Author: kannadanewsnow57

ಬೆಂಗಳೂರು : ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು,  ಬೆಂಗಳೂರು ಇವರ ದಿನಾಂಕಂ4.06.2025ರ ವರದಿಯಲ್ಲಿ ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಏಕಾಏಕಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರ್ಯಕ್ರಮವು ಅಲ್ಪ ಕಾಲದಲ್ಲಿ ನಿರ್ಧರಿತವಾಗಿದ್ದರಿಂದ, ತಕ್ಷಣಕ್ಕೆ ಸಾಧ್ಯವಾದ ಎಲ್ಲ ಬಂದೋಬಸ್ತ್ ವ್ಯವಸ್ಥೆಗಳನ್ನು ಏರ್ಪಡಿಸಲಾಗಿತ್ತು. ಆದರೂ, ಏಕಾಏಕಿ ಸಾವಿರಾರು ಅಭಿಮಾನಿಗಳು ಸೇರಿದ್ದರಿಂದ ಮಧ್ಯಾಹ್ನ 3:30 ಗಂಟೆಯಿಂದ 4:30 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕು ನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದ್ದು, ಈ ಘಟನೆಯಲ್ಲಿ ಹನ್ನೊಂದು ಮಂದಿ ಮೃತರಾಗಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಅವರು, ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ ಎಂದು ಆರ್ ಸಿಬಿ ಸ್ಟೇಟ್ ಮೆಂಟ್ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ” ಎಂದು ಆರ್‌ಸಿಬಿಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. “ದುರಂತ ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ರದ್ದು ಮಾಡಿ ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ ಎಂದು ತಿಳಿಸಿದೆ.

Read More

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತಕ್ಕೆ ಆರ್‌ಸಿಬಿ-ಕೆಎಸ್‌ಸಿಎ ಆಘಾತ ವ್ಯಕ್ತಪಡಿಸಿದ್ದು, ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Read More

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟದ ಸಭೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರನ್ನು ನೋಡಲು ಸಾವಿರಾರು ಜನರು ಬಂದಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಚಿವ ಸಂಪುಟದ ಸಭೆ ಹೊರತುಪಡಿಸಿ, ವಿಶ್ವ ಪರಿಸರ ದಿನ ಸೇರಿದಂತೆ ಉಳಿದೆಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1470 ಫಲಾನುಭವಿಗಳು ನೋಂದಣಿಯಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಎಲ್.ಐ.ಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಕೇಂದ್ರ ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ಕೇಂದ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪರಿಸರ ಸಂರಕ್ಷಣೆ (ವಿಶ್ವ ಪರಿಸರ ದಿನ 2025) ಎಷ್ಟು ಮುಖ್ಯ ಎಂಬುದನ್ನು ಹೆಚ್ಚುತ್ತಿರುವ ಜಾಗತಿಕ ತಾಪಮಾನ ಏರಿಕೆ, ಹವಾಮಾನದಲ್ಲಿನ ಅಸಹಜ ಬದಲಾವಣೆಗಳು ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳು ಮತ್ತು ಪಕ್ಷಿಗಳ ಸಂಖ್ಯೆಯಿಂದ ಅಳೆಯಬಹುದು. ಪರಿಸರವನ್ನು ಸಂರಕ್ಷಿಸದಿದ್ದರೆ ಭೂಮಿಯ ಮೇಲಿನ ಜೀವನ ಕಷ್ಟಕರವಾಗುತ್ತದೆ. ಅದಕ್ಕಾಗಿಯೇ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಮತ್ತು ಪ್ರಕೃತಿಯೊಂದಿಗೆ ಸಮತೋಲನದಲ್ಲಿ ಬದುಕಲು ಜನರನ್ನು ಪ್ರೇರೇಪಿಸಲು ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯು 1972 ರಲ್ಲಿ ಈ ದಿನವನ್ನು ಆಚರಿಸಲು ಪ್ರಾರಂಭಿಸಿತು ಮತ್ತು ಅಂದಿನಿಂದ ಇದನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ಪ್ರತಿ ವರ್ಷ ವಿಶೇಷ ಥೀಮ್‌ನೊಂದಿಗೆ (ವಿಶ್ವ ಪರಿಸರ ದಿನ 2025 ಥೀಮ್) ಆಚರಿಸಲಾಗುತ್ತದೆ, ಇದು ಪರಿಸರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಈ ವರ್ಷದ ಪರಿಸರ ದಿನದ ಥೀಮ್ ಏನು ತಿಳಿಯಿರಿ. 2025 ರ ಪರಿಸರ ದಿನದ ಥೀಮ್ 2025 ರ ಪರಿಸರ ದಿನದ ಧ್ಯೇಯವಾಕ್ಯ…

Read More

ಬೆಂಗಳೂರು : ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರವಿಲ್ಲದ ಬೋಧಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ಹುದ್ದೆ ಸಹಿತ ಸ್ಥಳಾಂತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರವಿಲ್ಲದಿರುವ ಬೋಧಕರ ಹುದ್ದೆಗಳನ್ನು ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಕಾಲೇಜುಗಳಿಗೆ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆಯನ್ನು ನಿಯಂತ್ರಿಸುವ ಸಲುವಾಗಿ ರೂಪಿಸಿರುವ ವರ್ಗಾವಣೆ ನಿಯಮಗಳ ನಿಯಮ-3 ರಲ್ಲಿ ಕಡ್ಡಾಯಗೊಳಿಸಲಾಗಿದೆ. ಸದರಿ ವರ್ಗಾವಣೆ ನಿಯಮಗಳು-2021ರ ನಿಯಮ 3ರ ಉದ್ಘತಭಾಗವು ಈ ಕೆಳಕಂಡಂತಿದೆ. Shifting of Posts. (1) If sufficient workload is not available for teaching staff in any Government First Grade College in any subject, such number of posts as determined as surplus may be shifted to any other College within the same zone where the workload…

Read More

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್  ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ.ವ.ಕ.ಇಲಾಖೆಯ ಕಚೇರಿ ಹಾಗೂ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

Read More

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ.  ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ…

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 14,000/- (ಹದಿನಾಲ್ಕು ಸಾವಿರ ಮಾತ್ರ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು, ಮಾರ್ಚ್-2026 ಅಂತ್ಯದವರೆಗೂ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ. ಸರ್ಕಾರಿ ಪದವಿ ಪೂರ್ವ…

Read More