Author: kannadanewsnow57

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಗುರುತಿಸಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಒಬ್ಬರಾದ ಹಾಶಿಮ್ ಮೂಸಾ, ಪಾಕಿಸ್ತಾನ ಸೇನೆಯ ಪ್ಯಾರಾ ಫೋರ್ಸಸ್‌ನ ಮಾಜಿ ನಿಯಮಿತ ಅಧಿಕಾರಿ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಮೂಲಗಳ ಪ್ರಕಾರ, ಪಾಕಿಸ್ತಾನ ಸೇನೆಯು ಮೂಸಾನನ್ನು ತನ್ನ ಶ್ರೇಣಿಯಿಂದ ವಜಾಗೊಳಿಸಿತು, ನಂತರ ಅವನು ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT) ಗೆ ಸೇರಿದನು. ಅವನು ಸೆಪ್ಟೆಂಬರ್ 2023 ರಲ್ಲಿ ಭಾರತಕ್ಕೆ ನುಸುಳಿದನು ಎಂದು ನಂಬಲಾಗಿದೆ, ಅವನ ಕಾರ್ಯಾಚರಣೆಯ ಪ್ರದೇಶವು ಮುಖ್ಯವಾಗಿ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ, ಶ್ರೀನಗರ ಬಳಿ ಇದೆ. ಭದ್ರತಾ ಸಂಸ್ಥೆಯ ಮೂಲವೊಂದರ ಪ್ರಕಾರ, ಮೂಸಾ ಅವರನ್ನು ಎಲ್‌ಇಟಿಗೆ ಸೇರಲು ಮತ್ತು ಭಯೋತ್ಪಾದಕ ಸಂಘಟನೆಯ ಕಾಶ್ಮೀರ ಕಾರ್ಯಾಚರಣೆಗಳನ್ನು ಬಲಪಡಿಸಲು ಕೇಳಿರಬಹುದು ಎಂದು ಅಭಿಪ್ರಾಯಪಟ್ಟಿದೆ. ತರಬೇತಿ ಪಡೆದ ಪ್ಯಾರಾ ಕಮಾಂಡೋ ಮೂಸಾ ಅಸಾಂಪ್ರದಾಯಿಕ ಯುದ್ಧ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ ಪರಿಣಿತ ಎಂದು ನಂಬಲಾಗಿದೆ. ಅಂತಹ ತರಬೇತಿ ಪಡೆದ ಕಮಾಂಡೋಗಳು ಸಾಮಾನ್ಯವಾಗಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಿರ್ವಹಿಸುವಲ್ಲಿ…

Read More

ಬೆಂಗಳೂರು : ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್ಸೆಟಿ-ಆರ್ಸೆಟಿ ಸರ್ಕಾರೇತರ ಬೆಂಬಲ ಸಂಸ್ಥೆಗಳ (TSA) ಮೂಲಕ…

Read More

ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ಕೃತ್ಯವೊಂದು ನಡೆದಿದ್ದು, 2 ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕೊಹಿನೂರ ಪಹಾಡ್ ಗ್ರಾಮದ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ. ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ. ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಅಕ್ಷಯ ತೃತೀಯವನ್ನು ಹಿಂದೂಗಳಿಗೆ ಬಹಳ ಮುಖ್ಯವಾದ ಮತ್ತು ಶುಭ ದಿನವೆಂದು ಪರಿಗಣಿಸಲಾಗಿದೆ. ಇದನ್ನು ಅಖಾ ತೀಜ್ ಎಂದೂ ಕರೆಯುತ್ತಾರೆ ಮತ್ತು ದ್ರಿಕ್ ಪಂಚಾಂಗದ ಪ್ರಕಾರ, “ಇದು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯದ ಸಮಯದಲ್ಲಿ ಬರುತ್ತದೆ. ರೋಹಿಣಿ ನಕ್ಷತ್ರದ ದಿನದಂದು ಬುಧವಾರದೊಂದಿಗೆ ಬರುವ ಅಕ್ಷಯ ತೃತೀಯವನ್ನು ಬಹಳ ಶುಭವೆಂದು ಪರಿಗಣಿಸಲಾಗಿದೆ. ಅಕ್ಷಯ ಎಂಬ ಪದದ ಅರ್ಥ ಎಂದಿಗೂ ಕಡಿಮೆಯಾಗುವುದಿಲ್ಲ. ಆದ್ದರಿಂದ ಈ ದಿನದಂದು ಯಾವುದೇ ಜಪ, ಯಜ್ಞ, ಪಿತೃ-ತರ್ಪಣ, ದಾನ-ಪುಣ್ಯವನ್ನು ಮಾಡುವುದರಿಂದ ಆಗುವ ಪ್ರಯೋಜನಗಳು ಎಂದಿಗೂ ಕಡಿಮೆಯಾಗುವುದಿಲ್ಲ ಮತ್ತು ವ್ಯಕ್ತಿಯೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ಈ ದಿನ ಮಾಡಿದ ಯಾವುದೇ ಒಳ್ಳೆಯ ಕೆಲಸವು ಶಾಶ್ವತ ಪ್ರತಿಫಲವನ್ನು ನೀಡುತ್ತದೆ ಎಂದು ನಂಬಲಾಗಿದೆ. ಈ ವರ್ಷ, ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು ಆಚರಿಸಲಾಗುತ್ತದೆ. ಈ ದಿನ, ಲಕ್ಷ್ಮಿ ದೇವಿ ಮತ್ತು ವಿಷ್ಣುವಿಗೆ ವಿಶೇಷ ಪ್ರಾರ್ಥನೆ ಮತ್ತು ಆಚರಣೆಗಳನ್ನು ನಡೆಸಲಾಗುತ್ತದೆ.ಮದುವೆಗಳು, ಗೃಹಪ್ರವೇಶಗಳು ಮತ್ತು ಚಿನ್ನ ಮತ್ತು ಬೆಳ್ಳಿಯಂತಹ ವಸ್ತುಗಳನ್ನು ಖರೀದಿಸಲು ಈ ದಿನವನ್ನು ಹೆಚ್ಚು ಶುಭವೆಂದು…

Read More

ಬೆಳಗಾವಿ: ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಮೊದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮಾಡಲಾಗುವುದು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಮೇ ತಿಂಗಳಲ್ಲೇ ಮೂರು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ. ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ…

Read More

ಬೆಂಗಳೂರು : ರಾಜ್ಯದಲ್ಲಿ ಟ್ಯಾಕ್ಸಿ, ಸಣ್ಣ ಗೂಡ್ಸ್ ಸೇರಿದಂತೆ 10 ಲಕ್ಷದೊಳಗಿನ ವಾಣಿಜ್ಯ ವಾಹನಗಳಿಗ ಶೇ.5 ರಷ್ಟು ಜೀವಿತಾವಧಿ ತೆರಿಗೆ ವಿಧಿಸುವ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಹೌದು, ವಾಣಿಜ್ಯ ವಾಹನಗಳ ಮೇಲಿನ ಮೋಟಾರು ವಾಹನ ತೆರಿಗೆ ಹೆಚ್ಚಳದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಮೇ 1ರಿಂದ 10 ಲಕ್ಷ ರೂ. ಮೌಲ್ಯದೊಳಗಿನ ವಾಣಿಜ್ಯ ವಾಹನ ಖರೀದಿ ತೆರಿಗೆ ದುಬಾರಿಯಾಗಲಿದೆ. ಇನ್ಮುಂದೆ ವಾಣಿಜ್ಯ ವಾಹನ ಖರೀದಿ ವೇಳೆ ಶೇ.5ರಷ್ಟು ಜೀವಿತಾವಧಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ನಾಳೆಯಿಂದಲೇ ಜಾರಿಗೆ ಬರಲಿದೆ. ಈವರೆಗೆ 10 ಲಕ್ಷ ರು.ಗಿಂತ ಕಡಿಮೆ ಮೌಲ್ಯದ ವಾಹನಕ್ಕೆ ಜೀವಿತಾವಧಿ ತೆರಿಗೆ ಇರಲಿಲ್ಲ. ಅದರ ಬದಲು ತ್ರೈಮಾಸಿಕವಾಗಿ ಪ್ರತಿ ಆಸನಕ್ಕೆ 100 ರು.ನಂತೆ 400 ರು. ನೀಡಬೇಕಿತ್ತು. ಈಗ ವಿಧಾನಮಂಡಲ ಅನುಮೋದಿಸಿದ್ದ ವಾಹನ ತೆರಿಗೆ ವಿಧೇಯಕಕ್ಕೆ ಗವರ್ನರ್ ಒಪ್ಪಿಗೆ ನೀಡಿದ್ದಾರೆ. ಇದರಿಂದ 10 ಲಕ್ಷ ರೂ. ಮೌಲ್ಯಕ್ಕಿಂತ ಕಮ್ಮಿ ಮೊತ್ತದ ವಾಹನಕ್ಕೆ ಶೇ.5…

Read More

ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964ರ ನಿಯಮ 9ರ ಮೇರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್‍ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳು ಮೇ 01ರಂದು ಕಾರ್ಮಿಕ ದಿನಾಚರಣೆಯ ದಿನದಂದು ತಮ್ಮಲ್ಲಿ ಕೆಲಸ ಮಾಡುವ ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವುದು. ಕಾರ್ಮಿಕ ದಿನಾಚರಣೆ ದಿನದಂದು ಕಾರ್ಮಿಕರ ಒಪ್ಪಿಗೆಯನ್ನು ಪಡೆದು ಆ ಕಾರ್ಮಿಕರು ಕೆಲಸ ನಿರ್ವಹಿಸಿದ್ದಲ್ಲಿ ಕಾರ್ಯನಿರ್ವಹಿಸಿದ ಕಾರ್ಮಿಕರಿಗೆ ದುಪ್ಪಟ್ಟು ವೇತನ ನೀಡಲು ಸೂಚಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿ ಅನಿಲ್ ಬಿ ಬಗಟಿ ತಿಳಿಸಿದ್ದಾರೆ.

Read More

ಬೆಂಗಳೂರು : ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ, ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ : ಇಪಿ 250 ಪಿಜಿಸಿ 2021, ದಿನಾಂಕ: 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ಕಾರಣಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1 ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಿದ. ಮುಂದುವರೆದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ…

Read More

ನವದೆಹಲಿ : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಬುಧವಾರ ಬೆಳಿಗ್ಗೆ 11 ಗಂಟೆಗೆ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಸಿಐಎಸ್ಸಿಇ ಮುಖ್ಯ ಕಾರ್ಯನಿರ್ವಾಹಕ ಜೋಸೆಫ್ ಎಮ್ಯಾನುಯೆಲ್ ಮಂಗಳವಾರ ತಿಳಿಸಿದ್ದಾರೆ. “ಅಭ್ಯರ್ಥಿಗಳು ಮತ್ತು ಪಾಲುದಾರರು CISCE ವೆಬ್‌ಸೈಟ್ ಅಥವಾ ಮಂಡಳಿಯ CAREERS ಪೋರ್ಟಲ್ ಬಳಸಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗಳನ್ನು ಡಿಜಿಲಾಕರ್ ಮೂಲಕವೂ ಪ್ರವೇಶಿಸಬಹುದು” ಎಂದು ಎಮ್ಯಾನುಯೆಲ್ ಹೇಳಿದರು. 10 ನೇ ತರಗತಿ (ICSE) ಮತ್ತು 12 ನೇ ತರಗತಿ (ISC) ಗಾಗಿ ಸುಧಾರಣಾ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸಲಾಗುವುದು. ಪಿಟಿಐ ಜಿಜೆಎಸ್ ಎಆರ್ಐ

Read More

ಶಿಶುಗಳಿಗೆ 12 ಮಾರಕ ರೋಗಗಳ ವಿರುದ್ಧ ತಪ್ಪದೇ ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸಿ, ಮಕ್ಕಳ ಆರೋಗ್ಯ ರಕ್ಷಣೆ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗಂಗಾವತಿ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಸಿದ್ದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸೋಮವಾರ ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶೇಷ ಆರೋಗ್ಯ ಅರಿವು ಆಂದೋಲನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರೋಗ್ಯ ಸೇವಾ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಿಸುವ ಉದ್ದೇಶದಿಂದ ಸರಕಾರ ವಿವಿಧ ಜಾಗೃತಿ ಮಾಧ್ಯಮದ ಮೂಲಕ ಅರಿವು ಮೂಡಿಸುತ್ತಿದೆ. ಪ್ರತಿಯೊಂದು ಹೆರಿಗೆಯನ್ನು ಆಸ್ಪತ್ರೆಯಲ್ಲಿ ಮಾಡಿಸಬೇಕು. ಮಗು ಹುಟ್ಟಿದ ಅರ್ಧ ಗಂಟೆಯ ಒಳಗೆ ತಾಯಿಯ ಎದೆಹಾಲು ನೀಡಬೇಕು. 6 ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲು ಮಾತ್ರ ನೀಡಬೇಕು. ಇದರ ಬದಲಿಗೆ ಬೇರೇನೂ ನೀಡಬಾರದು. 6 ತಿಂಗಳ ನಂತರ ಪೂರಕ ಪೌಷ್ಠಿಕ ಆಹಾರ ನೀಡಬೇಕು. ಒಂದು ಮಗುವಿನಿಂದ ಇನ್ನೊಂದು…

Read More