Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್ಲೋಡ್ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿಗಳ ಇ – ಖಾತಾ ದಾಖಲೆ ವಿತರಣೆ ಆಂದೋಲನ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ಜುಲೈ ತಿಂಗಳಿನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. 25 ಸಾವಿರ ಆಸ್ತಿಗಳ ದಾಖಲೆಗಳು ಸಿದ್ಧವಿದ್ದು, ಜುಲೈ 1ರಿಂದ ಆಸ್ತಿಗಳ ಇ – ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, 5 ಲಕ್ಷ ಮಂದಿ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿದ್ದಾರೆ. ಇನ್ನೂ 20 ಲಕ್ಷ ಆಸ್ತಿಗಳ ದಾಖಲೆ ಸಿದ್ಧಪಡಿಸುವುದು…
ಇತ್ತೀಚೆಗೆ ನಿರ್ಮಿಸಲಾದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ ವೈಮಾನಿಕ ನೋಟ ಮತ್ತು ಕ್ಲೋವರ್ ಎಲೆ ವಿನ್ಯಾಸದ ಫೋಟೋಗಳು ಮತ್ತು ವೀಡಿಯೊಗಳು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ಅದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆಯುತ್ತಿದೆ. ಮೂಲಸೌಕರ್ಯ ಅದ್ಭುತವನ್ನು ಬಳಕೆದಾರರು ಮೆಚ್ಚಿಕೊಂಡರು, ಇದನ್ನು “ವಿಶ್ವ ದರ್ಜೆಯ” ಮತ್ತು “ಅದ್ಭುತ” ಎಂದು ಕರೆದರು. ಹೂವಿನ ಬಳ್ಳಿಗಳನ್ನು ಹೋಲುವ ಅಂಕುಡೊಂಕಾದ ರಸ್ತೆಗಳು ಅನೇಕರಿಂದ ಮೆಚ್ಚುಗೆಯನ್ನು ಗಳಿಸಿದವು, ಆದರೆ ಕೆಲವರು ತೆರಿಗೆದಾರರ ಹಣವನ್ನು ಬಳಸಿ ನಿರ್ಮಿಸಲಾದ ಅಂತಹ ಮೂಲಸೌಕರ್ಯಗಳಿಗೆ ವಿಧಿಸಲಾದ ಟೋಲ್ ಶುಲ್ಕವನ್ನು ಟೀಕಿಸಿದರು. “ಇದು ₹17,930 ಕೋಟಿಗೂ ಹೆಚ್ಚು ವೆಚ್ಚದಲ್ಲಿ NHAI ಹೊಸದಾಗಿ ನಿರ್ಮಿಸಿದ ಬೆಂಗಳೂರು-ಚೆನ್ನೈ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ, ಭಾಗಶಃ ಕಾರ್ಯನಿರ್ವಹಿಸುತ್ತಿದೆ ಮತ್ತು ಜೂನ್ 2026 ರ ವೇಳೆಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ರಚಿಸಲು ಬಳಸಲಾಗುತ್ತಿದೆ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಓವರ್‌ಹೆಡ್ ಸೇತುವೆಗಳನ್ನು ಹೊಂದಿರುವ ವಿಶಾಲವಾದ 10-ಲೇನ್ ರಸ್ತೆಗಳ ಎರಡೂ ಬದಿಗಳಲ್ಲಿ ದೃಶ್ಯಗಳು ಹಸಿರನ್ನು…
ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ನಲ್ಲಿ ವಿಮಾನ ದುರಂತ ಸಂಭವಿಸಿದ್ದು, 270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದೀಗ ವಿಮಾನ ಅಪಘಾತ ಎಐ ವಿಡಿಯೋ ವೈರಲ್ ಆಗಿದೆ. ವಿಮಾನ ಅಪಘಾತಕ್ಕೆ ಸಂಬಂಧಿಸಿದ AI ವೀಡಿಯೊವೊಂದು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ. 242 ಪ್ರಯಾಣಿಕರಿದ್ದ ವಿಮಾನವು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೆಘಾನಿ ನಗರದಲ್ಲಿ ಕಳೆದ ಗುರುವಾರ ಅಂದರೆ ಜೂನ್ 12 ರಂದು ಪತನವಾಗಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ವಿಮಾನವು ಹಾರಾಟ ನಡೆಸಿದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ಇದರಲ್ಲಿ 169 ಭಾರತೀಯರು, 53 ವಿದೇಶಿ ಪ್ರಜೆಗಳು ಇದ್ದರು.
ಉತ್ತರ ಗಾಜಾದಲ್ಲಿರುವ ತನ್ನ ತಾತ್ಕಾಲಿಕ ಮನೆಯಿಂದ 2 ವರ್ಷದ ಪುಟ್ಟ ಮಗುವೊಂದು ಹೊರಗೆ ಓಡುತ್ತಿರುವ ಭಯಾನಕ ವಿಡಿಯೋ ವೈರಲ್ ಆಗಿದೆ. ತನ್ನ ಕುಟುಂಬಕ್ಕೆ ಕುಡಿಯುವ ನೀರು ತರಲು ಪ್ರಯತ್ನಿಸುತ್ತಾ, ತನ್ನ ಗಾತ್ರದ ಎರಡು ಜೆರಿಕ್ಯಾನ್ಗಳನ್ನು ಹೊತ್ತೊಯ್ಯುತ್ತಿರುವ ಬಾಲಕಿಯನ್ನು ಈ ಗೊಂದಲದ ದೃಶ್ಯಗಳು ತೋರಿಸುತ್ತವೆ. ಯುದ್ಧದ ಕರುಣಾಜನಕ ಸ್ಥಿತಿ ಮತ್ತು ಮಿಲಿಟರಿ ಉದ್ದೇಶಗಳನ್ನು ಸಾಧಿಸಲು ಆಹಾರ ಮತ್ತು ನೀರಿನ ಪ್ರವೇಶವನ್ನು ಕಡಿತಗೊಳಿಸಿದ ಇಸ್ರೇಲ್ನ ದಿಗ್ಬಂಧನದ ಕ್ರೌರ್ಯವನ್ನು ಈ ವೀಡಿಯೊ ಎತ್ತಿ ತೋರಿಸುತ್ತದೆ. ಇಂತಹ ಘಟನೆಗಳು ಮಕ್ಕಳಿಗೆ ಅಗಾಧವಾದ ಆಘಾತವನ್ನು ಉಂಟುಮಾಡುತ್ತವೆ ಎಂದು ಪ್ರಪಂಚದಾದ್ಯಂತದ ತಜ್ಞರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಯುನಿಸೆಫ್ ಅಂದಾಜಿನ ಪ್ರಕಾರ, ಗಾಜಾ ಪಟ್ಟಿಯಲ್ಲಿ ಸ್ಥಳಾಂತರಗೊಂಡ ಮಕ್ಕಳು ದಿನಕ್ಕೆ ಕೇವಲ 1.5 ರಿಂದ 2 ಲೀಟರ್ ನೀರನ್ನು ಪಡೆಯುತ್ತಿದ್ದಾರೆ – ಬದುಕುಳಿಯುವ ಕನಿಷ್ಠ ಅವಶ್ಯಕತೆಗಳಿಗಿಂತ ಕಡಿಮೆ. ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ಕನಿಷ್ಠ ನೀರಿನ ಪ್ರಮಾಣ ದಿನಕ್ಕೆ 15 ಲೀಟರ್ ಎಂದು ಮಾನವೀಯ ಮಾನದಂಡಗಳು ಹೇಳುತ್ತವೆ, ಇದರಲ್ಲಿ ಕುಡಿಯಲು, ತೊಳೆಯಲು ಮತ್ತು ಅಡುಗೆ…
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಗುರುವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ ಆಗಬಾರದು ಎಂದು ಧರ್ಮಜ ಉತ್ತಪ್ಪ ಅವರು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವು ಮಾಲೀಕರು ತಮ್ಮ ಕಾರ್ಮಿಕರ ಪಡಿತರ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಅದನ್ನು ಕೂಡಲೇ ಪಡಿತರ ಚೀಟಿದಾರರ ಕುಟುಂಬಕ್ಕೆ ಹಿಂತಿರುಗಿಸಬೇಕು. ಅಲ್ಲದೇ ಪಡಿತರಚೀಟಿ ಹೊಂದಿರುವವರೂ ಸಹ ಹಣದಾಸೆಗೆ ತಮಗೆ ದೊರೆಯುವ ಪಡಿತರವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ. ಈ…
ಬೆಂಗಳೂರು : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸ್ಥಿತಿಯನ್ನ ಸುಧಾರಿಸಲು ಸರ್ಕಾರ ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಅದ್ರಲ್ಲಿ ಈ ಉಚಿತ ಹೊಲಿಗೆ ಯಂತ್ರ ಯೋಜನೆಯೂ ಒಂದು. ಈ ಯೋಜನೆಯಡಿ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನ ನೀಡಲಾಗುತ್ತಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು…
ಧಾರವಾಡ : ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ ಎಸ್.ಎಸ್.ಎಲ್.ಸಿ ಫಲಿತಾಂಶದ ರ್ಯಾಂಕಿಂಗ್ದ್ಲ್ಲಿ ಸ್ವಲ್ಪ ಹಿನ್ನಡೆ ಆಯಿತ್ತು. ಆದರೆ ದೀರ್ಘಕಾಲದಲ್ಲಿ ಮಿಷನ್ ವಿದ್ಯಾಕಾಶಿಯ ಪರಿಣಾಮಕಾರಿ ಬದಲಾವಣೆ, ಪ್ರಯೋಜನೆ, ಸುಧಾರಣೆಗಳು ಎದ್ದು ಕಾಣುತ್ತವೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಸುಧಾರಣೆ ಮತ್ತು ಬಲವರ್ಧನೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಧಾರವಾಡ ಐಐಐಟಿ ಸಹಯೋಗದಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈಿನ್ ಮೂಲಕ ಶಾಲೆಯ ಸ್ಮಾರ್ಟ ಬೋರ್ಡಗಳಿಂದ ನೇರ ಪಾಠಗಳನ್ನು ಕಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು (ಜೂ.19) ಬೆಳಿಗ್ಗೆ ಧಾರವಾಡ ಐಐಐಟಿ ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾಶಕ್ತಿ ಕಾರ್ಯಕ್ರಮ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ,…
ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಅಂಚೆ ಕಚೇರಿಯಲ್ಲಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಕೆ ಕಾರಣ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಆರತಕ್ಷತೆ ವೇಳೆ ದಾಳಿ ನಡೆಸಿ ಅಧಿಕಾರಿಗಳು ಬಾಲ್ಯ ವಿವಾಹ ತಡೆದಿರುವ ಘಟನೆ ನಡೆದಿದೆ. ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಚನ್ನಪ್ಪ ಸುಬ್ಬಮ್ಮ ಕಲ್ಯಾಣಮಂಟಪದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಆರತಕ್ಷತೆ ತಡೆದಿದ್ದಾರೆ. ಪೋಷಕರು 17 ವರ್ಷದ ಬಾಲಕಿಗೆ ಮದುವೆ ಮಾಡಿಸುತ್ತಿದ್ದರು. ವಿಷಯ ತಿಳಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ದೂರಿನ ಮೇರೆಗೆ ಪೋಲಿಸರೊಂದಿಗೆ ದಾಳಿ ನಡೆಸಿ ಆರತಕ್ಷತೆ ವೇಳೆಯಲ್ಲಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ.
ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯ ಬದಲಾಗಿ ಇನ್ನುಮುಂದೆ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಸೂಚಿಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ಇರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ಚಾಲನೆಯಲ್ಲಿರುತ್ತದೆ. ಆದಕಾರಣ 2023 ಅಥವಾ 2024ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ http://sevasindhugs.karnataka.gov.in ನಲ್ಲಿ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ: 18005997154 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














