Subscribe to Updates
Get the latest creative news from FooBar about art, design and business.
Author: kannadanewsnow57
ವಾರದ ಪ್ರತಿ ದಿನವೂ ಯಾವುದಾದರೂ ಒಂದು ದೇವರು ಅಥವಾ ದೇವತೆಗೆ ಸಮರ್ಪಿತವಾಗಿರುತ್ತದೆ. ಹಿಂದೂ ಧರ್ಮದಲ್ಲಿ, ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ ಮತ್ತು ಪ್ರತಿದಿನ ಬೇರೆ ಬೇರೆ ದೇವರನ್ನು ಪೂಜಿಸಲಾಗುತ್ತದೆ. ಮಂಗಳವಾರ ಮತ್ತು ಸೋಮವಾರ ಮಹಾದೇವನ ಹೆಸರಿನಲ್ಲಿ ಬಜರಂಗಬಲಿಯನ್ನು ಪೂಜಿಸುವಂತೆಯೇ, ಶುಕ್ರವಾರವು ಲಕ್ಷ್ಮಿ ದೇವಿಯ ದಿನವಾಗಿದೆ . ಶುಕ್ರವಾರ ಮಾತೆ ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ಶುಕ್ರವಾರ ವೈಭವ ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿ ದೇವಿಯು ಇದರಿಂದ ಸಂತುಷ್ಟಳಾದರೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ. ಶುಕ್ರವಾರ ಲಕ್ಷ್ಮಿಗಾಗಿ ಉಪವಾಸ ಮಾಡಿ ಸಂಜೆ ಪೂಜೆ ಮಾಡಿ. ಶುಕ್ರವಾರ ಮಹಾಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು ಮತ್ತು ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರಲು ಮಹಾಲಕ್ಷ್ಮಿಗೆ ಪ್ರಸಾದವನ್ನು ಹೇಗೆ ಅರ್ಪಿಸಬೇಕು ಎಂದು ತಿಳಿಯೋಣ. ಶ್ರೀ ಲಕ್ಷ್ಮಿ ಪೂಜಾ ವಿಧಾನ; ಈ ದಿನದಂದು, ಶ್ರೀ ಲಕ್ಷ್ಮಿ ಪಂಚಮಿ ಉಪವಾಸವನ್ನು ಆಚರಿಸುವ ಭಕ್ತರು ಸೂರ್ಯೋದಯಕ್ಕೆ ಮುಂಚಿತವಾಗಿ ಎಚ್ಚರಗೊಂಡು ಮಾ ಲಕ್ಷ್ಮಿ ಪೂಜೆಗೆ ಮೊದಲು ಪವಿತ್ರ ನದಿಗಳ ನೀರನ್ನು ಸುರಿಯುವ ಮೂಲಕ ಸ್ನಾನ ಮಾಡಬೇಕು…
ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಪ್ರಕರಣದ ವಿಚಾರಣೆಯನ್ನು ಜೂನ್ 20ಕ್ಕೆ ಮುಂದೂಡಲಾಗಿದೆ. ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರದ ವಿತರಣೆ ಮತ್ತು ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಿಇಒ ವಿ ನಾರಾಯಣ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 20 ಕ್ಕೆ ಮುಂದೂಡಲಾಗಿದೆ.
ಬೆಂಗಳೂರು : 2025ರ ಪರೀಕ್ಷೆ-2ರಲ್ಲಿ 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದು, 04 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಶೇ.100ರಷ್ಟು ಫಲಿತಾಂಶ ಪಡೆದಿರುತ್ತಾರೆ. ಈ 04 ವಿದ್ಯಾರ್ಥಿಗಳ ಪೈಕಿ, 01 ವಿದ್ಯಾರ್ಥಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುತ್ತಾನೆ. ಫಲಿತಾಂಶ ಉತ್ತಮಪಡಿಸಿಕೊಂಡ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆಯಲ್ಲಿ 82. ದ್ವಿತೀಯ ಭಾಷೆಯಲ್ಲಿ 37, ತೃತೀಯ ಭಾಷೆಯಲ್ಲಿ 55, ಗಣಿತ ವಿಷಯದಲ್ಲಿ 10, ವಿಜ್ಞಾನ ವಿಷಯದಲ್ಲಿ 32, ಸಮಾಜ ವಿಜ್ಞಾನ ವಿಷಯದಲ್ಲಿ 44 ವಿದ್ಯಾರ್ಥಿಗಳು ಶೇ.100 ರಷ್ಟು ಅಂಕಗಳನ್ನು ಪಡೆದಿರುತ್ತಾರೆ. 2025 ರ ಪರೀಕ್ಷೆ-1ರಲ್ಲಿ ಫಲಿತಾಂಶ ಪೂರ್ಣಗೊಳಿಸದ 2,78,355 ಶಾಲಾ ವಿದ್ಯಾರ್ಥಿಗಳು (Regular Freshers) ಪರೀಕ್ಷೆಗೆ ಹಾಜರಾಗಿರುತ್ತಾರೆ. ಪ್ರತಿ ಜಿಲ್ಲೆಯಲ್ಲಿನ ಉಪನಿರ್ದೇಶಕರು,…
ಬೆಂಗಳೂರು : 2025ರ ಪರೀಕ್ಷೆ-2ರಲ್ಲಿ 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದು, 04 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಶೇ.100ರಷ್ಟು ಫಲಿತಾಂಶ ಪಡೆದಿರುತ್ತಾರೆ. ಈ 04 ವಿದ್ಯಾರ್ಥಿಗಳ ಪೈಕಿ, 01 ವಿದ್ಯಾರ್ಥಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುತ್ತಾನೆ. ಫಲಿತಾಂಶ ಉತ್ತಮಪಡಿಸಿಕೊಂಡ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆಯಲ್ಲಿ 82. ದ್ವಿತೀಯ ಭಾಷೆಯಲ್ಲಿ 37, ತೃತೀಯ ಭಾಷೆಯಲ್ಲಿ 55, ಗಣಿತ ವಿಷಯದಲ್ಲಿ 10, ವಿಜ್ಞಾನ ವಿಷಯದಲ್ಲಿ 32, ಸಮಾಜ ವಿಜ್ಞಾನ ವಿಷಯದಲ್ಲಿ 44 ವಿದ್ಯಾರ್ಥಿಗಳು ಶೇ.100 ರಷ್ಟು ಅಂಕಗಳನ್ನು ಪಡೆದಿರುತ್ತಾರೆ. 2025 ರ ಪರೀಕ್ಷೆ-1ರಲ್ಲಿ ಫಲಿತಾಂಶ ಪೂರ್ಣಗೊಳಿಸದ 2,78,355 ಶಾಲಾ ವಿದ್ಯಾರ್ಥಿಗಳು (Regular Freshers) ಪರೀಕ್ಷೆಗೆ ಹಾಜರಾಗಿರುತ್ತಾರೆ. ಪ್ರತಿ ಜಿಲ್ಲೆಯಲ್ಲಿನ ಉಪನಿರ್ದೇಶಕರು,…
ಬೆಂಗಳೂರು: 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಫಲಿತಾಂಶವು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸಚಿವರು ಮಾತನಾಡಿ, “2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಸರ್ಕಾರಿ ಶಾಲೆಗಳ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. ಇದು ನಮ್ಮ ಸರ್ಕಾರಿ ಶಾಲೆಗಳ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ” ಎಂದು ಹೇಳಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆ, ಈ ಹಿಂದೆ ನಡೆಸಿದ ಪಿಯುಸಿ ಪರೀಕ್ಷೆ-2 ಕೂಡ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವ್ಯಾಸಂಗವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಮುಂದುವರಿಸಲು ನೆರವಾಗಿದೆ. ವಿದ್ಯಾರ್ಥಿಗಳಿಗೆ ಎರಡನೇ ಅವಕಾಶ ನೀಡುವುದರಿಂದ ಅವರ ಭವಿಷ್ಯಕ್ಕೆ ಯಾವುದೇ ತಡೆಯಾಗುವುದಿಲ್ಲ ಎಂಬುದು ನಮ್ಮ ಸರ್ಕಾರದ ದೃಢ…
ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ. ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಂತರ ವೀಕ್ಷಿಸಬಹುದಾಗಿದೆ. SMS ಮೂಲಕ ಫಲಿತಾಂಶ ಪಡೆಯಲು KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. 2025 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಫಲಿತಾಂಶದ ಅಂಕಿಅಂಶಗಳು 2025 SSLC Exam-2 Result Statistics 2025 ರ ಮೇ.26 ರಿಂದ 02-06-2025 ರವರೆಗೆ ಒಟ್ಟು 967 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಯಿತು. 2025 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2…
ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ. ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಂತರ ವೀಕ್ಷಿಸಬಹುದಾಗಿದೆ. SMS ಮೂಲಕ ಫಲಿತಾಂಶ ಪಡೆಯಲು KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಬೆಂಗಳೂರು : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹೊಂದಿದ್ದು, ವಿಜಯ್ ರೂಪಾನಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಬಲಿಯಾದವರಲ್ಲಿ ಒಬ್ಬರಾದ ವಿಜಯ್ ರೂಪಾನಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಈ ಹಿಂದೆ ರಾಜ್ಯಸಭಾ ಸಂಸದರಾಗಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ನಾನು ಕೆಲವು ಸಂದರ್ಭಗಳಲ್ಲಿ ಅವರ ಜೊತೆ ಮಾತನಾಡಿದ್ದೇನೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ. https://twitter.com/siddaramaiah/status/1933416127389913231?ref_src=twsrc%5Etfw%7Ctwcamp%5Etweetembed%7Ctwterm%5E1933416127389913231%7Ctwgr%5Eb4d934b18e6414a2a939d62d3c29398b0284599b%7Ctwcon%5Es1_c10&ref_url=https%3A%2F%2Fkannadadunia.com%2Fbig-news-e0b28fe0b2b0e0b38d-e0b287e0b282e0b2a1e0b2bfe0b2afe0b2be-e0b2b5e0b2bfe0b2aee0b2bee0b2a8-e0b2a6e0b381e0b2b0e0b282e0b2a4e0b2a6%2F
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ. ಯೋಗೇಶ್ ಕೊಲೆ ಪ್ರಕರಣ ಸಂಬಂಧ ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ವಿನಯ್ ಕುಲಕರ್ಣಿ ಅವರು, ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.
ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!
ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 09 ಅಂಗನವಾಡಿ ಕಾರ್ಯಕರ್ತೆ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ದಿನಾಂಕ: 23-09-2024 ರಿಂದ 23-10-2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು. ಅಂತಿಮ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಅಭ್ಯರ್ಥಿಗಳ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಅಥವಾ ಇದಕ್ಕೆ ಸಂಬಂದಿಸಿದಂತೆ ಯಾರೊಂದಿಗೂ ಹಣಕಾಸಿನ ವ್ಯವಹಾರ ಮಾಡಬಾರದು ಎಂದು ಕೊಪ್ಪಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.












