Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ…

Read More

ನವದೆಹಲಿ : ನೀವು ಎಟಿಎಂನಿಂದ ಹಣವನ್ನು ಹಿಂಪಡೆಯುತ್ತಿದ್ದರೆ, ಉಳಿತಾಯ ಖಾತೆಯಲ್ಲಿ ಹಣವನ್ನು ಇರಿಸಿದರೆ ಅಥವಾ ಯುಪಿಐ ಮೂಲಕ ವಹಿವಾಟು ನಡೆಸಿದರೆ – ಈ ಮಾಹಿತಿಯು ನಿಮಗೆ ಬಹಳ ಮುಖ್ಯ. ಜೂನ್ 1, 2025 ರಿಂದ, ಭಾರತದಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬು ಮತ್ತು ಬ್ಯಾಂಕಿಂಗ್ ಹವ್ಯಾಸಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ಈ ಹೊಸ ನಿಯಮಗಳು ಮತ್ತು ಅವುಗಳ ಪರಿಹಾರಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ. ಎಟಿಎಂನಿಂದ ಹಣ ಹಿಂಪಡೆಯುವುದು ದುಬಾರಿಯಾಗಬಹುದು. ಈಗ ನೀವು ಪ್ರತಿ ತಿಂಗಳು ನಿಗದಿತ ಸಂಖ್ಯೆಯ ಉಚಿತ ವಹಿವಾಟುಗಳನ್ನು ಮಾತ್ರ ಮಾಡಲು ಸಾಧ್ಯವಾಗುತ್ತದೆ. ಇದರ ನಂತರ ನೀವು ಪ್ರತಿ ಬಾರಿ ಹಣವನ್ನು ಹಿಂಪಡೆಯುವಾಗ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, SBI ನಲ್ಲಿ ನೀವು ಕೇವಲ 5 ಉಚಿತ ವಹಿವಾಟುಗಳನ್ನು ಮಾತ್ರ ಪಡೆಯುತ್ತೀರಿ – ಇದರ ನಂತರ ಪ್ರತಿ ಹಿಂಪಡೆಯುವಿಕೆಗೆ ₹ 21 ಕಡಿತಗೊಳಿಸಲಾಗುತ್ತದೆ. ಐಸಿಐಸಿಐ ಮತ್ತು ಎಚ್‌ಡಿಎಫ್‌ಸಿಯಂತಹ ಖಾಸಗಿ ಬ್ಯಾಂಕುಗಳಲ್ಲಿ ಈ ಮಿತಿಯನ್ನು…

Read More

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸದ್ದು, ಈ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಿರಲಿದೆ. ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೂ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,…

Read More

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, ಮಕ್ಕಳಿಗೆ ಮೊದಲ 5 ವರ್ಷದ ಶಿಕ್ಷಣವನ್ನು ಮಾತೃಭಾಷೆಯಲ್ಲೇ ಬೋಧಿಸುವಂತೆ ತನ್ನ ವ್ಯಾಪ್ತಿಯ ಶಾಲೆಗಳಿಗೆ ಸೂಚಿಸಿದೆ. ಹೌದು, ಈ ಕುರಿತು ಅದು ದೇಶವ್ಯಾಪಿ ಇರುವ 30000 ಶಾಲೆಗಳಿಗೆ ಮಾಹಿತಿ ರವಾನಿಸಿದ್ದು, ಅದಕ್ಕೆ ಅಗತ್ಯ ಸಿದ್ಧತೆಗಳನ್ನೂ ನಡೆಸಿದೆ. ಇದರ ಪ್ರಕಾರ, ಪೂರ್ವ ಪ್ರಾಥಮಿಕದಿಂದ (ಪ್ರೀಕೆಜೆ, ಎಲ್‌ಕೆಜಿ, ಯುಕೆಜಿ) 2ನೇ ತರಗತಿಯವರೆಗೆ ಕನ್ನಡ ಸೇರಿದಂತೆ ಆಯಾ ಮಾತೃ ಭಾಷೆಯಲ್ಲಿ ಮಕ್ಕಳಿಗೆ ಬೋಧಿಸಲಾಗುವುದು. ಈ ನಿರ್ಧಾರದಿಂದ ಮಾತೃಭಾಷೆ ಬಳಕೆಗೆ ಉತ್ತೇಜನ ಸಿಗುವುದಲ್ಲದೆ, ಮಕ್ಕಳಿಗೆ ವಿಷಯಗಳನ್ನು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳಲೂ ಸಹಕಾರಿಯಾಗುತ್ತದೆ. ಆರಂಭಿಕ ಭಾಷಾ ಶಿಕ್ಷಣವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಪ್ರಮುಖ ಕ್ರಮದಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಎಲ್ಲಾ ಸಂಯೋಜಿತ ಶಾಲೆಗಳಿಗೆ 2025-26 ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಲ್ಲಿ (ಎನ್ಸಿಎಫ್ -2023) ವಿವರಿಸಿದ ಭಾಷಾ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (3)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ…

Read More

ಬೆಂಗಳೂರು: ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ ಎಂದಿದ್ದಾರೆ. ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಸಂಬಂಧ ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ರವರ ರಾಜ್ಯ ಮಟ್ಟದ ಒಂದೇ ಜೇಷ್ಠತಾ…

Read More

ಬೆಂಗಳೂರು : 2025-26 ನೇ ಸಾಲಿನಲ್ಲಿ ವಿಶೇಷ ದಾಖಲಾತಿ ಅಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ಹಾಗೂ ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ನಿಯಮಗಳು 2012 ರಿಂದ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಪ್ರಕಾರ ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿರುತ್ತದೆ. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣವನ್ನು ಒದಗಿಸುವುದು ಸರ್ಕಾರದ, ಪೋಷಕರ ಮತ್ತು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. 6-14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣವನ್ನು ಒದಗಿಸುವುದು, ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ದಾಖಲಾಗುವುದು ಹಾಗೂ ದಾಖಲಾದ ಎಲ್ಲಾ ಮಕ್ಕಳು ಶಾಲೆಯಲ್ಲಿ ಉಳಿಯಬೇಕು ಎನ್ನುವುದು ಶಿಕ್ಷಣ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. 2024-25 ನೇ ಸಾಲಿನಲ್ಲಿ ಮೊಬೈಲ್ ಆಪ್ ಮೂಲಕ RDPR, UDD ಹಾಗೂ…

Read More

ವಡೋದರಾ : ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮತ್ತು ಮಂಗಳವಾರ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಆಪರೇಷನ್ ಸಿಂಧೂರ್ ನಂತರ ಪ್ರಧಾನಿ ಮೋದಿ ಗುಜರಾತ್‌ಗೆ ನೀಡುತ್ತಿರುವ ಮೊದಲ ಭೇಟಿ ಇದು. ಪ್ರಧಾನಿ ಬೆಳಿಗ್ಗೆ ವಡೋದರಾ ತಲುಪಿದರು. ಇದಾದ ನಂತರ, ದಾಹೋದ್‌ನಲ್ಲಿ 9000 ಅಶ್ವಶಕ್ತಿಯ ಎಂಜಿನ್ ಸ್ಥಾವರವನ್ನು ಉದ್ಘಾಟಿಸಲಾಯಿತು. ಪ್ರಧಾನಿ ಮೋದಿ ದಾಹೋದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಮಾತನಾಡಲು ಪ್ರಾರಂಭಿಸಿದಾಗ, ಮೊದಲು ಜನರನ್ನು ಗುಜರಾತಿಯಲ್ಲಿ ಸ್ವಾಗತಿಸಿದರು. ಪ್ರಧಾನಿಯವರು ಇಲ್ಲಿ ಆಪರೇಷನ್ ಸಿಂಧೂರ್ ಬಗ್ಗೆಯೂ ಪ್ರಸ್ತಾಪಿಸಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014 ರ ಈ ದಿನದಂದು ನಾನು ಮೊದಲ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎಂದು ಹೇಳಿದರು. ನಾನು ದೇಶ ಸೇವೆಯಲ್ಲಿ ನಿರತನಾಗಿದ್ದೇನೆ. ಈ ವರ್ಷಗಳಲ್ಲಿ, ದೇಶವು ಊಹಿಸಲೂ ಅಸಾಧ್ಯವಾದ ನಿರ್ಧಾರಗಳನ್ನು ತೆಗೆದುಕೊಂಡಿತು. ಈ ವರ್ಷಗಳಲ್ಲಿ, ನಾವು ದಶಕಗಳಷ್ಟು ಹಳೆಯದಾದ ಸರಪಳಿಗಳನ್ನು ಮುರಿದಿದ್ದೇವೆ. ದೇಶವು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುತ್ತಿದೆ. ಇಂದು ದೇಶವು ಹತಾಶೆಯ ಕತ್ತಲೆಯಿಂದ ಹೊರಬಂದಿದೆ…

Read More

ಮಂಡ್ಯ : ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ವೇಳೆ ಆಯತಪ್ಪಿ ಬೈಕ್ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ ಆತನ ಪತ್ನಿ ಹಾಗೂ ಮಗು ಕೂಡ ಕೆಳಗೆ ಬಿದ್ದಿದ್ದು, ಮಗುವಿನ ತಲೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯನ್ನು ಕಣ್ಣಾರೆ ಕಂಡ…

Read More