Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಬಿಲ್ಡರ್ಸ್‍ ಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಲ್ಡರ್ಸ್ ಗಳ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಳಗಾವಿ : ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಪರ್ಯಾಲೋಚನೆಗೆ ಪ್ರಸ್ತಾಪಿಸಿದಾಗ, ಸದನ ಧ್ವನಿ ಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಿತು. ಈ ಹಿಂದೆ ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಮರು ನಾಮಕರಣಗೊಂಡಿದೆ. ಇದೇ ವೇಳೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ ಅನುಮೋದನೆಗೆ ಪ್ರಸ್ತಾಪಿಸಿದಾಗ ಯಾವುದೇ ಚರ್ಚೆ ಇಲ್ಲದೆ ಸದನ ಅಂಗೀಕರಿಸಿತು. ಈ ವಿಧೇಯಕದ ಉದ್ದೇಶವೇನೆಂದರೆ ರಾಜ್ಯ ಸರ್ಕಾರ ಮೂಲಕದ ಸಂಬAಧಪಟ್ಟ ಕ್ಷೇತ್ರದಿಂದ ವಿಶೇಷ ತಜ್ಞರನ್ನು ವಿಶ್ವ ವಿದ್ಯಾನಿಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸುವುದಾಗಿದೆ.

Read More

ಬೆಳಗಾವಿ : ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್ ಅವರು, ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ ಜಾಗ ನಿಗದಿಪಡಿಸಲಾಗಿತ್ತು, 10000 ಮಂದಿ ಸೇರಲು ಅವಕಾಶ ನೀಡಲಾಗಿತ್ತು. ಅವರ ಮನವಿ ಆಲಿಸಲು 3 ಮಂದಿ ಸಚಿವರನ್ನು ಕಳುಹಿಸಲಾಗಿತ್ತು. ಆದರೆ ಪ್ರತಿಭಟನೆ ಸ್ಥಳಕ್ಕೆ ಮುಖ್ಯಮಂತ್ರಿಗಳು ಬರಬೇಕೆಂದು ಪಟ್ಟು ಹಿಡಿದು, ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಕಾನೂನು ಸುವ್ಯವಸ್ಥೆ ಕಾಪಾಡಲು ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಕೈಗೊಂಡ ಕ್ರಮ ತೆರೆದ ಪುಸ್ತಕದಂತೆ ಇದ್ದು ಯಾವುದೇ ತನಿಖೆ ನಡೆಸುವ ಅಗತ್ಯವೇ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿದರು. ಲಾಠಿ ಚಾರ್ಜ್ ಘಟನೆಯನ್ನು ನ್ಯಾಯoಗ ತನಿಖೆಗೆ ಒಳಪಡಿಸುವoತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

Read More

ಬೆಳಗಾವಿ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು. ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ…

Read More

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ ಹೆಚ್ಚಿನ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಠಿಯಿಂದ ಪ್ರತ್ಯೇಕ ಪ್ರಾಧಿಕಾರ ರಚನೆ ಸರ್ಕಾರ ವಿಧೇಯಕ ಮಂಡಿಸಿದೆ. ಇದಕ್ಕೆ ಸದಸ್ಯರು ಪರ್ಯಾಲೋಚಿಸಿ ಅನುಮತಿ ನೀಡಬೇಕು ಎಂದು ಕೋರಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧೇಯಕವನ್ನು ಸ್ವಾಗತಿಸಿ, ಬಸವನಬಾಗೇವಾಡಿ ವ್ಯಾಪ್ತಿ ಲೋಕಸಭಾ ಸದ್ಯಸರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಬೇಕು. ಇದರಿಂದ ಕೇಂದ್ರ ಸರ್ಕಾರದ ಅನುದಾನ ಪಡೆಯುವಲ್ಲಿ ಸಹಾಯವಾಗುತ್ತದೆ ಎಂದು ತಿಳಿಸಿದರು. ಲೋಕಸಭಾ ಸದಸ್ಯರು ಹಾಗೂ ಮುದ್ದೇಬಿಹಾಳ ಶಾಸಕರನ್ನು ಸಹ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿಸುವ ತಿದ್ದುಪಡಿಯೊಂದಿಗಿನ ವಿಧೇಯಕಕ್ಕೆ…

Read More

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿದೆ. ಈ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನೇಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ಓಓಡಿ ( On Official Duty – OOD) ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮಂಡ್ಯ ಉಪವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ನೋಂದಣಿ ಸಮಿತಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- 2024 ರಿಂದ ದಿನಾಂಕ:22-12-2024 ರಂದು ಜರುಗಲಿದ್ದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು…

Read More

ಬೆಳಗಾವಿ : ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್‌ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ…

Read More

‘ಚಿಡೋ’ ಚಂಡಮಾರುತವು ಶನಿವಾರ (ಡಿಸೆಂಬರ್ 14) ಫ್ರಾನ್ಸ್‌ನ ಹಿಂದೂ ಮಹಾಸಾಗರದ ಮಯೊಟ್ಟೆ ದ್ವೀಪ ಸಮೂಹವನ್ನು ಅಪ್ಪಳಿಸಿದ್ದು, ಈ ಪ್ರದೇಶದಲ್ಲಿ ಭಾರಿ ವಿನಾಶಕ್ಕೆ ಕಾರಣವಾಯಿತು. ಚಂಡಮಾರುತವು ದ್ವೀಪದ ಫ್ರೆಂಚ್ ಭಾಗಕ್ಕೆ ಗಂಟೆಗೆ 200 ಕಿಲೋಮೀಟರ್ (124 mph) ವರೆಗೆ ಗಾಳಿಯನ್ನು ತಂದಿತು, ಇದು ಹೆಚ್ಚಾಗಿ ಬಡ ಪ್ರದೇಶವನ್ನು ಹೊಂದಿದೆ. ಈ ಚಂಡಮಾರುತವು ದ್ವೀಪ ಪ್ರದೇಶದಲ್ಲಿ ಎಲ್ಲವನ್ನೂ ನಾಶಪಡಿಸಿತು. ಫ್ರಾನ್ಸ್ ಟಿವಿ ವರದಿಯ ಪ್ರಕಾರ, ಈ ದುರಂತದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಬಹುಶಃ ಈ ಸಂಖ್ಯೆ ಸುಮಾರು ಒಂದು ಸಾವಿರ ಅಥವಾ ಸಾವಿರಾರು ಇರಬಹುದು” ಎಂದು ಟಿವಿ ಚಾನೆಲ್ ಮಯೊಟ್ಟೆ ಎಲ್’ಅರಿಯೆರ್‌ನಲ್ಲಿ ಅಧಿಕಾರಿ ಹೇಳಿದರು. 90 ವರ್ಷಗಳಲ್ಲೇ ಅತ್ಯಂತ ಭೀಕರ ಚಂಡಮಾರುತ ಶನಿವಾರದ ಚಂಡಮಾರುತವು 90 ವರ್ಷಗಳಲ್ಲಿ ಮಯೊಟ್ಟೆಗೆ ಅಪ್ಪಳಿಸಿದ ಅತ್ಯಂತ ಭೀಕರ ಚಂಡಮಾರುತವಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ‘ನನ್ನ ಆಲೋಚನೆಗಳು ಮಾಯೊಟ್ಟೆಯಲ್ಲಿರುವ ನಮ್ಮ ದೇಶದ ಜನರೊಂದಿಗೆ ಇವೆ, ಅವರು ಅತ್ಯಂತ ಭಯಾನಕ ಕೆಲವು ಗಂಟೆಗಳನ್ನು ಸಹಿಸಿಕೊಂಡಿದ್ದಾರೆ. ಕೆಲವರು ಎಲ್ಲವನ್ನೂ ಕಳೆದುಕೊಂಡಿದ್ದಾರೆ, ಪ್ರಾಣ…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಒನ್ ನೇಷನ್ ಒನ್ ಎಲೆಕ್ಷನ್’ ಮಸೂದೆಯನ್ನು ಡಿಸೆಂಬರ್ 17 ರ ಇಂದು ಲೋಕಸಭೆಯಲ್ಲಿ ಮಂಡಿಸಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಎರಡು ಮಹತ್ವದ ಮಸೂದೆಗಳನ್ನು ಮಂಡಿಸಲಿದ್ದಾರೆ ಎಂದು ಸರ್ಕಾರ ಘೋಷಿಸಿದೆ. ಇವುಗಳಲ್ಲಿ ಅಧಿಕೃತವಾಗಿ ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಎಂದು ಹೆಸರಿಸಲಾದ ಒಎನ್ಒಪಿ ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ ಸೇರಿವೆ. ಒಂದು ರಾಷ್ಟ್ರ ಒಂದು ಚುನಾವಣೆ ಎಂದರೇನು? ಸರಳವಾಗಿ ಹೇಳುವುದಾದರೆ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಭಾರತೀಯರು ಒಂದೇ ಸಮಯದಲ್ಲಿ ಅಥವಾ ಒಂದೇ ವರ್ಷದಲ್ಲಿ ಮತ ಚಲಾಯಿಸಬೇಕಾಗುತ್ತದೆ. ಪ್ರಸ್ತುತ, ದೇಶವು ಹೊಸ ಕೇಂದ್ರ ಸರ್ಕಾರವನ್ನು ಆಯ್ಕೆ ಮಾಡುವ ಸಮಯದಲ್ಲಿ ಹೊಸ ರಾಜ್ಯ ಸರ್ಕಾರಕ್ಕೆ ಮತ ಹಾಕಲು ಹೊರಟಿರುವ ಕೆಲವು ರಾಜ್ಯಗಳು ವಾಸ್ತವವಾಗಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…

Read More