Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪವಾಗಿದ್ದು, ಅದರ ಕೇಂದ್ರಬಿಂದು ಆಗ್ನೇಯ ದೆಹಲಿಯಲ್ಲಿ ದಾಖಲಾಗಿದೆ. ಭೂಕಂಪನವು ಬೆಳಗಿನ ಜಾವ 1:23 ಕ್ಕೆ ಸಂಭವಿಸಿದ್ದು, ಭೂಮಿಯ ಮೇಲ್ಮೈಯಿಂದ 5 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 2.3 ರಷ್ಟು ದಾಖಲಾಗಿದೆ. ಇತ್ತೀಚಿನ ಭೂಕಂಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾವುನೋವುಗಳು ಅಥವಾ ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ವರದಿ ಮಾಡಿಲ್ಲ. 2025 ರಲ್ಲಿ ದೆಹಲಿಯೇ ಕೇಂದ್ರಬಿಂದುವಾಗಿದ್ದ ಎರಡನೇ ಘಟನೆ ಇದಾಗಿದೆ. ಫೆಬ್ರವರಿ 17 ರಂದು ಬೆಳಿಗ್ಗೆ 5:36 ಕ್ಕೆ ರಾಜಧಾನಿಯನ್ನು 4.0 ತೀವ್ರತೆಯ ಭೂಕಂಪವು ನಡುಗಿಸಿತು, ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್ನಲ್ಲಿ ಬಲವಾದ ಕಂಪನಗಳು ಅನುಭವಿಸಿದವು. ಆ ಸಮಯದಲ್ಲಿ ಕೇಂದ್ರಬಿಂದು ಧೌಲಾ ಕುವಾನ್ನಲ್ಲಿರುವ ದುರ್ಗಾಬಾಯಿ ದೇಶಮುಖ್ ಕಾಲೇಜಿನ ಬಳಿ ಇತ್ತು, ಇದು 5 ಕಿಲೋಮೀಟರ್ ಆಳದಲ್ಲಿತ್ತು.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರ್ಕಾರದ ವಿರುದ್ಧ ಸ್ವಾಮೀಜಿಗಳ ತಂಡ ದೂರು ಸಲ್ಲಿಸಲಿದೆ. ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮಠಾಧೀಶರರು ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲಿದ್ದಾರೆ. ದೂರು ಸಲ್ಲಿಸಲು ಈಗಾಗಲೇ ಸ್ವಾಮೀಜಿಗಳು ಬೆಂಗಳೂರು ನಗರ ತಲುಪಿದ್ದು, ಆರ್ ಸಿಬಿ ವಿರುದ್ಧ ಇಡಿಗೂ ದೂರು ದಾಖಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಲಬುರಗಿಯ ನಾರಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ, ಕುಂಬಾರ ಮಹಾಸಂಸ್ಥಾನ ಪೀಠ ಬಸವಮೂರ್ತಿ ಕುಂಬಾರ ಗುಂಡಯ್ಯಶ್ರೀ, ಛಲವಾದಿ ಜಗದ್ಗುರು ಪೀಠದ ಬಸವನಾಗಿದೇವಶ್ರೀ ಸೇರಿ ಹಲವರು ದೂರು ಸಲ್ಲಿಸಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ವಿಡಿಯೋಗಳು ಭಾರೀ ವೈರಲ್ ಆಗುತ್ತಿರುತ್ತವೆ. ಈ ನಡುವೆ ಪುಟ್ ಪಾತ್ ನಲ್ಲಿ ಮಲಗಿದ್ದ ವ್ಯಕ್ತಿಯ ಬಳಿಯೇ ಸಿಂಹವೊಂದು ಹಾದುಹೋಗಿರುವ ವಿಡಿಯೋ ವೈರಲ್ ಆಗಿದೆ. ಹೌದು, X ನಲ್ಲಿ Kreately.in ಎಂಬ ಹ್ಯಾಂಡಲ್ನಲ್ಲಿ ಬೆಚ್ಚಿ ಬೀಳಿಸುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಚಾಪೆಯ ಮೇಲೆ ಪಾದಚಾರಿ ಮಾರ್ಗದಲ್ಲಿ ಮಲಗಿರುವುದನ್ನು ನೀವು ನೋಡಬಹುದು. ಇದ್ದಕ್ಕಿದ್ದಂತೆ ಒಂದು ಸಿಂಹ ಬೀದಿಯಲ್ಲಿ ಹಾದುಹೋಗುತ್ತದೆ. ಇದಾದ ನಂತರ, ಸಿಂಹ ಮತ್ತೆ ಆ ವ್ಯಕ್ತಿಯ ಬಳಿಗೆ ಬಂದು ಮೂಸಿ ನೋಡಿ ಹೊರಟು ಹೋಗುತ್ತೆ. ಈ ಸಮಯದಲ್ಲಿ, ಈ ವ್ಯಕ್ತಿಯು ತುಂಬಾ ಗಾಢ ನಿದ್ರೆಯಲ್ಲಿದ್ದನು, ಸಿಂಹ ಅವನ ಬಳಿ ಹಾದು ಹೋಗಿದೆ ಎಂದು ಅವನಿಗೆ ತಿಳಿದಿರಲಿಲ್ಲ. ಸಿಂಹಧ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ ಮತ್ತು 245000 ಕ್ಕೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. ಸಿಂಹಿಣಿಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಎಷ್ಟು ವೈರಲ್ ಆಗುತ್ತಿದೆ ಎಂದರೆ ಕೆಲವು ಬಳಕೆದಾರರು ಇದನ್ನು…
ಚಿಕ್ಕಬಳ್ಳಾಪುರ : ವಿಕೇಂಡ್ ಹಿನ್ನೆಲೆಯಲ್ಲಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಹರಿದುಬಂದಿದ್ದು, ಪೊಲೀಸ್ ಚೆಕ್ ಪೋಸ್ಟ್ ನಿಂದ ಬೆಟ್ಟದ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ನಂದಿಗಿರಿಧಾಮಕ್ಕೆ ಸೂರ್ಯೋದಯ ನೋಡಲು ನೂರಾರು ಕಾರು, ಬೈಕ್ ಗಳಲ್ಲಿ ಪ್ರವಾಸಿಗರು ಬಂದಿದ್ದಾರೆ. ಹೀಗಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ನಂದಿ ಬೆಟ್ಟದ ಮಾರ್ಗ ಮಧ್ಯೆ ಪ್ರವಾಸಿಗರು ಸಿಲುಕಿ ಪರದಾಟ ನಡೆಸಿದ್ದಾರೆ. ಸದ್ಯ ನಂದಿಗಿರಿಧಾಮದಲ್ಲಿ ಟ್ರಾಫಿಕ್ ಜಾಮ್, ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ದ್ವಿತೀಯ ಪಿ.ಯು.ಸಿ. 2025ರ ಸಾಲಿನ ವಾರ್ಷಿಕ ಪರೀಕ್ಷೆ-3ನ್ನು ಜೂನ್.9 ರ ನಾಳೆಯಿಂದ ಜೂ.20 ರವರೆಗೆ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ…
ಹಾವೇರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರದಲ್ಲಿ ಜೂ.12ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಜೂ.13ರಿಂದ 2 ದಿನ, ಕೋಲಾರದಲ್ಲಿ ಜೂ.12ರಂದು ಬಿರುಸಾಗಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಜೂ.14ರಂದು ಆರೆಂಜ್ ಅಲರ್ಟ್ ಇರಲಿದೆ. ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ಮಣಿಪುರದ ಐದು ಜಿಲ್ಲೆಗಳಾದ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಬಿಷ್ಣುಪುರ ಮತ್ತು ಕಾಕ್ಚಿಂಗ್‌ನಲ್ಲಿ ಶನಿವಾರ ರಾತ್ರಿ 11:45 ರಿಂದ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು 5 ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ. ಮೈತೆಯಿ ಸಮುದಾಯದ ನಾಯಕ ಅರಾಂಬೈ ಟೆಂಗೋಲ್ ಬಂಧನದ ನಂತರ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲವು ಸಮಾಜ ವಿರೋಧಿ ಅಂಶಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚೋದನಕಾರಿ ಸಂದೇಶಗಳು, ಚಿತ್ರಗಳು ಮತ್ತು ವೀಡಿಯೊಗಳನ್ನು ಹರಡಬಹುದು, ಇದು ಶಾಂತಿಯನ್ನು ಕದಡಬಹುದು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಬಹುದು ಎಂದು ಆಡಳಿತವು ಭಯಪಡುತ್ತದೆ. ಯಾವುದೇ ರೀತಿಯ ವದಂತಿ ಅಥವಾ ಪ್ರಚೋದನೆಯನ್ನು ತಡೆಯುವ ಸಲುವಾಗಿ ತುರ್ತು ಪರಿಸ್ಥಿತಿಯಲ್ಲಿ ಪೂರ್ವ ಸೂಚನೆ ಇಲ್ಲದೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆ ಕಾರ್ಯದರ್ಶಿ ಎನ್ ಅಶೋಕ್ ಕುಮಾರ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಈ ಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ವಾಸ್ತವವಾಗಿ, ಅರಾಂಬೈ ಟೆಂಗೋಲ್…
ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು. ನಗರದ ಕನಕದುರ್ಗಮ್ಮ ದೇವಸ್ಥಾನ ವೃತ್ತದಲ್ಲಿ ಎಸ್ಪಿ ಆಯೋಜಿಸಲಾಗಿದ್ದ ಸಾರ್ವಜನಿಕರ ಸುರಕ್ಷತೆಗಾಗಿ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಮತ್ತು ಗುಲಾಬಿ ಹೂ ವಿತರಿಸಿ ಅವರು ಮಾತನಾಡಿದರು. ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಹೇರಳವಾಗಿದೆ. ಆ ವೇಳೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಹಾಗಾಗಿ ನಿಮ್ಮ ಮನೆಯವರು ಹಾಗೂ ನಿಮ್ಮನ್ನು ನಂಬಿದವರಿಗಾಗಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಲೇಬೇಕು ಎಂದು ಹೇಳಿದರು. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ರೂ.500 ದಂಡ ತೆರಬೇಕಾಗುತ್ತದೆ. 18 ವರ್ಷದ ಒಳಗಿನವರು ವಾಹನ…