ್ತೆ ಬಳಿ ಹುಲ್ಲು ತೆರವು ಮಾಡುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ರಂಗಮ್ಮ ಮತ್ತು ಚೌಡಮ್ಮಗೆ ವಾಹ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ರಾಜ್ಯ ಸರ್ಕಾರವು ಎ ಖಾತಾ ನೀಡುವ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದೆ. ಬೆಂಗಳೂರು ನಗರದಲ್ಲಿ ಭೂ ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡ ಮತ್ತು ನಿವೇಶನಗಳಿಗೆ ಬಿ ಖಾತಾದಿಂದ ಪರಿವರ್ತನೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿರುವುದು ನಿಜವೇ? ಗ್ರಾಮೀಣ ಪ್ರದೇಶದಲ್ಲಿ ಭೂ ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡ ಮತ್ತು ನಿವೇಶನಗಳಿಗೆ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಗ್ರಾಮ ಠಾಣಾಗಳಲ್ಲಿ ಭೂ-ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ಕಟ್ಟಿಕೊಂಡಿರುವ ಮನೆ ಮತ್ತು ಖಾಲಿ ನಿವೇಶನಗಳಿಗೆ ಎ ಖಾತಾ ಮಾದರಿಯ/ ಇ-ಸ್ವತ್ತು ನೀಡಿ ಸಕ್ರಮಗೊಳಿಸುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದಿಲ್ಲವೇ; ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ರ ನಿಯಮ 8ರಲ್ಲಿ ಭೂ-ಪರಿವರ್ತನೆಯಾಗದ ಮತ್ತು ಕಂದಾಯ ನಿವೇಶನಗಳಲ್ಲಿ ಕಟ್ಟಿಕೊಂಡಿರುವ ಮನೆ…
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಹೊಸದಾಗಿ ಮುಖ; ಇಂಜಿನಿಯರ್ ಹಾಗೂ ಅಧೀಕ್ಷಕ ಇಂಜಿನಿಯರ್ ಕಛೇರಿಗಳನ್ನು ಸೃಜಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025 ರಂದು ಜರುಗಿದ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಮೇಕೆದಾಟು ಯೋಜನೆಯನ್ನು ಯಾವುದೇ ಅಡೆತಡೆ ಇಲ್ಲದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರಸ್ಥಾನವನ್ನಾಗಿಸಿ, ಅಲ್ಲಿ ಒಂದು ಪ್ರತ್ಯೇಕ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವಲಯ ಕಛೇರಿಯನ್ನು ಮತ್ತು ಅಧೀಕ್ಷಕ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವೃತ್ತ ಕಛೇರಿಯನ್ನು ಸೃಜಿಸಿ ಕಾರ್ಯನಿರ್ವಹಿಸಲು ಸೂಕ್ತ ಕ್ರಮವಹಿಸುವಂತೆ ನಿರ್ಣಯಿಸಲಾಗಿರುತ್ತದೆ. ದಿನಾಂಕ: 10.12.2025 ರ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕಾವೇರಿ ನೀರಾವರಿ ನಿಗಮ ನಿಯಮಿತ ಇವರು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿ, ಮಾನ್ಯ ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025ರ ಸಭೆಯ ನಿರ್ಣಯದಂತೆ…
ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, 2026 ರ ಹಂಗಾಮಿಗೆ ಕೊಬ್ಬರಿ ಅಥವಾ ಒಣಗಿದ ತೆಂಗಿನಕಾಯಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಕೊಬ್ಬರಿ MSP ಹೆಚ್ಚಳ 2026) ಹೆಚ್ಚಿಸಿದೆ. ಇದು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುತ್ತದೆ, ಏಕೆಂದರೆ ಅವರು ಈಗ ತಮ್ಮ ಕೊಬ್ಬರಿಗೆ ಹೆಚ್ಚಿನ ಬೆಲೆಗಳನ್ನು ಪಡೆಯುತ್ತಾರೆ. ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಕ್ವಿಂಟಲ್ ಗೆ 445 ರೂ. ಹಾಗೂ ಉಂಡೆ ಕೊಬ್ಬರಿಯ ಬೆಲೆಯನ್ನು 400 ರೂ.ಗೆ ಏರಿಕೆ ಮಾಡಿದೆ. ಇದರಿಂದ ಹೋಳು ಕೊಬ್ಬರಿ ಬೆಲೆ 12027 ರೂ., ಉಂಡೆ ಕೊಬ್ಬರಿ ಬೆಲೆ 12500 ರೂ.ಗೆ ಏರಿಕೆಯಾಗಿದೆ. ಡಿಸೆಂಬರ್ 12, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರವು ನ್ಯಾಯಯುತ ಸರಾಸರಿ ಗುಣಮಟ್ಟದ ಮಿಲ್ಲಿಂಗ್ ಕೊಬ್ಬರಿಗೆ ಕ್ವಿಂಟಾಲ್‌ಗೆ ₹12,027 ಮತ್ತು ಬಾಲ್ ಕೊಬ್ಬರಿಗೆ ₹12,500 ಎಂದು MSP ನಿಗದಿಪಡಿಸಿದೆ. ಕೇಂದ್ರ ಸಚಿವರು ಏನು ಹೇಳಿದರು? “ಕೇಂದ್ರ…
ನವದೆಹಲಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (MNREGA) ಹೆಸರನ್ನು ‘ಪೂಜ್ಯ ಬಾಪು ರೋಜಗಾರ್ ಯೋಜನೆ’ ಎಂದು ಬದಲಿಸಲು ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುನಾಮಕರಣ ಮಾಡುವ ಮಸೂದೆಯನ್ನು ಅನುಮೋದಿಸಿದೆ. ಗ್ರಾಮೀಣ ಉದ್ಯೋಗ ಮತ್ತು ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಲು ಈ ಬದಲಾವಣೆಯನ್ನು ಮಾಡಲಾಗುತ್ತಿದೆ ಎಂದು ಸರ್ಕಾರ ಹೇಳುತ್ತದೆ. MNREGA ಅಡಿಯಲ್ಲಿ, ಗ್ರಾಮೀಣ ಕುಟುಂಬಗಳ ವಯಸ್ಕ ಸದಸ್ಯರು ಕೆಲಸವನ್ನು ಕೋರಬಹುದು. ಪಂಚಾಯತ್ ಮಟ್ಟದಲ್ಲಿ ಉದ್ಯೋಗವನ್ನು ಒದಗಿಸಲಾಗುತ್ತದೆ. ಕೊಳ ನಿರ್ಮಾಣ, ರಸ್ತೆ ದುರಸ್ತಿ, ಚರಂಡಿ ಅಗೆಯುವುದು, ತೋಟಗಾರಿಕೆ, ಮಣ್ಣಿನ ಕೆಲಸ ಮತ್ತು ಇತರ ಸಮುದಾಯ ಕೆಲಸಗಳಂತಹ ಕೆಲಸಗಳು ಬದಲಾಗುತ್ತವೆ. ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಮತ್ತು ಜೀವನೋಪಾಯ ಭದ್ರತೆಯ ಪ್ರಮುಖ ಮೂಲವಾಗಿದೆ. ಸರ್ಕಾರಿ ಮೂಲಗಳ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಹಣದುಬ್ಬರ ಮತ್ತು ಉದ್ಯೋಗ ಕೊರತೆಯನ್ನು…
ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಬಾಕಿ ಇರುವ ಗೃಹಲಕ್ಷ್ಮೀ ಹಣವನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಶೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್ಳ. ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು. ಆಗಸ್ಟ್ ವರೆಗೆ ಎಲ್ಲಾ ಹಣ ಪಾವತಿ ಮಾಡಲಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಹಣವನ್ನು ಸದ್ಯದಲ್ಲೇ ಪಾವತಿಸಲಾಗುವುದು. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿಲ್ಲ ಎಂದಾದರೆ ಕೂಡಲೇ ಬಿಡುಗಡೆ ಮಾಡಿಸಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿಯನ್ನು ರಾಜ್ಯ ಸರ್ಕಾರವು ಪ್ರಕಟಿಸಿದೆ. ರಾಜ್ಯದ ಹಲವು ಇಲಾಖೆಗಳಲ್ಲಿ 2.84 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ
ಕರ್ನಾಟಕ ಒನ್‍ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ದಾಖಲಿಸಲು ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತಾ ಸೃಜನೆ ಮತ್ತು ಹಕ್ಕು ವರ್ಗಾವಣೆ ಮಾಡಲು ಇ-ಆಸ್ತಿ ತಂತ್ರಾಂಶ ಬಳಕೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸುವ ಮತ್ತು ದಾಖಲೆಗಳ ಸ್ಕ್ಯಾನ್ ಮಾಡುವ ಒತ್ತಡ ಕಡಿಮೆ ಮಾಡುವ ದೃಷ್ಟಿಯಿಂದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ. ಚಿತ್ರದುರ್ಗ ನಗರಸಭೆಯಿಂದ ಅಧಿಕೃತವಾದ ಕರ್ನಾಟಕ ಒನ್ ಕೇಂದ್ರಗಳ ವಿಳಾಸ ಹಾಗೂ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ವಿವರ ಇಂತಿದೆ. ನಗರದ ಎಂ.ಎಸ್.ಬಿ.ಎಂ ರಸ್ತೆ, ಇ ಅಂಡ್ ಟಿ ಕ್ಲೀನಿಕ್ ಮುಂಭಾಗ-9164335550, ಭೀಮಪ್ಪನಾಯಕ ರಸ್ತೆಯ, ಒಕ್ಕಲಿಗರ ಹಾಸ್ಟೆಲ್ ಕಾಂಪ್ಲೆಕ್ಸ್ ಮಳಿಗೆ ಬಾಯ್ಸ್ ಕಾಲೇಜು ಮುಂಭಾಗ-789928692, ಜೆ.ಸಿ.ಆರ್. ಸರ್ಕಲ್ ಮುಖ್ಯರಸ್ತೆ-9060825090, ಚಿಕ್ಕಪೇಟೆ ಉಚ್ಚೆಂಗಿ ಯಲ್ಲಮ್ಮ ದೇವಸ್ಥಾನ ಹತ್ತಿರ-7019552892, ಜಿಲ್ಲಾ ಕೇಂದ್ರ ಗ್ರಂಥಾಲಯ ಮುಂಭಾಗ-8296151971, ಹೊಳಲ್ಕೆರೆ ರಸ್ತೆ, ಮಾರಮ್ಮ ದೇವಸ್ಥಾನ ಪಕ್ಕ-7019552892, ನಗರಸಭೆ ಮಳಿಗೆ…














