Author: kannadanewsnow57

ಬೆಂಗಳೂರು : ರಾಜ್ಯದ ಪಂಚಾಯಿತಿ ನೌಖರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ್ದು, ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಕುರಿತು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ. ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ…

Read More

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನದ ಕೆಲವು ದಿನಗಳ ನಂತರ, ಯುಎಸ್ ಸೀಕ್ರೆಟ್ ಸರ್ವಿಸ್ ನಿರ್ದೇಶಕಿ ಕಿಂಬರ್ಲಿ ಚೀಟಲ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ಟ್ರಂಪ್ ಅವರ ಸುರಕ್ಷತೆಯನ್ನು ಸಂಸ್ಥೆ ಹೇಗೆ ನಿಭಾಯಿಸಿತು ಮತ್ತು ಈ ತಿಂಗಳು ನಡೆದ ರ್ಯಾಲಿಯಲ್ಲಿ ಪೆನ್ಸಿಲ್ವೇನಿಯಾದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಯನ್ನು ಬಂದೂಕುಧಾರಿಯೊಬ್ಬ ಹೇಗೆ ಕೊಲ್ಲಲು ಪ್ರಯತ್ನಿಸಿದ ಎಂಬುದರ ಕುರಿತು ಸಂಸದರು ಮತ್ತು ಆಂತರಿಕ ಸರ್ಕಾರಿ ಕಾವಲುಗಾರರಿಂದ ನಡೆಯುತ್ತಿರುವ ತನಿಖೆಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ಜುಲೈ 13 ರಂದು ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಟ್ರಂಪ್ ಅವರನ್ನು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದ ನಂತರ ರಿಪಬ್ಲಿಕನ್ನರು ಅವರ ರಾಜೀನಾಮೆಗೆ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಸದನದ ಮೇಲ್ವಿಚಾರಣಾ ಸಮಿತಿಯ ಮುಂದೆ ಸೋಮವಾರ ಸಾರ್ವಜನಿಕ ವಿಚಾರಣೆಯ ನಂತರ, ಸಮಿತಿಯ ಹಲವಾರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ ನಂತರ, ಶಾಸಕರು ವಿಶೇಷವಾಗಿ ಕೋಪಗೊಂಡಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಹೌಸ್ ಮೇಲ್ವಿಚಾರಣಾ ಸಮಿತಿಯ…

Read More

ಬೆಂಗಳೂರು : ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕನ್ನಡದ ಕಿರುತೆರೆ ನಟ ಸನ್ನಿ ಮಹಿಪಾಲ್‌ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೆಚ್‌ ಎಎಲ್‌ ಪೊಲೀಸ್‌ ಠಾಣೆಯಲ್ಲಿ ನಟ ಸನ್ನಿ ಮಹಿಪಾಳ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಿಜ್ಞಾನನಗರದ ಮನೆಯಲ್ಲಿ ಪತಿ ಮೇಲೆ ಸನ್ನಿ ಮಹಿಪಾಲ್ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ’ ಎಂದು ಆರೋಪಿಸಿ ಯುವತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ ಜತೆ ಸನ್ನಿ ಮಹಿಪಾಲ್ ಜೂನ್ 15ರಂದು ದೇವಾಲಯವೊಂದರಲ್ಲಿ ಮದುವೆಯಾದ ಬಳಿಕ ಸನ್ನಿ ಅಂತರ ಕಾಯ್ದು ಕೊಂಡಿದ್ದರು. ಜತೆಗೆ ಬೇರೊಬ್ಬ ಯುವತಿ ಜತೆ ನಿಶ್ಚಿತಾರ್ಥ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಕೇಳಿದ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

Read More

ಬೆಂಗಳೂರು : ಎನ್‌ ಜಿಇಎಫ್‌ ವಿದ್ಯುತ್‌ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೆತ್ತಿಕೊಳ್ಳುವುದರಿಂದ ಜುಲೈ 25 ರ ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್ನ ಪರ‍್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್ ಕರೆಂಟ್ ಇರೋದಿಲ್ಲ. ಇನ್ನೂ ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ರ‍್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ರ‍್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟರ‍್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ,…

Read More

ನ್ಯೂಯಾರ್ಕ್: ಯುಎಸ್ ರಾಜಕೀಯ ನಾಯಕರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಡೊನಾಲ್ಡ್ ಟ್ರಂಪ್ ಅವರ ಪ್ರಚಾರವನ್ನು ದೊಡ್ಡ ಜನಸಮೂಹದೊಂದಿಗೆ ದೊಡ್ಡ ಹೊರಾಂಗಣ ರ್ಯಾಲಿಗಳು ಮತ್ತು ಇತರ ಹೊರಾಂಗಣ ಕಾರ್ಯಕ್ರಮಗಳನ್ನು ನಿಗದಿಪಡಿಸುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಕೆಲವು ದಿನಗಳ ಹಿಂದೆ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷರ ಹತ್ಯೆ ಪ್ರಯತ್ನದ ನಂತರ ಈ ನಿರ್ದೇಶನ ಬಂದಿದೆ. ವರದಿಗಳ ಪ್ರಕಾರ, ರಹಸ್ಯ ಸೇವೆಯ ಏಜೆಂಟರು ದೊಡ್ಡ ಹೊರಾಂಗಣ ರ್ಯಾಲಿಗಳ ಬಗ್ಗೆ ಟ್ರಂಪ್ ಶಿಬಿರದೊಂದಿಗೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. ಆದಾಗ್ಯೂ, ರಿಪಬ್ಲಿಕನ್ ಅಭ್ಯರ್ಥಿಯ ಹತ್ತಿರದ ರ್ಯಾಲಿಗಳು ಒಳಾಂಗಣ ಕಾರ್ಯಕ್ರಮಗಳಾಗಿವೆ. ಏತನ್ಮಧ್ಯೆ, ಡೊನಾಲ್ಡ್ ಟ್ರಂಪ್ ಅವರನ್ನು ರಕ್ಷಿಸಲು ಮತ್ತು ಹತ್ಯೆ ಪ್ರಯತ್ನವನ್ನು ತಪ್ಪಿಸಲು ಏಜೆನ್ಸಿ ಹೇಗೆ ವಿಫಲವಾಗಿದೆ ಎಂಬ ಆಕ್ರೋಶದ ನಂತರ ರಹಸ್ಯ ಸೇವೆಯ ನಿರ್ದೇಶಕ ಕಿಂಬರ್ಲಿ ಚೀಟಲ್ ಮಂಗಳವಾರ ರಾಜೀನಾಮೆ ನೀಡಿದರು. ಏಜೆನ್ಸಿಯು ಅನೇಕ ಕಾಂಗ್ರೆಸ್ ಸಮಿತಿಗಳು ಮತ್ತು ಯುಎಸ್ ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ…

Read More

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿ, ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. (ಪುತಿ ಲಗತ್ತಿಸಿದೆ). ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ…

Read More

ನವದೆಹಲಿ:ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಭೌತಶಾಸ್ತ್ರ ಪ್ರಶ್ನೆಗೆ ತಜ್ಞರ ತಂಡ ಗುರುತಿಸಿದ ಆಯ್ಕೆಯನ್ನು ಸರಿಯಾದ ಉತ್ತರವೆಂದು ಪರಿಗಣಿಸಿ ಫಲಿತಾಂಶಗಳನ್ನು ಪರಿಷ್ಕರಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನಿರ್ದೇಶನ ನೀಡಿತು. ಇದರರ್ಥ ತಪ್ಪು ಆಯ್ಕೆಯನ್ನು ಆರಿಸಿಕೊಂಡ ನಾಲ್ಕು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಗಳನ್ನು ಐದು ಅಂಕಗಳಿಂದ ಕಡಿಮೆ ಮಾಡಲಾಗುತ್ತದೆ – ತಪ್ಪು ಉತ್ತರಗಳಿಗೆ ನಾಲ್ಕು ಅಂಕಗಳು ಮತ್ತು ನಕಾರಾತ್ಮಕ ಅಂಕಗಳಿಗೆ ಒಂದು ಅಂಕ. ಈ ಬದಲಾವಣೆಯು ವಿದ್ಯಾರ್ಥಿಗಳ ಶ್ರೇಯಾಂಕವನ್ನು ಗಮನಾರ್ಹವಾಗಿ ಬದಲಾಯಿಸುವ ನಿರೀಕ್ಷೆಯಿದೆ. ಹಳೆಯ ಎನ್ಸಿಇಆರ್ಟಿ ಪಠ್ಯಪುಸ್ತಕದ ಪ್ರಕಾರ ಒಂದು ಆಯ್ಕೆ ಸರಿಯಾಗಿದೆ ಮತ್ತು ಹೊಸ ಪಠ್ಯಪುಸ್ತಕದ ಪ್ರಕಾರ ಇನ್ನೊಂದು ಸರಿಯಾಗಿದೆ ಎಂದು ವಿದ್ಯಾರ್ಥಿಗಳು ಗಮನಸೆಳೆದ ನಂತರ ಎನ್ಟಿಎ ಆರಂಭದಲ್ಲಿ ಪ್ರಶ್ನೆಗೆ ಎರಡು ಆಯ್ಕೆಗಳನ್ನು ಸರಿಯಾದ ಉತ್ತರಗಳಾಗಿ ಪರಿಗಣಿಸಿತ್ತು. ಸೋಮವಾರ, ಉನ್ನತ ನ್ಯಾಯಾಲಯವು ಸರಿಯಾದ ಉತ್ತರವನ್ನು ನಿರ್ಧರಿಸಲು ಐಐಟಿ ದೆಹಲಿಯನ್ನು ಕೇಳಿತ್ತು ಮತ್ತು ಐಐಟಿ ನಿರ್ದೇಶಕರು ಸಲ್ಲಿಸಿದ ವರದಿಯು ಸರಿಯಾದ ಉತ್ತರವನ್ನು ದೃಢಪಡಿಸಿದೆ.…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಜುಲೈ 29 ರಿಂದ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆಯನ್ನು ದಿನಾಂಕ 22.07.2024 ರಿಂದ ಪ್ರಾರಂಭಿಸಲಾಗುವುದೆಂದು ತಿಳಿಸಲಾಗಿರುತ್ತದೆ. ಆದರೆ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಲಾಗಿದ್ದು ದಿನಾಂಕ 29.07.2024 ರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Read More

ನವದೆಹಲಿ: ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಯುಜಿ 2024 ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದರೊಂದಿಗೆ, ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ಜುಲೈ 24 ರ ಇಂದಿನಿಂದ ನೀಟ್ ಯುಜಿ ಕೌನ್ಸೆಲಿಂಗ್ 2024 ಅನ್ನು ಪ್ರಾರಂಭಿಸಲಿದೆ. ಕೌನ್ಸೆಲಿಂಗ್ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಲಿದೆ. ನೀಟ್-ಯುಜಿ ಪರೀಕ್ಷೆಯ ಬಗ್ಗೆ ಸಾಕಷ್ಟು ವಿವಾದಗಳಿವೆ. ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬ ಆರೋಪಗಳಿವೆ ಮತ್ತು ಈ ಪರೀಕ್ಷೆಯನ್ನು ರದ್ದುಗೊಳಿಸುವಂತೆ ನಿರಂತರ ಬೇಡಿಕೆ ಇದೆ ಮತ್ತು ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ, ಆದರೆ ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಅರ್ಜಿಯನ್ನು ತಿರಸ್ಕರಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಕೌನ್ಸೆಲಿಂಗ್ ಮೂರು ಸುತ್ತುಗಳಲ್ಲಿ ನಡೆಯಲಿದೆ ನೀಟ್ ಯುಜಿ ಕೌನ್ಸೆಲಿಂಗ್ ಪ್ರಕ್ರಿಯೆಯು ಮೂರು ಸುತ್ತುಗಳನ್ನು ಒಳಗೊಂಡಿರುತ್ತದೆ, ನಂತರ ಖಾಲಿ ಹುದ್ದೆಯ ಸುತ್ತು ಇರುತ್ತದೆ. ನೀಟ್ ಯುಜಿ ಕೌನ್ಸೆಲಿಂಗ್ 2024 ರ ವೇಳಾಪಟ್ಟಿ mcc.nic.in ಅಧಿಕೃತ ವೆಬ್ಸೈಟ್ನಲ್ಲಿ…

Read More

ರಾಮನಗರ : ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹತ್ಸೋವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾಗಿಯಾಗಿದ್ದ ವೇಳೆ ದರ್ಶನ್‌ ಅಭಿಮಾನಿಗಳು ಡಿಬಾಸ್‌ ಎಂದು ಘೋಷಣೆ ಕೂಗಿದ್ದಾರೆ. ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ದಾಗ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿ.ಕೆ.ಶಿವಕುಮಾರ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಇಂದು ಭೇಟಿ ಮಾಡಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.

Read More