Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ಬರೋಬ್ಬರಿ 9,195 ಕಾನ್ಸ್ಟೇಬಲ್ (ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮ್ಯಾನ್) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಮತ್ತು ಪ್ರಮುಖ ಮಾಹಿತಿ ಒಟ್ಟು ಹುದ್ದೆಗಳು: 9,195 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಏಪ್ರಿಲ್ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಮೇ 2026 ಅಧಿಕೃತ ವೆಬ್‌ಸೈಟ್: rect.crpf.gov.in ಅಥವಾ crpf.gov.in ಶೈಕ್ಷಣಿಕ ಅರ್ಹತೆ ಡ್ರೈವರ್: ಹತ್ತನೇ ತರಗತಿ (Matric) ಉತ್ತೀರ್ಣರಾಗಿರಬೇಕು ಮತ್ತು ಭಾರೀ ಸಾರಿಗೆ ವಾಹನ ಚಾಲನಾ ಪರವಾನಗಿ (Heavy Vehicle Driving License) ಹೊಂದಿರಬೇಕು. ಮೆಕ್ಯಾನಿಕ್ ಮೋಟಾರ್ ವೆಹಿಕಲ್: ಹತ್ತನೇ ತರಗತಿಯೊಂದಿಗೆ 2 ವರ್ಷದ ITI (Mechanic Motor Vehicle) ಪೂರ್ಣಗೊಳಿಸಿರಬೇಕು. ಇತರ ಟ್ರೇಡ್‌ಗಳು: ಹತ್ತನೇ ತರಗತಿ ಉತ್ತೀರ್ಣ ಹಾಗೂ ಸಂಬಂಧಪಟ್ಟ ಕೆಲಸದಲ್ಲಿ ಪರಿಣಿತಿ ಹೊಂದಿರಬೇಕು. ಪಯೋನಿಯರ್ ವಿಂಗ್ (ಮೇಸನ್/ಎಲೆಕ್ಟ್ರಿಷಿಯನ್): ಹತ್ತನೇ ತರಗತಿಯೊಂದಿಗೆ…
ಮಾನವನ ದೇಹವು ಪ್ರಕೃತಿಯ ಅದ್ಭುತ ಕೊಡುಗೆ. ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲದಿದ್ದರೂ, ಅಂತರಾಷ್ಟ್ರೀಯ ಕಪ್ಪು ಮಾರುಕಟ್ಟೆಯ (Black Market) ಅಂಕಿಅಂಶಗಳ ಪ್ರಕಾರ ಮಾನವನ ದೇಹದ ಕೆಲವು ಅಂಗಗಳು ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತವೆ ಎಂಬ ವಿಷಯ ನಿಮಗೆ ತಿಳಿದಿದೆಯೇ? ಒಂದು ಹೃದಯ ಅಥವಾ ಕಿಡ್ನಿಯ ಬೆಲೆ ಎಷ್ಟು ಇರಬಹುದು? ಈ ಕುರಿತಾದ ಆಘಾತಕಾರಿ ಮಾಹಿತಿ ಇಲ್ಲಿದೆ. ಅನಾರೋಗ್ಯದ ಕಾರಣದಿಂದ ಅಂಗಾಂಗ ಕಸಿ ಅನಿವಾರ್ಯವಾದಾಗ ಅಥವಾ ಅಕ್ರಮ ವ್ಯವಹಾರಗಳ ದೃಷ್ಟಿಯಿಂದ ನೋಡಿದಾಗ, ಮಾನವನ ದೇಹದ ಭಾಗಗಳಿಗೆ ವಿಪರೀತ ಬೇಡಿಕೆ ಇರುವುದು ಕಂಡುಬರುತ್ತದೆ. ಒಬ್ಬ ಸಾಮಾನ್ಯ ಮನುಷ್ಯನ ದೇಹದ ವಿವಿಧ ಅಂಗಗಳ ಒಟ್ಟು ಮೌಲ್ಯ ಅಕ್ಷರಶಃ ಕೋಟಿ ರೂಪಾಯಿಗಳಲ್ಲಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಕೋಟಿಗಳಲ್ಲಿ ಮಾರಾಟವಾಗುವ ‘ಹೃದಯ’! ಮಾನವನ ದೇಹದಲ್ಲಿ ಅತ್ಯಂತ ದುಬಾರಿ ಅಂಗವೆಂದರೆ ಅದು ಹೃದಯ. ವ್ಯಕ್ತಿಯ ಪ್ರಾಣವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಹೃದಯಕ್ಕೆ ಕಪ್ಪು ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಅಂದಾಜಿನ ಪ್ರಕಾರ, ಒಂದು ಹೃದಯದ ಮೌಲ್ಯ ಸುಮಾರು 7 ಕೋಟಿಯಿಂದ…
ಬೆಂಗಳೂರು: ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ವಿವಾಹಿತ ಮಹಿಳೆಯರ ಆದಾಯ ಪ್ರಮಾಣ ಪತ್ರದ ವಿಷಯದಲ್ಲಿ ನಡೆಯುತ್ತಿದ್ದ ಸುದೀರ್ಘ ಕಾನೂನು ಹೋರಾಟಕ್ಕೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ (KAT) ಗುರುವಾರ ಮಹತ್ವದ ತೀರ್ಪು ನೀಡುವ ಮೂಲಕ ತೆರೆ ಎಳೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 15,000 ಹೈಸ್ಕೂಲ್ (6-8) ಶಿಕ್ಷಕರ ನೇಮಕಾತಿಗೆ ಆದೇಶಿಸಲಾಗಿತ್ತು. ಈ ಸಂದರ್ಭದಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಅಥವಾ ಪಾಲಕರ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕೆಂಬ ಬಗ್ಗೆ ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟತೆ ಇರಲಿಲ್ಲ.ಸುಮಾರು 480 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಈ ಗೊಂದಲದಿಂದಾಗಿ ಸ್ಥಗಿತಗೊಂಡಿತ್ತು. ಪಾಲಕರ ಆದಾಯ ಪತ್ರ ಸಲ್ಲಿಸಿದವರನ್ನು ನೇಮಕಾತಿಗೆ ಪರಿಗಣಿಸಿರಲಿಲ್ಲ. ನ್ಯಾಯಾಲಯದ ನಿರ್ದೇಶನ ಸರ್ಕಾರದ ಈ ನಡೆಯನ್ನು ಕೆಎಟಿ ತರಾಟೆಗೆ ತೆಗೆದುಕೊಂಡಿದೆ. ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟತೆ ನೀಡದ ಕಾರಣ ಇದು ಸರ್ಕಾರದ ತಪ್ಪಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.ಪತಿಯ ಆದಾಯ ಪ್ರಮಾಣ ಪತ್ರ ನೀಡಿದ ಅಭ್ಯರ್ಥಿಗಳಿಗೆ ತೊಂದರೆಯಾಗಬಾರದು ಮತ್ತು ಸರ್ಕಾರದ ತಪ್ಪಿನಿಂದಾಗಿ ಪಾಲಕರ ಆದಾಯ…
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ರಾಜ್ಯದ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 15 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಜಿಲ್ಲೆಗಳು: ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಂಭವವಿದೆ. ರಾಜ್ಯದ ಒಟ್ಟು 15 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರಬಹುದು. ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ. ಮಧ್ಯ ಹಾಗೂ ಕರಾವಳಿ: ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿತ್ರದುರ್ಗ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ಇಂಧನ ಪೂರೈಕೆಯ ಮೇಲೆ ಭಾರಿ ಪರಿಣಾಮ ಬೀರಿದೆ. ಭಾರತದಲ್ಲೂ ತೈಲ ಮತ್ತು ಅನಿಲದ ಕೊರತೆ ಎದುರಾಗಿದ್ದು, ಇದನ್ನು ಸರಿಪಡಿಸಲು ಹಾಗೂ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮೇ 1, 2026 ರಿಂದ ಎಲ್‌ಪಿಜಿ (LPG) ಗ್ರಾಹಕರಿಗೆ ಐದು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಗ್ಯಾಸ್ ಗ್ರಾಹಕರು ಗಮನಿಸಬೇಕಾದ ಆ 5 ಪ್ರಮುಖ ಬದಲಾವಣೆಗಳು ಇಲ್ಲಿವೆ: 1. ಸಂಪೂರ್ಣ ಡಿಜಿಟಲ್ ಬುಕಿಂಗ್ ವ್ಯವಸ್ಥೆ ಗ್ಯಾಸ್ ಏಜೆನ್ಸಿಗಳಿಗೆ ಅಲೆಯುವ ಕಾಲ ಇನ್ನು ಮುಗಿಯಿತು. ಗ್ಯಾಸ್ ಬುಕಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ಡ್ ಕಾಲ್ ನೀಡುವ ಮೂಲಕ ಅಥವಾ ವಾಟ್ಸಾಪ್ (WhatsApp) ಸಂದೇಶದ ಮೂಲಕ ಸುಲಭವಾಗಿ ಸಿಲಿಂಡರ್ ಬುಕ್ ಮಾಡಬಹುದು. 2. ಡೆಲಿವರಿ ಅಥೆಂಟಿಕೇಶನ್ ಕೋಡ್ (DAC) ಕಡ್ಡಾಯ ಸುರಕ್ಷತೆಯ ದೃಷ್ಟಿಯಿಂದ ಈಗ ಒಟಿಪಿ (OTP) ಆಧಾರಿತ ವಿತರಣಾ ಕ್ರಮವನ್ನು ಜಾರಿಗೆ ತರಲಾಗಿದೆ. ಗ್ಯಾಸ್ ಡೆಲಿವರಿ ಬಾಯ್ ಮನೆಗೆ ಬಂದಾಗ,…
ನವದೆಹಲಿ: ಚುನಾವಣೆಯ ಬೆನ್ನಲ್ಲೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ದೊಡ್ಡ ಶಾಕ್ ಎದುರಾಗಿದೆ. ಮೇ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ (19 ಕೆಜಿ) ಸಿಲಿಂಡರ್ ದರದಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಲಾಗಿದೆ. ಆದರೆ, ಸಾಮಾನ್ಯ ಜನರಿಗೆ ಸಮಾಧಾನಕರ ಸಂಗತಿಯೆಂದರೆ ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪ್ರಮುಖ ನಗರಗಳಲ್ಲಿ ಇಂದಿನ ವಾಣಿಜ್ಯ ಸಿಲಿಂಡರ್ ದರಗಳು: ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಹೊಸ ದರದ ಪಟ್ಟಿ ಹೀಗಿದೆ: ದೆಹಲಿ: ₹2078.50 ಇದ್ದ ದರ ಈಗ ₹3071.50 ಕ್ಕೆ ಏರಿಕೆಯಾಗಿದೆ. ಮುಂಬೈ: ವಾಣಿಜ್ಯ ಸಿಲಿಂಡರ್ ಬೆಲೆ ₹3024 ತಲುಪಿದೆ. ಕೋಲ್ಕತ್ತಾ: ಇಲ್ಲಿ ಅತಿ ಹೆಚ್ಚು ಅಂದರೆ ₹994 ಹೆಚ್ಚಳವಾಗಿದ್ದು, ಹೊಸ ದರ ₹3202 ಆಗಿದೆ. ಚೆನ್ನೈ: ಸಿಲಿಂಡರ್ ಬೆಲೆ ₹3237 ಕ್ಕೆ ಏರಿದೆ. ಪಾಟ್ನಾ: ಇಲ್ಲಿ ವಾಣಿಜ್ಯ ಸಿಲಿಂಡರ್ ದರ ₹3361 ಆಗಿದೆ. ಇಂದಿನಿಂದ ಹೊಸ ನಿಯಮ: ಒಟಿಪಿ (OTP) ಇಲ್ಲದೆ ಸಿಲಿಂಡರ್ ಸಿಗಲ್ಲ! ಬೆಲೆ…
5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದರಿಂದ ಶಾಲಾ ದಾಖಲಾತಿ, ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರಿ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ ಸೇರಿದಂತೆ ಶೈಕ್ಷಣಿಕ ಸವಲತ್ತುಗಳ ಲಾಭ ಪಡೆಯಲು ಅಪ್ಡೇಟ್ ಮಾಡುವುದು ಅತ್ಯಗತ್ಯವಾಗಿದೆ. ಹಾಗಾಗಿ ಪೋಷಕರು ಕೂಡಲೇ ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಮಕ್ಕಳಿಗೆ ಸರಿಯಾದ ಸಮಯಕ್ಕೆ ತಲುಪುವಂತೆ ಮಾಡಲು ಪೋಷಕರು ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು ‘ಸಮಾಧಾನ ಸಮಾರೋಹ್’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಹಾಗೂ ಕೆಎಎಲ್‌ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ಹೇಳಿದರು. ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್ ಕುರಿತು, ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನ ಮೊದಲ ಮಹಡಿಯಲ್ಲಿರುವ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕೆ ಇದು ವಿಶೇಷ ಲೋಕ್ ಅದಾಲತ್ ಆಗಿದೆ. ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ದಾವೆಗಳನ್ನು ಪರಸ್ಪರ ಒಪ್ಪಿಗೆ ಮತ್ತು ಸಂಧಾನದ ಮೂಲಕ ಬಗೆಹರಿಸಿ, ದಾವೆದಾರರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಮಾತನಾಡಿ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ…
ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಯುಜಿಸಿ (UGC) ಅರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂತಹ 3,853 ಉಪನ್ಯಾಸಕರನ್ನು ಮಾನವೀಯ ನೆಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ‘ಶೈಕ್ಷಣಿಕ ಸಂಯೋಜಕರು’ ಆಗಿ ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಯುಜಿಸಿ ಅರ್ಹತೆ ಇಲ್ಲದಿದ್ದರೂ, ಕನಿಷ್ಠ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ 3,853 ಅತಿಥಿ ಉಪನ್ಯಾಸಕರಿಗೆ ಈ ಆದೇಶ ಅನ್ವಯವಾಗಲಿದೆ.ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಕಾನೂನು ಪ್ರಕಾರ ಯುಜಿಸಿ ಅರ್ಹತೆ ಇಲ್ಲದವರನ್ನು ಅತಿಥಿ ಉಪನ್ಯಾಸಕ ಸೇವೆಯಿಂದ ತೆಗೆಯಬೇಕಾಗುತ್ತದೆ. ಆದರೆ, ಅವರ ಸುದೀರ್ಘ ಸೇವೆಯನ್ನು ಪರಿಗಣಿಸಿ ಮಾನವೀಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಇವರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ ನೇಮಿಸಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು…
ನವದೆಹಲಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರಿಗೆ ಗರ್ಭಪಾತ ಮಾಡಿಸಿಕೊಳ್ಳಲು ವಿಧಿಸಲಾಗಿರುವ 20 ವಾರಗಳ ಕಾಲಮಿತಿಯು ಸಮಂಜಸವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, ಅಬಾರ್ಷನ್‌ಗೆ ಅವಕಾಶ ನೀಡದಿದ್ದರೆ ಸಂತ್ರಸ್ತೆಯು ಜೀವನಪೂರ್ತಿ ಆಘಾತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಅತ್ಯಾಚಾರದಂತಹ ಭೀಕರ ಅಪರಾಧಕ್ಕೆ ತುತ್ತಾಗಿ ಗರ್ಭಧರಿಸುವ ಸಂತ್ರಸ್ತೆಯರ ವಿಷಯದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ಅತ್ಯಂತ ಮಾನವೀಯ ಮತ್ತು ಕಾನೂನಾತ್ಮಕ ಕಳಕಳಿಯನ್ನು ವ್ಯಕ್ತಪಡಿಸಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯರು ಅಥವಾ ಬಾಲಕಿಯರು ತಡವಾದ ಹಂತದಲ್ಲಿ ಗರ್ಭಪಾತ ಮಾಡಿಸಿಕೊಳ್ಳಲು ಬಯಸಿದರೆ, ಅಂತಹ ಸಂದರ್ಭಗಳಲ್ಲಿ ಪ್ರಸ್ತುತ ಇರುವ ‘ಗರ್ಭಾವಸ್ಥೆಯ ಸಮಯದ ಮಿತಿ’ಯನ್ನು (Gestational Time Limit) ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ಹಿನ್ನೆಲೆ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಅವರಿದ್ದ ಪೀಠವು ಈ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿತು. 15 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿಯೊಬ್ಬಳು 30 ವಾರಗಳಿಗೂ ಹೆಚ್ಚಿನ ಗರ್ಭವನ್ನು ಹೊಂದಿದ್ದು, ಅದರ ಮುಕ್ತಾಯಕ್ಕೆ…














