Author: kannadanewsnow57

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿ, ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. (ಪುತಿ ಲಗತ್ತಿಸಿದೆ). ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ…

Read More

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1816775672830001434?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಮುಡಾ ಹಗರಣದ ಕುರಿತಂತೆ ಮತ್ತೊಂದು ಸಂಚಲನ ಶುರುವಾಗಿದ್ದು, ಸಚಿವ ಭೈರತಿ ಸುರೇಶ್ ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಇನ್ನು ಮುಡಾ ಬದಲಿ ಸೈಟ್ ಪಡೆದುಕೊಂಡವರ ಪಟ್ಟಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೆಸರು ಸಹ ಇದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಡಾದಲ್ಲಿ ಜಿ.ಟಿ.ದೇವೇಗೌಡ, ಸಿ.ಎನ್​.ಮಂಜೇಗೌಡ, ಹೆಚ್​.ವಿಶ್ವನಾಥ್​. ಸಾ.ರಾ.ಮಹೇಶ್, ಹೆಚ್.ಡಿ.ಕುಮಾರಸ್ವಾಮಿಗೂ ನಿವೇಶನ ಹಂಚಿಕೆ ಇವರಿಗೆಲ್ಲರಿಗೂ ಬದಲಿ ನಿವೇಶನ ಹಂಚಿಕೆಯಾಗಿದೆ ಎಂದು ಸಚಿವ ಬೈರತಿ ಸುರೇಶ್‌ ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದಿನ ಐದು ದಿನಗಳಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ನಿವೃತ್ತಿಯಾಗಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಒಂದು ವಾರ ಮುಂದೂಡಿದೆ.  ಬಿ.ಎಸ್.‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಚಾರ್ಜ್‌ ಶೀಟ್‌ ಹಿನ್ನೆಲೆಯಲ್ಲಿ ಪ್ರಕರಣವನು ರದ್ದು ಕೋರಿ ಬಿ.ಎಸ್.‌ ಯಡಿಯೂರಪ್ಪ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಒಂದು ವಾರ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1816775672830001434?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ನಾನು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ’’ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದ್ದು, ಇದು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷ ಮತ್ತು ನನ್ನ‍ನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಯೋಜಿತ ಪಿತೂರಿಯಾಗಿದೆ. ವ್ಯವಸ್ಥೆಯಲ್ಲಿ ಎಲ್ಲಕ್ಕಿಂತಲೂ ಸರ್ವೋಚ್ಚವಾದುದು ಜನತಾ ನ್ಯಾಯಾಲಯ. ವಿರೋಧ ಪಕ್ಷಗಳು ಆರೋಪಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ಭೂ ದಾಖಲೆಗಳ ಆಧರಿಸಿದ ನನ್ನ ಹೇಳಿಕೆಯನ್ನು ನಾನು ಇಂದು ರಾಜ್ಯದ ಜನತೆಯ ಮುಂದೆ ಇಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಜವರನ ಮಗ ನಿಂಗ ಎನ್ನುವವರು 2-8-1935 ರಲ್ಲಿ ಮೈಸೂರು ತಾಲ್ಲೂಕು ಕಛೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದರು. ಅದರ ಪ್ರಕಾರ 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದರು. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ…

Read More

ಬೆಂಗಳೂರು : ಸಾಮಾನ್ಯ ಭವಿಷ್ಯ ನಿಧಿ ಖಾತೆಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು ರೂ. 5 ಲಕ್ಷಗಳಿಗೆ ಮಿತಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು ರೂ.5.00 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ.

Read More

ಬೆಂಗಳೂರು : ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ ಎಂದರು.

Read More

ಬೆಂಗಳೂರು : ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು. ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು. ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ…

Read More