Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಬೆಂಗಳೂರು: ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ ನೀಡಲು ಆರೋಗ್ಯ ಇಲಾಖೆಯಿಂದ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ಮಾಡಲು ವಾಟ್ಸ್ ಆಪ್ ಸಹಾಯವಾಣಿಗೆ ಕಳುಹಿಸುವಂತೆ ಮನವಿ ಮಾಡಿದೆ. ವಾಟ್ಸ್ ಆಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೇ ಪೋಟೋ, ವೀಡಿಯೋಗಳನ್ನು ಕಳುಹಿಸಿ. ನಿಮ್ಮ ಸಮಸ್ಯೆಯನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂಬುದಾಗಿ ತಿಳಿಸಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆ 9449843001 ಗೆ ದೂರು, ಸಲಹೆಯನ್ನು ಮಾಡಬಹುದಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ಕೇವಲ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುವುದು. ದೂರವಾಣಿ ಕರೆಗಳಿಗೆ ಉತ್ತರಿಸಲಾಗುವುದಿಲ್ಲ ಎಂಬುದಾಗಿ ಹೇಳಿದೆ. https://twitter.com/DHFWKA/status/1929161379577254323
ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಂಕ್ ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹೊರ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳಲ್ಲಿ ಎಲ್ಲರೂ ಉಸಿರುಗಟ್ಟಿಯೇ ಮೃತಪಟ್ಟಿದ್ದಾರೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಬೆಳಕಿಗೆ ಬಂದಿದೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ. ಬೌರಿಂಗ್ ಆಸ್ಪತ್ರೆಯಲ್ಲಿ ಆರು ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. 11 ಮಂದಿ ಮೃತಪಟ್ಟ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಪ್ರತ್ಯೇಕ ಅಸಹಜ ಸಾವು(ಯುಡಿಆರ್) ಪ್ರಕರಣ ದಾಖಲಾಗಿದೆ. ಮೃತರ ಪಾಲಕರು ನೀಡಿದ ದೂರು ಆಧರಿಸಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.
ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು, ಈ ಯೋಜನೆಗೆ ಕೊನೆಯ ದಿನಾಂಕವಿರುವುದಿಲ್ಲ), ಗಂಗಾ ಕಲ್ಯಾಣ ಯೋಜನೆ (ದಕ್ಷಿಣ ಕನ್ನಡ, ಉಡುಪಿ, ಕೊಡಗು. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ ಮತ್ತು ಅಟಲ್ ಜಿ ಜನಸ್ನೇಹ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಜುಲೈ 02 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿದಾರರು…
ಬೆಂಗಳೂರು : ರಾಜ್ಯ ಸರ್ಕಾರದಿಂದಲೇ ಆಂಬುಲೆನ್ಸ್ ಕಂಟ್ರೋಲ್ ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಒಡಂಬಡಿಕೆಯ ಪಾಲುದಾರರಾದ ಮೆ. ಇ.ಎಂ.ಆರ್.ಐ ಗ್ರೀನ್ ಹೆಲ್ತ್ ಸರ್ವೀಸಸ್ ಅವರಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರ್ಕಾರದ ವತಿಯಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ತಂತ್ರಾಂಶ ಬಳಸಿಕೊಂಡು ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬುಲೆನ್ಸ್ಗಳ ನಿರ್ವಹಣೆ ಮಾಡಲು ಅನುಮೋದನೆ ನೀಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ. ಕೆಜಿಟಿಟಿಐಗಳು ಕೆಎಸ್ಡಿಎ ಮತ್ತು ಜೆಟಿಎಸ್ ಉಪಕ್ರಮ ಪ್ರಸ್ತಾವನೆ ಬಲಪಡಿಸುವ ಕಾರ್ಯವನ್ನು 5 ವರ್ಷಗಳಲ್ಲಿ ಎಡಿಬಿಯಿಂದ 970.00 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 416.00 ಕೋಟಿಗಳ ಬಾಹ್ಯ ನಿಧಿಯ ಮೂಲಕ ಕಾರ್ಯಗತಗೊಳಿಸಲು ಎಡಿಬಿಗೆ ಪ್ರಸ್ತಾವನೆ ಸಲ್ಲಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಕಾರಣವಾದವರ ಬಂಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ. ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ·ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ…
GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!
ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ್, ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದು, ಈ ಯೋಜನೆ ಯಡಿ ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. 1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ನಿರ್ಮಿಸುತ್ತಿರುವ 45,124 ಒಂದು ಬಿಎಚ್ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು, ಫಲಾನುಭವಿಗಳ ಹಣಕಾಸಿನ ಸಾಮರ್ಥ್ಯದ ಕೊರತೆಯಿರುವುದು ತಿಳಿದುಬಂದಿದೆ. ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಫಲಾನುಭವಿಗಳು ಪಾವತಿಸುವ ಮಾಸಿಕ ಸಾಲದ ಕಂತಿನ ಹೊರೆಯನ್ನು ಕಡಿಮೆ ಮಾಡಲು ಸಾಲದ ಬಡ್ಡಿಯಲ್ಲಿ ಶೇ.3 ರಿಂದ 5 ರಷ್ಟು ಮೊತ್ತವನ್ನು ಸಹಾಯಧನವಾಗಿ ಸರಕಾರದಿಂದ ಪಾವತಿಸಿ, ಬಡ್ಡಿ ಸಬ್ಸಿಡಿಯೆಂದು ನೀಡಲು ಪ್ರಸ್ತಾಪಿಸಲಾಗಿದೆ. ಆದ್ದರಿಂದ ಬಡ್ಡಿ…
ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಜೂನ್ 6 ರ ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ₹46,000 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಕತ್ರಾ ಮತ್ತು ಶ್ರೀನಗರ ನಡುವಿನ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ ಘಟನೆಗೆ ಪ್ರತಿಕ್ರಿಯೆಯಾಗಿ ಮೇ 7 ರಂದು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ. ನಾಳೆ, ಜೂನ್ 6 ನಿಜಕ್ಕೂ ಜಮ್ಮು ಮತ್ತು ಕಾಶ್ಮೀರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ದಿನವಾಗಿದೆ” ಎಂದು ಪ್ರಧಾನಿ ಮೋದಿ ಜೂನ್ 5 ರಂದು X…