Author: kannadanewsnow57

ನವದೆಹಲಿ : ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. 10 ನೇ ತರಗತಿ, ಇಂಟರ್ಮೀಡಿಯೇಟ್, ಪದವಿ, ಎಂಜಿನಿಯರಿಂಗ್ ಮುಂತಾದ ಅಧ್ಯಯನವನ್ನು ಪೂರ್ಣಗೊಳಿಸಿದ ಮತ್ತು ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಅನೇಕ ಕೇಂದ್ರ ಸರ್ಕಾರಿ ಸಂಸ್ಥೆಗಳು ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿವೆ. ಇಲ್ಲಿದೆ ಖಾಲಿ ಹುದ್ದೆಗಳ ವಿವರ * ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ -2024 (ಎಸ್ಎಸ್ಸಿ ಸಿಜಿಎಲ್ 2024) ಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಮೂಲಕ ವಿವಿಧ ಕೇಂದ್ರ ಸಚಿವಾಲಯಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಇಲಾಖೆಗಳಲ್ಲಿ 17,727 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಟೈರ್-1 ಮತ್ತು ಟೈರ್-2 ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ https://ssc.nic.in/ ಸಂಪರ್ಕಿಸಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) 2025-2026ನೇ ಸಾಲಿನ ಸಾಮಾನ್ಯ…

Read More

ಬೆಂಗಳೂರು : ಸಾಮಾನ್ಯ ಭವಿಷ್ಯ ನಿಧಿ ಖಾತೆಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು ರೂ. 5 ಲಕ್ಷಗಳಿಗೆ ಮಿತಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು ರೂ.5.00 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ.

Read More

ಬೆಂಗಳೂರು: ಕೆಎಸ್ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಕೆಎಸ್‌ ಆರ್‌ ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಸ್‌ ಟಿಕೆಟ್‌ ದರ ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ ಬಸ್‌ ಟಿಕೆಟ್‌ ದರ ಏರಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಕೆಎಸ್‌ ಆರ್‌ ಟಿಸಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳವಾಗಿವೆ. ಹೀಗಾಗಿ ಬಸ್‌ ಟಿಕೆಟ್‌ ದರ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಶೀಘ್ರವೇ ಬಸ್‌ ಟಿಕೆಟ್‌ ದರ ಏರಿಕೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು : ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ  ಜುಲೈ 27 ರ ಇಂದು, ಜುಲೈ 28 ರ ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.   ವಿದ್ಯುತ್ ವಿತರಣಾ ಕೇಂದ್ರದ ಹೆಸರು 220/66/11 ಕೆವಿ ಹೆಬ್ಬಾಳ ಕೇಂದ್ರದಲ್ಲಿ 220ಕೆವಿ ಸಹಕಾರನಗರ-ಮಾನ್ಯತಾ ಜಿಐಎಸ್-ಹೆಬ್ಬಾಳ ಮಾರ್ಗದ ಬಿ ಹಂತದ ಕೇಬಲ್ ಸರಿಪಡಿಸುವ ಕೆಲಸಗಳಿಂದಾಗಿ ದಿನಾಂಕ 27.07.2024 ರಂದು ಬೆಳಿಗ್ಗೆ 11:00 ರಿಂದ 15:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜುಲೈ 27 ರಂದು ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್ಎ ಲೇಔಟ್,…

Read More

ಬೆಂಗಳೂರು : ಸಚಿವ ಜಮೀರ್‌ ಅಹ್ಮದ್ ಖಾನ್‌ ಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್‌ ಗೆ ಹೈಕೋರ್ಟ್‌ ತಡೆ ನೀಡಿದೆ. ಸಚಿವ ಜಮೀರ್‌ ಅಹ್ಮದ್ ಖಾನ್‌ ವಿರುದ್ದ‌ ನವಲಗುಂದ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜಮೀರ್ ಅಹ್ಮದ್ ಆಯ್ಕೆ ಪ್ರಶ್ನಿಸಿ ಅವರದ್ದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಇದೀಗ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಜಮೀರ್ ಅಹ್ಮದ್‌ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.

Read More

ಶಿವಮೊಗ್ಗ : ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತçದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಒಟ್ಟು 173 ಮತ್ತು ಮಹಿಳೆ 16 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್-12 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ. ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 02 ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881. ಕುಂಸಿ ಪುರುಷ 02 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 18, – ಘಟಕಾಧಿಕಾರಿ ಜಗದೀಶ್ -9900283490. ಹೊಳೆಹೊನ್ನೂರು ಪುರುಷ 06, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್…

Read More

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ ಕುಟುಂಬಗಳು ಕಟ್ಟಬೇಕಿದ್ದ 1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ ₹1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ ವಂತಿಕೆಯ ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

Read More

ನವದೆಹಲಿ  : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ರಾಜ ಸರ್ಕಾರದ ಪತನ ಶುರುವಾಗಿದ್ದು, 2028 ಕ್ಕೆ ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ.  ಅಲ್ಲಿವರೆಗೆ ಅವರು ಖುಷಿಯಾಗರಲಿ , ರಾಮನಗರದ ಇತಿಹಾಸ ಗೊತ್ತಿದ್ಯಾ? ಇತಿಹಾಸಗೊತ್ತಿದ್ದರೆ ಅದನ್ನು ತೆಗೆಯುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಎಂದು ಹೆಸರು ಇಟ್ಟಾಗ ಏಕೆ ವಿರೋಧಿಸಲಿಲ್ಲ. ವಿಧಾನಸಭೆಯಲ್ಲಿ ಏಕೆ ಮಾತನಾಡಲಿಲ್ಲ. ಜಿಲ್ಲೆಯ ಹೆಸರು ಬದಲಾಯಿಸಲು ಅರ್ಜಿ ಕೊಟ್ಟವರು ಯಾರು? ಜಿಲ್ಲೆಯ ಹೆಸರು ಬದಲಾಯಿಸಿದ್ರೆ ಏನು ಸಿಗುತ್ತದೆ. ರಾಮನಗರ ಈಗಾಗಲೇ ಅಭಿವೃದ್ಧಿ ಆಗಿದೆ. ಜಿಲ್ಲೆಯ ಹೆಸರು ಬದಲಾಯಿಸಿ ಭೂಮಿಯ ಬೆಲೆ ಹೆಚ್ಚಿಸಬೇಕಾ? ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿದೆಯಾ? ಏನು ಅಭಿವೃದ್ಧಿ ಮಾಡಿದ್ರೆ ಏನು ಪ್ರಯೋಜನ ಬಂತು ಎಂದು ಕಿಡಿಕಾರಿದ್ದಾರೆ.

Read More

ನವದೆಹಲಿ : ವ್ಯವಹಾರಕ್ಕಾಗಿ ಅತ್ತೆ-ಮಾವಂದಿರನ್ನು ಹಣ ಕೇಳುವುದು ವರದಕ್ಷಿಣೆ ಅಲ್ಲ ಎಂದು ಅಹಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಪತಿ ಮತ್ತು ಅವರ ಸಂಬಂಧಿಕರ ವಿರುದ್ಧ ಮಹಿಳೆ ದಾಖಲಿಸಿದ್ದ ವರದಕ್ಷಿಣೆ ಕ್ರೌರ್ಯ ಪ್ರಕರಣವನ್ನು ರದ್ದುಗೊಳಿಸಿದೆ. ಆರೋಪಗಳು ಅಸ್ಪಷ್ಟ ಮತ್ತು ಸಾಕಾಗುವುದಿಲ್ಲ ಎಂದು ನ್ಯಾಯಾಲಯವು ಕಂಡುಕೊಂಡಿದೆ, ಮುಖ್ಯವಾಗಿ ಪತಿ ಮತ್ತು ಅವನ ಕುಟುಂಬವು ವ್ಯವಹಾರವನ್ನು ಪ್ರಾರಂಭಿಸಲು ಪೋಷಕರಿಂದ 2 ಲಕ್ಷ ರೂ.ಗಳನ್ನು ಪಡೆಯುವಂತೆ ಮಹಿಳೆಯ ಮೇಲೆ ಒತ್ತಡ ಹೇರಿದೆ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿದೆ. ಐಪಿಸಿಯ ಸೆಕ್ಷನ್ 498 ಎ ಅಥವಾ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3/4 ರ ಅಡಿಯಲ್ಲಿ ಅಂತಹ ಹಣಕಾಸಿನ ವಿನಂತಿಯು ವರದಕ್ಷಿಣೆಯಾಗುವುದಿಲ್ಲ ಎಂದು ನ್ಯಾಯಮೂರ್ತಿ ಅನೀಶ್ ಕುಮಾರ್ ಗುಪ್ತಾ ಅವರ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. “ಪತಿ ತನ್ನ ಅತ್ತೆ ಮಾವಂದಿರಿಂದ ವ್ಯವಹಾರ ನಡೆಸಲು ತಕ್ಷಣದ ಎಫ್ಐಆರ್ನಲ್ಲಿ ಆರೋಪಿಸಿರುವಂತೆ ಹಣದ ಬೇಡಿಕೆಯು ವರದಕ್ಷಿಣೆ ವ್ಯಾಪ್ತಿಗೆ ಬರುವುದಿಲ್ಲ. ” ಎಂದು ನ್ಯಾಯಾಲಯ ಹೇಳಿದೆ. ಮಹಿಳೆ ಮಾಡಿದ ಇತರ ಹೇಳಿಕೆಗಳು…

Read More

ಬೆಂಗಳೂರು : ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿಯಲ್ಲಿ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಸಭೆಯಲಿ ನಿರ್ಧರಿಸಲಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Read More