Subscribe to Updates
Get the latest creative news from FooBar about art, design and business.
Author: kannadanewsnow57
ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!
ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ ಮಾಡಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಈ ನಿರ್ಗತಿಕರಿಗೆ, ಭಾರತ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಉಚಿತ ಪಡಿತರವನ್ನು ಒದಗಿಸುತ್ತದೆ. ಇದಲ್ಲದೇ ಹಲವರಿಗೆ ಅತ್ಯಂತ ಕಡಿಮೆ ದರದಲ್ಲಿ ಪಡಿತರವನ್ನೂ ನೀಡಲಾಗುತ್ತದೆ. ಪಡಿತರ ಚೀಟಿಯ ಪ್ರಯೋಜನಗಳು ಪಡಿತರ ಚೀಟಿಯು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಪಡೆಯುವ ಮಾಧ್ಯಮ ಮಾತ್ರವಲ್ಲ, ಅದರ ಮೂಲಕ ಹಲವಾರು ಸೌಲಭ್ಯಗಳನ್ನು ಸಹ ಪಡೆಯಬಹುದು. ಪಡಿತರ ಚೀಟಿದಾರರು ಈ ಕೆಳಗಿನ 8 ಪ್ರಯೋಜನಗಳನ್ನು ಪಡೆಯುತ್ತಾರೆ: ಉಚಿತ ಪಡಿತರ: ನಿರ್ಗತಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳ ಉಚಿತ ವಿತರಣೆ. ಕೈಗೆಟುಕುವ ದರದಲ್ಲಿ ಪಡಿತರ: ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿದ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳು ಸಿಗುತ್ತವೆ. ಸರ್ಕಾರದ ಯೋಜನೆಗಳಲ್ಲಿ ಭಾಗಿ: ಪಡಿತರ ಚೀಟಿ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಬಹುದು.…
ಹಾಸನ: ಹಾಸನದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಾಸನ ತಾಲೂಕಿನ ದೂಮಗೆರೆ ಗ್ರಾಮದ ಕಲ್ಲುಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕೂಲಿ ಕಾರ್ಮಿಕರು ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಮಿಕರು ಚಾಮರಾಜನಗರ ಮೂಲದವರಾಗಿದ್ದಾರೆ. ಹಾಸನದ ಬಂಡೆ ದೇವರಾಜ್ ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಘಟನೆ ನಡೆದಿದೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ನಾಲ್ವರು ಆಯೋಜನರನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ವಿಯೆಟ್ನಾಂ : ವಿಯೆಟ್ನಾಂನಲ್ಲಿ ನಡೆದ ಅಪಘಾತದಲ್ಲಿ ತೆಲಂಗಾಣದ 21 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಭೀಕರ ಅಪಘಾತವು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬುಧವಾರ (ಜೂನ್ 04) ರಂದು ಅತಿ ವೇಗದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತಕ್ಕೀಡಾದ ನಂತರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವೀಡಿಯೊ ತೋರಿಸುತ್ತದೆ. ವಿದ್ಯಾರ್ಥಿಯನ್ನು ಅರ್ಷಿದ್ ಆಶ್ರಿತ್ (21) ಎಂದು ಗುರುತಿಸಲಾಗಿದೆ, ಈತ ಕಾಗಜ್ನಗರ ಪಟ್ಟಣದ ಮಾರುಕಟ್ಟೆ ಪ್ರದೇಶದ ಅರ್ಷಿದ್ ಅರ್ಜುನ್ ಎಂಬ ಉದ್ಯಮಿಯ ಮಗ. ಆಶ್ರಿತ್ ವಿಯೆಟ್ನಾಂನ ಕ್ಯಾನ್ ಥೋ ಸಿಟಿಯಲ್ಲಿ ಎಂಬಿಬಿಎಸ್ ಓದುತ್ತಿದ್ದ. ಅವರು ಎಂಬಿಬಿಎಸ್ ಮೂರನೇ ವರ್ಷದಲ್ಲಿ ಓದುತ್ತಿದ್ದರು. ವರದಿಗಳ ಪ್ರಕಾರ, ಬುಧವಾರ ಸಂಜೆ ಆಶ್ರಿತ್ ತನ್ನ ಸ್ನೇಹಿತನೊಂದಿಗೆ 150CC ಬೈಕ್ನಲ್ಲಿ ಅತಿ ವೇಗದಲ್ಲಿ ಸವಾರಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಳೆಯಿಂದಾಗಿ ರಸ್ತೆ ಒದ್ದೆಯಾಗಿತ್ತು ಮತ್ತು ಜಾರು ರಸ್ತೆಯಲ್ಲಿ ಅವರು ಅತಿ…
ಬೆಂಗಳೂರು : ದ್ವಿತೀಯ ಪಿ.ಯು.ಸಿ. 2025ರ ಸಾಲಿನ ವಾರ್ಷಿಕ ಪರೀಕ್ಷೆ-3ನ್ನು ಜೂನ್.9 ರಿಂದ ಜೂ.20 ರವರೆಗೆ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ…
ಉಡುಪಿ: ಮಕ್ಕಳನ್ನು ಜೋಲಿಗೆ ಹಾಕುವ ಪೋಷಕರೇ ಎಚ್ಚರ, ಜೋಲಿ ಕುತ್ತಿಗೆಗೆ ಸಿಲುಕಿ ಒಂದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಜೋಲಿಯಲ್ಲಿ ಮಲಗಿದ್ದ ಒಂದು ವರ್ಷದ ಹೆಣ್ಣು ಮಗುವೊಂದು ಎಚ್ಚರಗೊಂಡು ಕೆಳಗೆ ಇಳಿಯಲು ಯತ್ನಿಸಿದ ವೇಳೆ ಸೀರೆ ಕುತ್ತಿಗೆಗೆ ಸುತ್ತಿ ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ. ಕಾಳಮ್ಮ ಅಯ್ಯಪ್ಪ(1) ಮೃತ ಮಗು. ಬುಧವಾರ ಬೆಳಗ್ಗೆ 8ಕ್ಕೆ ಮಗುವಿನ ತಂದೆ ಅಯ್ಯಪ್ಪ(27) ಕೆಲಸಕ್ಕೆ ಹೋಗಿದ್ದು, ಪತ್ನಿ 9.30ಕ್ಕೆ ಮಗುವನ್ನು ಜೋಲಿಯಲ್ಲಿ ಮಲಗಿಸಿ ಕೆಲಸಕ್ಕೆ ತೆರಳಿದ್ದರು. 11.30ಕ್ಕೆ ಮನೆಗೆ ಬಂದಾಗ ಜೋಲಿಗೆ ಕಟ್ಟಿದ್ದ ಸೀರೆ ಸುತ್ತಿಕೊಂಡು ಮಗು ನೇತಾಡುತ್ತಿತ್ತು. ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮಗು ಅದಾಗಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಈಗ ಹೊಸ ಹೆಸರಿನಲ್ಲಿ ಆಡಲಾಗುವುದು. ಇದಕ್ಕಾಗಿ, ಭಾರತ ಮತ್ತು ಇಂಗ್ಲೆಂಡ್ನ ಇಬ್ಬರು ಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಮುಂಬರುವ ಟೆಸ್ಟ್ ಸರಣಿಯನ್ನು ಅವರ ಹೆಸರಿನಲ್ಲಿ ಆಡಲಾಗುವುದು. ಈಗ ಇಂಗ್ಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್ ಸರಣಿಯನ್ನು ಪಟೌಡಿ ಎಂದು ಕರೆಯಲಾಗುತ್ತಿತ್ತು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಏಪ್ರಿಲ್ನಲ್ಲಿ ಟ್ರೋಫಿಯ ಹೆಸರನ್ನು ಬದಲಾಯಿಸುವುದಾಗಿ ಘೋಷಿಸಿತು. ಈಗ ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆಯಲಿರುವ ಟೆಸ್ಟ್ ಅನ್ನು ತೆಂಡೂಲ್ಕರ್-ಆಂಡರ್ಸನ್ ಎಂದು ಕರೆಯಲಾಗುತ್ತದೆ. ಬಿಬಿಸಿ ಸ್ಪೋರ್ಟ್ ವರದಿಯ ಪ್ರಕಾರ, ಜೂನ್ 20 ರಂದು ಲೀಡ್ಸ್ನ ಹೆಡಿಂಗ್ಲಿಯಲ್ಲಿ ಪ್ರಾರಂಭವಾಗುವ ಐದು ಪಂದ್ಯಗಳ ಸರಣಿಗೆ ಪೂರ್ವಸಿದ್ಧತಾ ಹಂತದಲ್ಲಿ ಹೊಸ ಟ್ರೋಫಿಯನ್ನು ಅನಾವರಣಗೊಳಿಸಲಾಗುವುದು. ಇಬ್ಬರೂ ಶ್ರೇಷ್ಠರು ಸಚಿನ್ ತೆಂಡೂಲ್ಕರ್ ದೀರ್ಘಕಾಲದವರೆಗೆ ವಿಶ್ವ ಕ್ರಿಕೆಟ್ನಲ್ಲಿ ಬ್ಯಾಟಿಂಗ್ನಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಅದೇ ಸಮಯದಲ್ಲಿ, ಜೇಮ್ಸ್ ಆಂಡರ್ಸನ್ ವೇಗದ ಬೌಲರ್ ಆಗಿ ಟೆಸ್ಟ್ ಕ್ರಿಕೆಟ್ನಲ್ಲಿ…
ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮೂವರು ಆಯೋಜನರನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ ಹಾಗೂ ಮಾಂಸ ಸಾಗಾಣಿಕೆ ನಿಷೇಧಿಸಿದೆ ಎಂದು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಪರಿಣಾಮಕಾರಿ ಅನುಷ್ಠಾನ ಮತ್ತು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಸಭೆ ಜರುಗಿಸಿ, ಮಾತನಾಡಿದರು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ದ ಪ್ರಕಾರ 13 ವರ್ಷ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ. ಎತ್ತು, ಆಕಳು ಮತ್ತು ಕರು ಇವುಗಳನ್ನು ವಧೆ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮವನ್ನು…