Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…
ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ನ್ಯಾಷಿನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ (B.Ed) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಬಿಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲತಾತಿಗಳನ್ನು ಸಲ್ಲಿಸತಕ್ಕದ್ದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ ಲೈನ್ ನಲ್ಲಿ https://Sevasindhu.karnataka.gov.in ನಲ್ಲಿ ಡಿಸೆಂಬರ್ 25 2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಪೊಡಿಯಂ ಬ್ಲಾಕ್, ವಿ ವಿ ಗೋಪರ, ಬೆಂಗಳೂರು-560 001 ಅಥವಾ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.20 ಕಡೆಯ ದಿನವಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ. ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು…
ಇಂದಿನ ಕಾಲದಲ್ಲಿ ಸ್ಮಾರ್ಟ್ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಅದರಲ್ಲೂ ಪ್ರವಾಸಕ್ಕೆ ಹೋಗುವಾಗ ಫೋನ್ ನ ಸರಿಯಾದ ಬಳಕೆ ನಮ್ಮ ಸುರಕ್ಷತೆಗೆ ಬಹಳ ಮುಖ್ಯವಾಗುತ್ತದೆ. ಒಂದು ಕಡೆ, ಪ್ರಯಾಣದ ಸಮಯದಲ್ಲಿ ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು ಮುಖ್ಯವಾಗಿದೆ, ಮತ್ತೊಂದೆಡೆ, ನಿಮ್ಮ ಸುರಕ್ಷತೆ ಮತ್ತು ಸೌಲಭ್ಯಗಳನ್ನು ನೋಡಿಕೊಳ್ಳುವುದು ಅಷ್ಟೇ ಮುಖ್ಯ. ಆದ್ದರಿಂದ, ನಿಮ್ಮ ಪ್ರಯಾಣ ಮತ್ತು ದೈನಂದಿನ ಜೀವನದಲ್ಲಿ ಸಹಾಯಕವಾಗುವಂತಹ ಕೆಲವು ಅಪ್ಲಿಕೇಶನ್ಗಳ ಕುರಿತು ನಾವು ನಿಮಗೆ ಹೇಳುತ್ತಿದ್ದೇವೆ. ಗೂಗಲ್ ನಕ್ಷೆಗಳು ನೀವು ಎಲ್ಲಿಗೆ ಹೋಗುತ್ತಿರಲಿ, Google ನಕ್ಷೆಗಳು ನಿಮ್ಮ ದಾರಿಯನ್ನು ಹುಡುಕಲು ಸಹಾಯ ಮಾಡುವ ಅಪ್ಲಿಕೇಶನ್ ಆಗಿದೆ. ಈ ಅಪ್ಲಿಕೇಶನ್ ನಿಮಗೆ ಕಡಿಮೆ ಮಾರ್ಗವನ್ನು ತೋರಿಸುತ್ತದೆ ಮಾತ್ರವಲ್ಲದೆ ಟ್ರಾಫಿಕ್ ಪರಿಸ್ಥಿತಿಗಳು, ಯಾವುದೇ ಮುಚ್ಚಿದ ರಸ್ತೆಗಳು ಅಥವಾ ದಾರಿಯಲ್ಲಿ ಇತರ ಪ್ರಮುಖ ಮಾಹಿತಿಯ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಪ್ರಯಾಣದ ಸಮಯದಲ್ಲಿ ನೀವು ಅಜ್ಞಾತ ಸ್ಥಳಕ್ಕೆ ಹೋಗಬೇಕಾದರೆ, Google ನಕ್ಷೆಗಳು ನಿಮ್ಮ ಸಮಯವನ್ನು ಉಳಿಸುತ್ತದೆ. ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ನಿಮ್ಮ ಸ್ಥಳವನ್ನು…
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಮದ್ದೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ನಡೆಯಲಿದೆ. ಬೆಳಿಗ್ಗೆ 10 ರಿಂದ 03 ಗಂಟೆವರೆಗೂ ಸೋಮನಹಳ್ಳಿಯ ಕಾಫಿ ಡೇ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ರಾಜ್ಯ ಸರ್ಕಾರಿ ಗೌರವದೊಂದಿಗೆ ಎಸ್.ಎಂ.ಕೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಬೆಂಗಳೂರಿನಿಂದ ಪಾರ್ಥಿವ ಶರೀರ ತರುವ ವೇಳೆ ಬಿಡಿದಿ,ರಾಮನಗರ,ಕೆಂಗೇರಿ ಚನ್ನಪಟ್ಟಣದಲ್ಲಿ ಒಂದು ನಿಮಿಷ ವಾಹನ ನಿಲುಗಡೆ ಮಾಡಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಕಾಫಿ ಡೇ ಪಕ್ಕದ ಜಮೀನಿನಲ್ಲಿ ಒಕ್ಕಲಿಗ ಹಿಂದೂ ಸಂಪ್ರದಾಯದಂತೆ ಶ್ರೀಗಂಧ ಮರ ಬಳಸಿ ಅಂತ್ಯಕ್ರಿಯೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಎಂದು ತಿಳೀಸಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಅವರ ಪಾರ್ಥಿವ ಶರೀರವನ್ನು…
ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಜಯಣ್ಣ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಎಸ್. ಜಯಣ್ಣ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲು ಹೋಗುವಾಗ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉಗ್ರಾಣ ನಿಗಮದ ಅಧ್ಯಕ್ಷರಾಗಿರುವ ಎಸ್. ಜಯಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಜಯಣ್ಣ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ. “ಬುಧವಾರ (ನಾಳೆ) ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯಾದ್ಯಂತ ಮೂರು ದಿನ ಶೋಕಾಚಾರಣೆ ಮಾಡಲಾಗುವುದು. ಬುಧವಾರ ಬೆಳಗ್ಗೆ 8 ಗಂಟೆವರೆಗೂ ಎಸ್.ಎಂ. ಕೃಷ್ಣ ಅವರ ಸದಾಶಿವನಗರ ನಿವಾಸದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಅವರ ಪಾರ್ಥಿವ ಶರೀರವನ್ನು ಮದ್ದೂರಿನ ಸೋಮನಹಳ್ಳಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 2.00ಗಂಟೆವರೆಗೂ ಮಂಡ್ಯ, ಮೈಸೂರು…
ಬೆಂಗಳೂರು ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು ಎಸ್.ಎಂ ಕೃಷ್ಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಮುಂದೆ ಶಿವಕುಮಾರ್ ಅವರು ಎಸ್.ಎಂ ಕೃಷ್ಣ ಅವರ ಕೊಡುಗೆ ನೆನೆದು ಭಾವುಕರಾದರು. “ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದರು. ಎಸ್.ಎಂ ಕೃಷ್ಣ ಅವರು ವಿಕಾಸ ಸೌಧ ಕಟ್ಟಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ ರೈಲು ನೀಡಿದರು. ಅವರ ಕಡೆಯ ಬಜೆಟ್ ಗಾತ್ರ 26 ಸಾವಿರ ಕೋಟಿ. ಆದರೆ ಇಂದು ನಮ್ಮ ರಾಜ್ಯದ ಬಜೆಟ್ ಗಾತ್ರ 3.83 ಲಕ್ಷ ಕೋಟಿ. ಆಮೂಲಕ ರಾಜ್ಯಕ್ಕೆ ಆರ್ಥಿಕ ಶಕ್ತಿ ತುಂಬಿದರು. ರಾಜ್ಯ ವಿಕಾಸವಾಗಲಿ ಎಂದು ವಿಕಾಸಸೌಧ, ಎಲ್ಲರಿಗೂ ಉದ್ಯೋಗ ಸಿಗಲಿ ಎಂದು ಉದ್ಯೋಗ ಸೌಧ ಕಟ್ಟಿದರು. ರಾಜ್ಯದಲ್ಲಿ ಪಾನೀಯ ನಿಗಮ ಸ್ಥಾಪಿಸಿ ರಾಜ್ಯದ ಬೊಕ್ಕಸಕ್ಕೆ ಹಣ ಬರುವಂತೆ ಮಾಡಿದರು…
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಇಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮನಹಳ್ಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮಂಡ್ಯ ಜಿಲ್ಲೆಯ ಸೋಮನಹಳ್ಳಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವ ಚಲುವರಾಯಸ್ವಾಮಿ ಜೊತೆಗೆ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ನವದೆಹಲಿ. ಸರ್ಕಾರಗಳು ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆಗಳನ್ನು ಎತ್ತಿದೆ. ವಲಸೆ ಕಾರ್ಮಿಕರಿಗೆ ಉಚಿತ ಪಡಿತರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ವೇಳೆ, ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಎಷ್ಟು ಸಮಯದವರೆಗೆ ಉಚಿತ ಪಡಿತರವನ್ನು ನೀಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪೀಠ ಸೂಚಿಸಿದೆ. ಈ ಸಮಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 81 ಕೋಟಿ ಜನರಿಗೆ ಉಚಿತ ಅಥವಾ ಸಬ್ಸಿಡಿ ಪಡಿತರವನ್ನು ನೀಡುತ್ತಿದೆ ಎಂದು ಹೇಳಿದೆ. ಇದರರ್ಥ ತೆರಿಗೆ ಪಾವತಿದಾರರು ಮಾತ್ರ ಉಳಿದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ರಾಜ್ಯಗಳಿಂದ ವಲಸೆ ಕಾರ್ಮಿಕರಿಗೆ ಪಡಿತರ ನೀಡುವ ಕುರಿತು ಆದೇಶವನ್ನು ಅಂಗೀಕರಿಸುವ ಚರ್ಚೆಯಲ್ಲಿ, ಅಂತಹ ಆದೇಶ ನೀಡಿದ ತಕ್ಷಣ, ಇಲ್ಲಿ ಯಾರೂ ಕಾಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಲಸೆ ಕಾರ್ಮಿಕರು ರಾಜ್ಯಗಳಿಗೆ ಗುಳೆ ಹೋಗುತ್ತಾರೆ. ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶಗಳು,…