Author: kannadanewsnow57

ಬೆಂಗಳೂರು : ಪೊಲೀಸ್‌ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಅದನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ…

Read More

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ  ಮೆಟ್ರಿಕ್ ನಂತರ ಕೋರ್ಸ್ ಗಳಿಗೆ ಪ್ರವೇಶ  ಪಡೆಯುವ  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ವಿದ್ಯಾರ್ಥಿಗಳು  ಭಾರತ ಸರ್ಕಾರದ   Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal https://ssp.postmatric.karnataka.gov.in    ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ  Create  ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ದಕ್ಷಿಣ ಕನ್ನಡ, ತುಮಕೂರು,ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 1,741 ಕೋಟಿ ರು. ಬಂಡವಾಳ ಹೂಡಿಕೆಯ ಹಾಗೂ 12500 ಉದ್ಯೋಗ ಸೃಷ್ಟಿಸುವ 63 ಯೋಜನೆಗೆ ಸಚಿವ ಎಂ.ಬಿ. ಪಾಟೀಲ್‌ ಅಧ್ಯಕ್ಷತೆಯ ಏಕಗವಾಕ್ಷಿ ಸಮಿತಿ ಸಭೆ ಅಸ್ತು ಎಂದಿದೆ. ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ, ಫೀಡ್ ಪ್ಲ್ಯಾಂಟ್, ಪ್ರಿ ಫ್ಯಾಬ್ರಿಕೇಟೆಡ್ ಮಾಡ್ಯುಲರ್, ಬಸ್ ಬಾಡಿ ಬಿಲ್ಡಿಂಗ್, ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಬಿಡಿಭಾಗ ತಯಾರಿಕಾ ಘಟಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿ, ಒಟ್ಟು 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ಸುಮಾರು 5,277 ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ ,…

Read More

ಬೆಂಗಳೂರು : 2025-26ನೇ ಸಾಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ / ಉಪನ್ಯಾಸಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಿರ್ವಹಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮಗಳು 2020″ ಮತ್ತು ಉಲ್ಲೇಖ (03) ರ ನಿಯಮಗಳನ್ವಯ ಪ್ರಾಂಶುಪಾಲರ/ ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, 2025-26 ನೇ ಸಾಲಿಗೆ ಪ್ರಾಂಶುಪಾಲರ /ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. ಈ ವರ್ಗಾವಣೆಗೆ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದು. ಖುದ್ದಾಗಿ ಅಥವಾ ಪತ್ರ ಮುಖೇನ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ. ಸಾಮಾನ್ಯ ಸೂಚನೆಗಳು: 1) ವರ್ಗಾವಣಾ ಅಧಿನಿಯಮ ಮತ್ತು ನಿಯಮಗಳಲ್ಲಿ ನಿಗಧಿಪಡಿಸಿರುವ ವಿಧಿ ವಿಧಾನಗಳನ್ವಯ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. 2) ಉಪನ್ಯಾಸಕರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ವರ್ಗಾವಣೆ…

Read More

ಬೆಂಗಳೂರು  : ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳಿಗೆ ಮಾರ್ಪಾಡು ಮಾಡುವ ಬಗ್ಗೆ. ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಉಲ್ಲೇಖಿತ ಸುತ್ತೋಲೆಯನ್ವಯ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಲಾಗಿದೆ. ಆದರೆ, ತಾಂತ್ರಿಕ ತೊಂದರೆಯಿಂದಾಗಿ ನಿಗದಿತ ಅವಧಿಯೊಳಗೆ ನೌಕರರು ನೋಂದಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಸಾಧ್ಯವಾಗದೇ ಇರುವುದರಿಂದ ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಆದ್ದರಿಂದ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಾರ್ಪಾಡು ಸುತ್ತೋಲೆ ಹೊರಡಿಸಲು ತಮ್ಮಲ್ಲಿ ಕೋರಿದೆ. ಮಾರ್ಪಾಡು ಮಾಡಬೇಕಾಗಿರುವ ಸೂಚನೆಗಳು ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿ:20-05-2025ರೊಳಗೆ | ಘೋಷಣೆಯನ್ನು ತನ್ನ ಮೇಲಾಧಿಕಾರಿಗಳ ಮೂಲಕ ಡಿ.ಡಿ.ಓ. ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ລຳ-20250 ಮಾಹೆಯಿಂದ ಸ್ವಯಂಚಾಲಿತವಾಗಿ…

Read More

ಬೆಂಗಳೂರು : ರಾಜ್ಯ ಸರ್ಕಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 40 ಸಾವಿರ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಮೇಲ್ಮಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಮಾರ್ಚ್-2026) ವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ) ಒಟ್ಟು-40000. ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-03ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ. ಉಲ್ಲೇಖ-03 ರಲ್ಲಿ ಒಟ್ಟು-40000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು, ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ…

Read More

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭವಾಗಲಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟ‌ರ್ ಗಳನ್ನು ಪ್ರದರ್ಶಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕನುಗುಣವಾಗಿ 29/05/2025 ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗುತ್ತಿದೆ .ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು. ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ ಒಂದಾದರೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಬರ ಮಾಡಿಕೊಳ್ಳುವುದು. ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮಕ್ಕಳನ್ನು ಸ್ವಾಗತಿಸುವುದು ಹಾಗೂ ದಾಖಲಾತಿ ಹೆಚ್ಚಾಗುವಂತೆ ಪ್ರಯತ್ನಿಸಲು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.

Read More

ಬೆಂಗಳೂರು : ಮೇ.29ರಿಂದ 2025-26ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ. ಮೊದಲನೇ ಅವಧಿ – ದಿನಾಂಕ: 29-05-2025 ರಿಂದ ದಿನಾಂಕ: 19-09-2025 ರವರೆಗೆ…

Read More

ಬೆಂಗಳೂರು : ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ  ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.. ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Read More

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್- ಎ, ಬಿ, ಸಿ ಮತ್ತು ಡಿ ವೃಂದದ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆ, 2011 ಹಾಗೂ ಅದರಡಿ ರಚಿಸಲಾದ ನಿಯಮಾವಳಿ, 2011 ಹಾಗೂ ಕಾಲಕಾಲಕ್ಕೆ ಮಾಡಲಾದ ತಿದ್ದುಪಡಿ ನಿಯಮಾವಳಿಯಂತೆ ಗ್ರೂಪ್-ಎ ವೃಂದದ ಹಿರಿಯ ತಜ್ಞರು, ತಜ್ಞರು, ಉಪ ಮುಖ್ಯ ವೈದ್ಯಾಧಿಕಾರಿ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ಮುಖ್ಯ ದಂತ ಆರೋಗ್ಯಾಧಿಕಾರಿ/ಹಿರಿಯ ದಂತ ಆರೋಗ್ಯಾಧಿಕಾರಿ/ದಂತ ಆರೋಗ್ಯಾಧಿಕಾರಿ ಮತ್ತು ಗ್ರೂಪ್-ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆಯ ಮೂಲಕ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದುದರಿಂದ ಇಲಾಖೆಯ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆ ಮೂಲಕ ಕೈಗೊಂಡು, ಪ್ರಕ್ರಿಯೆಯನ್ನು ದಿನಾಂಕ: 15/06/2025ರೊಳಗಾಗಿ ಪೂರ್ಣಗೊಳಿಸಲು ಸಕ್ಷಮ ಪ್ರಾಧಿಕಾರಗಳಿಗೆ ಅನುಮತಿ ನೀಡುವಂತ ಕೋರಿರುತ್ತಾರೆ. ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಈ ಕೆಳಕಂಡಂತ ಅದೇಶಿಸಿದೆ. ಪ್ರಸ್ತಾವನೆಯಲ್ಲಿ…

Read More