Subscribe to Updates
Get the latest creative news from FooBar about art, design and business.
Author: kannadanewsnow57
ಸಾಮಾನ್ಯವಾಗಿ ಎಲ್ಲರಿಗೂ ಕೈಗಳನ್ನು ಮಡಚಿ ನಿಲ್ಲುವ ಅಭ್ಯಾಸವಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನ ರೀತಿಯಲ್ಲಿ ಕೈಗಳನ್ನು ಕಟ್ಟಿ ನಿಲ್ಲುತ್ತಾರೆ ಅಥವಾ ಕುಳಿತುಕೊಳ್ಳುತ್ತಾರೆ. ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ತೋಳುಗಳನ್ನು ಮಡಚಿ ನಿಲ್ಲುವ ಭಂಗಿಯಿಂದಲೂ ಪರೀಕ್ಷಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಸಮುದ್ರಿಕಾ, ದೃಷ್ಟಿ ಭ್ರಮೆಗಳು ಮತ್ತು ದೇಹದ ಆಕಾರದ ಮೂಲಕ ನಿಮ್ಮ ವ್ಯಕ್ತಿತ್ವವನ್ನು ನೀವು ತಿಳಿದುಕೊಳ್ಳುವಂತೆಯೇ, ನೀವು ನಿಮ್ಮ ತೋಳುಗಳನ್ನು ಮಡಚಿ ನಿಲ್ಲುವ ವಿಧಾನದ ಮೂಲಕ ನಿಮ್ಮೊಳಗೆ ಅಡಗಿರುವ ನಿಗೂಢ ಸ್ವಭಾವವನ್ನು ಸಹ ನೀವು ತಿಳಿದುಕೊಳ್ಳಬಹುದು. ನೀವು ತೋಳುಗಳನ್ನು ಕಟ್ಟಿಕೊಂಡು ನಿಲ್ಲುವ ರೀತಿ ನೀವು ಸ್ವಾರ್ಥಿಯೋ ಅಥವಾ ವಿನಮ್ರ ವ್ಯಕ್ತಿಯೋ ಎಂಬುದನ್ನು ಬಹಿರಂಗಪಡಿಸುತ್ತದೆ. ಈ ವಿಶಿಷ್ಟ ವ್ಯಕ್ತಿತ್ವ ಪರೀಕ್ಷೆಯು ಒಂದು ಮೋಜಿನ ಆಟವಾಗಿದೆ. ನೀವು ಇದರ ಬಗ್ಗೆ ಶಾಂತವಾಗಿದ್ದೀರಾ? ನೀವು ದೃಢನಿಶ್ಚಯ ಹೊಂದಿದ್ದೀರಾ ಅಥವಾ ಸಮಸ್ಯೆಗಳನ್ನು ಎದುರಿಸಲು ಕಷ್ಟಪಡುತ್ತಿದ್ದೀರಾ ಎಂಬುದನ್ನು ನಿಮ್ಮ ತೋಳುಗಳನ್ನು ಮಡಚಿ ನಿಲ್ಲುವ ಮೂಲಕ ಪರೀಕ್ಷಿಸಬಹುದು. ಆಯ್ಕೆ 1: ಆಯ್ಕೆ ಒಂದರಲ್ಲಿ ತೋರಿಸಿರುವಂತೆ ನಿಮ್ಮ ಬಲಗೈಯಿಂದ ಎಡಗೈಯನ್ನು ಹಿಡಿದುಕೊಂಡು ನಿಲ್ಲುವ…
ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ಕರೋನ ದೃಢಪಟ್ಟಿದೆ. 75 ವರ್ಷದ ವೃದ್ಧ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ಕರೋನ ದೃಢಪಟ್ಟಿದೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಕೋವಿಡ್ ಟೆಸ್ಟ್ ರಿಪೋರ್ಟ್ ಬಂದಿದ್ದು ಅವರಿಗೆ ಕರೋನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಎಸ್‌ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್‌ಒ ಅವರಿಗೆ ಮಾಹಿತಿ ನೀಡಲಾಗಿದೆ” ಎಂದಿದ್ದಾರೆ.
ಅಮೃತಸರ : ಪಂಜಾಬ್ ನ ಅಮೃತಸರದಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ ಎಂದು ಎಂದು ಹೇಳಲಾಗುತ್ತಿದೆ. ಪಂಜಾಬ್ ನ ಅಮೃತಸರದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು, ಓರ್ವ ವ್ಯಕ್ತಿಗೆ ಗಾಯವಾಗಿದೆ ಎಂದು ವರದಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು. ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ. ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು…
ಬೆಂಗಳೂರು: ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು. ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ. ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ಹಾಸನದಲ್ಲಿ ಭಾರೀ ಮಳೆಯಿಂದಾಗಿ ಚಾಲಕನಿಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ವಿಷ್ಣು ಬೆಳ್ಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪೋಸಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. https://twitter.com/dineshgrao/status/1927017633733365982?ref_src=twsrc%5Etfw%7Ctwcamp%5Etweetembed%7Ctwterm%5E1927017633733365982%7Ctwgr%5Eb1331337a9cb42346fb89d407a0b98976a0193be%7Ctwcon%5Es1_c10&ref_url=https%3A%2F%2Fkannadadunia.com%2Fbreaking-e0b2ace0b386e0b282e0b297e0b2b3e0b382e0b2b0e0b2b2e0b38de0b2b2e0b2bf-e0b295e0b38ae0b2b0e0b38ae0b2a8e0b2be-e0b2b9e0b386e0b29a%2F
ಸೋಮವಾರ ಲಿವರ್‌ಪೂಲ್‌ನಲ್ಲಿ ಫುಟ್‌ಬಾಲ್ ಕ್ಲಬ್‌ನ ಪ್ರೀಮಿಯರ್ ಲೀಗ್ ಟ್ರೋಫಿ ಪೆರೇಡ್‌ನಲ್ಲಿ ಭಾಗವಹಿಸುತ್ತಿದ್ದ ಅಭಿಮಾನಿಗಳ ಮೇಲೆ ವ್ಯಕ್ತಿಯೊಬ್ಬ ಕಾರು ನುಗ್ಗಿಸಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಡಜನ್ಗಟ್ಟಲೆ ಫುಟ್‌ಬಾಲ್ ಅಭಿಮಾನಿಗಳು ಗಾಯಗೊಂಡರು. ಲಿವರ್‌ಪೂಲ್ ಪ್ರದೇಶದಿಂದ 53 ವರ್ಷದ ಬಿಳಿ ಬ್ರಿಟಿಷ್ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮರ್ಸಿಸೈಡ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ಸಂದರ್ಭಗಳ ಬಗ್ಗೆ ಜನರು ಊಹಿಸಬಾರದು ಎಂದು ಪೊಲೀಸರು ಒತ್ತಾಯಿಸಿದರು. ಅಪಘಾತದಲ್ಲಿ ಕನಿಷ್ಠ 47 ಜನರು ಗಾಯಗೊಂಡಿದ್ದಾರೆ, ಇದರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡವರಲ್ಲಿ ನಾಲ್ಕು ಮಕ್ಕಳು ಕೂಡ ಸೇರಿದ್ದಾರೆ, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ ಮೂವರು ವಯಸ್ಕರು ಮತ್ತು ವಾಹನದ ಅಡಿಯಲ್ಲಿ ಸಿಲುಕಿದ್ದ ಮಗುವನ್ನು ಹೊರತೆಗೆದರು ಎಂದು ವಾಯುವ್ಯ ಆಂಬ್ಯುಲೆನ್ಸ್ ಸೇವೆ ತಿಳಿಸಿದೆ. 27 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು 20 ಜನರಿಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಲಾಯಿತು ಎಂದು ವಾಯುವ್ಯ ಆಂಬ್ಯುಲೆನ್ಸ್ ಸೇವೆ…
ಬೆಂಗಳೂರು : ಮೇ 29 ರಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದ್ದು, ಸರ್ಕಾರ ಎರಡು ವರುಷ ; ಶಿಕ್ಷಣದಲ್ಲಿ ಹರುಷʼ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. 2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ಹೇಳಿದ್ದಾರೆ. https://twitter.com/KarnatakaVarthe/status/1926983558821818842?ref_src=twsrc%5Etfw%7Ctwcamp%5Etweetembed%7Ctwterm%5E1926983558821818842%7Ctwgr%5E970e4db6d3ac534ba55bbdf7866d082785ed7b67%7Ctwcon%5Es1_&ref_url=https%3A%2F%2Fkannadadunia.com%2Fschools-to-reopen-across-the-state-from-may-29-government-organizes-two-years-joy-in-education-program%2F
ಬೆಂಗಳೂರು: ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು. ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ. ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ…











